Love You Abhi Web series By aditiprabhudeva and vikramravichandran Jio Cinema : ಸಸ್ಪೆನ್ಸ್ ಥ್ರಿಲ್ಲರ್ ವೆಬ್‌ ಸಿರೀಸ್‌ನಲ್ಲಿ ಜತೆಯಾದ ವಿಕ್ರಮ್‌ ರವಿಚಂದ್ರನ್‌ - ಅದಿತಿ ಪ್ರಭುದೇವ - Vistara News

ಒಟಿಟಿ

Jio Cinema : ಸಸ್ಪೆನ್ಸ್ ಥ್ರಿಲ್ಲರ್ ವೆಬ್‌ ಸಿರೀಸ್‌ನಲ್ಲಿ ಜತೆಯಾದ ವಿಕ್ರಮ್‌ ರವಿಚಂದ್ರನ್‌ – ಅದಿತಿ ಪ್ರಭುದೇವ

Jio Cinema Love You Abhi: ಹಿರಿಯ ನಟ ರವಿಚಂದ್ರನ್‌ ಅವರ ಪುತ್ರ ವಿಕ್ರಮ್‌ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್‌ ಸಿರೀಸ್‌. ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್‌ ಯು ಅಭಿ’ ಎಂಬ ಕನ್ನಡ ವೆಬ್‌ ಸಿರೀಸ್‌ ಬಿಡುಗಡೆಗೊಳ್ಳುತ್ತಿದೆ.

VISTARANEWS.COM


on

Love You Abhi Web series By aditiprabhudeva and vikramravichandran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ಜಿಯೋ ಸಿನಿಮಾ (Jio Cinema) ಓಟಿಟಿ ವೇದಿಕೆ ಸಿದ್ಧವಾಗಿದೆ. ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್‌ ಯು ಅಭಿ’ (Love You Abhi) ಎಂಬ ಕನ್ನಡ ವೆಬ್‌ ಸಿರೀಸ್‌ ಮೇ 19ರಂದು ಜಿಯೋ ಸಿನಿಮಾದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. ʻಕಾಳಿ ವೇಲಾಯುಧಂʼ ನಿರ್ಮಾಣ ಮಾಡಿ ನಿರ್ದೇಶಿಸಿರುವ ಜಿಯೋ ಸಿನಿಮಾ ಒರಿಜಿನಲ್‌ ವೆಬ್‌ ಸಿರೀಸ್‌ನಲ್ಲಿ ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ಮತ್ತು ರವಿಶಂಕರ್‌ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ಎಲ್ಲರೊಳಗೊಬ್ಬ ಶಿವ

ಹಿರಿಯ ನಟ ರವಿಚಂದ್ರನ್‌ ಅವರ ಪುತ್ರ ವಿಕ್ರಮ್‌ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್‌ ಸಿರೀಸ್‌. ತಮ್ಮ ಪಾತ್ರದ ಕುರಿತು ಮಾತನಾಡಿ ʻʻಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ. ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ ನ್ಯಾಯೋಚಿತವೇ’ ಎಂಬ ಮಾತಿದೆ. ಆದರೆ ಶಿವ ಮತ್ತು ಅವನ ಬದುಕಿನ ವಿಷಯಕ್ಕೆ ಬಂದಾಗ, ಅವನ ಪ್ರೇಮದಲ್ಲಿಯೂ, ಬದುಕಿನಲ್ಲಿ ಹೋರಾಟದಲ್ಲಿಯೂ ನ್ಯಾಯೋಚಿತವಾಗಿದ್ದು ನಡೆಯುವುದೇ ಇಲ್ಲ’. ಎಂದು ಪಾತ್ರದ ಕುರಿತು ಹೇಳಿದರು.

