Site icon Vistara News

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das

Noor Malabika Das, best known for Kajol's series 'The Trial', dies by suicide

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Exit mobile version