Rakshit Shetty: ಒಟಿಟಿಗೆ ಬಂತು ʻಸಪ್ತ ಸಾಗರದಾಚೆ ಎಲ್ಲೋʼ ಸೈಡ್‌ ʻಬಿʼ ಸಿನಿಮಾ! - Vistara News

ಒಟಿಟಿ

Rakshit Shetty: ಒಟಿಟಿಗೆ ಬಂತು ʻಸಪ್ತ ಸಾಗರದಾಚೆ ಎಲ್ಲೋʼ ಸೈಡ್‌ ʻಬಿʼ ಸಿನಿಮಾ!

Rakshit Shetty: ರಕ್ಷಿತ್​ ಶೆಟ್ಟಿ (Rakshit Shetty) ಜೊತೆ ರುಕ್ಮಿಣಿ ವಸಂತ್​ ಮತ್ತು ಚೈತ್ರಾ ಆಚಾರ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾ ಸ್ಟ್ರೀಮಿಂಗ್​ ಆಗುತ್ತಿದೆ. ಈ ಬಗ್ಗೆ ಚಿತ್ರತಂಡ ಅಷ್ಟೇನೂ ಪ್ರಚಾರ ಮಾಡಿರಲಿಲ್ಲ.

VISTARANEWS.COM


on

saptha sagaradache ello side B
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ (Rakshit Shetty) ಹಾಗೂ ರುಕ್ಮಿಣಿ ವಸಂತ್‌ (rukmini vasanth) ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ (SSE SideB Twitter Review) ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಸಕ್ಸಸ್ ಕಂಡಿತ್ತು. 2023ರ ನವೆಂಬರ್‌ 17ರಂದು ಸೈಡ್‌ ಬಿ ಸಿನಿಮಾ ರಿಲೀಸ್‌ ಆಗಿತ್ತು. ವಿಶೇಷ ಅಂದರೆ ಸೈಡ್‌ ಬಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಿತ್ತು. ಇದೀಗ ಸೈಡ್‌ ಬಿ ‘ಅಮೆಜಾನ್​ ಪ್ರೈಂ ವಿಡಿಯೊ’ (Amazon Prime Video) ಮೂಲಕ ಒಟಿಟಿಗೆ ಲಗ್ಗೆ ಇಟ್ಟಿದೆ.

ರಕ್ಷಿತ್​ ಶೆಟ್ಟಿ (Rakshit Shetty) ಜೊತೆ ರುಕ್ಮಿಣಿ ವಸಂತ್​ ಮತ್ತು ಚೈತ್ರಾ ಆಚಾರ್​ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾ ಸ್ಟ್ರೀಮಿಂಗ್​ ಆಗುತ್ತಿದೆ. ಈ ಬಗ್ಗೆ ಚಿತ್ರತಂಡ ಅಷ್ಟೇನೂ ಪ್ರಚಾರ ಮಾಡಿರಲಿಲ್ಲ.

“ಸೈಡ್- A ಬಹಳ ಕಾಡುತ್ತದೆ ಎನ್ನುವವರಿಗೆ ಸೈಡ್- B ಇನ್ನಷ್ಟು ಕಾಡುತ್ತದೆ. ಹೇಮಂತ್ ರಾವ್ ಮೇಕಿಂಗ್, ನಿರೂಪಣೆ ಹಾಗೂ ಅದನ್ನು ಕಟ್ಟಿಕೊಟ್ಟಿರುವ ಬಗೆ ಅದ್ಭುತ. ನೀವು ಸಿನಿಮಾ ಪ್ರೇಮಿಗಳಾಗಿದ್ದರೆ ಸಿನಿಮಾ ನೋಡಿ ಖುಷಿ ಪಡುತ್ತೀರಿ. ಅದು BGM ಆಗಿರಲಿ, ನಟನೆ ಇರಲಿ, ದೃಶ್ಯರೂಪಕ್ಕೆ ಇಳಿಸಿರುವ ಬಗೆ ಇರಲಿ ಪ್ರತಿಯೊಂದರಲ್ಲೂ ಸೈಡ್‌- B ಚೆನ್ನಾಗಿದೆ. ಚೈತ್ರಾ ಆಚಾರ್ ‘ಟೋಬಿ’ ಚಿತ್ರದಲ್ಲಿ ನಿಮ್ಮ ನಟನೆ ಮೆಚ್ಚಿದ್ದೆ. ಈ ಸಿನಿಮಾ ನೋಡಿದ ಮೇಲೆ ನಿಮ್ ಅಭಿಮಾನಿ ಆಗಿಬಿಟ್ಟೆ. ಎಂದಿನಂತೆ ರಕ್ಷಿತ್, ರುಕ್ಮಿಣಿ ತಮ್ಮ ತಮ್ಮ ಪಾತ್ರಗಳನ್ನು ಸೊಗಸಾಗಿ ನಿಭಾಯಿಸಿದ್ದಾರೆ. ಫಸ್ಟ್ ಹಾಫ್ ಎಂಜಾಯ್‌ ಮಾಡುವಂತಿದೆ. ಸೆಕೆಂಡ್ ಹಾಫ್ ಭಾವನಾತ್ಮಕವಾಗಿದೆ” ಎಂದು ವೀಕ್ಷಕರು ಈ ಹಿಂದೆ ಅಭಿಪ್ರಾಯ ಹಂಚಿಕೊಂಡಿದ್ದರು.

