Site icon Vistara News

Mahesh Babu: ಮಹೇಶ್ ಬಾಬು ಸಿನಿಮಾಗೆ ಬಾಲಿವುಡ್‌ ನಟಿ ರೇಖಾ ಎಂಟ್ರಿ

Mahesh Babu

ಬೆಂಗಳೂರು: ಟಾಲಿವುಡ್‌ ನಟ ಮಹೇಶ್ ಬಾಬು (Mahesh Babu) ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿರುವ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡ ಬೆನ್ನಲ್ಲೇ ಇದೀಗ ಅವರ ಚಿತ್ರಕ್ಕೆ ನಟಿ ರೇಖಾ ಎಂಟ್ರಿ ಕೊಟ್ಟಿದ್ದಾರೆ. ಮಹೇಶ್ ಬಾಬು ಸದ್ಯ SSMB 28 ಸಿನಿಮಾದ ತಯಾರಿಯಲ್ಲಿದ್ದಾರೆ.

ಮಹೇಶ್ ಬಾಬು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ SSMB28ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ʻಮಹರ್ಷಿʼ ಸಿನಿಮಾ ನಂತರ ಮತ್ತೆ ಇಬ್ಬರೂ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಾತ್ಕಾಲಿಕವಾಗಿ SSMB28 ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿ ರೇಖಾ ನಟಿಸುತ್ತಿದ್ದಾರೆ. `ಗಾಳಿಪಟ 2′ ನಾಯಕಿ ಸಂಯುಕ್ತಾ ಮೆನನ್ ಕಾಣಿಸಿಕೊಳ್ಳಲಿದ್ದಾರೆ. ಎಸ್. ರಾಧಾಕೃಷ್ಣ ಈ ಚಿತ್ರವನ್ನ ಅದ್ಧೂರಿಯಾಗಿ ನಿರ್ಮಾಣ ಮಾಡ್ತಿದ್ದಾರೆ.

ಇದನ್ನೂ ಓದಿ: Mahesh Babu: ಜಿಮ್‌ ವರ್ಕೌಟ್‌ ಫೋಟೊ ಹಂಚಿಕೊಂಡ ಮಹೇಶ್ ಬಾಬು, SSMB 28 ತಯಾರಿ ನಡೆಸಿದ್ದಾರಾ ನಟ?

ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು. ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಎಸ್ ಥಮನ್ ಸಂಗೀತ ಸಂಯೋಜಿಸಿದ್ದಾರೆ. SSMB28 ಅನ್ನು ಆಗಸ್ಟ್ 11, 2023ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ

ಇದರ ನಂತರ, ಮಹೇಶ್ ಬಾಬು RRR ಚಲನಚಿತ್ರ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಜತೆ ಸಿನಿಮಾ ಮಾಡಲಿದ್ದಾರೆ. ಚಿತ್ರಕ್ಕೆ ತಾತ್ಕಾಲಿಕವಾಗಿ SSMB29 ಎಂದು ಹೆಸರಿಡಲಾಗಿದೆ.

Exit mobile version