Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ! - Vistara News

ಸಿನಿಮಾ

Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

Music Composer Hamsalekha : ಕಾರ್ಯಕ್ರಮ ಒಂದರಲ್ಲಿ ಹಂಸಲೇಖ ಅವರು ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು. ಇದಾದ ಬಳಿಕ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗಹಂಸಲೇಖ ಅವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ.

VISTARANEWS.COM


on

Music Composer Hamsalekha Ask Apology To Jain Community controversial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಂಸಲೇಖ (Music Composer Hamsalekha) ಅವರು ಕೆಲವೊಮ್ಮೆ ಅವರು ವಿವಾದಗಳನ್ನು ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಜೈನ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಇದು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅನೇಕರು ಹಂಸಲೇಖ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಂತೆಯೇ ಹಂಸಲೇಖ ಅವರು ಕ್ಷಮೆ ಕೇಳಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ಹಂಸಲೇಖ ಅವರು ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು. ಇದಾದ ಬಳಿಕ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹಂಸಲೇಖ ಅವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ.

ಇನ್ನು ಈ ವಿವಾದ ಆದ ಬೆನ್ನಲ್ಲೇ ವಿಡಿಯೊ ಮೂಲಕ ಕ್ಷಮೆ ಕೂಡ ಕೇಳಿದರು. ವಿಡಿಯೊದಲ್ಲಿ ‘’ಮಹನೀಯರೆ ದಯಮಾಡಿ ಕ್ಷಮಿಸಿ.. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂಬ ಯೋಚನೆ ಮಾಡಿದವನಲ್ಲ. ಆ ಪದವನ್ನ ಬಳಸಬೇಕು ಅಂದುಕೊಳ್ಳಲಿಲ್ಲ. ಅಲ್ಲಿ ತುಂಬಾ ಒತ್ತಡಗಳಿಂದ, ನನ್ನನ್ನ ಎಳೆದಾಡುತ್ತಿದ್ದರು. ನಾನೇನೋ ಗದರಲು ಹೋಗಿ ಆಮೇಲೆ ಈ ಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ಯಾವತ್ತೂ ಆ ರೀತಿಯ ತಪ್ಪುಗಳನ್ನ ಮಾಡೋದಿಲ್ಲ. ನಾನು ಪಂಪನ ದಾಸಾನುದಾಸ. ಕನ್ನಡವನ್ನ ಕಟ್ಟಿದ ಆ ಮಹಾನ್ ವ್ಯಕ್ತಿಯ ಸೇವೆಗೆ ನಿಂತಿರೋನು ನಾನು. ದಯಮಾಡಿ ಇದನ್ನ ಬೆಳೆಸಬೇಡಿ. ಪತ್ರದ ಮುಖಾಂತರವೂ ಕ್ಷಮೆ ಕೇಳಿದ್ದೇನೆ. ದಯವಿಟ್ಟು ಈ ವಿಷಯವನ್ನ ಇಲ್ಲಿಗೆ ಮುಕ್ತಾಯ ಮಾಡಿ’’ ಎಂದು ವಿಡಿಯೋದಲ್ಲಿ ಹಂಸಲೇಖ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

