Site icon Vistara News

Niveditha Gowda: ಅಂಡರ್​ ವಾಟರ್‌ನಲ್ಲಿ​ ನಿವೇದಿತಾ- ಚಂದನ್‌ ಲಿಪ್‌ ಕಿಸ್‌; ವಿಡಿಯೊ ವೈರಲ್‌!

Niveditha Gowda

]

ಬೆಂಗಳೂರು: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಬಾರಿ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿದೆ. ಸಾವಿರಾರು ಜನರು ಲೈಕ್​ ಮಾಡಿದ್ದಾರೆ. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದಾರೆ.

ನೆಟ್ಟಿಗರು ಕಮೆಂಟ್‌ ಮಾಡಿ ʻʻಗಂಡ-ಹೆಂಡತಿ ನಡುವಿನ ರೊಮ್ಯಾನ್ಸ್​ ಖಾಸಗಿಯಾಗಿ ಇರಬೇಕು, ಇದನ್ನೆಲ್ಲ ಸಾರ್ವಜನಿಕವಾಗಿ ಪ್ರದರ್ಶಿಸುವ ಅಗತ್ಯವಿಲ್ಲʼʼ ಎಂದು ಟೀಕೆ ಮಾಡಿದ್ದಾರೆ. ‘ಇದನ್ನೆಲ್ಲ ಬೇರೆಯವರು ಮಾಡಿದರೆ ಚಂದ. ಆದರೆ ಚಂದನ್​ ಶೆಟ್ಟಿ-ನಿವೇದಿತಾ ಮಾಡಿದರೆ ಮಾತ್ರ ಜನರು ತಪ್ಪು ಎನ್ನುತ್ತಾರೆ’ ಎಂಬ ಕಮೆಂಟ್​ ಕೂಡ ಬಂದಿದೆ. ‘ತುಂಬ ಕ್ಯೂಟ್​ ಜೋಡಿ’ ಎಂದು ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಇಬ್ಬರೂ ಕೂಡ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ಇದನ್ನೂ ಓದಿ: Niveditha Shivarajkumar: ಶಿವಣ್ಣನ ಹಾದಿಯಲ್ಲಿ ಮಗಳು ನಿವೇದಿತಾ: ಹೊಸ ಸಿನಿಮಾಕ್ಕೆ ವಂಶಿಕೃಷ್ಣ ನಿರ್ದೇಶನ

ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ನಟಿಸಿದ ಮೊದಲ ಸಿನಿಮಾ ರಿಲೀಸ್ ಆಗುವುದಕ್ಕೂ ಮುನ್ನವೇ ಎರಡನೇ ಸಿನಿಮಾ ಸೆಟ್ಟೇರಿತು. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’. ಆ ಚಿತ್ರದಲ್ಲಿ ಅವರಿಗೆ ರೆಟ್ರೋ ಲುಕ್​ ಇರಲಿದೆ.

Exit mobile version