Site icon Vistara News

Actor Mohanlal: ಗಣೇಶ ಚತುರ್ಥಿಯಂದು ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಮೋಹನ್‌ಲಾಲ್‌!

Mohanlal Malaikottai Vaaliban

ಬೆಂಗಳೂರು: ಜೈಲರ್‌ ಸಿನಿಮಾ ಸಕ್ಸಸ್‌ ಬೆನ್ನಲ್ಲೇ ಮೋಹನ್‌ಲಾಲ್‌ (Actor Mohanlal) ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ. ಇದೀಗ ಮೋಹನ್‌ಲಾಲ್‌ ಅಭಿನಯದ ‘ಮಲೈ ಕೋಟ್ಟ ವಾಲಿಬನ್’ (Malaikottai Vaaliban) ರಿಲೀಸ್ ದಿನಾಂಕ ಘೋಷಣೆ ಆಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ 2024ರ ಜನವರಿ 25ರಂದು ಸಿನಿಮಾ ರಿಲೀಸ್ ಆಗಲಿದೆ. ಈಗ ಗಣೇಶ ಚತುರ್ಥಿ ಸಂದರ್ಭದಲ್ಲಿ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

ನಟ ಮೋಹನ್‌ಲಾಲ್ ಅವರು ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. 2024ರ ಜನವರಿ 25ರಂದು ಥಿಯೇಟರ್‌ಗಳಲ್ಲಿ ಬರಲಿದೆ ಎಂದು ಘೋಷಿಸಿದ್ದಾರೆ. “ಕೌಂಟ್‌ಡೌನ್ ಪ್ರಾರಂಭವಾಗಿದೆ! 2024ರ ಜನವರಿ 25ರಂದು ಸಿನಿಮಾ ವಿಶ್ವಾದ್ಯಂತ ಥಿಯೇಟರ್‌ಗಳಿಗೆ ಬರುತ್ತಿದೆ” ಎಂದು ಟ್ವಿಟರ್‌ನಲ್ಲಿ ಮೋಹನ್ ಲಾಲ್ ಬರೆದುಕೊಂಡಿದ್ದಾರೆ. ಮಲೈ ಕೋಟ್ಟ ವಾಲಿಬನ್’ ಚಿತ್ರವನ್ನು ಲಿಜೋ ಜೊಸೆ ಪೆಲ್ಲಿಸೆರ್ರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಕೂಡ ಗಮನ ಸೆಳೆದಿದೆ. ಮೋಹನ್​ಲಾಲ್ ಅವರು ಹೊಸ ರೀತಿಯ ಗೆಟಪ್​ನಲ್ಲಿ ಆಗಮಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಮೋಹನ್​ಲಾಲ್ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Ragini Dwivedi: ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ಈ ಬಗ್ಗೆ ಅನಿಸಿಕೆ ಹಂಚಿಕೊಂಡಿರುವ ಮೋಹನ್‌ಲಾಲ್‌ʻʻ ಲಿಜೋ ಜೊಸೆ ಪೆಲ್ಲಿಸೆರ್ರಿ (Lijo Jose Pellissery) ಅವರೊಂದಿಗೆ ಕೆಲಸ ಮಾಡಿದ್ದು ನನಗೆ ಸಂತಸದ ಸಂಗತಿ. ಸಿನಿಮಾದಲ್ಲಿನ ಅವರ ಕೆಲಸಗಳು ವಿಶಿಷ್ಟವಾಗಿವೆ. ತಾಂತ್ರಿಕ ಕೌಶಲ್ಯಕ್ಕಾಗಿ ಮಾತ್ರವಲ್ಲದೆ ಅವರ ಥೀಮ್‌ಗಳಿಗೂ ನಾನು ಫಿದಾ ಆದೆʼʼ ಎಂದು ಹೇಳಿಕೊಂಡಿದ್ದಾರೆ. ಜೈಲರ್’ ಸಿನಿಮಾದಲ್ಲಿ ಮೋಹನ್​ಲಾಲ್ ಅವರು ಮ್ಯಾಥೀವ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ. ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ. ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Ragini Dwivedi: ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ನಂದ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಇದರಲ್ಲಿ ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ಇರಲಿದೆ ಎನ್ನಲಾಗಿದೆ.

ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡಲಾಗುತ್ತಿದೆ ಎನ್ನಲಾಗಿದೆ.

Exit mobile version