NMACC Launch: ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ಆಲಿಯಾ-ರಶ್ಮಿಕಾ ಮಂದಣ್ಣ - Vistara News

South Cinema

NMACC Launch: ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ಆಲಿಯಾ-ರಶ್ಮಿಕಾ ಮಂದಣ್ಣ

ಆಲಿಯಾ ಭಟ್ ಮತ್ತು ರಶ್ಮಿಕಾ ಮಂದಣ್ಣ (NMACC Launch) ಆಸ್ಕರ್ ಪ್ರಶಸ್ತಿ ವಿಜೇತ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಶ್ಮಿಕಾ ಮತ್ತು ಆಲಿಯಾ ಇಬ್ಬರನ್ನೂ ಒಟ್ಟಿಗೆ ಸ್ಟೇಜ್ ಮೇಲೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

VISTARANEWS.COM


on

NMACC Launch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ (NMACC Launch) ಗ್ರ್ಯಾಂಡ್ ಲಾಂಚ್‌ನಲ್ಲಿ, ಆಲಿಯಾ ಭಟ್ ಮತ್ತು ರಶ್ಮಿಕಾ ಮಂದಣ್ಣ ಆಸ್ಕರ್ ಪ್ರಶಸ್ತಿ ವಿಜೇತ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಶ್ಮಿಕಾ ಮತ್ತು ಆಲಿಯಾ ಇಬ್ಬರನ್ನೂ ಒಟ್ಟಿಗೆ ಸ್ಟೇಜ್ ಮೇಲೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಏಪ್ರಿಲ್ 1 ರಂದು ಅಂಬಾನಿ ಕುಟಂಬ ದೊಡ್ಡ ಗಾಲಾವನ್ನು ಆಯೋಜಿಸಿದ್ದರು. ಶಾರುಖ್ ಖಾನ್ ಅವರು ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೀಗ ಆಲಿಯಾ ಹಾಗೂ ರಶ್ಮಿಕಾ ಒಟ್ಟಿಗೆ ಡ್ಯಾನ್ಸ್‌ ಮಾಡಿರುವ ವಿಡಿಯೊ ವೈರಲ್‌ ಆಗಿದೆ. ಆಲಿಯಾ ಭಟ್ ನಾಟು ನಾಟು ಡ್ಯಾನ್ಸ್ ಮಾಡಿದ್ದು ಇದೇ ಮೊದಲಲ್ಲ. ಇತ್ತೀಚೆಗೆ ಝೀ ಸಿನಿ ಅವಾರ್ಡ್ಸ್ ನಲ್ಲಿ ನಟಿ ಸೀರೆಯಲ್ಲಿ ಹುಕ್ ಸ್ಟೆಪ್ಸ್ ಹಾಕಿದ್ದರು. ಆಕೆಯ ಸಹೋದರರಾದ ಆಯುಷ್ಮಾನ್ ಖುರಾನಾ ಮತ್ತು ಅಪರಶಕ್ತಿ ಖುರಾನಾ ಅವರು ವೇದಿಕೆಯಲ್ಲಿ ಸೇರಿಕೊಂಡಿದ್ದರು. RRR ಹಾಡು ನಾಟು ನಾಟು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಹಾಡಿನಲ್ಲಿ ರಾಮ್ ಚರಣ್ ಮತ್ತು ಜ್ಯೂನಿಯರ್‌ ಎನ್ ಟಿಆರ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: NMACC Launch: ʻನಾಟು ನಾಟುʼ ಹಾಡಿನ ಜತೆ ʻಜೂಮ್ ಜೋ ಪಠಾಣ್‌ʼಗೆ ಶಾರುಖ್‌ ಸಖತ್‌ ಡ್ಯಾನ್ಸ್‌; ವರುಣ್ , ರಣವೀರ್ ಸಾಥ್

ಕೆಲಸದ ಮುಂಭಾಗದಲ್ಲಿ, ಆಲಿಯಾ ಭಟ್ ಅವರು ಕರಣ್ ಜೋಹರ್ ಅವರ ಮುಂಬರುವ ರೊಮ್ಯಾಂಟಿಕ್ ಚಿತ್ರ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿಯಲ್ಲಿ ರಣವೀರ್ ಸಿಂಗ್, ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ಎದುರು ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಜುಲೈ 28ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಮುಂದಿನ ಚಿತ್ರ ಜೀ ಲೇ ಜರಾವನ್ನು ಕತ್ರಿನಾ ಕೈಫ್ ಮತ್ತು ಪ್ರಿಯಾಂಕಾ ಚೋಪ್ರಾ ಜತೆಗೂ ಯೋಜನೆ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Devaraj: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

VISTARANEWS.COM


on

Prajwal Devaraj death news take leagal action by family
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್​ ದೇವರಾಜ್ (Prajwal Devaraj) ಅವರುಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೊವನ್ನು ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ.

