Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ! - Vistara News

ಸಿನಿಮಾ

Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ!

Masha And The Bear: ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.

VISTARANEWS.COM


on

Masha And The Bear in banglore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶಿಷ್ಟವಾದ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಕೊಡುವಲ್ಲಿ ಮುಂಚೂಣಿಯಲ್ಲಿರುವ ವಯಕಾಮ್‌ 18 ಲೈವ್‌, ಇದೀಗ ತನ್ನ ದಾರಿಯಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯನ್ನು ಇಡುತ್ತಿದೆ. ಪುಟ್ಟ ಮಕ್ಕಳಿಗೆಲ್ಲ ಚಿರಪರಿಚಿತವಾಗಿರುವ ಮಾಶಾ ಆ್ಯಂಡ್‌ ದಿ ಬೇರ್​ (Masha And The Bear) ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು, ಅವರ ಮುಂದೆ ಲೈವ್ ಪ್ರದರ್ಶನ ನೀಡಲು ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ವೇದಿಕೆ ಸಜ್ಜುಗೊಂಡಿದೆ.

ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.
ವಯಕಾಮ್18 ಲೈವ್ ನಿರ್ಮಾಣ ಮಾಡಿರುವ, ಎಸ್‌ಎಸ್‌ಬಿಸಿ ಇಂಡಿಯಾ ಪ್ರಸ್ತುತಪಡಿಸುತ್ತಿರುವ ಈ ಲೈವ್‌ ಷೋ ಟೂರ್‌, ಡಿಸೆಂಬರ್ 23ರಂದು ಮುಂಬೈನಿಂದ ಪ್ರಾರಂಭಗೊಳ್ಳಲಿದೆ. ನಂತರ ಭಾರತದ ಪ್ರಮುಖ ಮಹಾನಗರಗಳಾದ ದೆಹಲಿ, ಹೈದರಾಬಾದ್‌ ಮತ್ತು ಬೆಂಗಳೂರುಗಳಲ್ಲಿಯೂ ಪ್ರದರ್ಶನ ನೀಡಿ ಮತ್ತೆ ಮುಂಬೈನಲ್ಲಿಯೇ ಈ ಲೈವ್‌ಷೋ ಟೂರ್ ಕೊನೆಗೊಳ್ಳಲಿದೆ.

ಪತ್ತೇದಾರಿ ಕಥೆಯಲ್ಲಿ ನಿಮ್ಮ ಪಾಲೂ ಇರಲಿದೆ!

‘ಅ ವೆರಿ ಡಿಟೆಕ್ಟೀವ್ ಸ್ಟೋರಿ’ ಎನ್ನುವುದು ಈ ಷೋಗೆ ನೀಡಿರುವ ಅಡಿಟಿಪ್ಪಣಿ. ಹೌದು, ಈ ಲೈವ್‌ ಷೋದಲ್ಲಿ ಮಾಶಾ ಮತ್ತು ಬೇರ್ ಸೇರಿಕೊಂಡು ಮನೆಯಲ್ಲಿ ಕಳೆದುಹೋಗಿರುವ ವಸ್ತುವೊಂದನ್ನು ಹುಡುಕುವ ಪತ್ತೇದಾರಿ ಕೆಲಸ ಮಾಡಲಿದ್ದಾರೆ. ಪತ್ತೇಧಾರಿ ಕಥೆ ಅಂದಮೇಲೆ ಕೇಳಬೇಕೆ? ಸಾಕಷ್ಟು ರೋಚಕತೆ, ಕುತೂಹಲ, ಪನ್‌ ಎಲ್ಲವೂ ಇರಲಿದೆ. ಅಷ್ಟೇ ಅಲ್ಲ, ತಮ್ಮ ಪತ್ತೇಧಾರಿಕೆಯಲ್ಲಿ ಮಾಶಾ ಮತ್ತು ಬೇರ್ ಪ್ರೇಕ್ಷಕರ ಎದುರು ಕೂತಿರುವವರ ಸಹಾಯವನ್ನೂ ಪಡೆಲಿದ್ದಾರೆ! ಅಂದರೆ ಪ್ರೇಕ್ಷಕನೂ ಈ ಷೋದ ಪಾತ್ರಧಾರಿ ಆಗಿರುತ್ತಾನೆ? ಪ್ರೇಕ್ಷಕರ ಜೊತೆ ಮಾತಾಡುತ್ತ, ಅವರನ್ನು ನಗಿಸುತ್ತ, ಅವರಲ್ಲಿ ಕುತೂಹಲ ಕೆರಳಿಸುತ್ತ ಸಾಗುವ ಹಾಗೆಯೇ ಇಡೀ ಷೋವನ್ನು ವಿನ್ಯಾಸಗೊಳಿಸಲಾಗಿದೆ. ವಿಶಾಲ್ ಅಸ್ರಾಣಿ ಈ ಷೋವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Darshan Thoogudeepa: ಭಾರಿ ಮೊತ್ತಕ್ಕೆ ಕಾಟೇರ ಡಿಜಿಟಲ್‌, ಸ್ಯಾಟಲೈಟ್ ಮಾರಾಟ!

