ಬೆಂಗಳೂರು: ಮಗ ಅನಂತ್ ಅಂಬಾನಿಯವರ ಮದುವೆಗೆ, ನೀತಾ ಅಂಬಾನಿ (Nita Ambani) ಸಖತ್ ಮಿಂಚಿದ್ದರು. ಈ ಮದುವೆಯ ಆಚರಣೆಗಳ ಬಗ್ಗೆ ನೀತಾ ಅಂಬಾನಿ ಅವರು ಬಿಡುಗಡೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದೀಗ ನೀತಾ ಅವರ ಮಹೆಂದಿ ಕೂಡ ನೋಡುಗರ ಗಮನ ಸೆಳೆಯುತ್ತಿದೆ. ನೀತಾ ಅವರು ತಮ್ಮ ಕುಟುಂಬ ಸದಸ್ಯರ ಹೆಸರುಗಳನ್ನು ಮೆಹೆಂದಿಯಿಂದ ಬರೆದುಕೊಂಡಿದ್ದಾರೆ. ಮೆಹಂದಿ ಮೂಲಕ ತಮ್ಮ ಪ್ರೀತಿ ಪಾತ್ರರ ಮೇಲಿರುವ ಗೌರವವನ್ನು ಈ ಮೂಲಕ ವ್ಯಕ್ತಪಡಿಸಿದ್ದಾರೆ. ಸಾಂಪ್ರದಾಯಿಕ ಭಾರತೀಯ ವಿವಾಹ ಪದ್ಧತಿಯಿಂದ ಪ್ರೇರಿತರಾದ ನೀತಾ ಅಂಬಾನಿ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ಹೆಸರುಗಳು, ಮಗಳು ಇಶಾ ಮತ್ತು ಪತಿ ಆನಂದ್ ಪಿರಾಮಲ್ ಅವರ ಹೆಸರುಗಳು, ಮಗ ಆಕಾಶ್ ಮತ್ತು ಅವನ ಹೆಂಡತಿ ಶ್ಲೋಕಾ ಮೆಹ್ತಾ , ನೀತಾ ಅಂಬಾನಿ ಅವರ ಪತಿ ಮುಕೇಶ್ ಅಂಬಾನಿ ಅವರ ಹೆಸರನ್ನೂ ಸಹ ಮಹೆಂದಿಯಲ್ಲಿ ಬರೆಸಿಕೊಂಡಿದ್ದಾರೆ.
ಜುಲೈ 12 ರಂದು ಶುಕ್ರವಾರ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹವಾದರು. ಸೆಲೆಬ್ರಿಟಿಗಳು ಪರಸ್ಪರ ಶುಭಾಶಯ ಕೋರುವ, ನೃತ್ಯ ಮಾಡುವ ಹಾಗೂ ಪರಸ್ಪರ ಸಂಭಾಷಣೆ ನಡೆಸುವ ವಿಡಿಯೊಗಳು ವೈರಲ್ ಆಗಿವೆ.
ಇದನ್ನೂ ಓದಿ: Shiva Rajkumar: ಶಿವರಾಜ್‌ಕುಮಾರ್ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!
ಜುಲೈ 13 ರಂದು ‘ಶುಭ್ ಆಶೀರ್ವಾದ’ ಮತ್ತು ಜುಲೈ 14 ರಂದು ‘ಮಂಗಲ್ ಉತ್ಸವ’ ಅಥವಾ ಆರತಕ್ಷತೆ ನಡೆಯಲಿದೆ. ಜುಲೈ 15 ರಂದು ಮುಂಬೈನಲ್ಲಿ ಮತ್ತೊಂದು ಆರತಕ್ಷತೆ ಪಾರ್ಟಿ ನಡೆಯಲಿದೆ.
ಗಣ್ಯರ ದಂಡೇ ಉಪಸ್ಥಿತಿ
ಅನಂತ್ ಅಂಬಾನಿ ಮದುವೆಯಲ್ಲಿ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್ ಧೋನಿ, ಅಮಿತಾಭ್ ಬಚ್ಚನ್, ಆಲಿಯಾ ಭಟ್, ರಣವೀರ್ ಸಿಂಗ್, ರಣಬೀರ್ ಕಪೂರ್, ಅನನ್ಯಾ ಪಾಂಡೆ, ರಜನಿಕಾಂತ್, ಮಹೇಶ್ ಬಾಬು, ಹಾರ್ದಿಕ್ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ಬ್ರಿಟನ್ ಮಾಜಿ ಪ್ರಧಾನಿಗಳಾದ ಬೋರಿಸ್ ಜಾನ್ಸನ್, ಟೋನಿ ಬ್ಲೇರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.
5 ಸಾವಿರ ಕೋಟಿ ರೂ. ಖರ್ಚು
ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಆಗಿದೆ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.
ವಿವಾಹ ಪೂರ್ವ ಕಾರ್ಯಕ್ರಮಗಳೂ ಅದ್ಧೂರಿಯಾಗಿ ನಡೆದವು. ಭಾರತದ ಜಾಮ್‌ನಗರದಲ್ಲಿರುವ ಅಂಬಾನಿ ಎಸ್ಟೇಟ್‌ನಲ್ಲಿ ಮಾರ್ಚ್ 1 ರಿಂದ 3 ರವರೆಗೆ ಮೊದಲ ವಿವಾಹ ಪೂರ್ವ ಆಚರಣೆಯು 1,200 ಅತಿಥಿಗಳೊಂದಿಗೆ ನಡೆಯಿತು, ಇದರಲ್ಲಿ ಬಿಲ್ ಗೇಟ್ಸ್, ಹಿಲರಿ ಕ್ಲಿಂಟನ್, ಜೇರೆಡ್ ಕುಶ್ನರ್, ಇವಾಂಕಾ ಟ್ರಂಪ್, ಕಾರ್ಲಿ ಕ್ಲೋಸ್ ಮತ್ತು ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ 1,200 ಅತಿಥಿಗಳು ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ ರಿಹಾನ್ನಾ ಅವರ ಪ್ರದರ್ಶನಕ್ಕೆ 6 ರಿಂದ 9 ಮಿಲಿಯನ್ ಡಾಲರ್ ವೆಚ್ಚವಾಗಿದೆ ಎನ್ನಲಾಗಿದೆ.