ಬೆಂಗಳೂರು: ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದು ಹಲವು ವದಂತಿಗೆ ತೆರೆ ಎಳೆದಿದ್ದಾರೆ. ಇದೀಗ ಡಿವೋರ್ಸ್ ಆದ ಬಳಿಕ ನಿವೇದಿತಾ ಮೊದಲ ಬಾರಿಗೆ ರೀಲ್ಸ್ ಶೇರ್ ಮಾಡಿಕೊಂಡಿದ್ದಾರೆ. ನಿವೇದಿತಾ ರೀಲ್ಸ್‌ಗೆ ನೆಗೆಟಿವ್ ಕಮೆಂಟ್‌ಗಳು ಹೆಚ್ಚಾಗಿವೆ. ನಿವೇದಿತಾ ರೀಲ್ಸ್ ಪೋಸ್ಟ್ ಮಾಡಿ 55 ನಿಮಿಷಕ್ಕೆ 4ಲಕ್ಷ 15ಸಾವಿರ ವೀವ್ಸ್, 17ಸಾವಿರ ಲೈಕ್ಸ್ ಬಂದಿವೆ.
ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ-ಚಂದನ್
ʻʻಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.
ವಿದೇಶಕ್ಕೆ ಹೋಗುವ ಸಾಧ್ಯತೆ
ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.