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Prajwal Devaraj: ಪ್ರಜ್ವಲ್ ಜತೆ ಸಂಪದಾ ರೊಮ್ಯಾನ್ಸ್!

‘ಕರಾವಳಿ’, ‘ಮಾಫಿಯಾ’, ‘ಗಣ’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ‘ಕರಾವಳಿ’ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ.

ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಚಿತ್ರದಲ್ಲಿ ಕಂಬಳವೂ ಒಂದು ಪಾತ್ರವಾಗಿ ಹರಿಯಲಿದೆ’ ಎಂದು ಹೇಳಿದ್ದರು.

ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸಿನಿಮಾ

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Kantara Movie: ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie Mollywood actor enters
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿತ್ತು. ಇದೀಗ ಮಾಲಿವುಡ್‌ ಖ್ಯಾತ ನಟ ಸಿನಿಮಾಗೆ ಎಂಟ್ರಿ ಕೊಟ್ಟಿರುವುದಾಗಿ ವರದಿಯಾಗಿದೆ.

ಮಾಲಿವುಡ್‌ ನಟ ನಟ ಜಯರಾಂ ‘ಕಾಂತಾರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ. ಒಮ್ಮೆಲೆ 5 ಭಾಷೆಗಳಲ್ಲಿ ‘ಕಾಂತಾರ’ ಚಾಪ್ಟರ್-1 ಸಿನಿಮಾ ಕಟ್ಟಿಕೊಡಲು ತಂಡ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾ ಬರುವುದರಿಂದ ಅಲ್ಲಿನ ಕಲಾವಿದರನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ. ನಟ ಜಯರಾಂ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಶಿವರಾಜ್‌ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದಲ್ಲಿ ಎಸಿಪಿ ಚೆಂಗಪ್ಪ ಪಾತ್ರದಲ್ಲಿ ಅಬ್ಬರಿಸಿದ್ದರು.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Shiva Rajkumar:  ʻನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

VISTARANEWS.COM


on

Shiva Rajkumar support Tamil Movie Non Voilance Cinema
Koo

ಬೆಂಗಳೂರು: ತಮಿಳಿನ ʻಮೆಟ್ರೋʼ ಖ್ಯಾತಿಯ ನಿರ್ದೇಶಕ ಆನಂದ್ ಕೃಷ್ಣನ್ ಆಕ್ಷನ್ ಕಟ್ ಹೇಳುತ್ತಿರುವ ʻನಾನ್ ವೈಲೆನ್ಸ್ʼ (Shiva Rajkumar) ಸಿನಿಮಾಗೆ ನಟ ಶಿವರಾಜ್ ಕುಮಾರ್ (Non Voilance Cinema) ಸಾಥ್ ಕೊಟ್ಟಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ. ಶಿವಣ್ಣ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಮೆಟ್ರೋ ಶಿರೀಶ್, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದಾರೆ. ದಿತಿ ಬಾಲನ್, ಗರುಡ ರಾಮ್, ಆದಿತ್ಯ ಕಥಿರ್ ತಾರಾಬಳಗದಲ್ಲಿದ್ದಾರೆ.

90ರ ದಶಕದಲ್ಲಿ ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳ ಸುತ್ತ ಸುತ್ತುವ ಒಂದು ಆಕರ್ಷಕ ಚಿತ್ರಕಥೆಯನ್ನು ಆನಂದ್ ರಚಿಸಿದ್ದಾರೆ. ‘ಮೆಟ್ರೋ’ ಮತ್ತು ‘ಕೊಡಿಯಲ್ಲಿ ಒರುವನ್’ ಚಿತ್ರಗಳ ಸತತ ಗೆಲುವಿನ ನಂತರ ನಿರ್ದೇಶಕ ಆನಂದ ಕೃಷ್ಣನ್ ಈ ಚಿತ್ರದ ಮೂಲಕ ಹ್ಯಾಟ್ರಿಕ್ ಯಶಸ್ಸನ್ನು ತಮ್ಮದಾಗಿಸಿಕೊಳ್ಳವ ನಿರೀಕ್ಷೆಯಲ್ಲಿದ್ದಾರೆ.

