ಬೆಂಗಳೂರು: ಜನವರಿ 22 ರಂದೇ ನಟ ನಿಖಿಲ್ ಕುಮಾರ್ ಅವರ (nikhil kumaraswamy) ಹುಟ್ಟುಹಬ್ಬವಿದ್ದು, ಇದೇ ದಿನ ಅವರು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ಭೇಟಿಯಾಗದಿರುವುದಕ್ಕೆ ಕ್ಷಮೆ ಕೇಳಿದ್ದಾರೆ. ಸಿನಿಮಾ ರಂಗದಿಂದಲೂ ಹಲವು ಮಂದಿ ಭಾಗಿಯಾಗಲಿದ್ದು, ನಟ, ರಾಜಕಾರಣಿ ನಿಖಿಲ್ಕುಮಾರ್ಗೂ ಕೂಡ ಈ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.
ನಿಖಿಲ್ ಕುಮಾರ್ ಪತ್ರದಲ್ಲಿ ʻಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಜನವರಿ 22, ನನ್ನ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಿಸಿದರೆ ಅದೇ ನನಗೆ ಸಂತೋಷ. ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ದುಂದು ವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ, ಆದಷ್ಟು ಬೇಗ ಭೇಟಿ ಆಗೋಣ ಎಂದು ತಿಳಿಸುತ್ತೇನೆ. ನಿಮ್ಮ ಪ್ರೀತಿಯ ನಿಖಿಲ್ಕುಮಾರ್ʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Ram Mandir: ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನಟ ನಿಖಿಲ್‌ಗೆ ಆಹ್ವಾನ
ಬರ್ತಡೇ ಎಲ್ಲಿ ಹೇಗೆ..?
— Saraswathi Jagirdar 🇮🇳 (@saraswathi1717) January 20, 2024
#Nikhilkumar #jan22 pic.twitter.com/x9qANibUYo
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ರಾಮ ಮಂದಿರ (Ram Mandir) ಉದ್ಘಾಟನೆಯಾಗಲಿದೆ. ಈ ‘ಪ್ರಾಣ ಪ್ರತಿಷ್ಠಾ’ (Pran Pratistha-ಪ್ರತಿಷ್ಠಾಪನಾ ಸಮಾರಂಭ) ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಪ್ರತಿಷ್ಠಾಪನಾ ಸಮಾರಂಭದ ನಂತರ ರಾಮ್ ಲಲ್ಲಾ (Lord Ram Lalla) ವಿಗ್ರಹವನ್ನು ರಾಮ ದೇವಾಲಯದಲ್ಲಿ ಸ್ಥಾಪಿಸಲಾಗುತ್ತದೆ. ಸ್ಯಾಂಡಲ್‌ವುಡ್‌ನ ಯಶ್ ಹಾಗೂ ರಿಷಬ್ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿದೆ.
ಇನ್ನು ಬಾಲಿವುಡ್‌ನ ಅಮಿತಾಭ್ ಬಚ್ಚನ್, ರಣಬೀರ್ ಕಪೂರ್, ಮಾಧುರಿ ದೀಕ್ಷಿತ್, ಅಕ್ಷಯ್ ಕುಮಾರ್, ಆಲಿಯಾ ಭಟ್, ಆಯುಷ್ಮಾನ್ ಕುರಾನ, ಅಜಯ್ ದೇವಗನ್, ಅನುಪಮ್ ಖೇರ್, ಸಂಜಯ್ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ. ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರೊಂದಿಗೆ ಚಿರಂಜೀವಿ ಅವರು ಕೂಡ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.