ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ (Manso Re) ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರುತ್ತಿದ್ದಾರೆ. ‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಚಿತ್ರತಂಡ ವಿಶೇಷವಾದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು ಮತ್ತು ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಪೋಸ್ಟರ್ ಅನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.
ಜೈ ಭೀಮ್, ಜನಗಣಮನ ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದೆ. ಬಾಲಾಜಿ ಮನೋಹರ್, ಎಂ ಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದವರ ತಾರಾ ಬಳಗ ಈ ಚಿತ್ರದಲ್ಲಿದೆ.
ಇದನ್ನೂ ಓದಿ | ವಿಸ್ತಾರ 5G Info | ನಿಮ್ಮ ನೆಚ್ಚಿನ ಸಿನಿಮಾ ಡೌನ್‌ಲೋಡ್‌ಗೆ 4ಜಿಗೆ 40 ನಿಮಿಷವಾದರೆ, 5ಜಿಗೆ 35 ಸೆಕೆಂಡ್ ಸಾಕು!
‘ಆ್ಯಕ್ಟ್-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದಾರೆ. ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿ ಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರ್ಮುಗಂ ಸಂಕಲನವಿದೆ.
ಚಿತ್ರಕಥೆಯಲ್ಲಿ ಮಂಸೋರೆಗೆ ವೀರೇಂದ್ರ ಮಲ್ಲಣ್ಣ ಸಾಥ್ ನೀಡಿದ್ದಾರೆ. ಸಂಭಾಷಣೆಗಳ ಬರವಣಿಗೆಯನ್ನು ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ನಿರ್ವಹಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿದೆ.
ಇದನ್ನೂ ಓದಿ | ʼ19.20.21ʼ | ಮಂಸೋರೆ ಹೊಸ ಚಿತ್ರ ಶೂಟಿಂಗ್ ಕಂಪ್ಲೀಟ್