Mother's Day 2024: ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌! - Vistara News

ಸಿನಿಮಾ

Mother’s Day 2024: ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Mother’s Day 2024: ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Mother's Day 2024 Duniya Vijay jaggesh Post Viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಮ್ಮ ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ..? ಭೂಮಿಗೆ ಬಂದ (Mother’s Day 2024) ಮೊದಲನೆ ಕಂದನ ಅಳುವ ದನಿಯಿಂದ ʼಈ ಸಾಲುಗಳು ಯಾವಾಗಲೂ ನಮ್ಮನ್ನ ಬಿಡದೇ ಕಾಡುತ್ತವೆ. ʼಅಮ್ಮʼ ಅನ್ನೋ ಶಬ್ದಕ್ಕೆ ಅರ್ಥ ನಿಡುವುದು ಕೂಸೇ ಆದ್ರೂ ಆ ಕೂಸಿಗೆ ರೆಕ್ಕೆ ಕಟ್ಟಿ ಹಾರೋ ಹಾಗೇ ಮಾಡೋಳು ತಾಯಿ. ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರ ಮದರ್ಸ್ ಡೇ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್‌ ಅವರು ಇನ್‌ಸ್ಟಾದಲ್ಲಿ ಅಮ್ಮನ ತೊಡೆ ಮೇಲೆ ಮಲಗಿರುವ ಫೋಟೊ ಜತೆಗೆ ಹೀಗೆ ಬರೆದಿದ್ದಾರೆ. ಧನ್ಯವಾದ ಜೀ ಕನ್ನಡ. ನನ್ನ ಪ್ರೀತಿಯ ಅಮ್ಮನ ಈ ರೀತಿ ನೆನೆಯುವಂತ ಕಾಣಿಕೆಗಾಗಿ.
ನಾನು ಇಂದು 61 ವರ್ಷವಾದರು ಅಮ್ಮನ ನೆನೆದಾಗ ಮಗುವಾಗುವೆ. ಅಂತಹ ಶಕ್ತಿಯಿದೆ ಅಮ್ಮನ ಎರಡಕ್ಷರಕ್ಕೆ.
ಕಾರುಣ್ಯ ಸೆಲೆಯ ಓ ಅಮ್ಮಂದಿರೆ…ನೀವುಗಳು ಇರಬೇಕು ಶಾಶ್ವತ. ದೃವನಕ್ಷತ್ರದಂತೆ..! ಮರೆಯಾಗದೆ ಮಕ್ಕಳ ಮುಂದೆ..ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ದುನಿಯಾ ವಿಜಯ್‌ ಅವರು ಅಮ್ಮನ ಜತೆ ಇರುವ ಫೋಟೊ ಶೇರ್‌ ಮಾಡಿ ʻʻಈ ಉಸಿರು ಕೊಟ್ಟ ನಿನಗೆ
ನನ್ನ ಉಸಿರಿರೊವರೆಗೂ. ಪ್ರತಿ ದಿನ ಆಚರಣೆಯೇ ಅಮ್ಮʼʼ ಎಂದು ಬರೆದುಕೊಂಡಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ದುನಿಯಾ ವಿಜಯ್‌ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. 3 ವರ್ಷಗಳ ಹಿಂದೆ ನಟ ದುನಿಯಾ ವಿಜಯ್ ನಾರಾಯಣಮ್ಮ ನಿಧನರಾದರು.

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೋನಿಕಾ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಿನಿಮಾಗಾಗಿ ರಿತಾನ್ಯಾ ಎಂದು ಹೆಸರು ಇಟ್ಟುಕೊಂಡಿದ್ದಾರೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading

ಟಾಲಿವುಡ್

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Venu Swamy: ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

VISTARANEWS.COM


on

Venu Swamy Wrong Prediction on Jagan in AP Polls
Koo

ಬೆಂಗಳೂರು: ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿದೆ. ಜಗನ್​ ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ದಾಖಲಿಸಿದೆ. ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ, ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ʻʻಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ ಗೊತ್ತಾಗುತ್ತಿದೆ. ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಆಂಧ್ರ ರಾಜಕೀಯದ ಬಗ್ಗೆ ಹೇಳಿರುವ ಭವಿಷ್ಯ ತಪ್ಪಾಗಿರುವ ಕಾರಣ, ಇಂದಿನಿಂದ ರಾಜಕೀಯ ಹಾಗೂ ಸಿನಿಮಾ ವ್ಯಕ್ತಿಗಳ ಬಗ್ಗೆ ಎಲ್ಲಿಯೂ ಭವಿಷ್ಯ ನುಡಿಯುವುದಿಲ್ಲʼʼ ಎಂದು ನಿರ್ಧಾರ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kakolu Venugopalaswamy Temple: ಏ.11ರಿಂದ ಕಾಕೋಳು ವೇಣುಗೋಪಾಲಸ್ವಾಮಿ 91ನೇ ಬ್ರಹ್ಮರಥೋತ್ಸವ

