ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ (Animal OTT Release) ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್ʼ ಚಿತ್ರ ಒಟಿಟಿಯಲ್ಲಿ ಬರಲು ಸಿದ್ಧವಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವದಂದು ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ರಣಬೀರ್ ಕಪೂರ್, ಅನಿಲ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್ ಮತ್ತು ತೃಪ್ತಿ ಡಿಮ್ರಿ ನಟಿಸಿರುವ ಈ ಚಿತ್ರವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.
ಹಿಂದಿ ಜತೆಗೆ, ʻಅನಿಮಲ್ʼ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿಯೂ ಲಭ್ಯವಿರುತ್ತದೆ. ಒಟಿಟಿ ಬಿಡುಗಡೆಯ ಕುರಿತು ರಣಬೀರ್ ಮಾತನಾಡಿ , “ಅನಿಮಲ್ ಚಿತ್ರಮಂದಿರಗಳಲ್ಲಿ ಪಡೆದ ಪ್ರತಿಕ್ರಿಯೆಯಿಂದ ನಾವು ಸಂತೋಷಗೊಂಡಿದ್ದೇವೆ. ಈಗ ಪ್ರಪಂಚದಾದ್ಯಂತದ ಪ್ರೇಕ್ಷಕರು ತಮ್ಮ ಮನೆಯಲ್ಲಿಯೇ ಕೂತು ಸಿನಿಮಾ ವೀಕ್ಷಿಸಬಹುದುʼʼಎಂದು ಹೇಳಿದ್ದಾರೆ.
ʼಅನಿಮಲ್ʼ 3 ಗಂಟೆ 21 ನಿಮಿಷಗಳ ಅವಧಿಯ ಚಲನಚಿತ್ರವಾಗಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ.ʼಅನಿಮಲ್’ ಚಿತ್ರ 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಹಿಂಸಾತ್ಮಕ, ಬೋಲ್ಡ್ ದೃಶ್ಯಗಳಿಂದಾಗಿ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಇವುಗಳ ಹೊರತಾಗಿಯೂ ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದ್ದು, ರಣಬೀರ್ ಕಪೂರ್ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾವಾಗಿ ಹೊರ ಹೊಮ್ಮಿದೆ. ಈ ಹಿಂದೆ ʼಸಂಜುʼ ರಣಬೀರ್ ಕಪೂರ್ ನಟನೆಯ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿತ್ತು. ಕೇವಲ 8 ದಿನಗಳಲ್ಲಿಯೇ ಇದನ್ನು ʼಅನಿಮಲ್ʼ ಹಿಂದಿಕ್ಕಿದೆ. ʼಸಂಜುʼ ಸಿನಿಮಾ ಭಾರತದಲ್ಲಿ 342 ಕೋಟಿ ರೂ. ಗಳಿಸಿತ್ತು.
ಇದನ್ನೂ ಓದಿ: Ranbir Kapoor: ರಣಬೀರ್ ಕಪೂರ್ ವಿರುದ್ಧ ಬಿತ್ತು ಕೇಸ್; ಅನಿಮಲ್ ಸಕ್ಸೆಸ್ ಬೆನ್ನಲ್ಲೇ ಸಂಕಷ್ಟ
ಜವಾನ್’, ‘ಪಠಾಣ್’ ಮತ್ತು ‘ಗದರ್ 2’ ನಂತರ ‘ಅನಿಮಲ್’ 2023ರ ನಾಲ್ಕನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರ ಹೊಮ್ಮಿತು. ಶಾರುಖ್ ಖಾನ್ ಅವರ ‘ಜವಾನ್’ ಭಾರತದಲ್ಲಿ 643.87 ಕೋಟಿ ರೂ. ಗಳಿಸಿದರೆ, ‘ಪಠಾಣ್’ 543.05 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಸನ್ನಿ ಡಿಯೋಲ್ ಅವರ ‘ಗದರ್ 2’ 525.45 ಕೋಟಿ ರೂ. ಗಳಿಸಿತ್ತು. ಈ ಸಿನಿಮಾದಿಂದಾಗಿ ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರುವ ಸಾಧ್ಯತೆ ಇದೆ. ಅವರ ಈ ಹಿಂದಿನ ಎರಡು ಬಾಲಿವುಡ್ ಚಿತ್ರಗಳು ಹೇಳುವಷ್ಟು ಕಲೆಕ್ಷನ್ ಮಾಡಿರಲಿಲ್ಲ. ʼಮಿಷನ್ ಮಜ್ನುʼ ಒಟಿಟಿ ಮೂಲಕ ತೆರೆ ಕಂಡಿದ್ದರೆ, ʼಗುಡ್‌ಬೈʼ ಬಾಕ್ಸ್ ಆಫೀಸ್‌ನಲ್ಲಿ ಮ್ಯಾಜಿಕ್ ಮಾಡಿರಲಿಲ್ಲ. ಇದೀಗ ಮೂರನೇ ಚಿತ್ರ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ದಕ್ಷಿಣ ಭಾರತದಂತೆ ಬಾಲಿವುಡ್ ಚಿತ್ರರಂಗದಲ್ಲೂ ಛಾಪು ಮೂಡಿಸಿದ್ದಾರೆ.