Site icon Vistara News

Gaalipata 2 | ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ಗಾಳಿಪಟ-2 ಒಟಿಟಿಗೆ ಎಂಟ್ರಿ

Gaalipata 2

ಬೆಂಗಳೂರು : ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಯೋಗರಾಜ್‌ ಭಟ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಗಾಳಿಪಟ 2 ಸಿನಿಮಾ (Gaalipata 2) ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡಿದ್ದ ಈ ಚಿತ್ರಕ್ಕೆ ಸಿನಿಮಾ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ದಸರಾ ಹಬ್ಬಕ್ಕೆ ಗಾಳಿಪಟ-2 ಸಿನಿಮಾ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿದೆ.

ಆಗಸ್ಟ್ 12ರಂದು ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿಯೂ ಗಾಳಿಪಟ -2 ಸಿನಿಮಾ ತೆರೆ ಕಂಡು ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ, ಭಾವನೆಯ ಜತೆಗೆ ಒಂದಿಷ್ಟು ಮಸಾಲೆ ಸೇರಿಸಿ ಯೋಗರಾಜ್‌ ಭಟ್‌ ತಯಾರಿಸಿದ್ದ ಸಿನಿಮಾ ಪ್ರೇಕ್ಷಕರನ್ನು ಸೆಳೆದಿತ್ತು.

ದಸರಾ ಹಬ್ಬಕ್ಕೆ ಗಾಳಿಪಟ-2 ಜೀ 5 ಒಟಿಟಿಗೆ ಲಗ್ಗೆ!
ದಸರಾ ಹಬ್ಬಕ್ಕೆ ಸಿನಿಮಾ ಅಕ್ಟೋಬರ್ 5ರಂದು ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಗೋಲ್ಡನ್‌ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದರು. ಸೂರಜ್‌ ಪ್ರೊಡಕ್ಷನ್‌ ಅಡಿಯಲ್ಲಿ ಉಮಾ ಎಂ. ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದ್ದು, ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದರು. ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ, ನಿಶ್ವಿಕಾ ನಾಯ್ಡು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಜೀ5 ಒಟಿಟಿಯಲ್ಲಿ ಕಿಚ್ಚನ ʻವಿಕ್ರಾಂತ್ ರೋಣʼ ಸಿನಿಮಾ ಹಂಗಾಮ ಸೃಷ್ಟಿಸಿದ್ದು, ಟಾಪ್ ಟ್ರೇಡಿಂಗ್ ಮೂರನೇ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ | Bigg Boss Kannada | ಬಿಗ್‌ ಬಾಸ್‌ ಒಟಿಟಿಯಲ್ಲಿ ಮೋಡಿ ಮಾಡಿದ್ದ ಸಾನ್ಯ-ರೂಪೇಶ್‌ ಎಂಟ್ರಿ!

Exit mobile version