ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಅವರ ತಾಯಿ ಸುಜಾತಾ ಕಾಮತ್ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಏಪ್ರಿಲ್ 15ರಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಸುಜಾತಾ ಕಾಮತ್ ಚಿಕಿತ್ಸೆ ಪಡೆಯುತ್ತಿದ್ದರು.
ಮಾನ್ವಿತಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ʻಶೀ ಲೆಫ್ಟ್ʼ ಎಂದು ದುಃಖದಿಂದ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಸುಜಾತಾ ಕಾಮತ್ ಅವರಿಗೆ ಅನಾರೋಗ್ಯ ಉಂಟಾದಾಗ ಸೋನು ಸೂದ್ ಕಡೆಯಿಂದ ಸಹಾಯ ಸಿಕ್ಕಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾನ್ವಿತಾ ಕಾಮತ್, ‘ಈಗ ತಾನೇ ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೊ ಸರ್. ಎಲ್ಲದಕ್ಕೂ ಧನ್ಯವಾದʼʼ ಎಂದು ಮಾನ್ವಿತಾ ಬರೆದುಕೊಂಡಿದ್ದರು.
ಇದನ್ನೂ ಓದಿ: Star travel Fashion | ಮಿಕ್ಸ್ ಮ್ಯಾಚ್ ವಿಂಟರ್ ಲುಕ್
2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಚಿತ್ರದಲ್ಲಿಯೇ ಸೈಮಾ ಪ್ರಶಸ್ತಿ ಪಡೆಯುತ್ತಾರೆ. ನಂತರ ಚೌಕ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡು, ಕನಕ’, ಟಗರು’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಾರೆ.