Mandya Ramesh: ಶೂಟಿಂಗ್ ವೇಳೆ ಮಂಡ್ಯ ರಮೇಶ್‌ಗೆ ಗಾಯ; ಆಸ್ಪತ್ರೆಗೆ ದಾಖಲು - Vistara News

ಕಿರುತೆರೆ

Mandya Ramesh: ಶೂಟಿಂಗ್ ವೇಳೆ ಮಂಡ್ಯ ರಮೇಶ್‌ಗೆ ಗಾಯ; ಆಸ್ಪತ್ರೆಗೆ ದಾಖಲು

Mandya Ramesh: ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ನಟ ಮಂಡ್ಯ ರಮೇಶ್‌ ಅವರ ಬಲಗಾಲು, ಬಲಗೈ ಮತ್ತು ಎಡಗೈಗೆ ಗಾಯಗಳಾಗಿವೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

Mandya Ramesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೀರಿಯಲ್‌ ಶೂಟಿಂಗ್ ವೇಳೆ ನಟ ಮಂಡ್ಯ ರಮೇಶ್‌ (Mandya Ramesh) ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ರಮೇಶ್ ಅರವಿಂದ್ ನಿರ್ಮಾಣದ ಆಸೆ ಧಾರಾವಾಹಿ ಚಿತ್ರೀಕರಣದಲ್ಲಿ ನಟಿಸುತ್ತಿದ್ದಾಗ ಕಾಲು ಜಾರಿ ಬಿದ್ದು ಮಂಡ್ಯ ರಮೇಶ್‌ ಗಾಯಗೊಂಡಿದ್ದಾರೆ.

ಶೂಟಿಂಗ್ ಸೆಟ್‌ನಲ್ಲಿ ಸೋಮವಾರ ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ಬಲಗಾಲು, ಬಲಗೈ ಮತ್ತು ಎಡಗೈಗೆ ಗಾಯಗಳಾಗಿವೆ. ಹೀಗಾಗಿ ಎಡಗಾಲಿನ ಮಂಡಿ ಭಾಗಕ್ಕೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸದ್ಯ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಬಳಿ ಇರುವ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಸಂಜೆ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ಮಂಡ್ಯ ರಮೇಶ್ ಪತ್ನಿ ಸರೋಜಮ್ಮ ತಿಳಿಸಿದ್ದಾರೆ.

ಇದನ್ನೂ ಓದಿ | Ravichandran: ಮಾತಿನ ಮನೆಯಲ್ಲಿ ‘ದ ಜಡ್ಜ್ ಮೆಂಟ್’; ಕ್ರೇಜಿಸ್ಟಾರ್‌ ಅಭಿನಯದ ಚಿತ್ರ ಶೀಘ್ರ ತೆರೆಗೆ

ಈ ಬಗ್ಗೆ ಮಂಡ್ಯ ರಮೇಶ್ ಅವರ ಪುತ್ರಿ ದಿಶಾ ಪ್ರತಿಕ್ರಿಯಿಸಿ, ಶೂಟಿಂಗ್‌ ಮಾಡುತ್ತಿದ್ದಾಗ ತಂದೆಯವರು ಎಡವಿ ಬಿದ್ದಾಗ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೀರಿಯಲ್‌ ಶೂಟಿಂಗ್‌ ವೇಳೆ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಈಗ ಅವರಿಗೆ ಯಾವುದೇ ತೊಂದರೆ ಇಲ್ಲ, ಆರೋಗ್ಯವಾಗಿದ್ದಾರೆ ಎಂದು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ನಟಿ ಲೀಲಾವತಿ ಆರೋಗ್ಯ ವಿಚಾರಿಸಿ ಭಾವುಕರಾದ ಶಿವ ರಾಜ್‌ಕುಮಾರ್‌

shiv raj kumar
shiv raj kumar

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ಕನ್ನಡದ ಹಿರಿಯ ನಟಿ ಲೀಲಾವತಿ (Actress Leelavathi) ಅವರ ನೆಲಮಂಗಲ ತಾಲೂಕಿನಲ್ಲಿರುವ ಸೋಲದೇವನಹಳ್ಳಿಯ ನಿವಾಸಕ್ಕೆ ನಟ ಶಿವ ರಾಜ್‌ಕುಮಾರ್ (Shiva Rajkumar) ಹಾಗೂ ಅವರ ಪತ್ನಿ ಗೀತಾ ಶಿವ ರಾಜ್‌ಕುಮಾರ್ ಮಂಗಳವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

