Chandrayaan-3 : ಚಂದ್ರಯಾನ 3ರ ಸಿನಿಮಾ ಮಾಡಲು ಪೈಪೋಟಿ! ವಿಭಿನ್ನ ಹೆಸರುಗಳ ನೋಂದಣಿ - Vistara News

ಸಿನಿಮಾ

Chandrayaan-3 : ಚಂದ್ರಯಾನ 3ರ ಸಿನಿಮಾ ಮಾಡಲು ಪೈಪೋಟಿ! ವಿಭಿನ್ನ ಹೆಸರುಗಳ ನೋಂದಣಿ

ಚಂದ್ರಯಾನ (Chandrayaan-3) ಕುರಿತಾಗಿ ಸಿನಿಮಾ ಶೀರ್ಷಿಕೆ ನೋಂದಣಿಗೆ ಜನರು ಮುಗಿಬಿದ್ದಿದ್ದಾರೆ. ಹತ್ತಾರು ಅರ್ಜಿಗಳು ಈಗಾಗಲೇ ಬಂದಿರುವುದಾಗಿ ಹೇಳಲಾಗಿದೆ.

VISTARANEWS.COM


on

Chandrayaan-3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ಭಾರತವು ಬುಧವಾರ ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶವಾಗಿ (Chandrayaan-3) ಹೊರಹೊಮ್ಮಿದೆ. ವಿಶೇಷವೆಂದರೆ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲನೇ ದೇಶವಾಗಿಯೂ ಭಾರತ ಕೀರ್ತಿ ಪಡೆದುಕೊಂಡಿದೆ. ಈ ದೊಡ್ಡ ಯಶಸ್ಸಿನ ಬೆನ್ನಲ್ಲೇ ಸಿನಿಮಾ ಕ್ಷೇತ್ರದ ಹಲವರು ಈ ಸಾಧನೆಯ ಕುರಿತಾಗಿ ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ. ಸಿನಿಮಾ ಹೆಸರು ನೋಂದಣಿ ಮಾಡಿಕೊಳ್ಳುವಂತಹ ಮುಂಬೈನಲ್ಲಿರುವ ಇಂಡಿಯನ್ ಮೋಷನ್ ಪಿಕ್ಚರ್ ಪ್ರೊಡ್ಯೂಸರ್ಸ್ ಅಸೋಸಿಯೇಷನ್ (IMPPA), ನಿರ್ಮಾಪಕರ ಸಂಘ ಮತ್ತು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಿರ್ಮಾಪಕರ ಮಂಡಳಿ (IFTPC)ಯ ಕಚೇರಿಗಳಿಗೆ ಬುಧವಾರ ಮತ್ತು ಗುರುವಾರ ದೊಡ್ಡ ಪ್ರಮಾಣದಲ್ಲಿ ಸಿನಿಮಾ ನೋಂದಣಿಗೆ ಅನೇಕರು ಮುಗಿಬಿದ್ದಿದ್ದಾರೆ.

ಚಂದ್ರಯಾನ 3, ಮಿಷನ್‌ ಚಂದ್ರಯಾನ 3, ಚಂದ್ರಯಾನ 3: ದಿ ಮೂನ್‌ ಮಿಷನ್‌, ವಿಕ್ರಮ್‌ ಲ್ಯಾಂಡರ್‌, ಚಂದ್ರಯಾನ 3: ದಿ ನ್ಯೂ ಚಾಪ್ಟರ್‌, ಭಾರತ್‌ ಚಾಂದ್‌ ಪರ್‌ ಸೇರಿದಂತೆ ಚಂದ್ರಯಾನಕ್ಕೆ ಸಂಬಂಧಿಸಿದ ಹಲವಾರು ಹೆಸರುಗಳ ಸಿನಿಮಾಗಳು ನೋಂದಣಿಗೆ ಬಂದಿವೆಯೆಂತೆ. ಹಲವು ಚಿತ್ರ ನಿರ್ಮಾಪಕರುಗಳು ಹಾಗೂ ಪ್ರೊಡಕ್ಷನ್‌ ಹೌಸ್‌ಗಳು ಈ ಸಿನಿಮಾ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿರುವುದಾಗಿ ವರದಿಯಿದೆ.

