ಬೆಂಗಳೂರು: ‘ನಾನು ಕೋ ಕೋ ಕೋಳಿಕ್ಕೆ ರಂಗ…’ ಈ ಹಾಡನ್ನು ಕೇಳದವರೇ ಇಲ್ಲ. ಈ ಹಾಡು ಇಂದಿಗೂ ಎವರ್ ಗ್ರೀನ್. ಇಷ್ಟಕ್ಕೂ ಈ ಹಾಡಿನ ಬಗ್ಗೆ ಹೇಳೋಕೆ ಕಾರಣ ‘ನಾ ಕೋಳಿಕ್ಕೆ ರಂಗ’ ಸಿನಿಮಾ. ಹೌದು, ಮಾಸ್ಟರ್ ಆನಂದ್ ಈ ಸಿನಿಮಾದ ಹೀರೊ. ಇದೊಂದು ಹಳ್ಳಿ ಕಥೆ. ಸಿನಿಮಾದ ಶೀರ್ಷಿಕೆ ಹೇಳುವಂತೆ, ಕೋಳಿ ಹಾಗೂ ರಂಗನ ಕಥೆ. ಇದೀಗ ಈ ಚಿತ್ರ ಈಗ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 10ರಂದು ರಿಲೀಸ್ ಆಗುತ್ತಿದೆ.
ಮಾಸ್ಟರ್ ಆನಂದ್ ಸಿನಿಮಾ ಬಗ್ಗೆ ಮಾತನಾಡಿ, ‘ಕೊರೊನಾ ಮೊದಲು ಈ ಚಿತ್ರ ಶುರುವಾಗಿತ್ತು. ಆ ನಂತರ ಸಮಸ್ಯೆ ಎದುರಾಯ್ತು. ಈಗ ಸಿನಿಮಾ ಪ್ರೇಕ್ಷಕರ ಎದುರು ಬರಲು ರೆಡಿಯಾಗಿದೆ. ಚಿತ್ರದಲ್ಲೊಂದು ಹಾಡಿದೆ. ‘ʻಮರೆಯೋದುಂಟೆ ಮೈಸೂರ ದೊರೆಯ’ ಈ ಹಾಡು ಹೈಲೆಟ್. ಮೈಸೂರು ದಸರಾ ಮತ್ತು ಮಹಾರಾಜರ ಬಗ್ಗೆ ವಿಷಯವಿದೆ. ಹಾಗಾಗಿ ದಸರಾ ವೇಳೆ ರಿಲೀಸ್ ಮಾಡುವ ಉದ್ದೇಶ ಇತ್ತು. ನವೆಂಬರ್ 10ರಂದು ಬಿಡುಗಡೆ ಆಗಲಿದೆʼʼ ಎಂದರು.
ಇಲ್ಲಿ ಕೋಳಿ ರಂಗ ಮತ್ತು ಅಮ್ಮನ ಕಥೆ ಇದೆ. ಮಂಡ್ಯ ಭಾಗದಲ್ಲೇ ಶೇ. 90ರಷ್ಟು ಚಿತ್ರೀಕರಣ ಆಗಿದೆ ಎಂದು ಚಿತ್ರತ,ಡ ಮಾಹಿತಿ ಹಂಚಿಕೊಂಡಿದೆ. ಅಲ್ಲಿನ ಸಂತೆ ಕಸಲಗೆರೆ ಎಂಬ ಊರಲ್ಲಿ ಶೂಟಿಂಗ್ ಆಗಿದ್ದು ವಿಶೇಷ. ಮಂಡ್ಯ ಮೈಸೂರು ಸೊಗಡಿನ ಭಾಷೆ ಇದೆ ಎಂತಲೂ ಹೇಳಿಕೊಂಡಿದೆ. ಸಿನಿಮಾದಲ್ಲಿ ಭವ್ಯಾ ಅವರು ತಾಯಿಯ ಪಾತ್ರ ನಿಭಾಯಿಸಿದ್ದಾರೆ. ಟ್ರಯಂಗಲ್ ಸ್ಟೋರಿ ಇದ್ದು, ಬರೀ ಲವ್ ಸ್ಟೋರಿ ಮಾತ್ರ ಅಲ್ಲ, ಕೋಳಿ ರಂಗ ಮತ್ತು ಅಮ್ಮನ ವಾತ್ಸಲ್ಯದ ಕಥೆ ಇದೆ. ಕೋಳಿ ಮತ್ತು ಅಮ್ಮನ ಮೇಲೆ ರಂಗನಿಗೆ ಪ್ರೀತಿ. ಘಟನೆ ಒಂದರಲ್ಲಿ ರಂಗನಿಗೆ ಈ ಎರಡರಲ್ಲಿ ಯಾವುದು ಮುಖ್ಯ ಎನ್ನುವುದೇ ಕಥೆಯ ಒನ್‌ಲೈನ್.