ʻನಾನ್ ವೈಲೆನ್ಸ್ʼ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಚಿತ್ರದ ಟೀಸರ್ ಮತ್ತು ಟ್ರೈಲರ್‌ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಎಕೆ ಪಿಕ್ಚರ್ಸ್ ನಡಿ ಲೇಖಾ ನಾನ್ ವೈಲೆನ್ಸ್ ಸಿನಿಮಾ ನಿರ್ಮಾಣ ಮಾಡುತ್ತಿದ್ದು, 90ರ ದಶಕವನ್ನು ಮರುಸೃಷ್ಟಿಸಲು ಚಿತ್ರತಂಡ ಭಾರೀ ಶ್ರಮವಹಿಸುತ್ತಿದೆ. ಯುವನ್ ಶಂಕರ್ ರಾಜ್ ಸಂಗೀತ, ಎನ್ ಎಸ್ ಉದಯ್ ಕುಮಾರ್ ಛಾಯಾಗ್ರಹಣ, ಶ್ರೀಕಾಂತ್ ಎನ್ ಬಿ ಸಂಕಲನ ಚಿತ್ರಕ್ಕಿದೆ.

ಶಿವಣ್ಣ ಸಿನಿಮಾ

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಇದೀಗ ಆರನೇ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಈ ಮುಂಚೆ ಈ ಜೋಡಿಯ ʻಮೈಲಾರಿʼ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಇದಾದ ಬಳಿಕ ಆರ್​ ಚಂದ್ರು ಅವರ ʻಕಬ್ಜʼ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಶಿವಣ್ಣ.

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

Continue Reading

ಸ್ಯಾಂಡಲ್ ವುಡ್

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

Ravichandran Birthday: ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

VISTARANEWS.COM


on

Ravichandran Birthday Premaloka 2 update
Koo

ಬೆಂಗಳೂರು: ಇಂದು ರವಿಂದ್ರನ್‌ ಅವರಿಗೆ ಬರ್ತ್‌ಡೇ ಸಂಭ್ರಮ (Ravichandran Birthday). ರವಿಚಂದ್ರನ್‌ ಮನೆಯ ಮುಂದೆ ಫ್ಯಾನ್ಸ್ ನೆರೆದಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ರವಿಚಂದ್ರನ್ ನಿವಾಸ ಇದೆ. ಕೊವಿಡ್ ಕಾರಣದಿಂದ ಅವರು ಫ್ಯಾನ್ಸ್ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳೋಕೆ ಸಾಧ್ಯ ಆಗಿರಲಿಲ್ಲ. ಈಗ ಅವರು ಗ್ರ್ಯಾಂಡ್ ಆಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ʻಪ್ರೇಮಲೋಕ 2ʼ ಸಿನಿಮಾ ಕುರಿತು ಅಪ್‌ಡೇಟ್‌ ಹಂಚಿಕೊಂಡಿದ್ದಾರೆ ರವಿಚಂದ್ರನ್‌.

‘ಪ್ರೇಮಲೋಕ 2’ ಚಿತ್ರವನ್ನು ರವಿಚಂದ್ರನ್ ಇಂದು ಅನೌನ್ಸ್ ಮಾಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಹೇಳಿದ್ದಾರೆ.

ಈ ವೇಳೆ ನಟ ಮಾಧ್ಯಮದ ಜತೆ ಮಾತನಾಡಿ ʻʻಪ್ರೇಮಲೋಕ-2 ಟ್ರೈಲರ್ ರೆಡಿ ಇದೆ. ಗಜಿಬಿಜಿ ಆಗೋದು ಬೇಡ ಎಂದು ಇಂದು ಲಾಂಚ್ ಮಾಡಲಿಲ್ಲ. ಒಂದು ವಾರದಲ್ಲಿ ದೊಡ್ಡ ನ್ಯೂಸ್ ಕೊಡ್ತೀನಿ. ನಾನು ನನ್ನ ಮಕ್ಕಳು ಮೂವರೂ ʻಪ್ರೇಮಲೋಕ 2ʼನಲ್ಲಿ ಇರ್ತೀವಿ. ʻಪ್ರೇಮಲೋಕʼ ಸಿನಿಮಾವನ್ನು ಅಂದಿನ ಕಾಲಕ್ಕೆ ಒಂದು ರೂಪಾಯಿ ಕೊಟ್ಟು ನೋಡಿದ್ರು. ಈಗ 2 ಸಾವಿರ ಕೊಟ್ಟು ನೋಡ್ತಿದ್ದಾರೆʼʼಎಂದರು.