ಇನ್ನು ಪತ್ರದ ಮೂಲಕ ಕೂಡ ʻʻ’ಕ್ಷಮೆಯಿರಲಿ.. ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ ಮತ್ತು ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ಶಿರಬಾಗಿ ಕ್ಷಮೆ ಕೋರುತ್ತೇನೆ. ಪ್ರಿಯ ಮಾಧ್ಯಮಗಳೇ, ದಯಮಾಡಿ. ನಾನು ದುಡುಕಿ ಮಾತಾಡಿದ ಆ “BULLSHIT” ಪದವನ್ನು DELETE ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿಮಾಡಲು ಈ ಮೂಲಕ ಕೋರುತ್ತಿದ್ದೇನೆ. ಆಡು ಮಾತುಗಳನ್ನು COIN ಮಾಡುವ ನನ್ನಂತ ಸಿನಿಮಾ ರೈಟರ್‌ಗಳಿಗೆ ಇದು ಶಾಸ್ತಿ ಮತ್ತು ಶಾಪ ಎಂದು ನಾನು ಭಾವಿಸಿದ್ದೇನೆ. ಆ ‘ಮಾತು’ ನನ್ನ ಬಾಯಿಂದ ಅಲ್ಲಿ ಹೊರಟ ಹಿನ್ನೆಲೆ ಹೀಗಿದೆಆ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ. channel ನವರು Individual byte ಗಳಿಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರಬಂದೆ. ನನ್ನ ಸಹಾಯಕ, ನನ್ನನ್ನ ಹೊಗಳಿದ – ‘ಸಿಟ್ಟು ತಡೆಯಲಾಗಲಿಲ್ಲ ಆದರೂ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್” – ಎಚಿದ. ಆಗ ನಾನು ಆತನಿಗೆ “ಸಿಟ್ಟು, ಹೋಗಿ ಬರೋ ಬುಲೆಟ್ಟು ” ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು ಸಿಟ್ಟು ಒಂದು ಬುಲ್ಶಿಟ್ಟು” ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಟ್ಟು ಕ್ಷಮಿಸಿ…’’ ಎಂದು ಪತ್ರದ ಮೂಲಕ ಕ್ಷಮೆ ಕೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ತಾಯಿ ನಿಧನ

Actor Darshan: ಈ ಮುಂಚೆ ಡಿಗ್ಯಾಂಗ್ ಜತೆ ಸೇರಿಕೊಂಡ ಅನುಕುಮಾರ್ ಜೈಲು ಸೇರಿದ್ದ. ಈ ನೋವಿನಲ್ಲೇ ಅನುಕುಮಾರ್ ತಂದೆ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮನೆಗೆ ಆಧಾರವಾಗಿದ್ದ ಮಗನೇ ಈ ರೀತಿಯ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದ ಅನು ಕುಮಾರ್ ತಂದೆ ನೋವಿನಲ್ಲೇ ಮೃತಪಟ್ಟಿದ್ದರು.

VISTARANEWS.COM


on

Actor Darshan 4th accused mother dies
Koo

ಬೆಂಗಳೂರು: ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಇದೀಗ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ (Actor Darshan) ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್‌ ರಘು ತಾಯಿ ಮಂಜುಳಮ್ಮ (75) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ರಾಘವೇಂದ್ರ ಚಿತ್ರದುರ್ಗ ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರಾಘವೇಂದ್ರನ ತಾಯಿ ಮಾನಸಿಕ ಅಸ್ವಸ್ಥತೆ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಇಷ್ಟೂ ದಿನ ರಘು ಸಹೋದರ ಮುರುಳಿ ಮನೆಯಲ್ಲಿದ್ದರು. ಮುರುಳಿ ಮದುವೆಯಾಗದೇ ತಾಯಿ ಆರೈಕೆ ಮಾಡುತಿದ್ದ. ಆದರೆ ರಘು ಲವ್ ಮ್ಯಾರೇಜ್ ಆಗಿ ಪತ್ನಿ ಜತೆ ಪ್ರತ್ಯೇಕವಾಗಿ ವಾಸವಾಗಿದ್ದ‌. ಆಗಾಗ ಬಂದು ತಾಯಿಯ ಕ್ಷೇಮ ವಿಚಾರಿಸುತ್ತಿದ್ದ ಎನ್ನಲಾಗಿದೆ.

ಈ ಮುಂಚೆ ಡಿಗ್ಯಾಂಗ್ ಜತೆ ಸೇರಿಕೊಂಡ ಅನುಕುಮಾರ್ ಜೈಲು ಸೇರಿದ್ದ. ಈ ನೋವಿನಲ್ಲೇ ಅನುಕುಮಾರ್ ತಂದೆ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮನೆಗೆ ಆಧಾರವಾಗಿದ್ದ ಮಗನೇ ಈ ರೀತಿಯ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದ ಅನು ಕುಮಾರ್ ತಂದೆ ನೋವಿನಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ

 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಯಾಕೆಂದರೆ, ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ರಿಟ್ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಮನೆ ಊಟಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ದರ್ಶನ್‌ (Actor Darshan) ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲ ಫಣೀಂದ್ರ ವಾದ ಮಂಡಿಸಿ, ವಿಚಾರಣಾಧೀನ ಕೈದಿಗಳಿಗೆ ಖಾಸಗಿ ಸೋರ್ಸ್‌ನಿಂದ ಅಗತ್ಯ ವಸ್ತುಗಳನ್ನು ಪಡೆಯಲು ಅವಕಾಶವಿದೆ. ಕಾರಗೃಹ ಕಾಯ್ದೆಯಲ್ಲಿ ಅದಕ್ಕೆ ಅವಕಾಶ ಇದೆ. ವಿಚಾರಣಾಧಿನ ಕೈದಿ, ಶಿಕ್ಷೆಗೆ ಗುರಿಯಾಗದ ಕೈದಿಗೂ ಮನೆಯ ಊಟ, ಹಾಸಿಗೆ ನೀಡಲು ಜೈಲು ಮ್ಯಾನ್ಯುಯಲ್‌ನಲ್ಲಿ ಅವಕಾಶ ಇದೆ ಎಂದು ಹೇಳಿದರು.

ಊಟವನ್ನು ಸ್ನೇಹಿತರು, ಕುಟುಂಬಸ್ಥರ ಬಳಿ ಪಡೆಯಲು ಜೈಲ್ ಎಸ್ಪಿ, ಐಜಿಪಿ ಚೆಕ್ ಮಾಡಬೇಕು ಅಂತ ನಿಯಮ ಇದೆ. ಅದಲ್ಲದೇ ಆ ಆಹಾರದಿಂದ ತೊಂದರೆಯಾದರೆ ಅದಕ್ಕೆ ಅವರೇ ಕಾರಣ ಇರುತ್ತಾರೆ ಎಂದು ಬಾಂಬೆ ಹೈಕೋರ್ಟ್‌ನ ಅಸ್ಕರ್ ಯೂಸಫ್ ಪ್ರಕರಣದ ಆದೇಶವನ್ನು ಉಲ್ಲೇಖಿಸಿದರು. ನಿಗದಿತ ಸಮಯದಲ್ಲಿ ಕೈದಿ, ತನ್ನ ಖರ್ಚಿನಲ್ಲಿ ಊಟ ಹೊರಗಿನಿಂದ ಪಡೆಯಬಹುದು ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ಜಡ್ಜ್‌ ಎಸ್.ಆರ್. ಕೃಷ್ಣಕುಮಾರ್, ನೀವು ಆಹಾರ, ಹಾಸಿಗೆ ಮೂಲಭೂತ ಹಕ್ಕು ಎನ್ನುತ್ತಿದ್ದೀರಿ. ಆದರೆ ನಾನು ಈಗ ಮಧ್ಯಂತರ ಆದೇಶ ಮಾಡಲು ಸಾಧ್ಯವಿಲ್ಲ. ಸಂಪೂರ್ಣ ಪ್ರಕರಣದ ವಿಚಾರಣೆ ಮಾಡಬೇಕು. ವಿಚಾರಣಾಧೀನ ಕೈದಿ ಇದ್ದಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಧಿಕಾರ ಇದೆ. ಅಲ್ಲಿ ಮೊದಲು ಅರ್ಜಿ ಸಲ್ಲಿಸಿ ಅವಕಾಶ ಕೋರಬೇಕು. ಅಲ್ಲಿ ನಿರಾಕರಣೆಯಾದರೆ, ಮುಂದೆ ನೋಡೋಣ ಎಂದು ಹೇಳಿ, ಮುಂದಿನ ವಿಚಾರಣೆ 29ಕ್ಕೆ ಮುಂದೂಡಿದರು.

ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಮನವಿ ಮಾಡಿದ್ದರು. ಜೈಲಿನ ಆಹಾರ ದರ್ಶನ್‌ಗೆ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಹೇಳಿದ್ದರು. ಅತಿಸಾರದಿಂದಾಗಿ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ದರ್ಶನ್ ಜಾಮೀನಿಗಾಗಿ ವಕೀಲರು ಬೇಕಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇನ್ನು ಕೆಲವಷ್ಟು ದಿನ ದರ್ಶನ್ ಜೈಲಿನಲ್ಲೆ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

Continue Reading

ಸಿನಿಮಾ

Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

Kannada New Movie: ಇತ್ತೀಚೆಗೆ ಬಿಡುಗಡೆಯಾದ ‘ಮೂರನೇ ಕೃಷ್ಣಪ್ಪ’ ಸಿನಿಮಾ ಬಗ್ಗೆಯೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲಿಲ್ಲ. ಇದೀಗ ಯಾವುದೇ ಸುಳಿವು ನೀಡದೇ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ‘ಮೂರನೇ ಕೃಷ್ಣಪ್ಪ’ ಸಿನಿಮಾ ಸ್ಟ್ರೀಮಿಂಗ್ ಮಾಡಲಾಗುತ್ತಿದೆ.

VISTARANEWS.COM


on

Kannada New Movie Moorane Krishnappa in OTT
Koo

ಬೆಂಗಳೂರು: ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ (Kannada New Movie) ಅಭಿನಯ, ಹಳ್ಳಿ ಸೊಗಡಿನ ‘ಮೂರನೇ ಕೃಷ್ಣಪ್ಪ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ಬ್ಲಿಂಕ್’, ‘ಶಾಖಾಹಾರಿ’, ‘ಜೂನಿ’, O2, ‘ಧರಣಿ ಮಂಡಲ ಮಧ್ಯದೊಳಗೆ’ ಹಾಗೂ ‘ಕರಟಕ ದಮನಕ’ ಹೀಗೆ ಹಲವು ಸಿನಿಮಾಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಹೆಚ್ಚಿನ ಮನ್ನಣೆ ಗಳಿಸಿವೆ. ಇತ್ತೀಚೆಗೆ ಬಿಡುಗಡೆಯಾದ ‘ಮೂರನೇ ಕೃಷ್ಣಪ್ಪ’ ಸಿನಿಮಾ ಬಗ್ಗೆಯೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಲಿಲ್ಲ. ಇದೀಗ ಯಾವುದೇ ಸುಳಿವು ನೀಡದೇ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ‘ಮೂರನೇ ಕೃಷ್ಣಪ್ಪ’ ಸಿನಿಮಾ ಸ್ಟ್ರೀಮಿಂಗ್ ಮಾಡಲಾಗುತ್ತಿದೆ.

`ಶಾಖಾಹಾರಿ’ ಚಿತ್ರದ ಗಂಭೀರ ಪಾತ್ರದಲ್ಲಿ ರಂಜಿಸಿದ್ದ ರಂಗಾಯಣ ರಘು ಈ ಚಿತ್ರದಲ್ಲಿ ಎಂದಿನ ತಮ್ಮ ಕಾಮಿಡಿಯಿಂದ ಮೋಡಿ ಮಾಡುತ್ತಾರೆ.

ಇದನ್ನೂ ಓದಿ: Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

ಮೂರನೇ ಕೃಷ್ಣಪ್ಪ’ ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.

ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ನೀಡಿದ್ದು, ಶ್ರೀಕಾಂತ್ ಎಡಿಟಿಂಗ್ ಮಾಡಿದ್ದರೆ, ಯೋಗಿ ಕ್ಯಾಮೆರಾ ಹ್ಯಾಂಡಲ್ ಮಾಡಿದ್ದಾರೆ.

Continue Reading

ಬಾಲಿವುಡ್

Vicky Kaushal: ವಿಕ್ಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಸ್’ ಚಿತ್ರಕ್ಕೆ ಕಳಪೆ ಕಲೆಕ್ಷನ್ ; ಮೊದಲ ದಿನದ ಗಳಿಕೆ ಎಷ್ಟು?