ವಿಕ್ರಮ್, ಅದಿತಿ ಜೋಡಿ – ರವಿಶಂಕರ್ ಅಬ್ಬರದ ಮೋಡಿ

ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅದಿತಿ ಪ್ರಭುದೇವ ‘ಲವ್‌ ಯು ಅಭಿ’ಯ ಮೂಲಕ ವೆಬ್‌ ಸಿರೀಸ್‌ ಜಗತ್ತಿಗೂ ಜಿಗಿದಿದ್ದಾರೆ. ಇವರಿಬ್ಬರ ಕ್ಯೂಟ್‌ ಕಾಂಬಿನೇಶನ್‌ ಜತೆ ಖ್ಯಾತ ನಟ ರವಿಶಂಕರ್‌ ಅವರ ಅಬ್ಬರದ ಭರ್ಜರಿ ಮಸಾಲೆಯೂ ಇದೆ. ಪೊಲೀಸ್‌ ಅಧಿಕಾರಿಯಾಗಿ ರವಿಶಂಕರ್‌ ಕಾಣಿಸಿಕೊಳ್ಳುತ್ತಿದ್ದಾರೆ.

‘ಎಲ್ಲ ಕಲಾವಿದರೂ ತಮ್ಮದೇ ಆದ ಮನೋಭಾವದಲ್ಲಿ ನಟಿಸುತ್ತ ಹೋಗುತ್ತಿರುತ್ತೇವೆ. ಕಲಾವಿದರ ಜರ್ನಿ ಹಾಗೆಯೇ ಇರುತ್ತದೆ. ಒಂದೊಂದುಸಲ ಅದು ಬ್ರೇಕ್ ಆಗಬೇಕಾಗುತ್ತದೆ. ಅಭಿ ನನ್ನ ನಟನಾಪಯಣವನ್ನು ಹಾಗೆ ಬ್ರೇಕ್ ಮಾಡಿದಂಥ ಪಾತ್ರ. ನನ್ನ ಇಡೀ ವ್ಯಕ್ತಿತ್ವಕ್ಕೇ ಚಾಲೆಂಜ್ ಮಾಡಿದಂಥ ಪಾತ್ರ. ಆ ಪಾತ್ರದಲ್ಲಿ ನಟಿಸುತ್ತ ನನ್ನ ವ್ಯಕ್ತಿತ್ವದಲ್ಲೂ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆʼʼ ಎಂದರು ಅದಿತಿ ಪ್ರಭುದೇವ.

ಇದನ್ನೂ ಓದಿ: JioCinema : ಜಿಯೋ ಸಿನಿಮಾ ಇನ್ನು ಉಚಿತವಲ್ಲ! ವಾರ್ಷಿಕ ಚಂದಾದಾರಿಕೆ ದರ ಎಷ್ಟು?

Jio Cinema Love You Abhi

ಹಲವು ಭಾವಗಳ ಸಂಗಮ

ಪ್ರೇಮ, ವಿರಹ, ಕೊಲೆ, ತನಿಖೆ ಹೀಗೆ ಎಲ್ಲ ಅಂಶಗಳೂ ಇದರಲ್ಲಿದೆ. ಒಂದು ಸಾವಿನ ಸುತ್ತ ಬೆಳೆಯುತ್ತ ಹೋಗುವ ಈ ಕಥನದಲ್ಲಿ ಮನಸ್ಸನ್ನು ಭಾವುಕಗೊಳಿಸುವ ಸನ್ನಿವೇಶಗಳಿವೆ. ದಾಂಪತ್ಯದ ಮಧುರ ಕ್ಷಣಗಳನ್ನು ಉಣಬಡಿಸುವ ದೃಶ್ಯಗಳಿವೆ, ಪ್ರೇಮದ ವ್ಯಾಮೋಹ ಮತ್ತು ಸತ್ಯದ ಹಂಬಲದ ನಡುವಿನ ಘರ್ಷಣೆಯೂ ಇದೆ. ಅನುಮಾನ, ವಂಚನೆ, ಮುಗ್ಧ ಪ್ರೇಮ, ಒಳ್ಳೆಯತನ, ಸ್ವಾರ್ಥ, ಪ್ರಾಮಾಣಿಕತೆ ಎಲ್ಲ ಗುಣಗಳೂ ಸೇರಿ ರೂಪುಗೊಂಡ ಅಪರೂಪದ ರಸಪಾಕ ‘ಲವ್‌ ಯು ಅಭಿ’. ಮೂವತ್ತು ನಿಮಿಷಗಳ ಏಳು ಎಪಿಸೋಡ್‌ಗಳಲ್ಲಿ ಅಭಿಯ ಬದುಕಿನ ಕಥೆಯನ್ನು ಹೇಳಲಾಗಿದೆ.

