Site icon Vistara News

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

Niveditha Gowda

ಬೆಂಗಳೂರು : ದಾಂಪತ್ಯ ಜೀವನದಿಂದ ಪ್ರತ್ಯೇಕಗೊಳ್ಳಲು ನಿರ್ಧರಿಸಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ದೂರವಾಗುವ ಒಂದೊಂದು ಲಕ್ಷಣವನ್ನು ತೋರಿಸುತ್ತಿದ್ದಾರೆ. ಹಾಗೆಯ ನಿವೇದಿತಾ ಗೌಡ ಅವರು ಸಂಜೆಯ ವೇಳೆಗೆ ಚಂದನ್ ಶೆಟ್ಟಿಯನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಈ ಮೂಲಕ ಅವರು ಒಂದೊಂದಾಗಿಯೇ ತಮ್ಮ ಸಂಬಂಧವನ್ನು ಕಳಚಿಕೊಳ್ಳುತ್ತಿದ್ದಾರೆ. ಅನ್​ಫಾಲೋ ಮಾಡುವ ಜತೆಗೆ ತಆವು ಪ್ರತ್ಯೇಕಗೊಳ್ಳುತ್ತಿರುವ ಮಾಹಿತಿಯನ್ನು ಸೋಶಿಯಲ್​ ಮೀಡಿಯಾದ ಮೂಲಕ ಅಧಿಕೃತಗೊಳಿಸಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

Exit mobile version