‘‘ಲೀಲಾವತಿ ಅವರಿಗೆ ಮೊದಲಿನಿಂದಲೂ ನಮ್ಮ ಬಗ್ಗೆ ಅಪಾರ ಪ್ರೀತಿ. ನಾವು ಅವರನ್ನು ಯಾವಾಗ ಕಂಡರೂ ಅದೇ ಆತ್ಮೀಯತೆ, ಅದೇ ಪ್ರೀತಿಯೊಂದ ಮಾತನಾಡಿಸುತ್ತಿದ್ದರು. ಅವರ ಆ ಪ್ರೀತಿಯನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಈಗ ವಿನೋದ್ ರಾಜ್‌ ಅವರನ್ನು ನೋಡಿದರೆ ಅವರ ತಾಯಿಯನ್ನೇ ನೋಡಿದಂತೆ ಆಗುತ್ತದೆ. ಲೀಲಾವತಿ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ಬೇಜಾರಾಗುತ್ತದೆ. ಆದರೆ ಅವರು ಇನ್ನೂ ನಮ್ಮೊಂದಿಗೆ ಇರುತ್ತಾರೆ ಎಂಬ ನಂಬಿಕೆ ಇದೆ. ಅವರಿಗೆ ದೇವರ ಆಶೀರ್ವಾದವಿದೆ. ಎಲ್ಲದಕ್ಕಿಂತಲೂ ಹೆಚ್ಚಿನದಾಗಿ ಅವರ ಮಗನ ಪ್ರೀತಿ ಇದೆ’’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

‘ʼಅಮ್ಮ ನನ್ನ ಧ್ವನಿ ಕಂಡು ಹಿಡಿದರು. ಈ ವಯಸ್ಸಿನಲ್ಲಿಯೂ ಅವರು ನೋವನ್ನು ಸಹಿಸಿಕೊಂಡು ಇರುವ ಶಕ್ತಿ ಇದೆಯಲ್ಲ ಅದು ಸಾಮಾನ್ಯದ್ದಲ್ಲ. ಯೋಗ ಪುರುಷರು ಅನ್ನುತ್ತಾರಲ್ಲ ಹಾಗೆ. ಈಗಲೂ ಅವರು ಸ್ಟ್ರಾಂಗ್ ಆಗಿದ್ದಾರೆ. ಒಳ್ಳೆಯ ಮನಸ್ಸಿರುವವರು, ಒಳ್ಳೆಯ ವ್ಯಕ್ತಿತ್ವ ಉಳ್ಳವರು. ನಾವು ಅವರನ್ನು ಇಷ್ಟೊಂದು ಪ್ರೀತಿಸಲು ಅದೇ ಕಾರಣ’ʼ ಎಂದು ಶಿವಣ್ಣ ಭಾವುಕರಾದರು. ಜತೆಗೆ ವಿನೋದ್‌ ರಾಜ್‌ ಕೈ ಹಿಡಿದು ಸಾಂತ್ವಾನ ಹೇಳಿದರು.

ʼʼನೋವು ಎಲ್ಲರಿಗೂ ಆಗುತ್ತೆ. ನಾವು ತಾಳಿಕೊಂಡಿಲ್ಲವೇ ಹಾಗೆಯೇ ನೀವು ಧೈರ್ಯ ತಂದುಕೊಳ್ಳಿ. ನಿಮ್ಮ ತಾಯಿಯವರಿಗೆ ಮಗ ಚೆನ್ನಾಗಿರಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅವರ ಆಸೆಯಂತೆ ನೀವು ಚೆನ್ನಾಗಿರಬೇಕು’’ ವಿನೋದ್ಎಂ‌ ರಾಜ್‌ ಅವರ ಕೈ ಹಿಡಿದು ಶಿವರಾಜ್ ಕುಮಾರ್ ಧೈರ್ಯ ತುಂಬಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಿರುತೆರೆ

Nannamma Super Star 3: ತಾಯಿಗೆ ಪಾದಪೂಜೆ ಮಾಡಿ ಕ್ಷಮೆ ಕೋರಿದ ವರ್ತೂರ್‌ ಸಂತೋಷ್‌!

Nannamma Super Star 3: ಕಲರ್ಸ್‌ ಕನ್ನಡ ಸೀರಿಯಲ್‌ ಸಂತೆ, ಕಾಮಿಡಿ ಶೋಗಳು, ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿಗಳು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.

