Site icon Vistara News

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava Prabhas animated show raises

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Exit mobile version