ಕೆಕೆ ಸಾವು ಅಸಹಜವಲ್ಲ ಎಂದ ಪೋಸ್ಟ್‌ಮಾರ್ಟಮ್‌ ಪ್ರಾಥಮಿಕ ವರದಿ; ನಾಳೆ ಅಂತ್ಯಕ್ರಿಯೆ - Vistara News

ಬಾಲಿವುಡ್

ಕೆಕೆ ಸಾವು ಅಸಹಜವಲ್ಲ ಎಂದ ಪೋಸ್ಟ್‌ಮಾರ್ಟಮ್‌ ಪ್ರಾಥಮಿಕ ವರದಿ; ನಾಳೆ ಅಂತ್ಯಕ್ರಿಯೆ

ಕೃಷ್ಣಕುಮಾರ್‌ ಕುನ್ನಾಥ್‌ (krishnakumar kunnath ) ಮೃತದೇಹದ ಮೇಲೆ ಗಾಯದ ಗುರುತು ಕಂಡು ಬಂದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

VISTARANEWS.COM


on

KK Last Rite
ಗಾಯಕ ಕೆಕೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತ: ಗಾಯಕ ಕೃಷ್ಣಕುಮಾರ್‌ ಕುನ್ನಾಥ್‌ (Krishnakumar Kunnath) ಸಾವು ಅಸಹಜವಲ್ಲ ಎಂದು ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿ ಸ್ಪಷ್ಟಪಡಿಸಿದೆ. ಕೆಕೆ ನಿನ್ನೆ ರಾತ್ರಿ ಕೋಲ್ಕತ್ತದ ನಜ್ರುಲ್‌ ಮಂಚಾ ಅಡಿಟೋರಿಯಂನಲ್ಲಿ ಕನ್ಸಾರ್ಟ್‌ ನಡೆಸಿ, ಸಂಗೀತ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಮೃತಪಟ್ಟಿದ್ದಾರೆ. ಕೆಕೆ ಮೃತದೇಹದ ಮೇಲೆ ಗಾಯದ ಗುರುತು ಕಂಡುಬಂದಿತ್ತು. ತಲೆ ಮತ್ತು ತುಟಿಯ ಬಳಿ ಏಟಾಗಿದ್ದು ಕಾಣಿಸಿದ್ದರಿಂದ ಕೋಲ್ಕತ್ತ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ಇಂದು ಕೆಕೆ ಮೃತದೇಹವನ್ನು ಪೋಸ್ಟ್‌ಮಾರ್ಟಮ್‌ ಮಾಡಲಾಗಿದ್ದು ಅದರ ಪ್ರಾಥಮಿಕ ವರದಿ ಬಂದಿದೆ. ಇದು ಅಸಹಜ ಸಾವಲ್ಲ ಎಂದು ಹೇಳಲಾಗಿದೆ. ಅಂತಿಮ ವರದಿ 72 ಗಂಟೆಗಳ ಬಳಿಕ ಬರಲಿದೆ.

ಕೃಷ್ಣಕುಮಾರ್‌ ಕುನ್ನಾಥ್‌ ಅಂತ್ಯಕ್ರಿಯೆ ಮುಂಬೈನಲ್ಲಿ ಜೂ.2ರಂದು ನಡೆಯಲಿದೆ. ಅದಕ್ಕೂ ಪೂರ್ವ ಇಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದಿಂದ ರಬೀಂದ್ರ ಸದನದಲ್ಲಿ ಗಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಗನ್‌ ಸೆಲ್ಯೂಟ್‌ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಜಿಲ್ಲಾ ಪ್ರವಾಸಕ್ಕೆ ಹೊರಟಿದ್ದ ಸಿಎಂ ಮಮತಾ ಬ್ಯಾನರ್ಜಿ ಅದನ್ನು ಮೊಟಕುಗೊಳಿಸಿ, ಕುನ್ನಾಥ್‌ರಿಗೆ ಗೌರವ ಅರ್ಪಿಸಿದರು. ಕೆಕೆ ನಿಧನದ ಬೆನ್ನಲ್ಲೇ ಕೋಲ್ಕತ್ತಕ್ಕೆ ಆಗಮಿಸಿರುವ ಅವರ ಪತ್ನಿ ಮತ್ತಿತರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ಕೃಷ್ಣಕುಮಾರ್‌ ಕುನ್ನಾಥ್‌ ಒಬ್ಬರು ಯುತ್‌ ಐಕಾನ್‌ ಆಗಿದ್ದರು, ಅಪರೂಪದ ಹಾಡುಗಾರ ಎಂದು ಹೇಳಿದರು.