ಕನ್ನಡ ದೃಶ್ಯಮಾಧ್ಯಮ ಲೋಕಕ್ಕೆ ಪರಿಚಯಿಸಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್‍‌ ಕಥೆಯಲ್ಲಿ ಹೊಸ ಉತ್ಸಾಹದ ನಟರ ಜತೆಗೆ ವಿನಯಾ ಪ್ರಸಾದ್, ರಚಿತಾ ಮಹಾಲಕ್ಷ್ಮಿ, ಅಶೋಕ್ ಶರ್ಮ, ಶ್ರೀನಾಥ್, ಅಂಬಿಕಾ, ಶ್ರೀನಿವಾಸ ಮೂರ್ತಿ, ಸುಂದರ್‌ರಾಜ್‌ ಹೀಗೆ ಅನುಭವಿ ಕಲಾವಿದರ ದಂಡೂ ಇದೆ.
‘ಲವ್‌ ಯು ಅಭಿ’ಗೆ ಅರುಣ್ ಬ್ರಹ್ಮ ಅವರ ಕ್ಯಾಮೆರಾ ಚಳಕವಿದ್ದು, ಪ್ರದಿಪ್‌ ರಾಘವ್ ಸಂಕಲನ ಮಾಡಿದ್ದಾರೆ. ನಿಜಿಲ್‌ ದಿನಕರ್‌ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

ಸಿನಿಮಾ

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Mother Teresa Series: ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ.

VISTARANEWS.COM


on

Mother Teresa Series life in the works
Koo

ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ  ಹೆಸರು  ಮಾಡಿರುವ  ಪಿ ಚಂದ್ರಕುಮಾರ್ ಅವರು ʻಮದರ್ ಥೆರೆಸಾʼ ಸಿರೀಸ್‌ (Mother Teresa Series) ಮಾಡಲು ಮುಂದಾಗಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಸುಮಾರು 30 ಕೋಟಿ ರೂ.ಗಳ‌ ಬಿಗ್ ಬಜೆಟ್‌ನಲ್ಲಿ ಚಿತ್ರತಂಡ ನಿರ್ಮಾಣ ಮಾಡುತ್ತಿದೆ ಎಂದು ವರದಿಯಾಗಿದೆ. ವಿಶೇಷವಾಗಿ ಈ ವೆಬ್ ಸರಣಿಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮದರ್‌ ಥೆರೆಸಾ ಬಗ್ಗೆ ಮೂರು ವರ್ಷಗಳಿಂದ ಪಿ. ಚಂದ್ರಕುಮಾರ್‌ ಮಾಹಿತಿ ಹಲೆ ಹಾಕಿದ್ದರು.

ಮದರ್ ಥೆರೆಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳ ಹೊರಟಿದ್ದಾರೆ. ರೋಮ್‌, ಜೆರುಸಲೆನಿಯಂ, ಟೆಥ್‌ಲೆಹೆಮ್, ಮ್ಯಾಸಿಡೋನಿಯಾ, ಇಟಲಿಯಂತಹ ಸ್ಥಳಗಳ ಜತೆಗೆ ಮದರ್ ಥೆರೆಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಾಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ. ಬಿಹಾರ. ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲೆ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ನಿರ್ಮಾಪಕ ಚಂದ್ರಶೇಖರ್ ಈ ಬಗ್ಗೆ ಮಾತನಾಡಿ ʻʻಮಲಯಾಳಂ, ತಮಿಳು, ತೆಲುಗು, ಹಿಂದಿಯಲ್ಲಿ ಹಲವಾರು  ಸಿನಿಮಾ‌ಗಳನ್ನು ನಿರ್ಮಿಸಿದ್ದೆ. ಈ ಸಿರೀಸ್‌ ಕನ್ನಡದಲ್ಲಿಯೂ ಬರುತ್ತಿದೆ. ಯಂಗ್ ಥೆರೆಸಾ ಪಾತ್ರಕ್ಕಾಗಿ ಹುಡಕಾಟ ನಡೆದಿದೆ. ನಾಲ್ಕು ವರ್ಷದ ಹಿಂದೆಯೇ ಇದರ  ಪ್ಲ್ಯಾನ್ ಮಾಡಿದ್ದೆವು. ಮೂರು ಸೀಜನ್‌ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ಥೆರೆಸಾ ಅವರ  ಕಥೆ ಮೂಡಿಬರಲಿದೆ. ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭಿಸುತ್ತಿದ್ದೇವೆ. ಒಟಿಟಿ ಪ್ಲಾಟ್ ಫಾರ್ಮ್‌ನಲ್ಲಿ ಈ ಸೀರೀಸ್  ರಿಲೀಸಾಗಲಿದ್ದು, ಈ ಬಗ್ಗೆ ಮಾತುಕತೆ ಕೂಡ  ನಡೆಯುತ್ತಿದೆʼʼಎಂದರು.

