ಬೆಂಗಳೂರು: ಕನ್ನಡದ ಪ್ರಮುಖ ಕತೆಗಾರರು, ಪರಿಸರ ಲೇಖಕರಲ್ಲಿ ಒಬ್ಬರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕಥೆಯ ಆಧರಿತ ಸಿನಿಮಾ ಡೇರ್‌ಡೆವಿಲ್ ಮುಸ್ತಫಾಗೆ ತೆರಿಗೆ ವಿನಾಯಿತಿಯನ್ನು ಸಿಎಂ ಸಿದ್ದರಾಮಯ್ಯ ನೀಡಿದ ಬೆನ್ನಲ್ಲೇ ಒಟಿಟಿಗೆ ಲಗ್ಗೆ ಇಟ್ಟಿದೆ ಸಿನಿಮಾ. ಡೇರ್‌ಡೆವಿಲ್ ಮುಸ್ತಾಫಾ (Daredevil Mustafa) ಚಿತ್ರಮಂದಿರಗಳಲ್ಲಿ ಹವಾ ಜೋರಾಗಿತ್ತು. ಇದೀಗ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಸಿಕ್ಕಿತ್ತು. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್‌ಡೆವಿಲ್ ಮುಸ್ತಾಫಾ ಅಮೋಘವಾಗಿ ಪ್ರದರ್ಶನ ಕಂಡಿತ್ತು. ಕಳೆದ ಆರೇಳು ತಿಂಗಳಿನಿಂದ ಥಿಯೇಟರ್‌ನಲ್ಲಿ ಯಾವ ಸಿನಿಮಾಗೂ ಸಿಗದ ಮೆಚ್ಚುಗೆ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್‌ಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿತ್ತು.
ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಡೇರ್‌ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ.
ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ಪ್ರಸ್ತುತಪಡಿಸಿದ್ದಾರೆ. ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್ ರಾಯ್ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್ ಶ್ಯಾಮ್ ಸಂಗೀತವಿದೆ.
ಶಿಶಿರ್ ಬೈಕಾಡಿ, ಆದಿತ್ಯ ಅಶ್ರೀ, ಅಭಯ್, ಸುಪ್ರೀತ್ ಭಾರದ್ವಾಜ್, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್. ಉಮೇಶ್, ಮಂಡ್ಯ ರಮೇಶ್, ಮೈಸೂರ್ ಆನಂದ್, ಸುಂದರ್ ವೀಣಾ, ನಾಗಭೂಷಣ್, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.