ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿ.21) ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರ್ಯಾಂಡ್ ರಾಯಭಾರಿ ಶಿವರಾಜ್ ಕುಮಾರ್ (Shiva Rajkumar) ಅವರು ಜಾಹೀರಾತನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಿದರು. ಸಮಾರಂಭದಲ್ಲಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಈ ವೇಳೆ ಕೆಸಿಸಿ ಸೀಸನ್ 4 ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಿವಣ್ಣ ತಂಡ ಆಹ್ವಾನಿಸಿದೆ. ಚಿತ್ರರಂಗದ ಗಣ್ಯರ ಕ್ರಿಕೆಟ್ ಪಂದ್ಯಾಟ ಸರಣಿ ಕೆಸಿಸಿ ಕಪ್ ಸೀಸನ್ 4ರ (KCC 4- Kannada Chalanachitra Cup) ಪಂದ್ಯಾವಳಿಗಳು ಡಿಸೆಂಬರ್ 23,24, 25 ರಂದು ನಡೆಯಲಿದೆ. ಈ ಬಾರಿಯ ಕೆಸಿಸಿಯಲ್ಲಿ ಕೆಲವು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರೂ ಭಾಗಿಗಳಾಗಲಿದ್ದಾರೆ. ಎಸ್ ಭದ್ರಿನಾಥ್, ಸುರೇಶ್ ರೈನಾ, ದಿಲ್ಶಾನ್, ಮುರಳಿ ವಿಜಯ್, ರಾಬಿನ್ ಉತ್ತಪ್ಪ. ಗಿಫ್ಸ್ ಆಡಲಿದ್ದಾರೆ. ಮೊದಲ ಬಾರಿಗೆ ಹಲವು ಕಿರುತೆರೆ ಕಲಾವಿದರು ಕೆಸಿಸಿಯಲ್ಲಿ ಭಾಗಿಯಾಗಲಿದ್ದಾರೆ. ಮೊದಲ ಬಾರಿಗೆ ಕೆಸಿಸಿಯಲ್ಲಿ ತಮಿಳಿನ ವಿಕ್ರಾಂತ್ ಹಾಗೂ ತೆಲುಗಿನ ಪ್ರಿನ್ಸ್ ಭಾಗಿಯಾಗುತ್ತಿದ್ದಾರೆ.
2009ರಲ್ಲಿ ಪುನೀತ್ ರಾಜಕುಮಾರ್ ಅವರು ರಾಯಭಾರಿಯಾಗಿ (Nandini Brand Ambassador) ನೇಮಕವಾಗಿದ್ದರು. ಅವರು ನಿಧನರಾದ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳ ಹೊಸ ರಾಯಭಾರಿಯಾಗಿ ಶಿವರಾಜ್ ಕುಮಾರ್ ಅವರು ಆಯ್ಕೆಯಾಗಿದ್ದರು. ಡಾ.ರಾಜ್ ಕುಟುಂಬ ಹಾಗೂ ಕೆಎಂಎಫ್ಗೆ ಹತ್ತಿರದ ನಂಟಿದೆ. 1996ರಲ್ಲಿ ಡಾ.ರಾಜ್ ಕುಮಾರ್ ಅವರು ನಂದಿನಿ ಉತ್ಪನ್ನಗಳಿಗೆ ಉಚಿತವಾಗಿಯೇ ರಾಯಭಾರಿಯಾಗಲು ಒಪ್ಪಿಕೊಂಡಿದ್ದರು. ಅದು ಅವರ ಮೊದಲ ಜಾಹೀರಾತು ಆಗಿತ್ತು. ಅವರ ನಂತರ 2009ರಲ್ಲಿ ಪುನೀತ್ ರಾಜಕುಮಾರ್ ಆಯ್ಕೆಯಾಗಿದ್ದರು.
ಇದನ್ನೂ ಓದಿ: Shiva Rajkumar: ಗ್ರೌಂಡ್ಗೆ ಇಳಿದ ಶಿವಣ್ಣ; ಕೆಸಿಸಿ ಕಪ್ಗೆ ತಯಾರಿ ಶುರು
ಮುಖ್ಯಮಂತ್ರಿ @siddaramaiah ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರು ಜಾಹಿರಾತು ಬಿಡುಗಡೆಗೊಳಿಸಿದರು.
— CM of Karnataka (@CMofKarnataka) December 21, 2023
ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ,… pic.twitter.com/b2rajdevf0
ಈ ಹಿಂದೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಟ್ವೀಟ್ ಮಾಡಿ, “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಲು ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿ, ಸ್ಯಾಂಡಲ್ವುಡ್ ನಟ, ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರಿಗೆ ಕೆ.ಎಂ.ಎಫ್, ಸಮಸ್ತ ಕರ್ನಾಟಕ ರೈತರು ಹಾಗೂ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿ ಶುಭ ಕೊರಲಾಯಿತು ಎಂದು ತಿಳಿಸಿದ್ದರು.