ಪಿ.ಸುಕುಮಾರ್ ಅವರ  ಛಾಯಾಗ್ರಹಣ, ಜರೀ ಅಮರದೇವ ಅವರ ಸಂಗೀತ ಇದ್ದು, ಅನಿತಾ ಮೆನ್ನನ್, ತನಿಮಾ ಮೆನ್ನನ್,  ಸಾಪಿಕೌರ್, ಜೋಷಿ ಜೋಸೆಫ್ ಪ್ರಮುಖ ತಾರಾಗಣದಲ್ಲಿದ್ದಾರೆ.

Continue Reading

ಒಟಿಟಿ

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

ಥ್ರಿಲರ್, ರೊಮ್ಯಾಂಟಿಕ್, ಆಕ್ಷನ್ ಅನ್ನು ಒಳಗೊಂಡಿರುವ ವೀಕ್ಷಕರು ಬಹು ನಿರೀಕ್ಷೆಯ ಬ್ರಿಡ್ಜರ್ಟನ್, ಬಾಹುಬಲಿ ಸೇರಿದಂತೆ ಹಲವು ಸರಣಿಗಳು ಈ ವಾರದಲ್ಲಿ ಒಟಿಟಿ ಗೆ (OTT Release) ಬರಲಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Release
Koo

ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರುವ ಹಲವು ಸರಣಿ ಚಿತ್ರಗಳು ಈ ವಾರ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ (OTT Release) ತೆರೆ ಕಾಣುತ್ತಿದೆ. ನೆಟ್‌ಫ್ಲಿಕ್ಸ್ (Netflix), ಡಿಸ್ನಿ+ ಹಾಟ್‌ಸ್ಟಾರ್ (Disney+ Hotstar), ಜಿಯೋ ಸಿನಿಮಾ (Jio Cinema) ಮತ್ತು ಇತರ ವೇದಿಕೆಯಲ್ಲಿ ಈ ಬಾರಿ ಪ್ರೇಕ್ಷರನ್ನು ರಂಜಿಸಲು ಹಲವು ಚಲನಚಿತ್ರಗಳು ಬಿಡುಗಡೆಯಾಗಲಿದೆ.

ಬ್ರಿಡ್ಜರ್ಟನ್ ಮತ್ತು ಬಾಹುಬಲಿ ಸರಣಿಯು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಪೆನೆಲೋಪ್ ಫೆದರಿಂಗ್‌ಟನ್ ಮತ್ತು ಕಾಲಿನ್ ಬ್ರಿಡ್ಜರ್‌ಟನ್‌ರ ಪ್ರೇಮಕಥೆಯನ್ನು ಹೇಳುವ ನೆಟ್‌ಫ್ಲಿಕ್ಸ್‌ನ ಬ್ರಿಡ್ಜರ್‌ಟನ್‌ನ ಸೀಸನ್ 3 ಸಾಕಷ್ಟು ಕುತೂಹಲ ಮೂಡಿಸಿದೆ. ಇದರೊಂದಿಗೆ ಎಸ್‌.ಎಸ್. ರಾಜಮೌಳಿ ಅವರ ಪೂರ್ವಭಾವಿ ಸರಣಿಯಾದ ಬಾಹುಬಲಿ: ಕ್ರೌನ್ ಆಫ್ ಬ್ಲಡ್‌ ಕೂಡ ಎಲ್ಲರೂ ಕಾತರದಿಂದ ಕಾಯುವಂತೆ ಮಾಡಿದೆ.

