ಬೆಂಗಳೂರು: ದೀಪಿಕಾ ಪಡುಕೋಣೆ ಆಸ್ಕರ್ 2023ರಲ್ಲಿ (Oscars 2023) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 95ನೇ ಆಸ್ಕರ್ ಪ್ರಶಸ್ತಿ ಪ್ರದಾನವು ಮಾರ್ಚ್ 12, ಭಾನುವಾರ ಎಬಿಸಿಯಲ್ಲಿ ನೇರ ಪ್ರಸಾರವಾಗಲಿದೆ. ಲಾಸ್ ಏಂಜಲೀಸ್‌ಗೆ ನಟಿ ತೆರಳಿದ್ದಾರೆ. ಕಳೆದ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಟಿ ಆಸ್ಕರ್ ಪ್ರಶಸ್ತಿಗಾಗಿ ತೆರಳುತ್ತಿದ್ದಂತೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಟಾಪ್ ಮತ್ತು ನೀಲಿ ಡೆನಿಮ್ ಜೀನ್ಸ್‌ನೊಂದಿಗೆ ವಿನ್ಯಾಸಗೊಳಿಸಿದ ಕಂದು ಬಣ್ಣದ ಜಾಕೆಟ್‌ನಲ್ಲಿ ದೀಪಿಕಾ ಮಿಂಚಿದ್ದಾರೆ.
ಕಾನ್ 2022ರಲ್ಲಿ ತೀರ್ಪುಗಾರರಾಗಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಇದೀಗ ಆಸ್ಕರ್ 2023ರಲ್ಲಿ ನಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 95ನೇ ಅಕಾಡೆಮಿ ಪ್ರಶಸ್ತಿಗಳ ಪ್ರದಾನ (Oscars 2023) ಮಾರ್ಚ್ 12ರಂದು ಲಾಸ್ ಏಂಜಲೀಸ್‌ನಲ್ಲಿ (ಭಾರತದಲ್ಲಿ ಮಾರ್ಚ್ 13) ನಡೆಯಲಿದೆ. ದೀಪಿಕಾ ಪಡುಕೋಣೆ ಸೋಷಿಯಲ್ ಮೀಡಿಯಾದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿರುವ ಲಿಸ್ಟ್ ಹಂಚಿಕೊಂಡಿದ್ದಾರೆ. ಎಮಿಲಿ ಬ್ಲಂಟ್, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಡ್ವೇನ್ ಜಾನ್ಸನ್, ಮೈಕೆಲ್ ಬಿ ಜೋರ್ಡಾನ್, ಜಾನೆಲ್ಲೆ ಮೋನೆ, ಜೊ ಸಲ್ಡಾನಾ, ಜೆನ್ನಿಫರ್ ಕೊನ್ನೆಲ್ಲಿ, ರಿಜ್ ಅಹ್ಮದ್ ಮತ್ತು ಮೆಲಿಸ್ಸಾ ಮೆಕಾರ್ಥಿ ಅವರಂತಹವರ ಜತೆಗೆ ಇವರ ಹೆಸರು ಸೇರಿದೆ.
ಇದನ್ನೂ ಓದಿ: Oscars 2023: ಆಸ್ಕರ್ ಮುಂಚಿತವಾಗಿ ದೀಪಿಕಾ ಹಳೆಯ ಫೋಟೊ ಶೇರ್ ಮಾಡಿ ಹೊಗಳಿದ ಅನುಪಮ್ ಖೇರ್
ದೀಪಿಕಾ ಪಡುಕೋಣೆ ಕೊನೆಯದಾಗಿ ಜನವರಿ 25ರಂದು ಬಿಡುಗಡೆಯಾದ ಶಾರುಖ್ ಖಾನ್ ಅಭಿನಯದ ಪಠಾನ್ ಚಿತ್ರದಲ್ಲಿ ಕಾಣಿಸಿಕೊಂಡರು. ಇದನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ ಮತ್ತು ಜಾನ್ ಅಬ್ರಹಾಂ ಕೂಡ ನಟಿಸಿದ್ದಾರೆ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿದಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರ ಭಾರತದಲ್ಲಿ 526 ಕೋಟಿ ರೂ. ಗಳಿಸಿದೆ. ಜಾಗತಿಕವಾಗಿ 1022 ಕೋಟಿ ರೂ. ಗಳಿಸಿದೆ. ದೀಪಿಕಾ ಮುಂದೆ ಪ್ರಭಾಸ್ ಮತ್ತು ಅಮಿತಾಭ್ ಬಚ್ಚನ್ ಅವರೊಂದಿಗೆ ಪ್ರಾಜೆಕ್ಟ್ ಕೆ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.