Site icon Vistara News

Nikhil Siddharth: ಇದೇ 29ಕ್ಕೆ ನಿಖಿಲ್ ಸಿದ್ದಾರ್ಥ್ ಸಿನಿಮಾ ರಿಲೀಸ್; ಸ್ಪೆಷಲ್‌ ರೋಲ್‌ನಲ್ಲಿ ರಾಣಾ ದಗ್ಗುಭಾಟಿ!

Nikhil Siddharth Spy Cinema Look

ಬೆಂಗಳೂರು: ನಿಖಿಲ್ ಸಿದ್ದಾರ್ಥ್ (Nikhil Siddharth) ನಟನೆಯ ಬಹುನಿರೀಕ್ಷಿತ ʻಸ್ಪೈʼ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದರ ಬೆನ್ನಲ್ಲೇ ಸ್ಪೈಟ್ರೈಲರ್‌ ರಿಲೀಸ್ ಆಗಿದ್ದು, ಪ್ರೇಕ್ಷಕರಿಗೆ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನು ಹತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದಾರೆ.

ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ಪೆಷಲ್ ರೋಲ್‌ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ.

ಇದನ್ನೂ ಓದಿ: Nikhil Siddhartha: ನಿಖಿಲ್ ಸಿದ್ದಾರ್ಥ್ ಹುಟ್ಟುಹಬ್ಬಕ್ಕೆ 20ನೇ ಸಿನಿಮಾ ಅನೌನ್ಸ್!

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜತೆಗೆ ಕಥೆ ಕೂಡ ಬರೆದಿದ್ದಾರೆ. ಗ್ಯಾರಿ ಬಿ.ಎಚ್. ನಿರ್ದೇಶನದ ಜತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಇದೇ 29ರಂದು ಸ್ಪೈ ಸಿನಿಮಾ ವಿಶ್ವಾದ್ಯಂತ ತೆರೆ ಕಾಣುತ್ತಿದೆ.

Exit mobile version