ಯಾರು ಯಾರೆಲ್ಲ ಇರ್ತಾರೆ?

ʻಮಾಶಾ ಆ್ಯಂಡ್‌ ದಿ ಬೇರ್ʼ ಬಗ್ಗೆ ಪುಟಾಣಿಗಳಿಗೆ ಹೇಳುವುದೇ ಬೇಕಿಲ್ಲ. ಎಲ್ಲ ಮಕ್ಕಳಿಗೂ ಗೊತ್ತಿರುವ, ಎಲ್ಲ ಮಕ್ಕಳೊಟ್ಟಿಗೆ ಹಿರಿಯರಿಗೂ ಪರಿಚಿತವಾಗಿರುವ ಕಾರ್ಟೂನ್‌ ಕ್ಯಾರೆಕ್ಟರ್‌ಗಳು ಅವು. ಆದರೆ ಷೋದಲ್ಲಿ ಬರೀ ಆ ಎರಡು ಪಾತ್ರಗಳು ಮಾತ್ರವಲ್ಲ. ಸೀರೀಸ್‌ನಲ್ಲಿ ಕಾಣುವ, ಪ್ರೊಫೆಸರ್ ನಾನ್‌ಬೆಲೆವಿಯಸ್‌, ರೋಸಿ, ಪಾಂಡಾ, ಸ್ಲೈ ಫಾಕ್ಸ್‌ ಮತ್ತು ಸಿಲ್ಲಿ ಫಾಕ್ಸ್ ಸೇರಿದಂತೆ ಇನ್ನೂ ಹಲವು ಪಾತ್ರಗಳು ಈ ಷೋದ ಭಾಗವಾಗಿರುತ್ತವೆ.

ಯಾವಾಗ ಎಲ್ಲಿ?

ಮಾಶಾ ಆ್ಯಂಡ್‌ ದಿ ಬೇರ್ ಲೈವ್ ಷೋ ಟೂರ್ ಡಿಸೆಂಬರ್ 23ರಂದು ಮುಂಬೈನಲ್ಲಿ ಆರಂಭಗೊಳ್ಳುತ್ತದೆ. 24ರಂದೂ ಮುಂಬೈನಲ್ಲಿಯೇ ಪ್ರದರ್ಶನ ಇರುತ್ತದೆ. 2024 ಜನವರಿ 20 ಮತ್ತು 21ರಂದು ದೆಹಲಿಯಲ್ಲಿ ಎರಡು ದಿನಗಳ ಷೋ ಆಯೋಜಿಸಲಾಗಿದೆ. ಫೆಬ್ರುವರಿ 3 ಮತ್ತು 4ರಂದು ಹೈದರಾಬಾದ್‌ನಲ್ಲಿ ಪ್ರದರ್ಶನ ನಡೆಯಲಿದೆ.
ಫೆಬ್ರುವರಿ 10-11ರಂದು ‘ಮಾಶಾ ಆಂಡ್‌ ದಿ ಬೇರ್’ ತಂಡ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನ ಮಾಶಾ, ಬೇರ್ ಅಭಿಮಾನಿಗಳಿಗಾಗಿ ಎರಡು ದಿನ ಹಲವು ಪ್ರದರ್ಶನಗಳು ನಡೆಯಲಿವೆ.

ಪಾಲ್ಗೊಳ್ಳುವುದು ಹೇಗೆ?