“ಚಂದ್ರಯಾನದ ಕುರಿತಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಅನೇಕ ಅರ್ಜಿಗಳು ಬಂದಿವೆ. ಆ ಎಲ್ಲ ಅರ್ಜಿಗಳನ್ನು ಮುಂದಿನ ವಾರದಲ್ಲಿ ಪರಿಶೀಲನೆ ಮಾಡಲಿದ್ದೇವೆ. ಹಾಗೆಯೇ ಅದರಲ್ಲಿ ಕೆಲವರಿಗೆ ಮಾತ್ರ ಅನುಮತಿ ನೀಡಲಿದ್ದೇವೆ. ಈ ಹಿಂದೆ ಪುಲ್ವಾಮಾ ದಾಳಿ ಆದಾಗಲೂ ಸುಮಾರು 30-40ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಬಹುತೇಕ ಹೆಸರುಗಳು ಒಂದೇ ಆಗಿದ್ದವು. ಅವುಗಳಲ್ಲಿ ಕೆಲವಕ್ಕೆ ಅನುಮತಿ ನೀಡಲಾಗಿತ್ತಾದರೂ ಅದರ ಬಗ್ಗೆ ಹೆಚ್ಚಿನ ಸಿನಿಮಾಗಳಾಗಲೀ ಅಥವಾ ವೆಬ್‌ ಸರಣಿಗಳಾಗಲೀ ಬಿಡುಗಡೆಯಾಲಿಲ್ಲ. ನಿಜವಾಗಿಯೂ ಸಿನಿಮಾ ಮಾಡಲು ಬಯಸುತ್ತಾರೆ ಎನ್ನುವಂತವರಿಗೆ ಮಾತ್ರ ಈ ಬಾರಿ ಅನುಮತಿ ಕೊಡಲಿದ್ದೇವೆ” ಎಂದು IMPAA ಕಚೇರಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Viral video: ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಬೆಂಕಿ ಎಸೆದು ಕೋಲಾಹಲ ಸೃಷ್ಟಿಸಿದ ಮಹಿಳೆ!
ಈ ರೀತಿಯ ಸಿನಿಮಾ ಹೆಸರು ನೋಂದಣಿ ಕೆಲಸವನ್ನು ಹಣ ಮಾಡುವ ವಿಧಾನ ಎಂದು ವ್ಯಾಪಾರ ತಜ್ಞರಾಗಿರುವ ಅತುಲ್‌ ಮೋಹನ್‌ ಅವರು ತಿಳಿಸಿದ್ದಾರೆ. “ಸಿನಿಮಾದ ಶೀರ್ಷಿಕೆಯನ್ನು ನೋಂದಣಿ ಮಾಡಿಕೊಳ್ಳುವುದಕ್ಕೆ 400-500 ರೂ. ಸಾಕು. ಈ ರೀತಿಯ ಘಟನೆಗಳು ಆದಾಗ ಕೆಲವರು ಅದರ ಹೆಸರನ್ನು ನೋಂದಣಿ ಮಾಡಿಟ್ಟುಕೊಳ್ಳುತ್ತಾರೆ. ಆ ನಿರ್ದಿಷ್ಟ ಘಟನೆಯ ಬಗ್ಗೆ ಸಿನಿಮಾ ನಿರ್ಮಿಸಲು ಆಸಕ್ತಿ ಹೊಂದಿರುವ ದೊಡ್ಡ ನಿರ್ಮಾಪಕರು ಅಥವಾ ನಿರ್ಮಾಣ ಸಂಸ್ಥೆ ಹೊರಟಾಗ ಅವರಿಗೆ ಶೀರ್ಷಿಕೆಯ ತೊಂದರೆಯುಂಟಾಗುತ್ತದೆ. ಆಗ ಅವರು ಈ ಶೀರ್ಷಿಕೆಯ ಹಕ್ಕು ಹೊಂದಿರುವವರನ್ನು ಹುಡುಕಬೇಕು. ಅವರು ಆಗ ಭಾರೀ ಹಣ ಪಡೆದು, ಶೀರ್ಷಿಕೆ ಬಿಟ್ಟುಕೊಡುತ್ತಾರೆ. ಇದು ಹಣ ಮಾಡುವ ತಂತ್ರವಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸಿನಿಮಾ ವಿಶ್ಲೇಷಕ ತರಣ್‌ ಆದರ್ಶ್‌ ಅವರೂ ಪ್ರತಿಕ್ರಿಯೆ ಕೊಟ್ಟಿದ್ದಾರೆ. “ಚಂದ್ರಯಾನ 3ರ ಬಗ್ಗೆ ಶೀರ್ಷಿಕೆ ನೋಂದಣಿ ಮಾಡಿಕೊಳ್ಳಲು ಜನರು ತೋರುತ್ತಿರುವ ಆತುರ ನನಗೇನೂ ಆಶ್ಚರ್ಯ ತರಿಸಿಲ್ಲ. ಈ ಹಿಂದೆ ನಾವು ಮಿಷನ್‌ ಮಂಗಲ್‌, ʼರಾಕೆಟ್ರಿ: ದಿ ನಂಬಿ ಎಫೆಕ್ಟ್‌ʼನಂತಹ ಸಿನಿಮಾಗಳನ್ನು ನೋಡಿದ್ದೇವೆ. ಆ ಸಿನಿಮಾಗಳು ದೊಡ್ಡ ದೊಡ್ಡ ನಟರೊಂದಿಗೆ ದೊಡ್ಡ ಯಶಸ್ಸನ್ನು ಕಂಡಿವೆ. ಹಾಗಾಗಿ ಈಗಲೂ ಸಿನಿಮಾ ನೋಂದಣಿಗೆ ಜನರು ಮುಗಿಬಿದ್ದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

VISTARANEWS.COM


on

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಸುದ್ದಿ ಬರ್ತಿದೆ. ಇದೀಗ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ದೃಶ್ಯಗಳನ್ನು ಎಡಿಟ್ ಮಾಡಲು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್ಸ್‌ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಜೂನ್ 4ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ರಿಲೀಸ್ ದಿನಾಂಕ ಸದ್ಯಕ್ಕೆ ಮುಂದೂಡಿಕೆ ಆಗಿದೆ. ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading
Advertisement
Latest3 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest21 hours ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ23 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 day ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest2 days ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest2 days ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest2 days ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest3 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest4 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