Site icon Vistara News

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ (Actress Leelavathi) ಕನ್ನಡ ಮಾತ್ರವಲ್ಲದೆ, ವಿವಿಧ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ಕನ್ನಡದಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಿವೆ. ನಾಯಕಿಯಾಗಷ್ಟೇ ಅಲ್ಲದೆ, ಪೋಷಕ ಪಾತ್ರಗಳಲ್ಲಿಯೂ ಲೀಲಾವತಿ ಮಿಂಚಿದ್ದಾರೆ. ಇವರ ಕಲಾ ಸೇವೆಗೆ ಅನೇಕ ಪ್ರಶಸ್ತಿಗಳು ಸಹ ಅರಸಿ ಬಂದಿದೆ.

ಚಲನಚಿತ್ರ ರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿಯಾದ ಡಾ. ರಾಜಕುಮಾರ್ ಪ್ರಶಸ್ತಿಯನ್ನು (Dr Rajkumar Award) 1999-2000ನೇ ಸಾಲಿನಲ್ಲಿ ಲೀಲಾವತಿ ಅವರಿಗೆ ಕರ್ನಾಟಕ ಸರ್ಕಾರ ನೀಡಿದೆ. ಲೀಲಾವತಿ ಅವರ ಕಲಾ ಸಾಧನೆಯನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾಲಯವು 2008ರಲ್ಲಿ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಿದೆ.

ಬೆಳ್ತಂಗಡಿಯಲ್ಲಿ ಜನನ

ಲೀಲಾ ಕಿರಣ್ (ಲೀಲಾವತಿ) ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ಲೀಲಾವತಿ 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಬಳಿಕ ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲೂ ಕಾಣಿಸಿಕೊಂಡರು. ಇನ್ನು ಡಾ. ರಾಜ್‌ಕುಮಾರ್‌ ಜತೆಗೆ ನಾಯಕಿಯಾಗಿ ನಟಿಸಿದ್ದು ಮಾತ್ರವಲ್ಲದೆ, ಕಾಲಾ ನಂತರದಲ್ಲಿ ಅವರಿಗೆ ತಾಯಿಯಾಗಿಯೂ ನಟಿಸಿದ್ದಾರೆ. 1970ರ ಬಳಿಕ ಲೀಲಾವತಿ ಪೋಷಕ ಪಾತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು. ಅನಾರೋಗ್ಯದ ಹಿನ್ನಲೆಯಲ್ಲಿ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ನೆಲಮಂಗಲದಲ್ಲಿ ತಮ್ಮ ಪುತ್ರ ವಿನೋದ್‌ ರಾಜ್‌ ಜತೆಗೆ ವಾಸವಾಗಿದ್ದರು.

ನಾಟಕ, ರಂಗಭೂಮಿ ಬಗೆಗೆ ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು. ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು..

ಚಿತ್ರ ಜೀವನ

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ, ಅಲ್ಲಿಂದ ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದ್ದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದ್ದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್‌ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ ಆಗಿದೆ. ರಾಜ್‌ಕುಮಾರ್‌ ಅವರ ಜತೆ ಬಳಿಕ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರು.

ಮೋಡಿ ಮಾಡಿದ ರಾಜ್‌ಕುಮಾರ್ ಮತ್ತು ಲೀಲಾವತಿ ಜೋಡಿ

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್‌ಕುಮಾರ್ ಮತ್ತು ಲೀಲಾವತಿ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲವು ಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ಪ್ರಶಸ್ತಿ-ಪುರಸ್ಕಾರಗಳು

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

ಇದನ್ನೂ ಓದಿ: Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

ಲೀಲಾವತಿ ಅಭಿನಯದ ಪ್ರಮುಖ ಚಿತ್ರಗಳ ಲಿಸ್ಟ್‌ ಇಲ್ಲಿದೆ

Exit mobile version