Site icon Vistara News

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Munawar Faruqui hospitalised Bigg Boss 17 winner

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುನಾವರ್ ಸ್ನೇಹಿತರೊಬ್ಬರು ಮೇ 24ರಂದು ಆಸ್ಪತ್ರೆಯ ಬೆಡ್‌ನಲ್ಲಿ ಮುನಾವರ್‌ ಮಲಗಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಮುನಾವರ್ ಅವರ ಸ್ನೇಹಿತ ನಿತಿನ್ ಮೆಂಘಾನಿ ಅವರು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಮುನಾವರ್ ಆಸ್ಪತ್ರೆಯಲ್ಲಿರುವ ಫೋಟೊ ವನ್ನು ಹಂಚಿಕೊಂಡಿದ್ದಾರೆ. ನಿತಿನ್ ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿ, “ನನ್ನ ಸಹೋದರ ಮುನಾವರ್‌ಗೆ ದೇವರು ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ. ಶೀಘ್ರದಲ್ಲೇ ಗುಣಮುಖರಾಗಲಿ.”ಎಂದು ಬರೆದುಕೊಂಡಿದ್ದಾರೆ. ಇನ್ನು ಮುನಾವರ್ ಕೂಡ ರಿಕವರ್‌ ಮೋಡ್‌ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಮೇಲೆ ಮೊಟ್ಟೆ ಎಸೆತ!

ಏ. 10) ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

ಹಿಂದಿಯ ಬಿಗ್ ಬಾಸ್ 17ನೇ (Bigg Boss 17) ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು. ಇನ್ನು ಕೆಲವರು ಮುನಾವರ್‌ ಗೆದ್ದ ಬಳಿಕ ಇದು ಫಿಕ್ಸಿಂಗ್‌ ಎಂದು ಆರೋಪ ಕೂಡ ಮಾಡಿದ್ದರು. ಈ ಬಗ್ಗೆ ಮುನಾವರ್‌ ಕೂಡ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ʻನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆʼʼ ಎಂದಿದ್ದರು.

Exit mobile version