Site icon Vistara News

Megastar Chiranjeevi: ರಾಮಮಂದಿರ ಉದ್ಘಾಟನೆಗೆ ಫ್ಯಾಮಿಲಿ ಜತೆ ಭಾಗಿಯಾಗಲಿದ್ದಾರೆ ನಟ ಚಿರಂಜೀವಿ

Megastar Chiranjeevi attend Ram Temple consecration ceremony

ಬೆಂಗಳೂರು: ದಕ್ಷಿಣ ಭಾರತದ ಚಿತ್ರರಂಗದ ಗಣ್ಯರಾದ ರಜನಿಕಾಂತ್‌, ಚಿರಂಜೀವಿ (Megastar Chiranjeevi), ಮೋಹನ್‌ಲಾಲ್‌, ಧನುಷ್‌, ಪ್ರಭಾಸ್ ಅವರಿಗೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ ಎಂದು ಹಿಂದೆ ವರದಿಯಾಗಿತ್ತು. ಇದೀಗ ಮೆಗಾಸ್ಟಾರ್ ಚಿರಂಜೀವಿ ಅವರು ‘ಹನುಮಾನ್’ ಚಿತ್ರದ ಪ್ರಿ-ರಿಲೀಸ್ ಇವೆಂಟ್‌ನಲ್ಲಿ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ದೃಢಪಡಿಸಿದರು. ಜನವರಿ 7ರಂದು ನಡೆದ ಸಮಾರಂಭದಲ್ಲಿ ಮಾತನಾಡಿದ ನಟ ʻಕುಟುಂಬ ಸದಸ್ಯರೊಂದಿಗೆ ಹಾಜರಾಗುತ್ತೇನೆʼ ಎಂದು ಬಹಿರಂಗಪಡಿಸಿದರು. ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರೊಂದಿಗೆ ಚಿರಂಜೀವಿ ಅವರು ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ.

ಮೆಗಾಸ್ಟಾರ್ ಚಿರಂಜೀವಿ ಅವರು ‘ಹನುಮಾನ್’ ಚಿತ್ರದ ಪ್ರಿ ರಿಲೀಸ್ ಇವೆಂಟ್‌ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ‘ಹನುಮಾನ್’ ಚಿತ್ರ ಸಂಕ್ರಾಂತಿ ಸಂದರ್ಭದಲ್ಲಿ ಅಂದರೆ ಜನವರಿ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮೆಗಾಸ್ಟಾರ್ ಚಿರಂಜೀವಿ, “ರಾಮಮಂದಿರ ನಿರ್ಮಾಣ ಇತಿಹಾಸದಲ್ಲಿ ಒಂದು ಮೈಲುಗಲ್ಲು. ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಇದೇ ತಿಂಗಳ 22ರಂದು ನಾನು ನನ್ನ ಕುಟುಂಬದೊಂದಿಗೆ ಪಾಲ್ಗೊಳ್ಳುತ್ತೇನೆʼʼ ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: Ram Mandir : ರಾಮ ಮಂದಿರ ನಿರ್ಮಾಣಕ್ಕೆ 11 ಕೋಟಿ ದೇಣಿಗೆ ನೀಡಿದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

Exit mobile version