‘ಮಾಶಾ ಆ್ಯಂಡ್‌ ದಿ ಬೇರ್’ ಷೋದಲ್ಲಿ ನೀವೂ ಪಾಲ್ಗೊಳ್ಳಬಹುದು. ನಿಮ್ಮ ಟಿಕೆಟ್‌ಗಳನ್ನು www.kidsdayout.co ದಲ್ಲಿ ಈಗಲೇ ಬುಕ್ ಮಾಡಬಹುದು. ಎಚ್‌ಎಸ್‌ಬಿಸಿ ಕಾರ್ಡ್‌ ಇರುವವರಿಗೆ ಷೋ ಪ್ರಾರಂಭವಾಗುವ 72 ಗಂಟೆಗಳಿಗೂ ಮುನ್ನ ತಮ್ಮ ಇಷ್ಟದ ಸೀಟ್‌ ಬುಕ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಷೋದ ಪಾತ್ರಗಳನ್ನು ಭೇಟಿಯಾಗಿ ಶುಭಾಶಯ ಕೋರುವ ಅವಕಾಶವನ್ನೂ ನೀಡಲಾಗುತ್ತಿದೆ. ಟಿಕೆಟ್ ದರದಲ್ಲಿಯೂ ವಿಶೇಷ ರಿಯಾಯತಿ ಇರುತ್ತದೆ. ಟಿಕೆಟ್ ಬುಕ್ ಮಾಡಿಕೊಂಡವರಿಗೆ ಪ್ರದರ್ಶನದ ಸ್ಥಳ, ಸಮಯದ ಮಾಹಿತಿಯನ್ನು ನೀಡಲಾಗುವುದು.

ಮಾಶಾ ಆ್ಯಂಡ್‌ ದಿ ಬೇರ್ ಭಾರತದಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯವಾಗಿರುವ ಕಾರ್ಟೂನ್ ಸೀರೀಸ್‌. ಚಿಣ್ಣರ ಜತೆಯಲ್ಲಿ ಪೋಷಕರೂ ಕೂತು ನೋಡುವ ಈ ರಿಯಾಲಿಟಿ ಷೋದ ಪಾತ್ರಗಳೂ ಎಲ್ಲರಿಗೂ ಪರಿಚಿತವೇ ಆಗಿವೆ. ಈಗ ವಯಕಾಮ್‌ 18ಲೈವ್‌ ಅವುಗಳನ್ನು ನೇರವಾಗಿ ನೋಡುವ ಅವಕಾಶವನ್ನೂ ಮಾಡಿಕೊಡುತ್ತಿದೆ. ಕಳೆದ ವರ್ಷ, ‘ಪೆಪ್ಪಾ ಪಿಗ್‌ ಲೈವ್‌ ಷೋ’ ಕೂಡ ಇದೇ ರೀತಿ ಭಾರತದ ಬೇರೆ ಬೇರೆ ನಗರಗಳಲ್ಲಿ ಲೈವ್‌ ಪ್ರದರ್ಶನಗಳನ್ನು ನೀಡಿ ಯಶಸ್ವಿಯಾಗಿತ್ತು. ಅದೇ ದಾರಿಯಲ್ಲಿ ಈಗ ಮಾಶಾ ಆ್ಯಂಡ್‌ ದಿ ಬೇರ್ ಕೂಡ ನಡೆಯುತ್ತಿದ್ದು, ಜನರಿಗೆ ಮನರಂಜನೆಯ ರಸದೂಟವನ್ನು ಬಡಿಸಲು ಸರ್ವಸನ್ನದ್ಧವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್‌ ರಾಯಭಾರಿ

Film Festival: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜ.3ರಂದು ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆ. 29ರಿಂದ ಮಾ.7ರವರೆಗೆ ಬೆಂಗಳೂರು ಚಲನಚಿತ್ರೋತ್ಸವ ಆಯೋಜಿಸಲು ನಿರ್ಧರಿಸಲಾಗಿದೆ.

VISTARANEWS.COM


on

Daali Dhananjaya to be Brand ambassador for Bangalore International Film Festival
Koo

ಬೆಂಗಳೂರು: 2023-24ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (Film Festival) ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟ ಡಾಲಿ ಧನಂಜಯ್‌ (Daali Dhananjaya) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಫೆಬ್ರವರಿ 29ರಿಂದ ಮಾರ್ಚ್ 7ರವರೆಗೆ ನಡೆಯುವ ನಡೆಯಲಿದೆ.

ಈ ಬಗ್ಗೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಆದೇಶ ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಆಯೋಜಿಸುತ್ತಿದ್ದು, ಅದರಂತೆ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Kannada New Movie: ನಶಾ ಜಗತ್ತಿನ ಝಲಕ್‌ಗಳೊಂದಿಗೆ ಝಗಮಗಿಸಿತು `ಕೈಲಾಸ’ ಟ್ರೈಲರ್!

ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭ ಫೆ. 29ರಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗ ಹಾಗೂ ಸಮಾರೋಪ ಸಮಾರಂಭವನ್ನು ಮಾರ್ಚ್‌ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ (Brand Ambassador) ನೇಮಿಸಲಾಗಿದೆ ತಿಳಿಸಿದ್ದಾರೆ.