ಇತ್ತೀಚೆಗೆ ಜನರು ಸಿನಿಮಾ ನೋಡೋಕೆ ಥಿಯೇಟರ್​ಗೆ ಬರಲ್ಲ ಎನ್ನುವ ಕೂಗು ಜೋರಾಗಿದೆ. ಈ ಬಗ್ಗೆ ರವಿಚಂದ್ರನ್ ಮಾತನಾಡಿದ್ದಾರೆ. ʻʻಒಳ್ಳೆಯ ಸಿನಿಮಾ ಮಾಡಿದ್ರೆ ಜನ ಥಿಯೇಟರ್‌ಗೆ ಬರ್ತಾರೆ. ಯಶ್ ತಿಂಗಳಿಗೊಂದು ಸಿನಿಮಾ ಮಾಡೋಕೆ ಆಗಲ್ಲ.. ಕೆಜಿಎಫ್ ಸಿನಿಮಾಗೆ ಆತ ಫೈಟ್ ಕೊಡಬೇಕು. ನಮಗೆ ಮಾರ್ಕೆಟ್ ಇಲ್ಲ. 10 ಸಿನಿಮಾ ಮಾಡೋಕೆ ನಾನು ರೆಡಿ.. ಆದರೆ ಸಾವಿರ ಕೋಟಿ ರೂ. ನಮ್ಮ ಮೇಲೆ ಹಾಕೋರೇ ಇಲ್ಲ”ಎಂದರು.

‘ಕೆಡಿ’ ಸಿನಿಮಾದಲ್ಲಿ ರವಿಚಂದ್ರನ್ ಅವರು ಸಂಜಯ್ ದತ್ ಜೊತೆ ತೆರೆಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿ ಸಂಜಯ್ ದತ್ ಅವರ ತಂದೆ ನಮ್ಮ ತಂದೆ ಸ್ನೇಹಿತರು. ನಾನು ದುಬೈನಲ್ಲಿ ಒಮ್ಮೆ ಸಿನಿಮಾ ಚಿತ್ರಿಸುವಾಗ ಕರೆದು ತನ್ನ ಕ್ಯಾರವಾನ್ ಬಳಿಸಲು ಹೇಳಿದ್ದರು ಸಂಜಯ್ ದತ್. ಆಗಲಿಂದಲೂ ನನಗೂ ಅವರಿಗೂ ಸಣ್ಣ ಪರಿಚಯ ಇತ್ತು.. ಈಗ KD ಚಿತ್ರದಲ್ಲಿ ನಾನು ಸಂಜಯ್ ದತ್ ಒಟ್ಟಿಗೆ ನಟಿಸುತ್ತಿದ್ದೇವೆʼʼಎಂದರು.

ಇದನ್ನೂ ಓದಿ: Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

ಕನಸುಗಾರನ ʻಪ್ರೇಮಲೋಕ 2’

ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

ಪ್ರೇಮಲೋಕ’ ಚಿತ್ರಕ್ಕಾಗಿ ಜ್ಯೂಹಿ ಚಾವ್ಲಾ ಕನ್ನಡಕ್ಕೆ ಬಂದಿದ್ದರು. ಆದರೆ ಈ ಬಾರಿ ಮನೋರಂಜನ್ ಜತೆ ಚೆನ್ನೈ ಚೆಲುವೆ ತೇಜು ಅಶ್ವಿನಿ ರೊಮ್ಯಾನ್ಸ್ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಈ ಚಿತ್ರದಲ್ಲಿ 20-25 ಸಾಂಗ್​ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ.

1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

Continue Reading
Advertisement
Chhota Rajan
ಕ್ರೈಂ4 mins ago

Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Fake CBI Officer
ಬೆಂಗಳೂರು9 mins ago

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

Prajwal Devaraj death news take leagal action by family
ಸ್ಯಾಂಡಲ್ ವುಡ್25 mins ago

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Revanna Case
ಕ್ರೈಂ29 mins ago

Prajwal Revanna Case: ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Agnikul Cosmos
ತಂತ್ರಜ್ಞಾನ45 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202449 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ58 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ1 hour ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ1 hour ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