ಬೆಂಗಳೂರು : ಕೆಜಿಎಫ್ ಸರಣಿ ಸಿನಿಮಾದಲ್ಲಿ ಬರುವ ದೃಷ್ಟಿಹೀನ ಮುದುಕನ ಪಾತ್ರ ಯಾರಿಗೆ ಗೊತ್ತಿಲ್ಲ ಹೇಳಿ? ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೈಟ್ ಆಗಿದೆ. ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿಲಿದ್ದಾರೆ.
ಇದನ್ನೂ ಓದಿ | ರಶ್ಮಿಕಾ ಹಾದಿಯಲ್ಲಿ ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ; ಸಂಭಾವನೆ ಮೊತ್ತದಲ್ಲಿ ಭರ್ಜರಿ ಏರಿಕೆ !
ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದ್ದ ನಿರ್ದೇಶಕ ಕುಮಾರ್ ʼಕ್ರಿಟಿಕಲ್ ಕೀರ್ತನೆಗಳುʼ ಸಿನಿಮಾದಲ್ಲಿ ಬೆಟ್ಟಿಂಗ್ ದಂಧೆಯ ಕರಾಳತೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದರು. ಇದೀಗ ನ್ಯಾನೋ ನಾರಾಯಣಪ್ಪ ಸಿನಿಮಾದ ಮೂಲಕ ಮತ್ತೊಮ್ಮೆ ಚಿತ್ರಪ್ರೇಮಿಗಳನ್ನು ಎಂಟರ್ ಟೈನ್ ಮಾಡಲು ಸಜ್ಜಾಗಿದ್ದಾರೆ.
ಈ ಚಿತ್ರಕ್ಕೆ ಕುಮಾರ್ ಕಥೆ ಬರೆದು ನಿರ್ದೇಶನ ಮಾಡುವುದರ ಜತೆ ಬಂಡವಾಳ ಕೂಡ ಹಾಕಿದ್ದಾರೆ. ಇದೊಂದು ಕಾಮಿಡಿ ಎಮೋಷನಲ್ ಡ್ರಾಮಾ ಸಿನಿಮಾ. ತುಂಬಾ ಕಾಡುವ ಕಥೆ, ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಎನ್ನುತ್ತಾರೆ ಕುಮಾರ್.
ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಆಗಸ್ಟ್ನಲ್ಲಿ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ಕುಮಾರ್ ನಿರ್ಮಾಣದ ನ್ಯಾನೋ ನಾರಾಯಣಪ್ಪ ಸಿನಿಮಾಗೆ ರಾಜಶಿವಶಂಕರ ಛಾಯಾಗ್ರಹಣ, ಆಕಾಶ್ ಪರ್ವ ಸಂಗೀತ, ಸಿದ್ದು ಸಂಕಲನವಿದೆ. ಸದ್ಯ ಫಸ್ಟ್ ಲುಕ್ ರಿವೀಲ್ ಮಾಡಿರುವ ಚಿತ್ರತಂಡ ಶೀಘ್ರದಲ್ಲಿ ಟೀಸರ್ ಬಿಡುಗಡೆ ಮಾಡಲಿದೆ.
ಸಲಾರ್ನಲ್ಲಿಯೂ ತಾತನ ಹವಾ
ಕೆಜಿಎಫ್ ನಂತರ ಕೃಷ್ಣ ಜಿ ರಾವ್ ಅವರಿಗೆ ಹಲವಾರು ಅವಕಾಶಗಳು ಒದಗಿ ಬಂದವು. ಇದೀಗ ಈ ಚಿತ್ರದ ಜತೆ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿಯೂ ಅವಕಾಶ ಸಿಕ್ಕಿದೆ. ಕೆಜಿಎಫ್ 2 ಬಿಡುಗಡೆಯ ನಂತರ 15 ಚಿತ್ರದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ | Kaduva Film | ಬೆಂಗಳೂರಿನಲ್ಲಿ ‘ಕಡುವ’ ಪ್ರೀ-ರಿಲೀಸ್ ಇವೆಂಟ್: ಜೂನ್ 30ಕ್ಕೆ ರಿಲೀಸ್