VISTARANEWS.COM


on

Varthur Santhosh bowed to his mother and apologized!
Koo

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ʻನನ್ನಮ್ಮ ಸೂಪರ್ ಸ್ಟಾರ್ʼ (Nannamma Super Star) ಮತ್ತೆ ಬಂದಿದೆ. ಮಕ್ಕಳ ಮುದ್ದು ಮಾತುಗಳು , ಅವರ ಆಟಗಳು ನೋಡುಗರನ್ನು ರಂಜಿಸುತ್ತಲೇ ಬರುತ್ತಿದೆ. ಎರಡು ಸೀಸನ್‌ ಪ್ರಸಾರವಾದ ಬಳಿಕ ಈಗ ಮೂರನೇ ಸೀಸನ್‌ ಶುರುವಾಗಿದೆ. ಕಲರ್ಸ್‌ ಕನ್ನಡ ಸೀರಿಯಲ್‌ ಸಂತೆ, ಕಾಮಿಡಿ ಶೋಗಳು, ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿಗಳು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಇದೀಗ ʻನನ್ನಮ್ಮ ಸೂಪರ್ ಸ್ಟಾರ್ʼ ವೇದಿಕೆಗೆ ವರ್ತೂರ್‌ ಸಂತೋಷ್‌ ಹಾಗೂ ಅವರ ತಾಯಿ ಬಂದಿದ್ದರು. ಇದೇ ವೇಳೆ ವೇದಿಕೆಯಲ್ಲಿ ವರ್ತೂರ್‌ ಅವರು ತಾಯಿಗೆ ಪಾದಪೂಜೆ ಮಾಡಿ ಕ್ಷಮೆ ಕೋರಿದ್ದಾರೆ.

ಕಲರ್ಸ್‌ ಕನ್ನಡ ಹೊಸ ಪ್ರೋಮೊ ಹಂಚಿಕೊಂಡಿದೆ. ವರ್ತೂರ್‌ ಅವರು ಮಾತನಾಡಿ ʻʻನಮ್ಮ ತಾಯಿ ಇರಲಿಲ್ಲ ಅಂದರೆ ವರ್ತೂರ್‌ ಸಂತೋಷ್‌ ಇವತ್ತು ಇರುತ್ತಿರಲ್ಲ. ಸಣ್ಣ ವಯಸ್ಸಿನಲ್ಲಿಯೇ ನನ್ನ ತಂದೆ ತೀರಿಕೊಂಡಾಗ, ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ತಂದೆ ತಾಯಿ ದೇವರುಗಳು. ದೇವರುಗಳನ್ನು ಬೇರೆಯವರು ಸೃಷ್ಟಿ ಮಾಡಲು ಆಗುವುದಿಲ್ಲ. ನಮ್ಮ ತಾಯಿಗೆ ನನ್ನ ಕಡೆಯಿಂದ ತುಂಬಾ ನೋವಾಗಿದೆ. ನನ್ನ ಕ್ಷಮಿಸಮ್ಮಾʼʼ ಎಂದು ಭಾವುಕರಾದರು.

ಇದನ್ನೂ ಓದಿ: Nannamma Super Star 3: ʻನನ್ನಮ್ಮ ಸೂಪರ್ ಸ್ಟಾರ್‌ʼಗೆ ನಿರೂಪಕಿಯಾದ ಸುಷ್ಮಾ ರಾವ್!

ʻನನ್ನಮ್ಮ ಸೂಪರ್ ಸ್ಟಾರ್ʼ

ಮೊದಲ ಸೀಸನ್‍ನಲ್ಲಿ ವನ್ಷಿಕಾ ಮತ್ತು ಯಶಸ್ವಿನಿ ಭಾಗವಹಿಸಿದ್ದರು. ವಿಜೇತರಾಗಿ ಹೊರಹೊಮ್ಮಿದ್ದರು. ಎರಡನೇ ಸೀಸನ್‌ನಲ್ಲಿ ಗ್ರಾಮೀಣ ಭಾಗದ ಪ್ರತಿಭೆಗೆ ಅಂದರೆ ಚೈತ್ರಾ ಮತ್ತು ಅವರ ಅವಳಿ ಮಕ್ಕಳು ಚಿರಂತ್-ಚಿನ್ಮಯ್ ವಿಜೇತರಾಗಿದ್ದರು.ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್‌ ಸ್ಟಾರ್ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಅಮ್ಮ ಮಕ್ಕಳ ಜತೆಗೆ ಕಿರುತೆರೆಯ ಚಿನಕುರುಳಿ ಎಂತಲೇ ಖ್ಯಾತಿ ಪಡೆದ ವನ್ಷಿಕಾ ನಿರೂಪಕಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್ ಸ್ಟಾರ್ ಶೋ ಬಹಳ ವಿಶೇಷವಾಗಿತ್ತು. ಏಕೆಂದರೆ ಶೋನಲ್ಲಿ ಸಾಮಾನ್ಯರಿಗೂ ಅವಕಾಶ ನೀಡಲಾಗಿತ್ತು.