ಡಾಲಿ ಧನಂಜಯ್‌ ನಿರ್ಮಾಣದ ಸಿನಿಮಾಗೆ ʻಹಿಟ್ಲರ್ ಕಲ್ಯಾಣʼದ ಬೆಡಗಿ ನಾಯಕಿ!

Vidyapati Movie heroine malaika tvasupal

ಬೆಂಗಳೂರು: ʻವಿದ್ಯಾಪತಿʼಯಾಗಿರುವ ನಾಗಭೂಷಣ್‌ಗೆ ಜೋಡಿ ಸಿಕ್ಕಾಗಿದೆ. ʻಉಪಾಧ್ಯಕ್ಷʼ ಸುಂದರಿ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ʻಟಗರು ಪಲ್ಯʼ ಸಕ್ಸೆಸ್‌ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ʻವಿದ್ಯಾಪತಿʼ ಎಂಬ ಟೈಟಲ್ ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

ಹೀರೊ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ʻಉಪಾಧ್ಯಕ್ಷʼ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ʻಹಿಟ್ಲರ್ ಕಲ್ಯಾಣʼ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ʻಉಪಾಧ್ಯಕ್ಷʼ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾವೇ ಅವರಿಗೆ ದೊಡ್ಡ ಸಕ್ಸೆಸ್‌ ತಂದುಕೊಟ್ಟಿದೆ. ಉಪಾಧ್ಯಕ್ಷ ಸಿನಿಮಾದಲ್ಲಿ ಇವರ ನಟನೆ ನೋಡಿ ಮೆಚ್ಚಿಕೊಂಡಿರುವ ವಿದ್ಯಾಪತಿ ಟೀಂ ತಮ್ಮ ತಂಡಕ್ಕೆ ಅವರನ್ನು ಸ್ವಾಗತಿಸಿದೆ.

ವಿದ್ಯಾಪತಿ ಸಿನಿಮಾದಲ್ಲಿ ಮಲೈಕಾ ʻವಿದ್ಯಾʼ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಸಿಂಪಲ್ ಆಗಿರುವ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ʻಇಕ್ಕಟ್ʼ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: Vidyapati Movie: ನಾಗಭೂಷಣ್ ಈಗ ‘ವಿದ್ಯಾಪತಿ’; ಡಾಲಿ ಪಿಕ್ಚರ್ಸ್‌ನ 4ನೇ ಸಿನಿಮಾ ಅನೌನ್ಸ್

ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ವಿದ್ಯಾಪತಿ ಚಿತ್ರದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ವಿದ್ಯಾಪತಿ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

Continue Reading

ಕರ್ನಾಟಕ

Actor Darshan: ಆಕ್ಷೇಪಾರ್ಹ ಹೇಳಿಕೆ; ನಟ ದರ್ಶನ್‌ಗೆ ಮತ್ತೊಂದು ಕೇಸ್‌ ಸಂಕಷ್ಟ

Actor Darshan: ಮಹಿಳೆಯರ ಅವಹೇಳನ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟ ದರ್ಶನ್‌ ವಿರುದ್ಧ ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್‌ಗೆ ಮಹಿಳೆಯೊಬ್ಬರು ಖಾಸಗಿ ದೂರು ಸಲ್ಲಿಸಿದ್ದಾರೆ.

VISTARANEWS.COM


on

complaint filed against Actor Darshan in court for objectionable remarks
Koo

ಬೆಂಗಳೂರು: ನಟ ದರ್ಶನ್‌ ಅವರಿಗೆ (Actor Darshan) ಮತ್ತೊಂದು ಕೇಸ್ ಸಂಕಷ್ಟ ಎದುರಾಗಿದೆ. ಮಹಿಳೆಯರ ಅವಹೇಳನ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟ ದರ್ಶನ್‌ ವಿರುದ್ಧ, ಮಹಿಳೆಯೊಬ್ಬರು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದಾರೆ.

ನಟ ದರ್ಶನ್‌ ವಿರುದ್ಧ ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ದಾಖಲಿಸುವಂತೆ ರೇಣುಕಮ್ಮ ಎಂಬುವವರು ನಗರದ 37ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಸಿದ್ದಾರೆ. ಐಪಿಸಿ 295(A), ಉದ್ದೇಶ ಪೂರ್ವಕವಾಗಿ ಹೇಳಿಕೆ, ಐಪಿಸಿ 509- ಮಹಿಳೆಯರಿಗೆ ಅವಮಾನ, ಐಪಿಸಿ-298- ಧಾರ್ಮಿಕ ಭಾವನೆಗಳಿಗೆ ಧಕ್ಕೆ , ಐಪಿಸಿ- 504- ಶಾಂತಿ ಭಂಗಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟನ ವಿರುದ್ಧ ದೂರು ದಾಖಲಾಗಿದೆ.