ಕೃಷ್ಣಕುಮಾರ್‌ ಕುನ್ನಾಥ್‌ ಮೃತದೇಹವನ್ನು ಇಂದೇ ಮುಂಬೈನ ವೆರ್ಸೋವಾದ ಪಾರ್ಕ್‌ ಪ್ಲಾಜಾದಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುವುದು. ನಾಳೆ ಅವರ ಮನೆಯ ಸಮೀಪದಲ್ಲೇ ಇರುವ ಮುಕ್ತಿಧಾಮದಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕಿಕ್ಕಿರಿದು ತುಂಬಿತ್ತು ಸಭಾಂಗಣ, ಕೆಕೆ ತುಂಬ ಬೆವರುತ್ತಿದ್ದರು; ವೇದಿಕೆ ಮೇಲೆ ಗಾಯಕನ ಕೊನೇ ಕ್ಷಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

OM Puri: ಸ್ಟಾರ್ ಆಗುವುದು ಸುಲಭವಲ್ಲ. ಇಂದಿನ ಎಷ್ಟೋ ಸ್ಟಾರ್ ಗಳು ಒಂದು ಕಾಲದಲ್ಲಿ ತುಂಬಾ ಕಷ್ಟ ಪಟ್ಟಿದ್ದರು. ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ಇವರಲ್ಲಿ ಓಂ ಪುರಿ ಕೂಡ ಒಬ್ಬರು. ಸ್ಟಾರ್ ಆಗುವ ಮೊದಲು ಅವರ ಬದುಕಿನ ಕಡುಕಷ್ಟದ ದಿನಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

OM Puri
Koo

ಎಷ್ಟೇ ದೊಡ್ಡ ಮನೆತನದಿಂದ ಬಂದಿರಲಿ ಚಿತ್ರರಂಗದಲ್ಲಿ (film industry) ತನ್ನ ಸ್ವಂತ ಪರಿಶ್ರಮವಿಲ್ಲದೆ ಸ್ಟಾರ್ (star) ಆಗಲು ಸಾಧ್ಯವೇ ಇಲ್ಲ. ಇವತ್ತಿನ ಹಲವಾರು ಸೂಪರ್ ಸ್ಟಾರ್ ಗಳು (super star) ಒಂದು ಕಾಲದಲ್ಲಿ ಬೀದಿ ಬದಿಯಲ್ಲಿ ಮಲಗಿದ್ದರು, ಸಣ್ಣಪುಟ್ಟ ಕೆಲಸಗಳನ್ನು ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು.

ಬಾಲಿವುಡ್ ನ (bollywood) ಶಾರುಖ್ ಖಾನ್ (Shah Rukh Khan) , ಅಮಿತಾಬ್ ಬಚ್ಚನ್ (Amitabh Bachchan) ಕೂಡ ಒಂದು ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಸಹಿಸಿಯೇ ಮೇಲಕ್ಕೆ ಏರಿದವರು. ಹೀಗೆಯೇ ಕಷ್ಟಪಟ್ಟು ಮನೆ ಮಾತಾಗಿರುವವರಲ್ಲಿ ಬಾಲಿವುಡ್ ನಲ್ಲಿ ವಿವಿಧ ಪಾತ್ರಗಳಿಂದ ಪ್ರಸಿದ್ದಿ ಪಡೆದ ನಟ ಓಂ ಪುರಿ (OM Puri) ಕೂಡ ಒಬ್ಬರು.

ಜನನ ದಾಖಲೆಯೇ ಇಲ್ಲ

ಹರಿಯಾಣದ ಅಂಬಾಲದಲ್ಲಿ ಜನಿಸಿದ್ದ ಓಂ ಪುರಿ ಅವರ ತಂದೆ ಟೆಕ್ ಚಂದ್ ಪುರಿ ಭಾರತೀಯ ಸೇನೆಯಲ್ಲಿದ್ದರು ಮತ್ತು ರೈಲ್ವೇಯಲ್ಲಿಯೂ ಕೆಲಸ ಮಾಡಿದ್ದರು. ಆದರೂ ಓಂ ಪುರಿ ಅವರು ಯಾವುದೇ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ. ಹೀಗಾಗಿ ಅವರ ಜನ್ಮ ದಿನಾಂಕದ ಬಗ್ಗೆ ಅವರ ಕುಟುಂಬಕ್ಕೆ ಖಚಿತವಾಗಿ ತಿಳಿದಿಲ್ಲ.