ಕಳೆದ ಸೀಸನ್‌ನಂತೆ ಈ ಬಾರಿಯೂ ಸೃಜನ್ ಲೋಕೇಶ್, ತಾರಾ ಅನುರಾಧಾ, ಅನುಪ್ರಭಾಕರ್ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಸ್ಪರ್ಧಿಗಳ ಜತೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ನಾಯಕಿ ಭಾಗ್ಯಳಾಗಿ ನಟಿಸುತ್ತಿರುವ ಸುಷ್ಮಾ ರಾವ್ ‘ನನ್ನಮ್ಮ ಸೂಪರ್ ಸ್ಟಾರ್’ನ ನಿರೂಪಕಿಯಾಗಿ ದ್ದಾರೆ.

Continue Reading

ಕಿರುತೆರೆ

Shanmukh Jaswanth: ʻಬಿಗ್ ಬಾಸ್ʼ ರನ್ನರ್‌ ಅಪ್‌ ಇದೀಗ ಪೊಲೀಸರ ಅತಿಥಿ!

Shanmukh Jaswanth:  ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದ ಕಾರಣಕ್ಕೆ ಪೊಲೀಸರು ಸಂಪತ್‌ ವಿನಯ್‌ರನ್ನು ಬಂಧಿಸಲು ಮನೆಗೆ ತೆರಳಿದ್ದರು. ಈ ವೇಳೆ ಷಣ್ಮುಖ್‌ ಜಸ್ವಂತ್‌ ಗಾಂಜಾ ಸೇವನೆ ಮಾಡುತ್ತಿದ್ದರು.

VISTARANEWS.COM


on

Bigg Boss Telugu contestant Shanmukh Jaswanth arrested
Koo

ಬೆಂಗಳೂರು: ಬಿಗ್ ಬಾಸ್ ತೆಲುಗು ಐದನೇ ಸೀಸನ್‌ ರನ್ನರ್‌ಅಪ್‌ (Shanmukh Jaswanth) , ಯೂಟ್ಯೂಬರ್ ಮತ್ತು ನಟ ಷಣ್ಮುಖ್ ಜಸ್ವಂತ್‌ ಮನೆಯಲ್ಲಿಯೇ ಗಾಂಜಾ ಸೇವಿಸುವಾಗ ಪೊಲೀಸರ ಅತಿಥಿಯಾಗಿದ್ದಾರೆ. ಷಣ್ಮುಖ್ ಅವರ ಜತೆ ಇದ್ದ ಸಹೋದರ ಸಂಪತ್ ವಿನಯ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.  ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದ ಕಾರಣಕ್ಕೆ ಪೊಲೀಸರು ಸಂಪತ್‌ ವಿನಯ್‌ರನ್ನು ಬಂಧಿಸಲು ಮನೆಗೆ ತೆರಳಿದ್ದರು. ಈ ವೇಳೆ ಷಣ್ಮುಖ್‌ ಜಸ್ವಂತ್‌ ಗಾಂಜಾ ಸೇವನೆ ಮಾಡುತ್ತಿದ್ದರು.

ಷಣ್ಮುಖ್ ಅವರ ಸಹೋದರ ಸಂಪತ್ ವಿನಯ್ ಅವರು ಯುವತಿಯೊಂದಿಗೆ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಬಳಿಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಗೆ ಇನ್ನೇನು ಒಂದು ವಾರ ಇದೆ ಎನ್ನುವಾಗಲೇ ಇನ್ನೊಬ್ಬ ಮಹಿಳೆಯನ್ನು ವಿವಾಹವಾದರು. ಇದೀಗ ಸಂಪತ್ ತನಗೆ ಮೋಸ ಮಾಡಿದ್ದಾನೆ ಎಂದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಹಿಳೆ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ʻಷಣ್ಮುಖ್ ಮುಖಾಂತರ ಸಂಪತ್‌ನನ್ನು ಭೇಟಿಯಾಗಿದ್ದು, ಈಗ ಬೇರೊಬ್ಬರನ್ನು ಮದುವೆಯಾಗಿದ್ದಾನೆ. ಪ್ರೀತಿಯ ಹೆಸರಿನಲ್ಲಿ ಸಂಪತ್‌ ವಿನಯ್‌ ನನಗೆ ಮೋಸ ಮಾಡಿದ್ದಾನೆʼ ಎಂದು ಯುವತಿ ದೂರಿದ್ದಾಳೆ. ಈ ವೇಳೆ ಕೇಸ್‌ ದಾಖಲು ಮಾಡಿಕೊಂಡ ಪೊಲೀಸರು, ವಿಚಾರಣೆಗಾಗಿ ಸಂಪತ್‌ನನ್ನು ಕರೆದುಕೊಂಡು ಬರಲು ಆತನ ಮನೆಗೆ ತೆರಳಿದ್ದರು. ಈ ವೇಳೆ ಯುವತಿಯೂ ಕೂಡ ಪೊಲೀಸರೊಂದಿಗೆ ಹೋಗಿದ್ದಾಳೆ. ಪೊಲೀಸರು ಶೋಧ ಕಾರ್ಯ ಮಾಡುವ ವೇಳೆ ಆತ ಗಾಂಜಾ ಸೇವಿಸುತ್ತಿದ್ದ ಎನ್ನುವುದು ಗೊತ್ತಾದ ತಕ್ಷಣ ಬಂಧನ ಮಾಡಿದ್ದಾರೆ.