ದೂರುದಾರರಾದ ರೇಣುಕಮ್ಮ ಪರ ವಕೀಲ ರಂಗನಾಥ್ ವಾದ ಮಂಡನೆ ಮಾಡಿದ್ದು, ಪ್ರಕರಣದ ಅರ್ಜಿ ವಿಚಾರಣೆ ನಡೆಸಿರುವ 37ನೇ ಎಸಿಎಂಎಂ ಕೋರ್ಟ್, ವಿಚಾರಣೆಯನ್ನು ಮಾರ್ಚ್ 1ಕ್ಕೆ ಮುಂದೂಡಿದೆ.

ಇದನ್ನೂ ಓದಿ | Actor Darshan: `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’ ಎಂದ ದರ್ಶನ್‌ಗೆ ಧಿಕ್ಕಾರ ಎಂದಿದೆ ಗೌಡತಿಯರ ಸೇನೆ!

ಈ ಬಗ್ಗೆ ವಕೀಲ ರಂಗನಾಥ್ ಪ್ರತಿಕ್ರಿಯಿಸಿ, ನಟ ದರ್ಶನ್‌ ವಿರುದ್ಧ ರೇಣುಕಮ್ಮ ಎಂಬುವವರು ಬಸವನಗುಡಿ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದರು. ಮಹಿಳೆಯರ ಅವಹೇಳನ, ಹಿಂದು ದೇವತೆಗೆಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ನಟನ ವಿರುದ್ಧ ಮಹಿಳೆ ದೂರು ಸಲ್ಲಿಸಿದ್ದರು. ಆದರೆ, ಪೊಲೀಸ್‌ ಠಾಣೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ರೇಣುಕಮ್ಮ ಅವರು 37ನೇ ಎಸಿಎಂಎಂ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಬುಧವಾರ ಕೋರ್ಟ್‌ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮಾರ್ಚ್ 1ಕ್ಕೆ ಮುಂದೂಡಿದೆ ಎಂದು ಹೇಳಿದ್ದಾರೆ.

ನಟ ದರ್ಶನ್‌ ವಿರುದ್ಧ ಇರುವ ಆರೋಪಗಳೇನು?

ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ನಡೆದ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮದಲ್ಲಿ ವೈಯಕ್ತಿಕ ಹಾಗೂ ವೃತ್ತಿಪರ ವಿಚಾರಗಳನ್ನು ಹಂಚಿಕೊಂಡಿದ್ದ ನಟ ದರ್ಶನ್‌ ಅವರು, ಫ್ಯಾಮಿಲಿ ಸಮಸ್ಯೆಗಳು, ಎಲ್ಲ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. `ಇವತ್ತು ಇವಳಿರ್ತಾಳೆ , ನಾಳೆ ಅವಳಿರ್ತಾಳೆ’. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಕೆಲಸ ಅಷ್ಟೆ ಮುಖ್ಯ ಎಂದಿದ್ದರು ಎಂದು ಹೇಳಿದ್ದರು. ದರ್ಶನ್ ಮಾತಿನ ಭರದಲ್ಲಿ ಹೇಳಿದ ಹೇಳಿಕೆಗೆ ಭಾರಿ ಆಕ್ಷೇಪ ವ್ಯಕ್ತವಾಗಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್​ ಅಭಿಮಾನಿಗಳ ಬೈಕ್ ರ್‍ಯಾಲಿ ರದ್ದು!

ಈ ಹಿಂದೆಯೂ ಹೆಂಡತಿಗೆ ಕಿರುಕುಳ ಆರೋಪದಲ್ಲಿ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮತ್ತೊಂದು ಸಂದರ್ಭದಲ್ಲಿ ಅದೃಷ್ಟ ದೇವತೆ ನಿಮ್ಮ ಮನೆಗೆ ಬಂದರೆ ಬಟ್ಟೆಬಿಚ್ಚಿ ರೂಮಿನಲ್ಲಿ, ಕೂಡಿಹಾಕಿ ಎಂಬ ಹೇಳಿಕೆ ನೀಡಿದ್ದರು. ಅದೇ ರೀತಿ ಇತ್ತೀಚೆಗೆ ನಿರ್ಮಾಪಕ ಉಮಾಪತಿ ಗೌಡ ಬಗ್ಗೆ ʼತಗಡುʼ ಎಂಬ ಪದ ಬಳಸಿದ್ದರಿಂದ ನಟನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದರ್ಶನ್‌ ಅವರ ವಿವಾದಾತ್ಮಕ ಹೇಳಿಕೆಗಳ ಸಂಬಂಧ ವಿವಿಧೆಡೆ ದೂರುಗಳು ದಾಖಲಾಗಿವೆ. ಇದೀಗ ಮಹಿಳೆಯೊಬ್ಬರು ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ.

