ಬೆಂಗಳೂರು: ಟೊವಿನೋ ಥಾಮಸ್ ನಟಿಸಿರುವ 2018 ಮಲಯಾಳಂ ಸಿನಿಮಾ (Malayalam Film 2018) 2024ರ 96ನೇ ಆಸ್ಕರ್ ಅವಾರ್ಡ್ಸ್‌ಗೆ (Oscars 2024:) ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ. ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ ತೀರ್ಪುಗಾರರು ಸೆ.27ರಂದು ಅನೌನ್ಸ್ ಮಾಡಿದ್ದಾರೆ. ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದವು.
96ನೇ ಆಸ್ಕರ್ ಅವಾರ್ಡ್ ಎಬಿಸಿಯಲ್ಲಿ 2024ರ ಮಾರ್ಚ್ 10ರ ಭಾನುವಾರ ಓವೇಶನ್ ಹಾಲಿವುಡ್‌ನಲ್ಲಿರುವ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಿಂದ ವಿಶ್ವಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರಸಾರವಾಗಲಿದೆ ಎಂದು ವರದಿಯಾಗಿದೆ.
ಇದರಲ್ಲಿ “ಬಾಲಗಮ್”, “ದಿ ಕೇರಳ ಸ್ಟೋರಿ”, “ಜ್ವಿಗಾಟೊ” “ರಾಖಿ ಔರ್ ರಾಣಿ ಕಿ ಪ್ರೇಮ್ ಕಹಾನಿ”ಅನಂತ್ ಮಹದೇವನ್ ಅವರ ಸ್ಟೋರಿ ಟೇಲರ್ (ಹಿಂದಿ), ಮ್ಯೂಸಿಕ್ ಸ್ಕೂಲ್ (ಹಿಂದಿ), ಮಿಸಸ್ ಚಟರ್ಜಿ ವರ್ಸಸ್ ನಾರ್ವೆ (ಹಿಂದಿ), 12th ಫೇಲ್ (ಹಿಂದಿ) ವಿದುತಲೈ ಭಾಗ 1 (ತಮಿಳು), ಘೂಮರ್ (ಹಿಂದಿ), ಮತ್ತು ದಸರಾ (ತೆಲುಗು) ಸಿನಿಮಾಗಳು ಆಸ್ಕರ್‌ನ ಅಧಿಕೃತ ಪ್ರವೇಶ ಪಡೆಯವ ಸ್ಥಾನದಲ್ಲಿದ್ದವು. ಅಂತಿಮವಾಗಿ ಜೂಡ್ ಆಂಥೊನಿ ಜೋಸೆಫ್ ನಿರ್ದೇಶನದ ಈ ಸಿನಿಮಾ ಆಸ್ಕರ್ ಸ್ಪರ್ಧೆಗೆ ಅಧಿಕೃತವಾಗಿ ಆಯ್ಕೆಯಾಗಿದೆ.
ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?
Tovino Thomas' 2018 movie is India's official entry for #Oscars2024 pic.twitter.com/e2bFwOrg1d
— Veerni Srinivasa Rao (@veernisrinivas) September 27, 2023
ಜೂಡ್ ಆಂಥೊನಿ ಜೋಸೆಫ್ ನಿರ್ದೇಶನದ ನೈಜ ಘಟನೆ ಆಧಾರಿತ ಮಲಯಾಳಂ `2018′ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಕೇರಳ ಚಲನಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾ ಆಗಿ ಹೊರಹೊಮ್ಮಿತ್ತು.
ಟೊವಿನೋ ಥಾಮಸ್ ಜತೆ ಆಸಿಫ್ ಅಲಿ, ಅಪರ್ಣಾ ಬಾಲಮುರಳಿ, ವಿನೀತ್ ಶ್ರೀನಿವಾಸನ್, ಕಲೈಯರಸನ್, ಸುದೇಶ್, ಅಜು ವರ್ಗೀಸ್, ತನ್ವಿ ರಾಮ್, ಗೌತಮಿ ನಾಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
2018 ಸಿನಿಮಾ ಕಥೆ ಏನು?
‘2018’ ಸಿನಿಮಾ 2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ಮಾಡಿದ ಸಿನಿಮಾ ಇದಾಗಿದೆ. ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳು ಇವೆ. ಅತೀ ಕಷ್ಟದ ಸಮಯದಲ್ಲೂ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೊ’ ಎಂಬ ಟ್ಯಾಗ್ಲೈನ್ ಗಮನ ಸೆಳೆದಿತ್ತು. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾಗಿದ್ದ ಅತಿ ಭೀಕರ ಪ್ರವಾಹ ಅದಾಗಿತ್ತು.