ಬೆಂಗಳೂರು: ಬಿಗ್ ಬಾಸ್ ಸೀಸನ್-4ರ ವಿಜೇತ, ನಟ ಪ್ರಥಮ್ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾನ್ ಸ್ಟಾಪ್ ಮಾತು, ನೇರ ನುಡಿಯಿಂದಲೇ ಹೆಸರಾಗಿರುವ ಒಳ್ಳೆ ಹುಡ್ಗ ಪ್ರಥಮ್ (Olle Huduga Pratham), ಬಿಗ್ ಬಾಸ್-4ರಲ್ಲಿ ವಿಜೇತರಾಗಿದ್ದರು. ಇದೀಗ ಕುಟುಂಬದವರು ಇಷ್ಟಪಟ್ಟ ಹುಡುಗಿಯನ್ನು ಮದುವೆಯಾಗಲು ಮುಂದಾಗಿದ್ದಾರೆ. ಅಲ್ಲದೆ, ತಮ್ಮ ಮದುವೆಯ ಬಗ್ಗೆ ಹೊಸ ಅಪ್‌ಡೇಟ್ ಹಂಚಿಕೊಂಡಿದ್ದಾರೆ.
ಸದ್ಯ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮದುವೆ ಬಗ್ಗೆ ಈ ರೀತಿ ಬರೆದುಕೊಂಡಿದ್ದಾರೆ. “ನನ್ನದು ಕಂಪ್ಲೀಟ್ ಅರೇಂಜ್ ಮ್ಯಾರೇಜ್; ಯಾವುದೇ ಆಡಂಬರ, ವೈಭವ ಇರುವುದಿಲ್ಲ. ನೀವೆಲ್ಲರೂ ಹೇಗೆ ಬದುಕುತ್ತಿದ್ದೀರೋ ನಾವು ಕೂಡ ಹಾಗೇ… ನನ್ನ ಕೈಹಿಡಿಯುವವರು ಮಾಧ್ಯಮ, ಸೋಷಿಯಲ್ ಮೀಡಿಯಾ, ಪಬ್ಲಿಸಿಟಿಯಿಂದ ತುಂಬಾ ದೂರ… ಸಿದ್ದರಾಮಯ್ಯ, ರವಿಚಂದ್ರನ್ ಅವ್ರ ಹೆಂಡ್ತಿ ಥರ ಅಂದುಕೊಳ್ಳಿ.”
ʻʻಮದುವೆ ಅವ್ರು ಹೇಗೇ ಮಾಡುತ್ತಾರೋ ಅವರಿಷ್ಟ. ನನಗೆ ದೇವಸ್ಥಾನದಲ್ಲಿ ಆಗುವ ಆಸೆ; ಅವ್ರಿಷ್ಟದಂತೆ ಅವ್ರು ಮಾಡ್ಲಿ ಬಿಡಿ. ನನ್ನ ಕಡೆಯಿಂದ ಒಂದು 200-300 ಜನರಿಗೆ ಒಂದು ಸಿಂಪಲ್ ಬೀಗರ ಊಟ. ಬಹುಶಃ ನಮ್ಮ ಕುಟುಂಬದ ಕೊನೆಯ ನಾನ್‌ವೆಜ್ ಊಟ ಇದಾಗಿರಬಹುದು. ಇದಿಷ್ಟೇ ನನ್ನ ಮದುವೆಯ ಮೆನು. ನೀವು ಹರಸಿʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Actor Pratham: ಒಳ್ಳೆ ಹುಡ್ಗ ಪ್ರಥಮ್ ಮದುವೆಯಾಗಲಿರುವ ಹುಡುಗಿಯ ಹಿನ್ನೆಲೆ ಏನು?
ಟ್ವಿಟ್ಟರ್‌ನಲ್ಲಿ ತಮ್ಮ ಎಂಗೇಜ್‌ಮೆಂಟ್ ಬಗ್ಗೆ ಕೂಡ ಬರೆದುಕೊಂಡಿದ್ದಾರೆ. “ಎಂಗೇಜ್‌ಮೆಂಟ್ ಮೊನ್ನೆ ಆಯ್ತು. ನಾಲ್ಕು ಜನರನ್ನು ಕರೆದು ಊಟ ಹಾಕಿಸಬೇಕಿತ್ತು ಅನ್ನೋದು ಹಲವರ ಅಭಿಪ್ರಾಯ. ಇನ್ನೆರಡು ದಿನದಲ್ಲಿ ವೃದ್ಧಾಶ್ರಮವೊಂದರ 138 ಜನರಿಗೆ ಸಿಹಿ ಊಟ. ಚಳಿಗಾಲದ ಆಸರೆಗಾಗಿ ಒಂದು ಶಾಲು. ಮದುವೆ ಅವ್ರಿಷ್ಟದಂತೆ ಅವ್ರು ಮಾಡಬಹುದು”. ಎಂದಿದ್ದಾರೆ.
ಕಳೆದ ವರ್ಷ ‘ನಟ ಭಯಂಕರ’ ಸಿನಿಮಾ ನಿರ್ದೇಶಿಸಿ, ನಟಿಸಿದ್ದರು .’ಎಂಎಲ್‌ಎ’, ‘ದೇವರಂಥ ಮನುಷ್ಯ’, ‘ರಾಜು ಕನ್ನಡ ಮೀಡಿಯಂ’ ಸಿನಿಮಾಗಳಲ್ಲಿ ನಟಿಸಿದ್ದರು.