Continue Reading

ಕರ್ನಾಟಕ

K. Shivram: ಮಾವ ಕೆ. ಶಿವರಾಮ್‌ರನ್ನು ನೋಡಲು ಆಸ್ಪತ್ರೆಗೆ ನಟ ಪ್ರದೀಪ್ ಭೇಟಿ

K. Shivram: ಹೃದಯಾಘಾತದ ಹಿನ್ನೆಲೆಯಲ್ಲಿ ಐಎಎಸ್‌ ಅಧಿಕಾರಿ, ನಟ ಕೆ. ಶಿವರಾಮ್ ಅವರನ್ನು ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

K Shivaram
Koo

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ, ನಟ ಕೆ. ಶಿವರಾಮ್ (K. Shivram) ಅವರು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ಹಿನ್ನೆಲೆಯಲ್ಲಿ ಅವರ ಅಳಿಯ ಹಾಗೂ ನಟ ಪ್ರದೀಪ್ ನಗರದ ಎಚ್‌ಸಿಜಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಸದ್ಯ ಕೆ. ಶಿವರಾಮ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಪ್ರದೀಪ್ ಅವರು, ಶಿವರಾಮ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಫೆಬ್ರವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಿಪಿ ಏರುಪೇರು ಆಗಿದೆ, ಈಗಲೂ ಸಮಸ್ಯೆ ಮುಂದುವರಿದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳು ಪ್ರಾರ್ಥಿಸಬೇಕು. ಅವರನ್ನು ರೆಗ್ಯುಲರ್ ಆಗಿ ನೋಡುತ್ತಿದ್ದ ಡಾಕ್ಟರ್ ಇಲ್ಲೇ ಇರುವ ಕಾರಣ, ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Varthur Santhosh: `ಹಳ್ಳಿಕಾರ್ ಒಡೆಯ’ ವಿವಾದದ ಬಗ್ಗೆ ವರ್ತೂರ್‌ ಸಂತೋಷ್‌ ರಿಯಾಕ್ಷನ್‌ ಏನು?

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲು

ಹೃದಯಾಘಾತದ ಹಿನ್ನೆಲೆಯಲ್ಲಿ ನಟ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ. ಶಿವರಾಮ್ (71) ಅವರನ್ನು ನಗರದ ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟ ಕೆ. ಶಿವರಾಮ್ ಅವರು ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ  10 ಸಿನಿಮಾಗಳಲ್ಲಿ ನಟಿಸಿದ್ದಾರೆ.

ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ. ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿ ಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ | Jaya Prada: ನಟಿ , ರಾಜಕಾರಣಿ ಜಯಪ್ರದಾ ಬಂಧನಕ್ಕೆ ಕೋರ್ಟ್‌ ಮತ್ತೊಮ್ಮೆ ಆದೇಶ

2013 ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದಾರೆ.

Continue Reading

ಬಾಲಿವುಡ್

The Sabarmati Report: ಗೋದ್ರಾ ಹತ್ಯಾಕಾಂಡ ಆಧರಿಸಿದ ʻದಿ ಸಬರಮತಿ ರಿಪೋರ್ಟ್‌ʼ ಟೀಸರ್‌ ಔಟ್‌!

ʻಗೋಧ್ರಾ ಹತ್ಯಾಕಾಂಡʼ ಕುರಿತ ಸಿನಿಮಾ ತಯಾರಾಗಿದೆ. ಈ ಚಿತ್ರಕ್ಕೆ ʻದಿ ಸಬರಮತಿ ರಿಪೋರ್ಟ್‌ʼʼಎಂದು (The Sabarmati Report) ಟೈಟಲ್‌ ಇಡಲಾಗಿದೆ. ಇದರ ಟೀಸರ್‌ ಔಟ್‌ ಆಗಿದ್ದು ಭಾರಿ ಸದ್ದು ಮಾಡುತ್ತಿದೆ.