ಬ್ರಿಡ್ಜರ್ಟನ್ ಸೀಸನ್ 3 ಭಾಗ 1

ಬ್ರಿಡ್ಜರ್ಟನ್ ಭಾಗ 2 ಕಳೆದ ಜೂನ್ 13ರಂದು ಬಿಡುಗಡೆಯಾಗಿತ್ತು. ಇದೀಗ ಇದರ ಮುಂದುವರಿದ ಸರಣಿ ಬಿಡುಗಡೆಯಾಗಿದೆ.

ನಿಕೋಲಾ ಕೋಗ್ಲಾನ್, ಲ್ಯೂಕ್ ನ್ಯೂಟನ್, ಕ್ಲೌಡಿಯಾ ಜೆಸ್ಸಿ, ಲ್ಯೂಕ್ ಥಾಂಪ್ಸನ್, ಜೊನಾಥನ್ ಬೈಲಿ, ಸಿಮೋನ್ ಆಶ್ಲೇ ಮುಖ್ಯ ಭೂಮಿಕೆಯಲ್ಲಿರುವ ಈ ಸರಣಿ ಮೇ 16ರಿಂದ ನೆಟ್ ಫ್ಲಿಕ್ಸ್ ನಲ್ಲಿ ತೆರೆ ಕಾಣುತ್ತಿದೆ. ಇದು ಜೂಲಿಯಾ ಕ್ವಿನ್‌ನ ಹೆಚ್ಚು ಮಾರಾಟವಾದ ಕಾದಂಬರಿಗಳನ್ನು ಆಧರಿಸಿದ ಪ್ರೇಮಕಥೆಯಾಗಿದೆ. ಲೇಡಿ ವಿಸ್ಲ್‌ಡೌನ್ ಮೇಲೆ ಚಿತ್ರ ಕೇಂದ್ರೀಕೃತವಾಗಿದೆ. ಕುಟುಂಬದ ಒತ್ತಡದಿಂದ ಪೆನೆಲೋಪ್ ಫೆದರಿಂಗ್‌ಟನ್ (ನಿಕೋಲಾ ಕಾಗ್ಲಾನ್) ತನಗಾಗಿ ಗಂಡನನ್ನು ಹುಡುಕಲು ಪ್ರಾರಂಭಿಸುತ್ತಾಳೆ. ಆಗ ಕಾಲಿನ್ ಬ್ರಿಡ್ಜರ್ಟನ್ (ಲ್ಯೂಕ್ ನ್ಯೂಟನ್) ಅವಳ ಬದುಕಿನಲ್ಲಿ ಆಗಮಿಸುತ್ತಾನೆ. ಅವರಿಬ್ಬರು ಉತ್ತಮ ಸ್ನೇಹಿತರಾಗಿ ಜೀವನವನ್ನು ಕಾಣಲು ಬಯಸುತ್ತಾರೆ.


ಬಾಹುಬಲಿಕೆ ಕ್ರೌನ್ ಆಫ್ ಬ್ಲಡ್

ಶರದ್ ಕೇಳ್ಕರ್, ಸಮಯ್ ಠಕ್ಕರ್, ರಾಜೇಶ್ ಖಟ್ಟರ್ ಅವರು ಧ್ವನಿ ನೀಡಿರುವ ಸರಣಿ ಮೇ 17ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ. ಇದು ಮಾಹಿಷ್ಮತಿ ರಾಜ್ಯದ ಕಥೆಯನ್ನು ಆಧರಿಸಿದೆ. ಎಸ್.ಎಸ್. ರಾಜಮೌಳಿ ಅವರ ಇತ್ತೀಚಿನ ಚಿತ್ರದ ಅನಿಮೇಟೆಡ್ ಸರಣಿ ಇದಾಗಿದೆ. 2D ಅನಿಮೇಟೆಡ್ ಸರಣಿಯು ಒಂದು ಮಹಾಕಾವ್ಯದ ಕಥೆಯನ್ನು ಹೊಂದಿದೆ. ಭವ್ಯವಾದ ಯುದ್ಧದ ಸರಣಿಗಳು ಮತ್ತು ಕೆಲವು ಸಾಂಪ್ರದಾಯಿಕ ಪಾತ್ರಗಳು ಇದರಲ್ಲಿ ಗಮನ ಸೆಳೆಯಲಿದೆ.