Vicky Kaushal: ʻತೌಬಾ ತೌಬಾʼ ಹಾಡು ಹಿಟ್ ಆಗುತ್ತಿದ್ದಂತೆ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇದ್ದಿತ್ತು. ಆದರೆ ಚಿತ್ರಕ್ಕೆ ಮಾತ್ರ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನ ಈ ಚಿತ್ರ ಕಳಪೆ ಕಲೆಕ್ಷನ್ ಮಾಡಿದೆ. ಚಿತ್ರದ ‘ತೌಬಾ ತೌಬಾ’ ಹಾಡು ತುಂಬಾ ಜನಪ್ರಿಯವಾಗಿರುವುದಕ್ಕೆ ಈ ಓಪನಿಂಗ್ ಇಷ್ಟಾದರು ಆಗಿದೆ ಎನ್ನಲಾಗಿದೆ.
‘ಬ್ಯಾಡ್ ನ್ಯೂಜ್’ ಸಿನಿಮಾಗೆ ಮುಂದಿನ ವಾರದವರೆಗೆ ಯಾವುದೇ ಸಿನಿಮಾಗಳ ಸ್ಪರ್ಧೆಯಿಲ್ಲ.

VISTARANEWS.COM


on

Vicky Kaushal box office collection Movie Collects Only 8 Crore
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ಮತ್ತು ತೃಪ್ತಿ ಡಿಮ್ರಿ (Triptii Dimri) ಅಭಿನಯದ ‘ಬ್ಯಾಡ್ ನ್ಯೂಸ್’ (Bad Newz Movie) ಸಿನಿಮಾ ಜುಲೈ 19ರಂದು ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ʻತೌಬಾ ತೌಬಾʼ ಹಾಡು ಹಿಟ್ ಆಗುತ್ತಿದ್ದಂತೆ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಭಾರಿ ನಿರೀಕ್ಷೆ ಇದ್ದಿತ್ತು. ಆದರೆ ಚಿತ್ರಕ್ಕೆ ಮಾತ್ರ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನ ಈ ಚಿತ್ರ ಕಳಪೆ ಕಲೆಕ್ಷನ್ ಮಾಡಿದೆ. ಚಿತ್ರ ಮೊದಲ ದಿನ ಕೇವಲ 8.50 ಕೋಟಿ ರೂಪಾಯಿ ಅಷ್ಟೇ ಗಳಿಕೆ ಮಾಡಲು ಸಾಧ್ಯವಾಗಿದೆ.

ಈ ಸಿನಿಮಾ ರಿಲೀಸ್‌ಗೂ ಮುಂಚೆ ವಿಕ್ಕಿ ಕೌಶಲ್ ಅಭಿನಯದ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ 8.20 ಕೋಟಿ ಗಳಿಸಿತ್ತು ಮತ್ತು ‘ಬ್ಯಾಡ್ ನ್ಯೂಜ್’ ಅದಕ್ಕಿಂತ ಸ್ವಲ್ಪ ಹೆಚ್ಚು ಗಳಿಕೆ ಕಂಡಿದೆ. ವಾರಾಂತ್ಯದಲ್ಲಿ ಒಳ್ಳೆಯ ಕಲೆಕ್ಷನ್‌ ಮಾಡಬಹುದು ಎಂದು ವರದಿಯಾಗಿದೆ. ‘ಬ್ಯಾಡ್ ನ್ಯೂಜ್’ ಈಗ ವರ್ಷದ ಐದನೇ ಅತಿ ಹೆಚ್ಚು ಆರಂಭಿಕ ಚಿತ್ರವಾಗಿದೆ.

ಚಿತ್ರದ ‘ತೌಬಾ ತೌಬಾ’ ಹಾಡು ತುಂಬಾ ಜನಪ್ರಿಯವಾಗಿರುವುದಕ್ಕೆ ಈ ಓಪನಿಂಗ್ ಇಷ್ಟಾದರು ಆಗಿದೆ ಎನ್ನಲಾಗಿದೆ.
‘ಬ್ಯಾಡ್ ನ್ಯೂಜ್’ ಸಿನಿಮಾಗೆ ಮುಂದಿನ ವಾರದವರೆಗೆ ಯಾವುದೇ ಸಿನಿಮಾಗಳ ಸ್ಪರ್ಧೆಯಿಲ್ಲ. ಈ ಮೊದಲು ರಿಲೀಸ್ ಆಗಿದ್ದ ‘ಗುಡ್ ನ್ಯೂಸ್’ ಸಿನಿಮಾದ ರೀತಿಯ ಕಥೆಯ ಎಳೆಯನ್ನೇ ಇಟ್ಟುಕೊಂಡು ‘ಬ್ಯಾಡ್ ನ್ಯೂಸ್’ ಮಾಡಲಾಗಿದೆ. ಅವಳಿ ಮಕ್ಕಳಿಗೆ ಇಬ್ಬರು ತಂದೆಯರು ಎಂಬರ್ಥದಲ್ಲಿ ಸಿನಿಮಾ ಮೂಡಿ ಬಂದಿದೆ. ಇನ್ನು, ಟಿಕೆಟ್ ಬುಕಿಂಗ್ ಆ್ಯಪ್ ‘ಬುಕ್ ಮೈ ಶೋ’ನಲ್ಲಿ ಚಿತ್ರಕ್ಕೆ ಕೇವಲ 6.1 ರೇಟಿಂಗ್ ಸಿಕ್ಕಿದೆ.

