Site icon Vistara News

Nikhil Kumaraswamy: ನಿಖಿಲ್‌ಗೆ ಹಿಂದಿ ಮಂದಿ ಫಿದಾ: ದಾಖಲೆ ವೀಕ್ಷಣೆ ಕಂಡ ‘ರೈಡರ್‌’!

Nikhil Kumaraswamy

ಬೆಂಗಳೂರು: ‘ರೈಡರ್’ 2021ರಲ್ಲಿ ತೆರೆಗೆ ಬಂದ ಸಿನಿಮಾ. ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರ್‌ಸ್ವಾಮಿ (Nikhil Kumaraswamy) ಈ ಸಿನಿಮಾದಲ್ಲಿ ಹೀರೊ ಆಗಿ ಅಬ್ಬರಿಸಿದ್ದರು. ನಿಖಿಲ್‌ ನಟನೆಯ ನಾಲ್ಕನೇ ಸಿನಿಮಾ ಇದು. ಅಷ್ಟಕ್ಕೂ ರೈಡರ್ ರಿಲೀಸ್ ಆಗಿ 2 ವರ್ಷಗಳ ಮೇಲಾಗಿದೆ. ಈಗ್ಯಾಕೆ ಆ ಸಿನಿಮಾದ ಬಗ್ಗೆ ಮಾತು ಅಂತೀರಾ? ‘ರೈಡರ್’ ಯೂಟ್ಯೂಬ್‌ನಲ್ಲಿ ದಾಖಲೆ ಬರೆದಿದೆ. ಹೌದು, ಯುವರಾಜನ ಸಿನಿಮಾ ಹಿಂದಿ ವರ್ಷನ್ ಯೂಟ್ಯೂಬ್‌ನಲ್ಲಿ ಬರೋಬ್ಬರಿ 100 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಮೂಲಕ ನಿಖಿಲ್ ಹಿಂದಿ ವಲಯದಲ್ಲೂ ಪ್ರಖ್ಯಾತಿಗಳಿಸಿದ್ದಾರೆ.

ಕನ್ನಡ ಸಿನಿಮಾಗಳು ತನ್ನ ಸ್ವಂತ ನೆಲದಲ್ಲಿಯೇ ಈ ಪರಿ ವೀಕ್ಷಣೆಗಳಿಸುವುದು ತುಂಬ ವಿರಳ. ಹಾಗಿರುವಾಗ ನಿಖಿಲ್ ಸಿನಿಮಾ ಹಿಂದಿ ಭಾಷೆಯಲ್ಲಿ 100 ಮಿಲಿಯನ್ ವೀಕ್ಷಣೆ ಕಂಡಿರುವುದು ಸಂತಸದ ವಿಚಾರವಾಗಿದೆ.

ರೈಡರ್ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ಸಿನಿಮಾ. ಬಳಿಕ ಈ ಚಿತ್ರ ಹಿಂದಿ ಭಾಷೆಗೆ ಡಬ್ ಆಗಿ ಬಿಡುಗಡೆಯಾಗಿದೆ. ನಿಖಿಲ್ ಅವರನ್ನು ಹಿಂದಿ ಮಂದಿ ಆನ್‌ಲೈನ್‌ನಲ್ಲಿಯೇ ನೋಡಿ ಸಂಭ್ರಮಿಸಿದ್ದಾರೆ ಎನ್ನುವುದಕ್ಕೆ 100 ಮಿಲಿಯನ್ ವೀಕ್ಷಣೆಯೇ ಸಾಕ್ಷಿ. ರೈಡರ್ ವಿಜಯ್ ಕುಮಾರ್ ಕೊಂಡ ಸಾರಥ್ಯದಲ್ಲಿ ಬಂದ ಸಿನಿಮಾ.

ನಿಖಿಲ್ ಜತೆ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದ ಕಾಶ್ಮೀರಾ ಪರದೇಶಿ ನಾಯಕಿಯಾಗಿ ಮಿಂಚಿದ್ದರು. ಈ ಮೂಲಕ ಕಾಶ್ಮೀರಾ ಮೊದಲ ಬಾರಿಗೆ ಕನ್ನಡ ಸಿನಿ ಪ್ರೇಕ್ಷಕರ ಮುಂದೆ ಬಂದಿದ್ದರು. ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಮಾಡಿದ್ದರು.

ಇದನ್ನೂ ಓದಿ: Nikhil Kumaraswamy: ಮುದ್ದು ಕೃಷ್ಣನಾಗಿ ಮಿಂಚಿದ ನಟ ನಿಖಿಲ್ ಕುಮಾರಸ್ವಾಮಿ ಪುತ್ರ

ಸದ್ಯ ನಿಖಿಲ್ ಹೊಸ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. 2 ವರ್ಷಗಳ ಬಳಿಕ ನಿಖಿಲ್ ಹೊಸ ಸಿನಿಮಾಗೆ ಸಹಿ ಮಾಡಿದ್ದು ಇತ್ತೀಚಿಗಷ್ಟೆ ಚಿತ್ರಕ್ಕೆ ಅದ್ದೂರಿ ಚಾಲನೆ ಕೂಡ ಸಿಕ್ಕಿದೆ. ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಲೈಕಾ ಪ್ರೊಡಕ್ಷನ್ ನಿಖಿಲ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಲಕ್ಷ್ಮಣ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರುತ್ತಿದೆ.

Exit mobile version