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಆಂಧ್ರಪ್ರದೇಶ ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್‌ಆರ್‌ಸಿಪಿ), ಎನ್. ಚಂದ್ರಬಾಬು ನಾಯ್ಡು (ಟಿಡಿಪಿ), ಪವನ್ ಕಲ್ಯಾಣ್ (ಜೆಎಸ್‌ಪಿ), ಕಿಲ್ಲಿ ಕೃಪಾರಾಣಿ (ಕಾಂಗ್ರೆಸ್), ಧರ್ಮನಾ ಪ್ರಸಾದ ರಾವ್ (ವೈಎಸ್‌ಆರ್‌ಸಿಪಿ), ಧರ್ಮನಾ ಕೃಷ್ಣ ದಾಸ್ (ವೈಎಸ್‌ಆರ್‌ಸಿಪಿ), ಪಾಮುಲಾ ಪುಷ್ಪ ಶ್ರೀವಾಣಿ ( ವೈಎಸ್‌ಆರ್‌ಸಿಪಿ), ನಲ್ಲಮಿಲ್ಲಿ ರಾಮಕೃಷ್ಣ ರೆಡ್ಡಿ (ಬಿಜೆಪಿ), ರಘು ರಾಮ ಕೃಷ್ಣರಾಜು (ಟಿಡಿಪಿ), ಚಿಂತಾಮನೇನಿ ಪ್ರಭಾಕರ್ (ಟಿಡಿಪಿ), ವೈಎಸ್ ಚೌಧರಿ (ಬಿಜೆಪಿ), ನಾದೆಂಡ್ಲ ಮನೋಹರ್ (ಜೆಎಸ್‌ಪಿ), ಕನ್ನಾ ಲಕ್ಷ್ಮೀನಾರಾಯಣ (ಟಿಡಿಪಿ), ಅದಾಲ ಪ್ರಭಾಕರ ರೆಡ್ಡಿ (ವೈಎಸ್‌ಆರ್‌ಸಿಪಿ), ಅಮ್ಜತ್ ಬಾಷಾ ಶೇಕ್ ಬೇಪಾರಿ (ವೈಎಸ್‌ಆರ್‌ಸಿಪಿ), ನಂದಮೂರಿ ಬಾಲಕೃಷ್ಣ (ಟಿಡಿಪಿ), ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ (ಟಿಡಿಪಿ), ನಾರಾ ಲೋಕೇಶ್ (ಟಿಡಿಪಿ) ಮತ್ತಿತರರು ಆಂಧ್ರಪ್ರದೇಶದ ವಿಧಾನಸಭಾ ಕಣದಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು.

Continue Reading

Lok Sabha Election 2024

Actor Chetan Ahimsa: ಮತ್ತೆ ಮೋದಿಯೇ ಪ್ರಧಾನಿ, ಆದರೆ ಬಿಜೆಪಿಗಿದು ಪಾಠ ಎಂದ ನಟ ಚೇತನ್!

Actor Chetan Ahimsa: ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ನಟ ಚೇತನ್ ಬರೆದುಕೊಂಡಿದ್ದಾರೆ.

VISTARANEWS.COM


on

Actor Chetan Ahimsa says NDA is needed for BJP to come to power
Koo

ಬೆಂಗಳೂರು: ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್‌ಡಿಎ ಅಗತ್ಯವಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಎಕ್ಸ್‌ ಮೂಲಕ ನಟ ಚೇತನ್‌ ಅವರು ಹೇಳಿಕೊಂಡಿದ್ದಾರೆ.

“ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರ ಮುಂದುವರಿಸಬಹುದು. ಆದರೆ ಬಿಜೆಪಿಗೆ ಇದೊಂದು ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ. ಇದು ಒಳ್ಳೆಯದೇ. ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ” ಎಂದು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಚೇತನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ವಿಜಯ್‌ ರಾಘವೇಂದ್ರ “ಗ್ರೇ ಗೇಮ್ಸ್” ಸಿನಿಮಾ ಗೆಲುವು

ಸರ್ಕಾರ ರಚನೆಗೆ 272 ಸ್ಥಾನಗಳು ಸರಳ ಬಹುಮತವಾಗಿದೆ. ಎನ್‌ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಗೆಲುವುದು ಖಚಿತವಾಗಿದ್ದು ಸರ್ಕಾರ ರಚಿಸುವ ಸಾಧ್ಯತೆ ಇದೆ. ಆದರೂ 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟ ಎನ್‌ಡಿಎ ಹೊರಗಿಟ್ಟು ಸರ್ಕಾರ ರಚಿಸುವ ಲೆಕ್ಕಾಚಾರದಲ್ಲಿದೆ.

ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದಿದ್ದ ನಟ ಚೇತನ್!

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದರು.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದರು.

Continue Reading

Lok Sabha Election 2024

Election Results 2024: ಕಂಗನಾ, ಸುರೇಶ್‌ ಗೋಪಿ, ಶತ್ರುಘ್ನ ಸಿನ್ಹಾ ಸೇರಿ ಹಲವು ನಟ–ನಟಿಯರ ಗೆಲುವು

Election Results 2024 : ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಸೋಲಾಗಿದೆ. ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಗೆದ್ದಿದ್ದಾರೆ.

