ಬೆಂಗಳೂರು: ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್ ಸ್ಟಾರ್ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್‌ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇದೀಗ ನಟಿ ನಯನತಾರಾ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಮಾಡಿ ʻʻಭಾರವಾದ ಹೃದಯದಿಂದ ನಮ್ಮ ‘ಅನ್ನಪೂರ್ಣಿ’ ಚಿತ್ರಕ್ಕೆ ಸಂಬಂಧಿಸಿದ ಇತ್ತೀಚಿನ ಘಟನೆಗಳ ಬಗ್ಗೆ ಸತ್ಯದ ಆಧಾರದ ಮೇಲೆ ಬರೆಯುತ್ತಿದ್ದೇನೆ. ‘ಅನ್ನಪೂರ್ಣಿ’ ಕೇವಲ ಲಾಭಕ್ಕಾಗಿ ಸಿನಿಮಾ ಮಾಡಿಲ್ಲ. ಒಂದು ಸಂದೇಶ ತಿಳಿಸುವ ಉದ್ದೇಶದಿಂದ ಕೂಡ ಮಾಡಿದೆವು.
ʻʻಒಳ್ಳೆಯ ಸಂದೇಶವನ್ನು ಹಂಚಿಕೊಳ್ಳಲು ನಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ ಗೊತ್ತಿಲ್ಲದೇ ನಾವು ನಿಮ್ಮ ಭಾವನೆಗಳನ್ನು ನೋಯಿಸಿದ್ದೇವೆ. ಸೆನ್ಸಾರ್ ಆದ ನಮ್ಮ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಯಿತು. ಅದನ್ನು OTTಯಿಂದ ತೆಗೆದು ಹಾಕುತ್ತಾರೆ ಎಂದು ನಾವು ಅಂದುಕೊಂಡಿರಲಿಲ್ಲ. ಯಾರ ಭಾವನೆ ಅಥವಾ ನಂಬಿಕೆಗೆ ಧಕ್ಕೆ ತರುವುದು ನನ್ನ ತಂಡದ ಉದ್ದೇಶ ಆಗಿರಲಿಲ್ಲ. ನಾನು ದೇವರನ್ನು ಸಂಪೂರ್ಣವಾಗಿ ನಂಬುವ ಮತ್ತು ಆಗಾಗ ದೇಶಾದ್ಯಂತ ದೇವಾಲಯಗಳಿಗೆ ಭೇಟಿ ನೀಡುವ ವ್ಯಕ್ತಿ. ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿದ ಎಲ್ಲ ಜನರಲ್ಲಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಕಳೆದ ಎರಡು ದಶಕಗಳಿಂದ ಚಲನಚಿತ್ರೋದ್ಯಮದಲ್ಲಿ ಇರುವ ನಾನು ಪರಸ್ಪರ ಕಲಿಯುವುದು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದ್ದೇನೆ, ನಮನಗಳೊಂದಿಗೆ, ನಯನತಾರಾʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Actress Nayanthara: ‘ಅನ್ನಪೂರ್ಣಿ’ಯಾಗಿ ನಯನತಾರಾ; ಟೀಸರ್‌ನಲ್ಲಿದೆ ಟ್ವಿಸ್ಟ್, ಮನಸೋತ ಪ್ರೇಕ್ಷಕರು!
ನಯನತಾರಾ ಇನ್‌ಸ್ಟಾ ಪೋಸ್ಟ್
ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ಡಿಲೀಟ್ ಆಗಿದ್ದೇಕೆ?
ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಿತ್ತು. ಟೈಟಲ್ ರೋಲ್‌ನಲ್ಲಿ ನಯನತಾರಾ ಕಾಣಿಸಿಕೊಂಡಿರುವ ಈ ಸಿನಿಮಾ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ‘ಹಿಂದೂ ವಿರೋಧಿ’ ಎಂದು ಆರೋಪಿಸಿದ್ದರು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ದೂರಿದ್ದರು. ಶಿವಸೇನೆ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್‌ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು.
ರಮೇಶ್ ಸೋಲಂಕಿ ಹಿಂದೂ ವಿರೋಧಿ ದೃಶ್ಯಗಳು ಯಾವುವು ಎನ್ನುವುದನ್ನು ಪಟ್ಟಿ ಮಾಡಿ ಕೊಟ್ಟಿದ್ದರು. ʼʼ1. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ. 2. ಲವ್ ಜಿಹಾದ್ ಅನ್ನು ಪ್ರಚಾರ ಮಾಡಲಾಗಿದೆ. 3. ಫರ್ಹಾನ್ ಎನ್ನುವ ಪಾತ್ರ ಭಗವಾನ್ ಶ್ರೀರಾಮ ಮಾಂಸ ತಿನ್ನುವವರಾಗಿದ್ದರು ಎಂದು ಹೇಳುವ ದೃಶ್ಯ ಇದೆ. ನೆಟ್‌ಫ್ಲಿಕ್ಸ್ ಇಂಡಿಯಾ ಮತ್ತು ಝೀ ಸ್ಟುಡಿಯೋಸ್ ಉದ್ದೇಶಪೂರ್ವಕವಾಗಿ ಈ ಚಿತ್ರವನ್ನು ನಿರ್ಮಿಸಿದೆ. ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮಯದಲ್ಲೇ ಚಿತ್ರ ಬಿಡುಗಡೆ ಮಾಡಲಾಗಿದೆ” ಎಂದು ಅವರು ಬರೆದಿದ್ದರು.
ಹಿರಿಯ ಕಲಾವಿದರಾದ ಕನ್ನಡಿಗ ಅಚ್ಯುತ್ ಕುಮಾರ್, ಸತ್ಯರಾಜ್, ಕಾರ್ತಿಕ್ ಕುಮಾರ್, ರೇಣುಕಾ, ಪಾರ್ವತಿ ಟಿ. ಮತ್ತಿತರರು ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.