ಜರಾ ಹಟ್ಕೆ ಜರಾ ಬಚ್ಕೆ

ವಿಕ್ಕಿ ಕೌಶಲ್, ಸಾರಾ ಅಲಿ ಖಾನ್, ಇನಾಮುಲ್ಹಾಕ್, ಸುಶ್ಮಿತಾ ಮುಖರ್ಜಿ ಅಭಿನಯದ ಈ ಚಿತ್ರ ಜಿಯೋ ಸಿನಿಮಾದಲ್ಲಿ ಮೇ 17ರಂದು ಬಿಡುಗಡೆಯಾಗಲಿದೆ. ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹಿಂದಿ ಚಿತ್ರ. ಇದರಲ್ಲಿ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ವಿವಾಹಿತ ದಂಪತಿಯಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಂತ ಮನೆಯನ್ನು ಮಾಡಿಕೊಳ್ಳಲು ಅವರು ಮಾಡುವ ಪರಿಶ್ರಮ ಚಿತ್ರದಲ್ಲಿದೆ. ಚಿತ್ರ ಕಳೆದ ವರ್ಷ ಜೂನ್ 2 ರಂದು ಬಿಡುಗಡೆಯಾಗಿದ್ದು, ಇದೀಗ ಒಟಿಟಿಗೆ ಪಾದಾರ್ಪಣೆ ಮಾಡುತ್ತಿದೆ.

ಇದನ್ನೂ ಓದಿ: Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಗ್ರೇಟ್ ಇಂಡಿಯನ್ ಕಪಿಲ್ ಶೋ

ಕಪಿಲ್ ಶರ್ಮಾ, ಅರ್ಚನಾ ಪುರಾಣ್ ಸಿಂಗ್, ಕೃಷ್ಣಾ ಅಭಿಷೇಕ್ ಅವರ ಈ ಸರಣಿ ಮೇ 18ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಕಪಿಲ್ ಶರ್ಮಾ ತನ್ನ ಹೊಸ ನೆಟ್‌ಫ್ಲಿಕ್ಸ್ ಸರಣಿಗೆ ಅಂತಾರಾಷ್ಟ್ರೀಯ ಅತಿಥಿ ಬ್ರಿಟಿಷ್ ಪಾಪ್ ಐಕಾನ್ ಎಡ್ ಶೀರಾನ್ ಅವರನ್ನು ವೇದಿಕೆಗೆ ಆಹ್ವಾನಿಸಿದ್ದಾರೆ. ಎಡ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಹಲವಾರು ಬಾರಿ ಹಾಸ್ಯನಟರನ್ನು ಭೇಟಿ ಮಾಡಿದ್ದಾರೆ ಮತ್ತು ಈ ಬಾರಿ ಅವರು ಶರ್ಮಾ ಅವರ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೂರ್ವಸಿದ್ಧತೆಯಿಲ್ಲದ ಸಂಗೀತ ಕಛೇರಿಯನ್ನು ಅವರು ಇಲ್ಲಿ ನಡೆಸಿಕೊಡಲಿದ್ದಾರೆ.