ಇದನ್ನೂ ಓದಿ: Actor Darshan: 6.2 ಅಡಿ ಎತ್ತರದ ದರ್ಶನ್ ಚಾಕೊಲೇಟ್ ಪ್ರತಿಮೆ ಅನಾವರಣ: ಸ್ನೇಹಿತರ ಬಿಗ್‌ ಸರ್ಪ್ರೈಸ್​

ಪೊಲೀಸರು ಆತನನ್ನು ಮತ್ತು ಆತನ ಸಹೋದರನನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗೂ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ. 2021ರಲ್ಲಿ ಹೈದರಾಬಾದ್‌ನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದಕ್ಕಾಗಿ ಷಣ್ಮುಖ್ ಅವರನ್ನು ಬಂಧಿಸಲಾಗಿತ್ತು. ಈ ಹಿಂದೆ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಬಂಧಿತರಾಗಿದ್ದರು.

ಸಾಫ್ಟ್‌ವೇರ್‌ ಡೆವಲಪರ್‌, ʻಸೂರ್ಯ ವೆಬ್‌ ಸಿರೀಸ್‌ʼ ಮೂಲಕ ಪ್ರಖ್ಯಾತಿ ಪಡೆದಿರುವ ಷಣ್ಮುಖ್‌, ಈ ಮೂಲಕವೇ ಯೂಟ್ಯೂಬ್‌ನಲ್ಲಿ ದೊಡ್ಡ ಮಟ್ಟದ ಮನ್ನಣೆ ಪಡೆದುಕೊಂಡಿದ್ದರು. ಶಬರೀಶ್ ಕಂಡ್ರೇಗುಲ ಮತ್ತು ಅವರ ಸಹೋದರ ನಿರ್ದೇಶನದ ʻವೈವಾʼ ಕಿರುಚಿತ್ರದಲ್ಲಿ ನಟಿಸಿದ ಷಣ್ಮುಖ್‌ ಖ್ಯಾತಿ ಗಳಿಸಿದರು. ನಟಿ ದೀಪ್ತಿ ಸುನೈನಾ ಅವರೊಂದಿಗೆ ಡೇಟಿಂಗ್ ಕೂಡ ಮಾಡಿದ್ದರು. 2021ರಲ್ಲಿ ಬಿಗ್ ಬಾಸ್ ತೆಲುಗಿನ ಐದನೇ ಸೀಸನ್‌ನಲ್ಲಿ ಭಾಗವಹಿಸಿದ ಬಳಿಕ ದೀಪ್ತಿ ಸುನೈನಾ ಜತೆ ಬ್ರೇಕಪ್‌ ಮಾಡಿಕೊಂಡರು. ತಮ್ಮ ಆಟದ ಮೂಲಕ ಗಮನಸೆಳೆದಿದ್ದ ಷಣ್ಮುಖ್‌, ರನ್ನರ್‌ಅಪ್‌ ಆಗಿ ಹೊರಹೊಮ್ಮಿದ್ದರು.

Continue Reading

ಕಿರುತೆರೆ

Drone Prathap: ಡ್ರೋನ್​ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!

Drone Prathap:  ವಿನಯ್‌ ಅವರು ಆನೆಯ ಮೂಲಕ ಬಂದಿದ್ದರೆ, ಡ್ರೋನ್​ ಪ್ರತಾಪ್​ ಗರುಡದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದರ ಪ್ರೋಮೊ ವೈರಲ್‌ ಆಗಿದೆ. ಮಾತ್ರವಲ್ಲ ಪ್ರತಾಪ್‌ ಕೂಡ ಸಖತ್‌ ಆಗಿಯೇ ವೆದಿಕೆ ಮೇಲೆ ಸ್ಟೆಪ್ಸ್‌ ಹಾಕಿದರು.