ದಸರಾ ಆರಂಭವಾದ ಎರಡು ದಿನಗಳ ಅನಂತರ ತಾನು ಜನಿಸಿರುವುದಾಗಿ ತಾಯಿ ಹೇಳುತ್ತಿದ್ದರು ಎನ್ನುತ್ತಾರೆ ಓಂ ಪುರಿ.

ಇದನ್ನೂ ಓದಿ: Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

ಸ್ವಂತ ಪರಿಶ್ರಮದಿಂದ ಖ್ಯಾತಿ

ಓಂಪುರಿ ಅವರ ಬಾಲ್ಯವು ತುಂಬಾ ಸುಲಭವಾಗಿರಲಿಲ್ಲ. ಇಂದು ನಾವು ಅವರ ಕುಟುಂಬದ ಬಗ್ಗೆ ಮಾತನಾಡುತ್ತೇವೆ. ಆದರೆ ಅವರು ಹಿಂದುಳಿದ ಹಿನ್ನೆಲೆಯಿಂದ ಬಂದು ದೊಡ್ಡ ಹೆಸರನ್ನು ತಮ್ಮ ಸ್ವಂತ ಪರಿಶ್ರಮದಿಂದಲೇ ಗಳಿಸಿದರು.
ಎಂಟು ಮಂದಿಯಲ್ಲಿ ಇಬ್ಬರು ಮಾತ್ರ ಬದುಕಿ ಉಳಿದರು.

ಓಂ ಪುರಿ ಅವರ ಎಂಟು ಸಹೋದರರು ಮತ್ತು ಸಹೋದರಿಯರಲ್ಲಿ ಕಿರಿಯರಾಗಿದ್ದರು. ದುರದೃಷ್ಟವಶಾತ್ ಅವರ ಎಲ್ಲಾ ಸಹೋದರರು ಮತ್ತು ಸಹೋದರಿಯರು ಬಾಲ್ಯದಲ್ಲೇ ಸರಿಯಾದ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ನಿಧನರಾದರು. ಅವರ ಹಿರಿಯ ಸಹೋದರ ವೇದ್ ಮತ್ತು ಪುರಿ ಮಾತ್ರ ಬದುಕುಳಿದರು.


ಕಷ್ಟದ ಜೀವನ

ತಂದೆ ರೈಲ್ವೇ ಉದ್ಯೋಗಿಯಾಗಿದ್ದಾಗ ಸಿಮೆಂಟ್ ಕಳ್ಳತನದ ಆರೋಪದಿಂದ ಜೈಲು ಸೇರಿದ್ದರು. ಇದರ ಬಳಿಕ ಅವರ ಕುಟುಂಬವು ನಿರಾಶ್ರಿತವಾಯಿತು. ಈ ಸಮಯದಲ್ಲಿ ಓಂ ಪುರಿ ಅವರ ಸಹೋದರ ವೇದ್ ಪ್ರಕಾಶ್ ಪುರಿ ರೈಲು ನಿಲ್ದಾಣಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಓಂ ಪುರಿ ಅವರು ಸ್ಥಳೀಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬವನ್ನು ಬೆಂಬಲಿಸಲು ಇವರು ರೈಲು ಹಳಿಗಳಿಂದ ಕಲ್ಲಿದ್ದಲು ಸಂಗ್ರಹಿಸುತ್ತಿದ್ದರು.

ಕಷ್ಟವಿದ್ದರೂ ಓದು ಮುಂದುವರಿಸಿದರು

ಎಷ್ಟೇ ಕಷ್ಟವಿದ್ದರೂ ಪುರಿ ಅವರ ಅಧ್ಯಯನವನ್ನು ಬಿಡಲಿಲ್ಲ. ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ ಸೇರಿ, ಅಲ್ಲಿ ಅವರು ನಾಸಿರುದ್ದೀನ್ ಷಾ ಅವರನ್ನು ಭೇಟಿಯಾದರು. ಷಾ ಅವರು ಪುರಿ ಅವರನ್ನು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕರೆ ತಂದರು.