Continue Reading

ಸಿನಿಮಾ

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

ಜಿಯೋ ಸಿನಿಮಾ ಪ್ರೀಮಿಯಂನಲ್ಲಿ ವಿಶೇಷವಾಗಿ ಪ್ರಸಾರವಾಗುವ ʻಹೌಸ್ ಆಫ್ ದಿ ಡ್ರ್ಯಾಗನ್ ಎಸ್2ʼ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಜೂನ್ 17ರಿಂದ ಲಭ್ಯವಿರುತ್ತಿದೆ. ಪ್ರತಿ ಸೋಮವಾರ ಅಮೆರಿಕ ಸೇರಿದಂತೆ ಎಲ್ಲ ಕಡೆ ಕಂತುಗಳು ಪ್ರಸಾರವಾಗಲಿವೆ.ಮ್ಯಾಟ್ ಸ್ಮಿತ್, ಒಲಿವಿಯಾ ಕೂಕ್, ಎಮ್ಮಾ ಡಿ’ಅರೇ, ಈವ್ ಬೆಸ್ಟ್, ಸ್ಟೀವ್ ಟೌಸ್ಸೇಂಟ್, ಫೇಬಿಯೆನ್ ಫ್ರಾಂಕೆಲ್, ಎವಾನ್ ಮಿಷೆಲ್, ಟಾಮ್ ಗ್ಲಿನ್ನ್-ಕಾರ್ನೀ ಸೊನೊಯಾ ಮಿಝುನೊ ಮತ್ತು ರಿಸ್ ಇಫಾನ್ಸ್ ತಾರಾಗಣ ಹೊಂದಿದೆ.

VISTARANEWS.COM


on

House of the Dragon season 2 new trailer hints at a bloody
Koo

ಬೆಂಗಳೂರು: 2022ರ ಆಗಸ್ಟ್ ತಿಂಗಳಲ್ಲಿ ‘ಗೇಮ್ ಆಫ್ ಥ್ರೋನ್ಸ್’ನ ಪ್ರೀಕ್ವೆಲ್ ‘ಹೌಸ್ ಆಫ್ ದಿ ಡ್ರ್ಯಾಗನ್’ (House of the Dragon) ಮೊದಲ ಸೀಸನ್ ಬಿಡುಗಡೆ ಆಯ್ತು. ಮೊದಲ ಸೀಸನ್​ನಲ್ಲಿಯೇ ಗಮನ ಸೆಳೆದಿದ್ದ ‘ಹೌಸ್ ಆಫ್ ದಿ ಡ್ರ್ಯಾಗನ್’ ಎರಡನೇ ಸೀಸನ್​ ಎರಡು ವರ್ಷಗಳ ಬಳಿಕ ಬಿಡುಗಡೆ ಆಗಲಿದೆ. ಇದೀಗ ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2ರ ಟ್ರೈಲರ್ ಬಿಡುಗಡೆ ಆಗಿದ್ದು, ಅದರ ಜೊತೆಗೆ ವೆಬ್ ಸರಣಿಯ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಜಿಯೋ ಸಿನಿಮಾ ಪ್ರೀಮಿಯಂನಲ್ಲಿ ವಿಶೇಷವಾಗಿ ಪ್ರಸಾರವಾಗುವ ʻಹೌಸ್ ಆಫ್ ದಿ ಡ್ರ್ಯಾಗನ್ ಎಸ್2ʼ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಜೂನ್ 17ರಿಂದ ಲಭ್ಯವಿರುತ್ತಿದೆ. ಪ್ರತಿ ಸೋಮವಾರ ಅಮೆರಿಕ ಸೇರಿದಂತೆ ಎಲ್ಲ ಕಡೆ ಕಂತುಗಳು ಪ್ರಸಾರವಾಗಲಿವೆ.

ಜಾರ್ಜ್ ಆರ್.ಆರ್. ಮಾರ್ಟಿನ್ ಅವರ “ಫೈರ್ ಆ್ಯಂಡ್ ಬ್ಲಡ್” ಆಧರಿಸಿದ ಈ ಸರಣಿಯು ಹೌಸ್ ಟಾರ್ಗೇರಿಯನ್ ಕಥೆಯನ್ನು ಹೇಳುತ್ತಿದೆ. ಈ ರಾಜ ಕುಟುಂಬದಲ್ಲಿ ಅತ್ಯಂತ ಕಠಿಣ ಅಧಿಕಾರದ ಸಂಘರ್ಷಗಳ ನಂತರ ಕುಟುಂಬವು ಹೇಗೆ ರಾಜಕೀಯ ಒಳಸಂಚು, ಕೌಟುಂಬಿಕ ಶತ್ರುತ್ವಗಳನ್ನು ಎದುರಿಸಿ ಮುನ್ನಡೆಯುತ್ತವೆ ಮತ್ತು ಸಿಂಹಾಸನವನ್ನು ಮರಳಿ ಪಡೆಯಲು ಎದುರಾದ ಆಂತರಿಕ ಯುದ್ಧವನ್ನು ಹೇಗೆ ನಿಭಾಯಿಸುತ್ತದೆ ಎನ್ನುವುದನ್ನು ಹೇಳುತ್ತದೆ.