VISTARANEWS.COM


on

Drone Prathap kendasampige serial santhe
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10 ಮುಗಿದು ಇಷ್ಟು ದಿನ ಕಳೆದರು ಅದರ ಕ್ರೇಜ್‌ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ಡ್ರೋನ್‌ ಪ್ರತಾಪ್‌ (Drone Prathap) ಅವರು ಒಂದಲ್ಲ ಒಂದು ಸುದ್ದಿಯಲ್ಲಿ ಇರುತ್ತಾರೆ. ಹೊಸಪೇಟೆಯಲ್ಲಿ ʻಕೆಂಡಸಂಪಿಗೆʼ ಸೀರಿಯಲ್ ಸಂತೆ ಆಗಿದೆ. ಅದರಲ್ಲಿ ಬಿಗ್​ಬಾಸ್​ ಸ್ಪರ್ಧಿಗಳು ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ವಿನಯ್‌ ಅವರು ಆನೆಯ ಮೂಲಕ ಬಂದಿದ್ದರೆ, ಡ್ರೋನ್​ ಪ್ರತಾಪ್​ ಗರುಡದಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದರ ಪ್ರೋಮೊ ವೈರಲ್‌ ಆಗಿದೆ. ಮಾತ್ರವಲ್ಲ ಪ್ರತಾಪ್‌ ಕೂಡ ಸಖತ್‌ ಆಗಿಯೇ ವೆದಿಕೆ ಮೇಲೆ ಸ್ಟೆಪ್ಸ್‌ ಹಾಕಿದರು.

ಪ್ರೋಮೊದಲ್ಲಿ ವಿನಯ್‌ ಹಾಗೂ ಡ್ರೋನ್‌ಗೆ ನಿರೂಪಕ ನಿರಂಜನ್‌ ಹಲವಾರು ಪ್ರಶ್ನೆಗಳನ್ನೂ ಕೇಳಿದ್ದರು. ಇದೇ ಸಮಯದಲ್ಲಿ ವಿನಯ್​ ಅವರು ತಮ್ಮ ಕನಸಿನ ಬಗ್ಗೆ ಮಾತನಾಡಿದ್ದಾರೆ. ʻʻಎಲ್ಲಿಗೆ ಹೋದರೂ ತಮಗೆ ಎಲ್ಲರೂ ಗೌರವ ಕೊಡಬೇಕು, ಚಪ್ಪಾಳೆಯಿಂದ ಬರಮಾಡಿಕೊಳ್ಳಬೇಕು ಎನ್ನುವ ಕನಸು ಇತ್ತು. ಅದೆಲ್ಲ ಬಿಗ್​ಬಾಸ್​​ಗೆ ಹೋಗಿ ಬಂದ ಮೇಲೆ ಕನಸಾಗಿದೆʼʼ ಎಂದಿದ್ದಾರೆ. ಇದೇ ವೇಳೆ ನಿರೂಪಕ, ಡ್ರೋನ್​ ಪ್ರತಾಪ್​ ಅವರಿಗೆ ʻನೀವ್ಯಾಕೆ ಬಿಗ್​ಬಾಸ್​ ಕಪ್​ ಗೆಲ್ಲಲಿಲ್ಲ?ʼ ಎಂದು ಪ್ರಶ್ನಿಸಿದ್ದಾರೆ. ಆಗ ಪ್ರತಾಪ್​ ನಗುವಿನ ಮೂಲಕ ಉತ್ತರ ನೀಡಿದ್ದಾರೆ. ಇದಕ್ಕೆ ಏನು ಉತ್ತರ ನೀಡಿದ್ದಾರೆ ಎನ್ನುವುದು ಕೆಂಡಸಂಪಿಗೆ ಸೀರಿಯಲ್ ಸಂತೆ ನೋಡಿದರೆ ಗೊತ್ತಾಗಲಿದೆ.

ಇದನ್ನೂ ಓದಿ: Drone Prathap: ಬಿಗ್‌ಬಾಸ್‌ ವೇದಿಕೆಯಲ್ಲಿ ನುಡಿದಂತೆ ನಡೆದ ಡ್ರೋನ್‌ ಪ್ರತಾಪ್‌; ಅಭಿಮಾನಿಗಳಿಂದ ಮೆಚ್ಚುಗೆ

ಇನ್ನೊಂದು ಪ್ರೋಮೊದಲ್ಲಿ ಕೂಡ ಹೊಸಪೇಟೆ ಯುವತಿಯರು ಕಾರ್ತಿಕ್‌ ಹಾಗೂ ವಿನಯ್‌ ಅವರ ಫ್ರೆಂಡ್‌ಶಿಪ್‌ ಇಷ್ಟ ಎಂದು ಹೇಳಿದ್ದಾರೆ. ಅದೇ ರೀತಿ ಹೊಸಪೇಟೆಯ ಯುವತಿಯರು ಡ್ರೋನ್​ ಪ್ರತಾಪ್​ ಅವರಿಗೆ, ʻನೀವು ಎಂದರೆ ತುಂಬಾ ಇಷ್ಟ. ನಿಮ್ಮನ್ನು ಮದುವೆಯಾಗಲು ಬಂದಿದ್ದೇವೆʼ ಎಂದಿದ್ದಾರೆ. ಇದನ್ನು ಕೇಳಿ ಡ್ರೋನ್​ ಪ್ರತಾಪ್​ ನಾಚಿ ನೀರಾಗಿದ್ದಾರೆ. ʻಕೆಂಡಸಂಪಿಗೆ ಸೀರಿಯಲ್ ಸಂತೆʼ ಇದೇ ಭಾನುವಾರ ಸಂಜೆ 4.30ಕ್ಕೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಸದ್ಯ ಅವರು ಅಭಿಮಾನಿಗಳ ಭೇಟಿ, ರಿಯಾಲಿಟಿ ಶೋ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಬಿಡುವಿಲ್ಲದ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್‌ ದಾನ ಮಾಡಿದ ಪ್ರತಾಪ್‌

ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Continue Reading

ಕಿರುತೆರೆ

Drone Prathap: ಬಿಗ್‌ಬಾಸ್‌ ವೇದಿಕೆಯಲ್ಲಿ ನುಡಿದಂತೆ ನಡೆದ ಡ್ರೋನ್‌ ಪ್ರತಾಪ್‌; ಅಭಿಮಾನಿಗಳಿಂದ ಮೆಚ್ಚುಗೆ

Drone Prathap: ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ ತಮಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ದಾನ ಮಾಡಿದ್ದಾರೆ. ಆ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

VISTARANEWS.COM


on

prathap
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದಾರೆ. ಸದ್ಯ ಅವರು ಅಭಿಮಾನಿಗಳ ಭೇಟಿ, ರಿಯಾಲಿಟಿ ಶೋ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಬಿಡುವಿಲ್ಲದ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇಷ್ಟೆಲ್ಲ ಬ್ಯುಸಿಯ ಮಧ್ಯೆಯೂ ತಾವು ಕೊಟ್ಟ ಮಾತನ್ನು ಉಳಿಸಿಕೊಟ್ಟು ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ದಾನ ಮಾಡಿದ ಪ್ರತಾಪ್‌

ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಇದೀಗ ಈ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ʼʼಬಿಗ್‌ಬಾಸ್‌ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ… ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆವರೆಗೂ ಹೋಟಲ್‌ನಲ್ಲಿ ಕೆಲಸ ಮಾಡಿ‌ ಹಾಗೂ ಸಂಜೆಯ ಮೇಲೆ ಫುಡ್‌ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ ಸ್ನೇಹಿತರ ಹೆಸರಲ್ಲಿ ಗಾಡಿಯನ್ನು ತೆಗೆದುಕೊಂಡು ಅದಕ್ಕೆ ತಿಂಗಳು ತಿಂಗಳು ಕಂತು ಕಟ್ಟುತ್ತಿದ್ದರು. ಆದರೆ ಸ್ನೇಹಿತ ಮಾಡಿದ ಮೋಸದಿಂದ ಅವರ ಬೈಕನ್ನು ಬ್ಯಾಂಕ್ ನವರು ಸೀಜ್‌ ಮಾಡಿದ್ದರು. ಹಾಗಾಗಿ ನನಗೆ ಬಹುಮಾನವಾಗಿ ಬಂದ ಎಲೆಕ್ಟ್ರಿಕ್ ಗಾಡಿಯನ್ನು ಇವರಿಗೆ ನೀಡುತ್ತಿದ್ದೇನೆ. ಇದು ನನಗೆ ತುಂಬಾ ಖುಷಿ ತಂದಿದೆʼʼ ಎಂದು ಪ್ರತಾಪ್‌ ಬರೆದುಕೊಂಡಿದ್ದಾರೆ. ಜತೆಗೆ ಫೋಟೊವನ್ನೂ ಅಪ್‌ಲೋಡ್‌ ಮಾಡಿದ್ದಾರೆ. ತನಗೆ ಬಹುಮಾನವಾಗಿ ಬಂದ 10 ಲಕ್ಷ ರೂ. ಹಣವನ್ನು ಸಹ ತಾವು ಬಡವರಿಗೆ ದಾನ ನೀಡುವುದಾಗಿ ಡ್ರೋನ್ ಪ್ರತಾಪ್ ಘೋಷಣೆ ಮಾಡಿದ್ದರು. ಆದರೆ ಆ ಹಣವನ್ನು ಯಾರಿಗೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿಲ್ಲ.