ಷಾ ಅವರೊಂದಿಗೆ ಕೆಲಸ

ಓಂ ಪುರಿ ಮತ್ತು ನಾಸಿರುದ್ದೀನ್ ಷಾ ಅವರೊಂದಿಗೆ ಒಟ್ಟಿಗೆ 26 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಮೊದಲ ಚಿತ್ರ 1977ರಲ್ಲಿ ಭೂಮಿಕಾ ಮತ್ತು ಅವರ ಕೊನೆಯ ಚಿತ್ರ 2009 ರಲ್ಲಿ ಬೋಲೋ ರಾಮ್.


ಹೃದಯಾಘಾತದಿಂದ ನಿಧನ

ಓಂ ಪುರಿ ಅವರು ಮುಂಬಯಿ ನ ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ 2017ರ ಜನವರಿ 6 ರಂದು ನಿಧನರಾದರು. ಚಾಚಿ 420 (1997), ಹೇರಾ ಫೆರಿ (2000), ಚೋರ್ ಮಚಾಯೆ ಶೋರ್ (2002), ದೀವಾನೆ ಹ್ಯೂ ಪಾಗಲ್, ಚುಪ್ ಚುಪ್ ಕೆ, ಕಿಸ್ಮೆತ್ ಕನೆಕ್ಷನ್ ಮತ್ತು ಮಲಾಮಾಲ್ ವೀಕ್ಲಿ (2006) ಮತ್ತು ಓಹ್ ಮೈ ಗಾಡ್, ಧೋಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು.

ಭಾರತೀಯ, ಬ್ರಿಟಿಷ್ ಮತ್ತು ಅಮೆರಿಕನ್ ಚಲನಚಿತ್ರಗಳಲ್ಲಿ ನಟಿಸಿರುವ ಅವರಿಗೆ ನ್ಯಾಷನಲ್ ಫಿಲಂ ಅವಾರ್ಡ್, ಅತ್ಯತ್ತಮ ನಟ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದೆ.

Continue Reading

ಬಾಲಿವುಡ್

Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

Riteish Deshmukh: ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Riteish Deshmukh-Genelia visit Ayodhya Ram Mandir
Koo

ಬೆಂಗಳೂರು: ನಟ ರಿತೇಶ್ ದೇಶಮುಖ್ (Riteish Deshmukh) ಏಪ್ರಿಲ್ 20ರಂದು ಪತ್ನಿ ಜೆನಿಲಿಯಾ ದೇಶಮುಖ್ (Genelia Deshmukh) ಮತ್ತು ಮಕ್ಕಳೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ದಂಪತಿ ರಾಮಮಂದಿರಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಿತೇಶ್ ಮತ್ತು ಜೆನಿಲಿಯಾ (Ayodhya Ram Mandir) ಫೋಟೊ ಶೇರ್‌ ಮಾಡಿಕೊಂಡು ʻʻರಾಮಲಲ್ಲಾ ದರ್ಶನ ಪಡೆದದ್ದಾಯ್ತುʼʼಎಂದು ಬರೆದುಕೊಂಡಿದ್ದಾರೆ.

ಫೋಟೊದಲ್ಲಿ ದಂಪತಿ ರಾಮನನ್ನು ಪ್ರಾರ್ಥಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮುಂಚೆ  ಪ್ರಿಯಾಂಕಾ ಚೋಪ್ರಾ (Priyanka Chopra), ಅವರ ಪತಿ-ಗಾಯಕ ನಿಕ್ ಜೋನಾಸ್ ಮತ್ತು ಅವರ ಪುತ್ರಿ ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆ ಬುಧವಾರ (ಮಾ.20) ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದರು.

ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Priyanka Chopra : ರಾಮಮಂದಿರದಲ್ಲಿ ಪ್ರಿಯಾಂಕಾ ಮಗಳು ಕ್ಯೂಟ್‌ ಆಗಿ ‘ಅಯೋಧ್ಯಾ’ ಎಂದು ಹೇಳಿದ್ದು ಹೀಗೆ!

