Site icon Vistara News

Kannada New Movie | ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ ಬಿಡುಗಡೆ ದಿನಾಂಕ ಪ್ರಕಟ

Kannada New Movie

ಬೆಂಗಳೂರು: ಸುನೀಲ್‌ ಕುಮಾರ್‌ ಬಸವಂತಪ್ಪ ನಿರ್ದೇಶನದ ‘ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ’ ಸಿನಿಮಾ ನವೆಂಬರ್‌ 4ರಂದು (Kannada New Movie) ಬಿಡುಗಡೆಯಾಗುತ್ತಿದೆ. ಕಿರುಚಿತ್ರಗಳನ್ನು ನಿರ್ದೇಶನ ಮಾಡಿ, ‘ಆವಾಹಯಾಮಿ’, ‘ಜವ’ ಚಿತ್ರಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಸುನೀಲ್ ಅವರ ಮೊದಲ ನಿರ್ದೇಶನದ ಸಿನಿಮಾ ಇದಾಗಿದೆ.

ನವೆಂಬರ್ 4ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಚಿತ್ರದ ಟ್ರೈಲರ್‌ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗೆ ವ್ಯಕ್ತವಾಗಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಜತೆಗೆ ಚೇತನ್ ಗಂಧರ್ವ ಹಾಡಿರುವ ‘ಹೇ ಯಾ’ ಹಾಗೂ ಸಖತ್ ಸಿನಿಮಾ ಖ್ಯಾತಿಯ ಪಂಚಮ್ ಜೀವ ಹಾಡಿರುವ ‘ತಂದಾರಿ ನಾರೇ’ ಹಾಡುಗಳು ಬಿಡುಗಡೆಯಾಗಿದೆ. ಈ ಎರಡೂ ಹಾಡುಗಳಿಗೆ ನಿರ್ದೇಶಕ ಸುನೀಲ್ ಕುಮಾರ್ ಬಸವಂತಪ್ಪ ಸಾಹಿತ್ಯ ಬರೆದಿದ್ದಾರೆ. ಬಿಡುಗಡೆಗೂ ಮುನ್ನವೇ ಮೆಲ್ಬರ್ನ್ ಹಾಗೂ ಬೆಂಗಳೂರಿನಲ್ಲಿ ಪ್ರೀಮಿಯರ್ ಆಗಿರುವ ಈ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.

ಇದನ್ನೂ ಓದಿ | Kannada New Movie | ನಟ ಶರಣ್‌ ಹಾಡಿರುವ ʻಧರಣಿ ಮಂಡಲ ಮಧ್ಯದೊಳಗೆʼ ಚಿತ್ರದ ಸಾಂಗ್ ರಿಲೀಸ್‌!

ನವ ಪ್ರತಿಭೆಗಳಿಂದ ಕೂಡಿರುವ ಈ ಚಿತ್ರವನ್ನು ಧ್ವನಿ ಸಿನಿ ಕ್ರಿಯೇಷನ್‌ನಡಿ ದರ್ಶನ್ ರಾಘವಯ್ಯ ನಿರ್ಮಾಣ ಮಾಡಿದ್ದು, ಅವರು ಮುಖ್ಯ ಪಾತ್ರದಲ್ಲಿಯೂ ನಟಿಸಿದ್ದಾರೆ. ಉಳಿದಂತೆ ಬಾಲರಾಜ್ ವಾಡಿ, ಮನಸ್ ಗೇಬ್ರಿಯಲ್, ರೇವತಿ ಹೊಳ್ಳ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಂತ್ ಬದ್ರಿ ಛಾಯಾಗ್ರಹಣ, ಯತೀಶ್ ವೈಡಿ ಸಂಕಲನ, ಶ್ರೀಹರಿ ಸಂಗೀತ ಚಿತ್ರಕ್ಕಿದೆ. ಕಥೆ, ಚಿತ್ರಕಥೆ, ಸಾಹಿತ್ಯ ಸಂಭಾಷಣೆ ಬರೆದಿರುವ ನಿರ್ದೇಶಕ ಸುನೀಲ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ | Kannada New Movie | ಡಿಸೆಂಬರ್‌ನಲ್ಲಿ ತೆರೆಗೆ ಬರಲಿದೆ ‘ವಾಸಂತಿ ನಲಿದಾಗ’

Exit mobile version