ಮೆಚ್ಚುಗೆ ಸೂಚಿಸಿದ ಅಭಿಮಾನಿಗಳು

ಡ್ರೋನ್‌ ಪ್ರತಾಪ್‌ ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ʼʼತುಂಬಾ ಒಳ್ಳೆಯ ಕಾರ್ಯ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೀರಿ, ನಿಮಗೆ ವೋಟ್‌ ಹಾಕಿದ್ದಕ್ಕೆ ಸಾರ್ಥಕವಾಯ್ತು, ಉತ್ತಮ ಕೆಲಸʼʼ ಎಂದೆಲ್ಲ ಕಮೆಂಟ್‌ ಮಾಡಿ ಬೆನ್ನು ತಟ್ಟಿದ್ದಾರೆ. ಬಿಗ್‌ಬಾಸ್‌ ಮನೆ ಒಳಗೆ ಉತ್ತಮ ಆಟ ಆಡುವ ಮೂಲಕ ಅಭಿಮಾನಿಗಳ ಮನಗೆದ್ದ ಅವರು ಇದೀಗ ಮನೆ ಹೊರಗೂ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Gicchi Gili Gili season 3: ಡ್ರೋನ್‌ ಪ್ರತಾಪ್‌ ಮೇಕಪ್ ನೋಡಿ ಬೆಚ್ಚಿಬಿದ್ದ ತುಕಾಲಿ; ಗಂಡನನ್ನು ಚಚ್ಚಿ ಕೆಡವಿದ ಮಾನಸಾ! 

ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie kerebete trailer Out
ಸ್ಯಾಂಡಲ್ ವುಡ್2 mins ago

Kannada New Movie: ಗೌರಿ ಶಂಕರ್ ‘ಕೆರೆಬೇಟೆ’ ಟ್ರೈಲರ್ ರಿಲೀಸ್!

TPL 3
ಪ್ರಮುಖ ಸುದ್ದಿ10 mins ago

TPL 3 : ಫೆ.28ರಿಂದ ಶುರು ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ

Joe Root
ಕ್ರೀಡೆ24 mins ago

Joe Root : ಅಲೆಸ್ಟರ್​ ಕುಕ್​ ದಾಖಲೆ ಮುರಿದು ಇಂಗ್ಲೆಂಡ್​​ ಪರ ಹೊಸ ದಾಖಲೆ ಬರೆದ ಜೊ ರೂಟ್​​

Shafi Apologizes To Challenging Star Darshan
ಸಿನಿಮಾ30 mins ago

Actor Darshan: ದರ್ಶನ್ ವಿರುದ್ಧ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

Google Gemini ai bias against modi and Minister assured action
ದೇಶ33 mins ago

Google Gemini: ಮೋದಿ ವಿರುದ್ದ ಗೂಗಲ್ ಎಐ ಟೂಲ್ ಜೆಮಿನಿ ಪಕ್ಷಪಾತಿ; ಕ್ರಮ ಎಂದ ಸಚಿವ ರಾಜೀವ್ ಚಂದ್ರಶೇಖರ್

Woman from Ullal dies in car accident in Dubai
ದಕ್ಷಿಣ ಕನ್ನಡ36 mins ago

Road Accident : ಡಿವೈಡರ್‌ಗೆ ಕಾರು ಡಿಕ್ಕಿ; ದುಬೈನಲ್ಲಿ ನಡೆದ ಅಪಘಾತದಲ್ಲಿ ಉಳ್ಳಾಲದ ಯುವತಿ ಮೃತ್ಯು

police constable
ಉದ್ಯೋಗ43 mins ago

Job Alert: ಫೆ. 25ರಂದು ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆ; ಪ್ರವೇಶ ಪತ್ರ ಹೀಗೆ ಡೌನ್‌ಲೋಡ್‌ ಮಾಡಿ

pralhad joshi
ಕರ್ನಾಟಕ46 mins ago

Ram Mandir: ಅಯೋಧ್ಯೆ ಯಾತ್ರಿಕರಿಗೆ ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಿ: ಪ್ರಲ್ಹಾದ್‌ ಜೋಶಿ ಆಗ್ರಹ

Narendra Modi
ದೇಶ48 mins ago

Narendra Modi: ಗುಜರಾತ್‌ನವನಾದರೂ ನಾನೀಗ ಬನಾರಸಿ ಎಂದ ಪ್ರಧಾನಿ ಮೋದಿ

BY Vijayendra calls on BJP workers to make 100 votes 200 Attack on CM Siddaramaiah
ರಾಜಕೀಯ51 mins ago

BY Vijayendra: 100 ಮತವನ್ನು 200 ಮಾಡಿ; ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ಟಾಸ್ಕ್‌; ಸಿಎಂ ವಿರುದ್ಧ ವಾಗ್ದಾಳಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Fire breaks out in auto shed Burnt autos
ಬೆಂಗಳೂರು3 hours ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

read your daily horoscope predictions for february 23 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು1 day ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ1 day ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ6 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ6 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

ಟ್ರೆಂಡಿಂಗ್‌