ಇದನ್ನೂ ಓದಿ: Weekend Reality Show: ವೀಕೆಂಡ್‌ನಲ್ಲಿ ಮನರಂಜನೆ ನೀಡಲು ಬರ್ತಿದೆ ಸಿನಿಮಾ, ರಿಯಾಲಿಟಿ ಶೋಗಳು!
ರಾಜೇಶ್ವರಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಕಾಮಿಡಿ ಕಿಲಾಡಿ ತಂಡ ಕೂಡ ನಟಿಸಿದೆ. ಸೋಮಶೇಖರ್ ನಿರ್ಮಾಣ, ರಾಜು ಎಮ್ಮಿಗನೂರು ಸಂಗೀತ ಇದೆ. ನಿರ್ದೇಶಕ ಗೊರವಾಲೆ ಮಹೇಶ್ ಮಾತನಾಡಿ, ʻʻಇದು ನನ್ನ ಮೊದಲ ಚಿತ್ರ. ಮೌಢ್ಯಗಳ ಕುರಿತು ಕಥೆ ಸಾಗಲಿದೆ. ಹರಕೆಗೆ ಬಲಿ ಬಗ್ಗೆಯ ಹಳ್ಳಿ ಕಥೆ ಇದೆ. ಒಂದೊಳ್ಳೆಯ ವಿಷಯ ಈ ಮೂಲಕ ಹೇಳ ಹೊರಟಿದ್ದೇನೆ. ಮಾಸ್ಟರ್ ಆನಂದ್ ಅದ್ಭುತವಾಗಿ ನಟಿಸಿದ್ದಾರೆ. ಭವ್ಯಾ ಮೇಡಮ್ ತಾಯಿ ಪಾತ್ರದ ಮೂಲಕ ಭಾವುಕತೆ ಹೆಚ್ಚಿಸುತ್ತಾರೆ. ಇಡೀ ಚಿತ್ರ ನಗಿಸುತ್ತಲೇ ಭಾವುಕತೆಗೆ ದೂಡುತ್ತದೆʼʼ ಎಂದರು.
ಹಿರಿಯ ಕಲಾವಿದೆ ಭವ್ಯಾ ಮಾತನಾಡಿ, ʻʻಒಂದು ಭಾವನಾತ್ಮಕ ವಿಷಯದ ಸುತ್ತ ಕಥೆ ಸಾಗಲಿದೆ. ಹಳ್ಳಿ ಜನರ ಭಾವನೆಗಳು, ತುಡಿತ ಹೇಗೆಲ್ಲಾ ಇರುತ್ತೆ ಎಂಬುದು ಇಲ್ಲಿ ಹೈಲೆಟ್. ಕೋಳಿ ಮತ್ತು ಮಗನ ಸುತ್ತ ನಡೆಯುವ ಕಥೆ ಎಲ್ಲರಿಗೂ ಇಷ್ಟ ಆಗುತ್ತೆʼʼ ಎಂದರು. ಚಿತ್ರಕ್ಕೆ ಧನಪಾಲ್ ಮತ್ತು ಬೆಟ್ಟೇಗೌಡ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಶೋಭರಾಜ್, ಹೊನ್ನವಳ್ಳಿ ಕೃಷ್ಣ, ಪುಂಗ, ಶಕೀಲಾ,ಇತರರು ನಟಿಸಿದ್ದಾರೆ.