ಇದನ್ನೂ ಓದಿ: Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

ಮ್ಯಾಟ್ ಸ್ಮಿತ್, ಒಲಿವಿಯಾ ಕೂಕ್, ಎಮ್ಮಾ ಡಿ’ಅರೇ, ಈವ್ ಬೆಸ್ಟ್, ಸ್ಟೀವ್ ಟೌಸ್ಸೇಂಟ್, ಫೇಬಿಯೆನ್ ಫ್ರಾಂಕೆಲ್, ಎವಾನ್ ಮಿಷೆಲ್, ಟಾಮ್ ಗ್ಲಿನ್ನ್-ಕಾರ್ನೀ ಸೊನೊಯಾ ಮಿಝುನೊ ಮತ್ತು ರಿಸ್ ಇಫಾನ್ಸ್ ತಾರಾಗಣ ಹೊಂದಿದೆ. ಹೆಚ್ಚುವರಿ ತಾರಾಗಣದಲ್ಲಿ ಹ್ಯಾರಿ ಕೊಲೆಟ್, ಬೆಥನಿ ಅಂಟೋನಿಯ, ಫೋಬ್ ಕ್ಯಾಂಪ್ ಬೆಲ್, ಫಿಯಾ ಸಬನ್, ಜೆಫರ್ಸನ್ ಹಾಲ್ ಮತ್ತು ಮ್ಯಾಥ್ಯೂ ನೀಧಂ ಇದ್ದಾರೆ. ಹೊಸ ಸೀಸನ್ ನಲ್ಲಿ ಅನುಬಕರ್ ಸಲೀಂ, ಗೇಯ್ಲ್ ರಂಕಿನ್, ಫ್ರೆಡ್ಡೀ ಫಾಕ್ಸ್, ಸಿಮನ್ ರಸೆಲ್ ಬೀಲ್, ಕ್ಲಿಂಟನ್ ಲಿಬರ್ಟಿ, ಜೆಮೀ ಕೆನ್ನಾ, ಕಿಯೆರನ್ ಬ್ಯೂ, ಟಾಮ್ ಬೆನೆಟ್, ಟಾಮ್ ಟೇಲರ್ ಮತ್ತು ವಿನ್ಸೆಂಟ್ ರೆಗಾನ್ ಇದ್ದಾರೆ.

ಹೌಸ್ ಆಫ್ ದಿ ಡ್ರ್ಯಾಗನ್‘ ಸೀಸನ್ 2 ಜೂನ್ 17 ರಂದು ಎಚ್​ಬಿಓ ಮ್ಯಾಕ್ಸ್ ನಲ್ಲಿ ಬಿಡುಗಡೆ ಆಗಲಿದೆ. ಅದೇ ದಿನ ಜಿಯೋ​ನಲ್ಲಿಯೂ ಬಿಡುಗಡೆ. ಜಿಯೋನಲ್ಲಿ ‘ಹೌಸ್ ಆಫ್ ದಿ ಡ್ರಾಗನ್’ ವೆಬ್ ಸರಣಿ ಇಂಗ್ಲೀಷ್ ಸೇರಿದಂತೆ ಒಟ್ಟು ಆರು ಭಾಷೆಯಲ್ಲಿ ಬಿಡುಗಡೆ ಕಾಣಲಿದೆ. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ.

Continue Reading
Advertisement
Narendra Modi
ದೇಶ5 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ5 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ6 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ6 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ6 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ7 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ7 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ7 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ7 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ24 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