ಬೆಂಗಳೂರು: ಕಾಲಿವುಡ್ ನಟಿ ನಯನತಾರಾ (Nayanthara) ಹಾಗೂ ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ಕಳೆದ ಜೂನ್ 2ರಂದು ಮದುವೆಯಾದ ಈ ಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂದು ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಇದೀಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೂಲಗಳ ಪ್ರಕಾರ ದಂಪತಿ ಕಾನೂನು ಬದ್ಧವಾಗಿ ದಾಖಲೆಗಳನ್ನು ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.
ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮದುವೆಯಾಗಿದ್ದರು
ನಯನತಾರಾ ದಂಪತಿ ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮದುವೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನಾತ್ಮಕ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. 2021ರಲ್ಲಿಯೇ ಬಾಡಿಗೆ ತಾಯ್ತತನದ ಒಪ್ಪಂದಕ್ಕೆ ದಂಪತಿ ಸಹಿ ಹಾಕಿರುವ ದಾಖಲೆಯನ್ನು ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಕಳೆದ ಜೂನ್ ಸಾಂಪ್ರದಾಯಿಕವಾಗಿ ಮದುವೆ ಆಗಿದ್ದು, ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮದುವೆ ಆಗಿದ್ದಾರೆ.
ಬಾಡಿಗೆ ತಾಯ್ತನ (ನಿಯಂತ್ರಣ) ಕಾಯಿದೆ, 2021ರ ಪ್ರಕಾರ, ದಂಪತಿ ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳವರೆಗೆ ಮದುವೆಯಾಗಿದ್ದರೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಲು ಅರ್ಹರಾಗಿರುತ್ತಾರೆ. ಬಾಡಿಗೆ ತಾಯಿಯು ದಂಪತಿಯ ಹತ್ತಿರದ ಸಂಬಂಧಿಯಾಗಿರಬೇಕೆಂದು ಕಾನೂನು ಹೇಳುತ್ತದೆ. ಹಲವಾರು ಮಾಧ್ಯಮ ವರದಿಗಳ ಪ್ರಕಾರ, ಬಾಡಿಗೆ ತಾಯಿ ಯುಎಇ ನಿವಾಸಿಯಾಗಿರುವ ನಯನತಾರಾ ಅವರ ಸಂಬಂಧಿ ಎಂದು ಉಲ್ಲೇಖಿಸಿದೆ.
ಚೆನ್ನೈನ ರೆಸಾರ್ಟ್ವೊಂದರಲ್ಲಿ ನಡೆದ ಅದ್ಧೂರಿ ವಿವಾಹ ಕಾರ್ಯಕ್ಕೆ ಚಿತ್ರರಂಗದ ಮೇರು ಗಣ್ಯರು ಭಾಗಿಯಾಗಿ ನವ ಜೋಡಿಗಳಿಗೆ ಶುಭ ಹಾರೈಸಿದ್ದರು. ಶಾರುಖ್ ಖಾನ್, ರಜನಿಕಾಂತ್, ಎ. ಆರ್ ರೆಹಮಾನ್, ನಟ ಸೂರ್ಯ ವಿವಾಹದಲ್ಲಿ ಭಾಗಿಯಾದ ಕೆಲವು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ಇದನ್ನೂ ಓದಿ | Nayanthara | ಒಟಿಟಿಯಲ್ಲಿ ಬರುತ್ತಿದೆ ನಯನತಾರಾ-ವಿಘ್ನೇಶ್ ಶಿವನ್ ಮದುವೆಯ ಸಾಕ್ಷ್ಯಚಿತ್ರ