ರಿತೇಶ್ ದೇಶಮುಖ್ ಪೋಸ್ಟ್‌

ಸಿನಿಮಾ ವಿಚಾರಕ್ಕೆ ಬಂದರೆ, ರಿತೇಶ್ ಅವರು ‘ಮಸ್ತಿ 4’ ಗಾಗಿ ಏಳು ವರ್ಷಗಳ ನಂತರ ವಿವೇಕ್ ಒಬೆರಾಯ್ ಮತ್ತು ಅಫ್ತಾಬ್ ಶಿವದಾಸನಿ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಇಂದ್ರ ಕುಮಾರ್, ಎ. ಜುಂಜುನ್ವಾಲಾ, ಅಶೋಕ್ ಠಾಕೇರಿಯಾ ಮತ್ತು ಎಸ್.ಕೆ. ಅಹ್ಲುವಾಲಿಯಾ ಬಂಡವಾಳ ಹೂಡಿದ್ದಾರೆ.

Continue Reading

ಬಾಲಿವುಡ್

Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

Ranveer Singh: ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

VISTARANEWS.COM


on

Ranveer Singh Files Police Case Deepfake Video Goes
Koo

ಬೆಂಗಳೂರು: : ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೊವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ. ಹೀಗಾಗಿ ರಣವೀರ್‌ ಸಿಂಗ್‌ ಅವರು ಡೀಪ್‌ಫೇಕ್ ವಿಡಿಯೊ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಇದೀಗ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರಣವೀರ್ ಸಿಂಗ್ ತಂಡ ಹೇಳಿದೆ. “ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ರಣವೀರ್ ಸಿಂಗ್ ಅವರ ಎಐ-ರಚಿಸಿದ ಡೀಪ್‌ಫೇಕ್ ವೀಡಿಯೊವನ್ನು ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Ranveer Singh: ಅಂಬಾನಿ ಭಾವಿ ಸೊಸೆಯ ಮಾತಿಗೆ ನಾಚಿ ನೀರಾದ ದೀಪಿಕಾ ಪತಿ!

ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಇತ್ತೀಚೆಗೆ ನಟನ ವಕ್ತಾರರು ಈ ವಿಡಿಯೊ ವಿರುದ್ಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಕೈಗೊಂಡಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Continue Reading

ಬಾಲಿವುಡ್

Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

Kalki 2898 AD: ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು.

VISTARANEWS.COM


on

Kalki 2898 AD Name of Amitabh Bachchan character revealed
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ.  ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಅಮಿತಾಭ್ ಬಚ್ಚನ್ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ತಂಡ ರಿವೀಲ್ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅಮಿತಾಭ್‌ ಬಚ್ಚನ್ ಹಳದಿ ಬಟ್ಟೆಯನ್ನು ಧರಿಸಿದ್ದರು. ಗುಹೆಯಂತೆ ಕಾಣುವ ಶಿವಲಿಂಗದ ಮುಂದೆ ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು. ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ, ನಾನು ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೆ. ನಾನು ಗುರು ದ್ರೋಣರ ಮಗ. ಅಶ್ವತ್ಥಾಮ.”ಎಂದು ಹೇಳುತ್ತಾರೆ. ಈ ಮೂಲಕ ಅಮಿತಾಭ್‌ ಪಾತ್ರ ರಿವೀಲ್‌ ಆಗಿದೆ.

ಇದನ್ನೂ ಓದಿ: Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಈ ಹಿಂದೆ 2024ರ ಮೇ 9ರಂದು ಚಿತ್ರ ತೆರೆ ಕಾಣಲಿದೆ ಎನ್ನಲಾಗಿತ್ತು. ಆದರೆ ಎಲ್ಲ ಕೆಲಸ ಪೂರ್ಣಗೊಂಡಿಲ್ಲದ ಕಾರಣ ರಿಲೀಸ್‌ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕೆಲವು ದಿನಗಳ ಹಿಂದೆ ವರದಿಗಳು ತಿಳಿಸಿದ್ದವು. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು. ಇದು ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಪಾತ್ರ ಹೆಸರನ್ನೂ ರಿವೀಲ್‌ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ದುಬಾರಿ ಸಿನಿಮಾ

ʼಕಲ್ಕಿ 2898 ಎಡಿʼ ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ.

Continue Reading
Advertisement
vistara Editorial ವಿಸ್ತಾರ ಸಂಪಾದಕೀಯ
ದೇಶ1 hour ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ1 hour ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು1 hour ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20242 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ2 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ2 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20243 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ3 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ3 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ3 hours ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