VISTARANEWS.COM


on

Election Results 2024 in celebrities
Koo

ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ವಿನ್‌ ಆಗಿದ್ದಾರೆ.

ಟಿವಿ ರಾಮ ಅರುಣ್ ಗೋವಿಲ್

ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್‌ನಿಂದ ಗೆದ್ದಿದ್ದಾರೆ.

ಸುರೇಶ್‌ ಗೋಪಿ

ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಆಗ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ: Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಶತ್ರುಘ್ನ ಸಿನ್ಹಾ (ಟಿಎಂಸಿ, ಅಸನ್ಸೋಲ್)

ಪಶ್ಚಿಮ ಬಂಗಾಳ ಅಸನ್ಸೋಲ್‌ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರಿ ಬಾಬು ಎಂದೇ ಖ್ಯಾತರಾಗಿರುವ ಶತ್ರುಘ್ನ ಸಿನ್ಹಾ ಟಿ ಎಂ ಸಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 63,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುರಿಂದರ್‌ ಸಿಂಗ್‌ ಅಹ್ಲುವಾಲಿಯಾ ಅವರನ್ನು ಸೋಲಿಸಿದ್ದಾರೆ.

ಹೇಮಾ ಮಾಲಿನಿ (ಬಿಜೆಪಿ, ಮಥುರಾ)

2024ರ ಲೋಕಸಭಾ ಚುನಾವಣೆಯಲ್ಲೂ ಮಥುರಾ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿರುವ ಹೇಮಾ ಮಾಲಿನಿ, ಈ ಬಾರಿಯೂ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿಯ ಸುರೇಶ್ ಸಿಂಗ್ ಅವರನ್ನು 106924 ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಾಧಿಕಾ ಶರತ್‌ಕುಮಾರ್ (ಬಿಜೆಪಿ, ವಿರುದ್‌ನಗರ)
ನಟಿ ರಾಧಿಕಾ ಶರತ್‌ಕುಮಾರ್ ಅವರು ತಮಿಳುನಾಡಿನ ವಿರುದ್‌ನಗರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಸೋತಿದ್ದಾರೆ.

ಸ್ಮೃತಿ ಇರಾನಿ

ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಈ ಬಾರಿ ಸೋಲಾಗಿದೆ. ಗಾಂಧಿ ಕುಟುಂಬದ ಬಲಗೈ ಬಂಟ ಕಿಶೋರಿ ಲಾಲ್‌ ಶರ್ಮಾ ಇಲ್ಲಿ ಇರಾನಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಕಳೆದ ಬಾರಿ ರಾಹುಲ್‌ ಗಾಂಧಿಯನ್ನೇ ಸೋಲಿಸಿದ್ದ ಇರಾನಿ, ಇದೀಗ ಅವರ ಬಂಟನ ಕೈಯಲ್ಲಿ ಸೋಲು ಕಾಣುವಂತಾಗಿದೆ.

ಮನೋಜ್ ತಿವಾರಿ (ಬಿಜೆಪಿ, ಈಶಾನ್ಯ ದೆಹಲಿ)

ಈಶಾನ್ಯ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಭೋಜ್‌ಪುರಿ ನಟ, ಗಾಯಕ ಮನೋಜ್ ತಿವಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕನ್ಹಯ್ಯ ಕುಮಾರ್ ವಿರುದ್ಧ ಭರ್ಜರಿ ಮತಗಳಿಂದ ಗೆದ್ದಿದ್ದಾರೆ.

ರವಿ ಕಿಶನ್

ರಾಜಕಾರಣಿ ಹಾಗೂ ಬಿಜೆಪಿ ನಾಯಕ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದಿಂದ 74,536 ಮತಗಳ ಅಂತರದಿಂದ ಗೆದ್ದಿದ್ದಾರೆ.

ಪವನ್ ಸಿಂಗ್

ಜನಪ್ರಿಯ ಭೋಜ್‌ಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಬಿಹಾರದ ಕಾರಕಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮುನ್ನಡೆ ಸಾಧಿಸಿದ್ದಾರೆ.

Continue Reading
Advertisement
Election Results 2024
ಪ್ರಮುಖ ಸುದ್ದಿ7 mins ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ19 mins ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ25 mins ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 202441 mins ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ43 mins ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Pradeep Eshwar
ಪ್ರಮುಖ ಸುದ್ದಿ1 hour ago

Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Stock Market
ದೇಶ1 hour ago

Stock Market: ಮೋದಿ ಪ್ರಧಾನಿ ಆಗುವುದು ಖಾತರಿ ಆಗುತ್ತಿದ್ದಂತೆ ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ!

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Prajwal Revanna
ಪ್ರಮುಖ ಸುದ್ದಿ1 hour ago

Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

election results 2024 joshi hdk cnm bommai
ಪ್ರಮುಖ ಸುದ್ದಿ1 hour ago

Election results 2024: ಎನ್‌ಡಿಎ ಸರಕಾರದಲ್ಲಿ ರಾಜ್ಯದಿಂದ 4 ಮಂದಿಗೆ ಸಚಿವ ಸ್ಥಾನ ಫಿಕ್ಸ್?‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