VISTARANEWS.COM


on

Vikrant Massey The Sabarmati Report on 2002 Godhra incident
Koo

ಬೆಂಗಳೂರು: 2002ರ ಫೆಬ್ರವರಿ 27ರಂದು ಗುಜರಾತ್‌ನ ಗೋದ್ರಾದಲ್ಲಿ `ಸಬರಮತಿ ರೈಲಿಗೆ’ ಬೆಂಕಿ ಹಚ್ಚಿದ್ದ ವಿಧ್ವಂಸಕ ಕೃತ್ಯದಲ್ಲಿ 59 ಮಂದಿ ಮೃತಪಟ್ಟಿದ್ದರು. ಅದರ ಮಾರನೇ ದಿನ ಅಂದರೆ ಫೆ.28ರಂದು ರಾಜ್ಯದ ಹಲವೆಡೆ ಗಲಭೆಗಳು (Post Godhra Case) ನಡೆದಿದ್ದವು. ಇದೀಗ ʻಗೋದ್ರಾ ಹತ್ಯಾಕಾಂಡʼ ಕುರಿತ ಸಿನಿಮಾ ತಯಾರಾಗಿದೆ. ಈ ಚಿತ್ರಕ್ಕೆ ʻದಿ ಸಬರಮತಿ ರಿಪೋರ್ಟ್‌ʼʼಎಂದು (The Sabarmati Report) ಟೈಟಲ್‌ ಇಡಲಾಗಿದೆ. ಇದರ ಟೀಸರ್‌ ಔಟ್‌ ಆಗಿದ್ದು ಭಾರಿ ಸದ್ದು ಮಾಡುತ್ತಿದೆ.

’12th ಫೇಲ್’ ಸಿನಿಮಾ ಯಶಸ್ಸಿನ ಬಳಿಕ ವಿಕ್ರಾಂತ್ ಮಾಸ್ಸಿ ಈ ಸಿನಿಮಾ ಘೋಷಿಸಿದ್ದಾರೆ. ವಿಕ್ರಾಂತ್ ಮಾಸ್ಸಿ ಅವರು ಟೀಸರ್‌ನೊಂದಿಗೆ ಚಿತ್ರವನ್ನು ಘೋಷಿಸಿದರು. ವಿಡಿಯೊದಲ್ಲಿ, ಅವರು ಗೋದ್ರಾ ಘಟನೆಯ ಸುದ್ದಿಯನ್ನು ಬ್ರೇಕಿಂಗ್ ಮಾಡುವ ಪತ್ರಕರ್ತ ಶ್ರಬನ್ ಕುಮಾರ್ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್ ಹಂಚಿಕೊಂಡ ಅವರು, “22 ವರ್ಷಗಳ ಹಿಂದೆ ಗೋದ್ರಾ ರೈಲು ದುರಂತದಲ್ಲಿ ಪ್ರಾಣ ಕಳೆದುಕೊಂಡ 59 ಅಮಾಯಕರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. 2024ರ ಮೇ 3ರಂದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆʼʼಎಂದು ಬರೆದುಕೊಂಡಿದ್ದಾರೆ.

ಸಬರಮತಿ ವರದಿಯಲ್ಲಿ ಮಾಸ್ಸಿಯ ಹೊರತಾಗಿ ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ಕೂಡ ಕಾಣಿಸಿಕೊಳ್ಳಲಿದ್ದಾರೆ. ಶೋಭಾ ಕಪೂರ್, ಏಕ್ತಾ ಆರ್ ಕಪೂರ್, ಅಮುಲ್ ವಿ ಮೋಹನ್ ಮತ್ತು ಅಂಶುಲ್ ಮೋಹನ್ ನಿರ್ಮಾಣದ ರಂಜನ್ ಚಂದೇಲ್ ನಿರ್ದೇಶನದ ಈ ಚಿತ್ರ ಮೇ 3 ರಂದು ತೆರೆಗೆ ಬರಲಿದೆ.

ಇದನ್ನೂ ಓದಿ: Rama Devotees Insult: ಗೋಧ್ರಾ ಮಾದರಿ ರೈಲು ಸುಡುವ ಬೆದರಿಕೆ: ಬಿ.ಕೆ. ಹರಿಪ್ರಸಾದ್‌ರನ್ನೂ ತನಿಖೆಗೊಳಪಡಿಸಿ: ಸಿ.ಟಿ. ರವಿ

ʻದಿ ಸಾಬರಮತಿ ರಿಪೋರ್ಟ್‌ ಟೀಸರ್‌

ಏನಿದು ʻಗೋದ್ರಾ ಹತ್ಯಾಕಾಂಡʼ?