ಇದನ್ನೂ ಓದಿ: Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಲಿಪ್-ಲಾಕ್‌ ದೃಶ್ಯಗಳಿಗೆ ಕತ್ತರಿ ಹಾಕಿದೆ ಎಂದು ವರದಿಯಾಗಿತ್ತು. ದೃಶ್ಯಗಳಲ್ಲಿ ಒಂದು 9 ಸೆಕೆಂಡುಗಳ ಕಾಲ ಕಿಸ್ಸಿಂಗ್‌ ಸೀನ್‌ ಇದ್ದರೆ, ಇನ್ನೆರಡು ದೃಶ್ಯಗಳಲ್ಲಿ 10 ಸೆಕೆಂಡುಗಳು ಮತ್ತು 8 ಸೆಕೆಂಡುಗಳು ಕಾಲ ಚುಂಬನದ ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ ಎಂದು ವರದಿಯಾಗಿತ್ತು. ವಿಕ್ಕಿ ಕೌಶಲ್ ಮತ್ತು ತೃಪ್ತಿ ಡಿಮ್ರಿ ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಿದ್ದಾರೆ. ʻತೌಬಾ ತೌಬಾʼ ಹಾಡು ಹಿಟ್ ಆಗುತ್ತಿದ್ದಂತೆ ಚಿತ್ರತಂಡ ಮತ್ತೊಂದು ಸಾಂಗ್ ರಿಲೀಸ್ ಮಾಡಿತ್ತು. ನೀರಿನಲ್ಲಿ ತೃಪ್ತಿ ಡಿಮ್ರಿ ರೊಮ್ಯಾನ್ಸ್ ನೋಡಿ ಪಡ್ಡೆ ಹುಡುಗರು ಫಿದಾ ಆಗಿದ್ದರು.

