Site icon Vistara News

Niharika Konidela: ಪುಷ್ಪ-2 ಸಿನಿಮಾದಲ್ಲಿ ನಿಹಾರಿಕಾ ಕೊನಿಡೆಲಾ? ಸಾಯಿ ಪಲ್ಲವಿ ಇರಲ್ವಾ?

Niharika Konidela In Pushpa 2

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರನ ಮಗಳು ನಿಹಾರಿಕಾ (Niharika Konidela) ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದು ಬೆನ್ನಲ್ಲೆ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ.

ಫಹಾದ್​ ಫಾಸಿಲ್​ ಪ್ರಮುಖ ಪಾತ್ರದಲ್ಲಿ ಪುಷ್ಪ ಸಿನಿಮಾದಲ್ಲಿ ಅಭಿನಯಿಸಿದ್ದರು .ಅವರ ಪತ್ನಿಯ ಪಾತ್ರಕ್ಕೆ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎಂದು ಈ ಮೊದಲು ವರದಿಯಾಗಿತ್ತು. .

ಆದರೆ ಆ ಪಾತ್ರ ಮಾಡಲು ಸಾಯಿ ಪಲ್ಲವಿ ಅವರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಈಗ ಅದೇ ಪಾತ್ರವನ್ನು ನಿಹಾರಿಕಾ ಕೊನಿಡೆಲಾ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಚಿತ್ರತಂಡ ಈ ಬಗ್ಗೆ ಯಾವುದೇ ಅಧಕೃತ ಮಾಹಿತಿ ಹಂಚಿಕೊಂಡಿಲ್ಲ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅಭಿನಯದ ‘ಪುಷ್ಪ 2’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.

ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ.

ಈ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಆಡಿಯೊ ಹಕ್ಕು 65 ಕೋಟಿ ರೂ. ಮಾರಾಟ ಆಗಿದೆ ಎಂದು ವರದಿ ಆಗಿದೆ. ಈ ಮೂಲಕ ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಲಾಭ ಕಂಡಿದ್ದಾರೆ.

Exit mobile version