Site icon Vistara News

Kushi Motion Poster: ಖುಷಿ ತರುತ್ತಿದೆ ʼಖುಷಿʼ ಚಿತ್ರದ ಮೋಷನ್‌ ಪೋಸ್ಟರ್‌

Kushi

ಬೆಂಗಳೂರು: ಸಮಂತಾ ಹಾಗೂ ವಿಜಯ್‌ ದೇವರಕೊಂಡ  ಸ್ಕ್ರೀನ್‌ನಲ್ಲಿ ಒಂದಾಗುತ್ತಿದ್ದಾರೆ. ವಿಜಯ್‌ ದೇವರಕೊಂಡ ಅವರು ಮೋಷನ್‌ ಪೋಸ್ಟರ್‌ ಹಂಚಿಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸುಂದರಿ ಸಮಂತಾ ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ್ದಾರೆ. ಸಿನಿಮಾದ ಹೆಸರು ಖುಷಿ. ಹೆಸರಿಗೆ ತಕ್ಕ ಹಾಗೆ ಸಮಂತಾ ಮೊಗದಲ್ಲಿ ಖುಷಿ ಎದ್ದು ಕಾಣುತ್ತಿದೆ.

ಇದನ್ನೂ ಓದಿ | Happy Birthday ಸಮಂತಾ ರುತ್ ಪ್ರಭು

ರೋಮ್ಯಾಂಟಿಕ್‌ ಕಾಮಿಡಿ ಸಿನಿಮಾ “ಖುಷಿʼಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದು ವಿಜಯ್‌ ಮತ್ತು ಸಮಂತಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರವನ್ನು ನಿರ್ದೇಶಕ ಶಿವ ನಿರ್ವಾಣ ಮಾಡಿ ನಿರ್ದೇಶಿಸಿದ್ದಾರೆ. ಈ ಜೋಡಿ ಈ ಹಿಂದೆ ನಟಿಸಿದ್ದ ಚೈತನ್ಯ ಮತ್ತು ಮಜಲಿ ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಡಿಸೆಂಬರ್‌ 23ರಂದು ಈ ಸಿನಿಮಾ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಮೋಷನ್ ಪೋಸ್ಟರ್ ನಲ್ಲಿ “ಖುಶಿʼ ಚಿತ್ರದ ಫಸ್ಟ್ ಲುಕ್ ನೋಡಿದರೆ ವಿಜಯ್ ದೇವರಕೊಂಡ ಮತ್ತು ಸಮಂತಾ ನವ ದಂಪತಿಯಂತೆ ಕಾಣುತ್ತಿದ್ದಾರೆ. ಈ ಚಿತ್ರ ಮದುವೆಯ ಕಥಾ ಹೊಂದರ ಇರಬಹುದೆಂಬ ನಿರೀಕ್ಷೆಯನ್ನು ಚಿತ್ರ ಪ್ರೇಮಿಗಳಲ್ಲಿ ಹುಟ್ಟು ಹಾಕಿದೆ. ಈ ಸಿನಿಮಾದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿದೆ.

ವಿಜಯ್ ದೇವರಕೊಂಡ, ಸಮಂತಾ, ಜಯರಾಮ್, ಸಚಿನ್ ಖೇಡಕರ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ ಮುಂತಾದ ಅದ್ಭುತ ನಟ, ನಟಿಯರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ, ಪೀಟರ್ ಹೆನ್ಸ್ ಸಾಹಸ ನಿರ್ದೇಶನ, ಪ್ರವೀನ್ ಪುಡಿ ಅವರ ಸಂಕಲನ, ಜಿ ಮುರಳಿ ಕ್ಯಾಮೆರಾ ಕೆಲಸ ಮಾಡಿದೆ. ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತವಿದೆ.

ಇದನ್ನೂ ಓದಿ | ‘ಗನಿ’ ಚಿತ್ರದ ಟ್ರೇಲರ್‌ ರಿಲೀಸ್‌: ಬಾಕ್ಸರ್‌ ಲುಕ್‌ನಲ್ಲಿ ವರುಣ್‌ ತೇಜ್ ಮಿಂಚಿಂಗ್‌

Exit mobile version