ಬ್ಯಾಡ್ ನ್ಯೂಸ್’ ಸಿನಿಮಾವನ್ನು ಆನಂದ್ ತಿವಾರಿ ನಿರ್ದೇಶನ ಮಾಡಿದ್ದಾರೆ. ಇದು ರೊಮ್ಯಾಂಟಿಕ್ ಮತ್ತು ಹಾಸ್ಯ ಪ್ರಧಾನ ಚಿತ್ರವಾಗಿದೆ. ಯಶ್ ಜೋಹರ್, ಕರಣ್ ಜೋಹರ್, ಅಪೂರ್ವ ಮೆಹ್ತಾ, ಅಮೃತಪಾಲ್ ಸಿಂಗ್ ಬಿಂದ್ರಾ ಮತ್ತು ಆನಂದ್ ತಿವಾರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.. ಧರ್ಮ ಪ್ರೊಡಕ್ಷನ್ಸ್ ಮತ್ತು ಲಿಯೊ ಮೀಡಿಯಾ ಕಲೆಕ್ಟಿವ್ ಸಹಯೋಗದಲ್ಲಿ ಅಮೆಜಾನ್ ಪ್ರೈಮ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ. ಆನಂದ್ ತಿವಾರಿ ನಿರ್ದೇಶನದ ಬ್ಯಾಡ್ ನ್ಯೂಜ್ ನಲ್ಲಿ ನೇಹಾ ಧೂಪಿಯಾ ಕೂಡ ಕಾಣಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Actor Darshan: ವಿಚಾರಣಾಧೀನ ಕೈದಿಗಳಿಗೆ ಮನೆಯ ಊಟ ನೀಡುವ ಅವಕಾಶವಿದೆ. ಇದಕ್ಕೆ ಕೋರ್ಟ್‌ ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲ ಕೋರಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ಗೆ ಮತ್ತೆ ಜೈಲೂಟವೇ ಗತಿಯಾಗಿದೆ. ಯಾಕೆಂದರೆ, ಮನೆ ಊಟಕ್ಕೆ ಅವಕಾಶ ಕೋರಿ ದರ್ಶನ್ ಸಲ್ಲಿಸಿದ್ದ ರಿಟ್ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಮನೆ ಊಟಕ್ಕೆ ಅವಕಾಶ ಕಲ್ಪಿಸಲು ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು ಎಂದು ದರ್ಶನ್‌ (Actor Darshan) ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲ ಫಣೀಂದ್ರ ವಾದ ಮಂಡಿಸಿ, ವಿಚಾರಣಾಧೀನ ಕೈದಿಗಳಿಗೆ ಖಾಸಗಿ ಸೋರ್ಸ್‌ನಿಂದ ಅಗತ್ಯ ವಸ್ತುಗಳನ್ನು ಪಡೆಯಲು ಅವಕಾಶವಿದೆ. ಕಾರಗೃಹ ಕಾಯ್ದೆಯಲ್ಲಿ ಅದಕ್ಕೆ ಅವಕಾಶ ಇದೆ. ವಿಚಾರಣಾಧಿನ ಕೈದಿ, ಶಿಕ್ಷೆಗೆ ಗುರಿಯಾಗದ ಕೈದಿಗೂ ಮನೆಯ ಊಟ, ಹಾಸಿಗೆ ನೀಡಲು ಜೈಲು ಮ್ಯಾನ್ಯುಯಲ್‌ನಲ್ಲಿ ಅವಕಾಶ ಇದೆ ಎಂದು ಹೇಳಿದರು.

ಊಟವನ್ನು ಸ್ನೇಹಿತರು, ಕುಟುಂಬಸ್ಥರ ಬಳಿ ಪಡೆಯಲು ಜೈಲ್ ಎಸ್ಪಿ, ಐಜಿಪಿ ಚೆಕ್ ಮಾಡಬೇಕು ಅಂತ ನಿಯಮ ಇದೆ. ಅದಲ್ಲದೇ ಆ ಆಹಾರದಿಂದ ತೊಂದರೆಯಾದರೆ ಅದಕ್ಕೆ ಅವರೇ ಕಾರಣ ಇರುತ್ತಾರೆ ಎಂದು ಬಾಂಬೆ ಹೈಕೋರ್ಟ್‌ನ ಅಸ್ಕರ್ ಯೂಸಫ್ ಪ್ರಕರಣದ ಆದೇಶವನ್ನು ಉಲ್ಲೇಖಿಸಿದರು. ನಿಗದಿತ ಸಮಯದಲ್ಲಿ ಕೈದಿ, ತನ್ನ ಖರ್ಚಿನಲ್ಲಿ ಊಟ ಹೊರಗಿನಿಂದ ಪಡೆಯಬಹುದು ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ಜಡ್ಜ್‌ ಎಸ್.ಆರ್. ಕೃಷ್ಣಕುಮಾರ್, ನೀವು ಆಹಾರ, ಹಾಸಿಗೆ ಮೂಲಭೂತ ಹಕ್ಕು ಎನ್ನುತ್ತಿದ್ದೀರಿ. ಆದರೆ ನಾನು ಈಗ ಮಧ್ಯಂತರ ಆದೇಶ ಮಾಡಲು ಸಾಧ್ಯವಿಲ್ಲ. ಸಂಪೂರ್ಣ ಪ್ರಕರಣದ ವಿಚಾರಣೆ ಮಾಡಬೇಕು. ವಿಚಾರಣಾಧೀನ ಕೈದಿ ಇದ್ದಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಧಿಕಾರ ಇದೆ. ಅಲ್ಲಿ ಮೊದಲು ಅರ್ಜಿ ಸಲ್ಲಿಸಿ ಅವಕಾಶ ಕೋರಬೇಕು. ಅಲ್ಲಿ ನಿರಾಕರಣೆಯಾದರೆ, ಮುಂದೆ ನೋಡೋಣ ಎಂದು ಹೇಳಿ, ಮುಂದಿನ ವಿಚಾರಣೆ 29ಕ್ಕೆ ಮುಂದೂಡಿದರು.

ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಹೀಗಾಗಿ ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ದರ್ಶನ್‌ ಮನವಿ ಮಾಡಿದ್ದರು. ಜೈಲಿನ ಆಹಾರ ದರ್ಶನ್‌ಗೆ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಹೇಳಿದ್ದರು. ಅತಿಸಾರದಿಂದಾಗಿ ದರ್ಶನ್ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದಾರೆ. ದರ್ಶನ್ ಜಾಮೀನಿಗಾಗಿ ವಕೀಲರು ಬೇಕಾದ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಇನ್ನು ಕೆಲವಷ್ಟು ದಿನ ದರ್ಶನ್ ಜೈಲಿನಲ್ಲೆ ಇರಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ದರ್ಶನ್‌ & ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಗುರುವಾರ ಆದೇಶ ನೀಡಿದ್ದರು.

Continue Reading
Advertisement
Kiran Kumar
ಕರ್ನಾಟಕ9 mins ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Assembly monsoon session UT Khader karnataka assembly live
ಪ್ರಮುಖ ಸುದ್ದಿ14 mins ago

Assembly Monsoon Session: ಮುಂಗಾರು ಅಧಿವೇಶನಕ್ಕೆ ಮುನ್ನವೇ 2 ಕೋಟಿ ಖರ್ಚು ಮಾಡಿ ವಿಧಾನಸೌಧ ಸಿಂಗಾರ!

Virat Kohli
ಕ್ರೀಡೆ19 mins ago

Virat Kohli: ಲಂಕಾ ಸರಣಿಯಲ್ಲಿ ರನ್​ ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ

Actor Darshan 4th accused mother dies
ಸ್ಯಾಂಡಲ್ ವುಡ್30 mins ago

Actor Darshan: ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ತಾಯಿ ನಿಧನ

Microsoft Global Outage
ದೇಶ30 mins ago

Microsoft Global Outage: ಮೈಕ್ರೊಸಾಫ್ಟ್ ಟ್ರಬಲ್; ಯಾರ ಮೇಲೆ ಏನು ಪರಿಣಾಮ? ಮುಂದೇನು?

Mohammed Shami
ಕ್ರೀಡೆ48 mins ago

Mohammed Shami: ಕೊಹ್ಲಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಮಿ; ವಿಡಿಯೊ ವೈರಲ್​

Kannada New Movie Moorane Krishnappa in OTT
ಸಿನಿಮಾ48 mins ago

Kannada New Movie: ಸದ್ದಿಲ್ಲದೇ ಒಟಿಟಿಗೆ ಲಗ್ಗೆ ಇಟ್ಟ ರಂಗಾಯಣ ರಘು ಅಭಿನಯದ ‘ಮೂರನೇ ಕೃಷ್ಣಪ್ಪ’ ಸಿನಿಮಾ!

odscene act driver
ಕ್ರೈಂ59 mins ago

Obscene Act: ಡ್ರೈವಿಂಗ್‌ ಹೇಳಿಕೊಡುವ ನೆಪದಲ್ಲಿ ಖಾಸಗಿ ಅಂಗ ತೋರಿಸಿದ ಟ್ರೇನರ್‌, ಯುವತಿಯ ದೂರು

Vicky Kaushal box office collection Movie Collects Only 8 Crore
ಬಾಲಿವುಡ್1 hour ago

Vicky Kaushal: ವಿಕ್ಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಸ್’ ಚಿತ್ರಕ್ಕೆ ಕಳಪೆ ಕಲೆಕ್ಷನ್ ; ಮೊದಲ ದಿನದ ಗಳಿಕೆ ಎಷ್ಟು?

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ22 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ6 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