Site icon Vistara News

The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

Nandi Film Award Rishabh Shetty

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ʼನಂದಿʼ ಚಲನಚಿತ್ರ ಪ್ರಶಸ್ತಿ ಪ್ರಾರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಬುಧವಾರ ನಡೆದಿದೆ. ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಪ್ರಶಸ್ತಿ ನೀಡಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನು ಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂತಹ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್‌ಮೆಂಟ್‌ ಅವಾರ್ಡ್ ನೀಡಲಾಯ್ತು.

ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ ಬೇರೆ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ ‘ನಂದಿ’ ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

ಇದನ್ನೂ ಓದಿ: Nandi Award: ಕನ್ನಡಕ್ಕೂ ಬಂತು ತೆಲುಗಿನ ‘ನಂದಿ ಫಿಲ್ಮಂ ಅವಾರ್ಡ್‌’; ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿ ಸಂಸ್ಥಾಪರಾಗಿದ್ದಾರೆ.

ಪ್ರಶಸ್ತಿ ಪಡೆದವರ ಪಟ್ಟಿ

Exit mobile version