2002ರ ಪೆಬ್ರವರಿ 27ರಂದು ಅಯೋಧ್ಯೆಯಿಂದ ಕರಸೇವಕರನ್ನು ಹೊತ್ತು ಬಂದ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿಕ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಸಜೀವ ದಹನವಾದರು. ಇನ್ನೂ ದುರಂತವೆಂದರೆ ಸತ್ತವರಲ್ಲಿ 25 ಮಹಿಳೆಯರು ಮತ್ತು 25 ಮಕ್ಕಳು ಸೇರಿದ್ದರು. ಒಂದು ವರ್ಷದವರೆಗೆ ನಡೆದ ಗಲಭೆಗಳಲ್ಲಿ 1044 ಮಂದಿ ಮೃತಪಟ್ಟಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2500 ಜನರು ಗಾಯಗೊಂಡಿದ್ದರು. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು ಮೃತಪಟ್ಟ ಸಾವಿರ ಮಂದಿ ಪೈಕಿ ಮುಸ್ಲಿಮರು 790 ಮತ್ತು ಹಿಂದೂಗಳು 254 ಮಂದಿ ಎಂಬುದು ಅಧಿಕೃತ ಲೆಕ್ಕ. ಕೆಲವೊಂದು ವರದಿಗಳ ಪ್ರಕಾರ ಹತ್ಯೆಯಾದವರ ಸಂಖ್ಯೆ 2 ಸಾವಿರಕ್ಕೂ ಹೆಚ್ಚು.

Continue Reading
Advertisement
Doctor listens to the human lungs
ಆರೋಗ್ಯ4 mins ago

Health Tips For Lungs: ಈ ಆಹಾರ ತಿನ್ನಿ, ನಿಮ್ಮ ಶ್ವಾಸಕೋಶದ ಆರೋಗ್ಯ ಹೆಚ್ಚಿಸಿಕೊಳ್ಳಿ

kannada sign boards
ಪ್ರಮುಖ ಸುದ್ದಿ26 mins ago

ಕನ್ನಡ ನಾಮಫಲಕ ಅಳವಡಿಕೆಗೆ ಇಂದೇ ಕೊನೆಯ ದಿನ, ಇಲ್ಲದಿದ್ದರೆ ಬೀಗ ಖಚಿತ

graveyard
ಪ್ರಮುಖ ಸುದ್ದಿ34 mins ago

ದಶಮುಖ ಅಂಕಣ: ಮಸಣದಲ್ಲಿ ಕೆಲವು ಕ್ಷಣ

KAS Recruitment 2024 invited for 384 KAS posts Apply from March 4
ಉದ್ಯೋಗ34 mins ago

KAS Recruitment 2024: 384 ಕೆಎಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್‌ 4ರಿಂದಲೇ ಅರ್ಜಿ ಸಲ್ಲಿಸಿ

Raja Marga Column depressed
ಸ್ಫೂರ್ತಿ ಕತೆ43 mins ago

Raja Marga Column : ಅಪವಾದ ಎಲ್ಲರಿಗುಂಟು ಈ ಲೋಕದ ದೃಷ್ಟಿಯಲಿ; ಗೆಲ್ಲೋದು ಹೇಗೆ?

slim woman good health digestion
ಆರೋಗ್ಯ1 hour ago

Health Tips For Digestion: ಹೊಟ್ಟೆಬಿರಿಯುವಂತೆ ಉಂಡ ಬಳಿಕ ಜೀರ್ಣಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸರಳೋಪಾಯ!

Karnataka Weather Rain for first week of March
ಕರ್ನಾಟಕ2 hours ago

Karnataka Weather : ಕರ್ನಾಟಕದಲ್ಲಿ ಹೆಚ್ಚುತ್ತಿದೆ ಸೆಕೆ; ಮಾರ್ಚ್‌ ಮೊದಲ ವಾರಕ್ಕೆ ಮಳೆ?

Electricity Bil
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

dina bhavishya read your daily horoscope predictions for February 28 2024
ಭವಿಷ್ಯ3 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Jain (Deemed-to-be University)
ಬೆಂಗಳೂರು8 hours ago

ಜೈನ್ ‘ಸ್ಕೂಲ್ ಆಫ್ ಸೈನ್ಸಸ್‌’ನಲ್ಲಿ ಯಶಸ್ವಿಯಾಗಿ ನೆರವೇರಿದ SciCon-2024; 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ3 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ2 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ3 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