ಇದನ್ನೂ ಓದಿ: Leopard attack | ಓಂಕಾರ ಹಿಲ್ಸ್‌ ಹಿಂಭಾಗದಲ್ಲಿರುವ ಜಾಗ ನಟ ರಕ್ಷಿತ್‌ ಶೆಟ್ಟಿಗೆ ಸೇರಿದ್ದು; ಚಿರತೆ ಸೆರೆ ಕಾರ್ಯಕ್ಕೆ ಚುರುಕು

ಗೋಪಾಲಕೃಷ್ಣ ದೇಶಪಾಂಡೆ ಅವರು ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನ, ಅದ್ವೈತ್​ ಗುರುಮೂರ್ತಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸ್ವತಃ ರಕ್ಷಿತ್ ಶೆಟ್ಟಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಒಟಿಟಿ

Tillu Square: ಅನುಪಮಾ ಪರಮೇಶ್ವರನ್‌‌ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಬಹಿರಂಗ

Tillu Square: ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಲು ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ ಜ್ಯೂನಿಯರ್‌ ಎನ್‌ಟಿಆರ್‌ ಅವರು (Jr NTR Fans) ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಇದೀಗ ಸಿನಿಮಾ ಸಿನಿಮಾ ಒಟಿಟಿಗೆ ಲಗ್ಗೆ ಇಡುವುದಕ್ಕೆ ಸಜ್ಜಾಗಿದೆ.

VISTARANEWS.COM


on

Tillu Square anupama parameswaran movie tillu square release date
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ ʻಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ ʻಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಕೊಂಡಿತ್ತು. ಇದೀಗ ಸಿನಿಮಾ ಸಿನಿಮಾ ಒಟಿಟಿಗೆ ಲಗ್ಗೆ ಇಡುವುದಕ್ಕೆ ಸಜ್ಜಾಗಿದೆ.

‘ಟಿಲ್ಲು ಸ್ಕ್ವೇರ್’ 2024, ಮಾರ್ಚ್ 29ರಂದು ರಿಲೀಸ್ ಆಗಿತ್ತು. ‘ಡಿಜೆ ಟಿಲ್ಲು’ 30 ಕೋಟಿ ರೂಪಾಯಿ ಲೂಟಿ ಮಾಡಿದ್ದರೆ, ‘ಟಿಲ್ಲು ಸ್ಕ್ವೇರ್’ ಬಾಕ್ಸಾಫೀಸ್‌ನಲ್ಲಿ ಬರೋಬ್ಬರು 125 ಕೋಟಿ ರೂಪಾಯಿ ದೋಚಿದೆ. ಈ ವರ್ಷದ ಟಾಲಿವುಡ್‌ನ ಮೋಸ್ಟ್ ಸಕ್ಸೆಸ್‌ಫುಲ್‌ ಸಿನಿಮಾ ಎನಿಸಿಕೊಂಡಿದೆ. ನೆಟ್‌ಫ್ಲಿಕ್ಸ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಖರೀದಿ ಮಾಡಿದೆ. ತನ್ನ ಅಫಿಶಿಯಲ್ ಎಕ್ಸ್ ಖಾತೆಯಲ್ಲಿ ಏಪ್ರಿಲ್ 26ಕ್ಕೆ ‘ಟಿಲ್ಲು ಸ್ಕ್ವೇರ್’ ರಿಲೀಸ್ ಆಗುವುದಾಗಿ ಅನೌನ್ಸ್ ಮಾಡಿದೆ. ಈ ಸಿನಿಮಾ, ತೆಲುಗು ಸೇರಿದಂತೆ ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ: Tillu Square: 100 ಕೋಟಿ ರೂ. ಗಳಿಕೆ ಕಂಡ ಅನುಪಮಾ ಪರಮೇಶ್ವರನ್ ಸಿನಿಮಾ

`ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading

ಸಿನಿಮಾ

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Banned Film: ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುವ ಒಂದಷ್ಟು ಹಾಲಿವುಡ್ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿ ಅನುಮತಿ ನೀಡಿಲ್ಲ. ಭಾರತದಲ್ಲಿ ಪ್ರದರ್ಶನಗೊಳ್ಳದ ಆ ಸಿನಿಮಾಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Banned Films
Koo

ಬೆಂಗಳೂರು: ಭಾರತದಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನ ಕಾಣಬೇಕೆಂದರೆ ಮೊದಲು ಭಾರತೀಯ ಸೆನ್ಸಾರ್ ಮಂಡಳಿಯ ಅನುಮತಿ ಪಡೆಯಬೇಕು.  ಭಾರತೀಯ ಸೆನ್ಸಾರ್ ಮಂಡಳಿಯು ಉತ್ತಮವಾದ ಚಲನಚಿತ್ರಗಳನ್ನು ವೀಕ್ಷಿಸಲು ಅನುವು ಮಾಡಿಕೊಡುತ್ತದೆ. ಅಶ್ಲೀಲ ದೃಶ್ಯಾವಳಿ, ಕೆಟ್ಟ ಬೈಗುಳ ಪದಗಳಿರುವಂತಹ ಚಿತ್ರಗಳನ್ನು ಬ್ಯಾನ್ (Banned Film) ಮಾಡಲಾಗುತ್ತದೆ. ಇಂತಹ ಚಿತ್ರಗಳು ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಸೆನ್ಸಾರ್ ಮಂಡಳಿ ಅನುಮತಿ ನೀಡುವುದಿಲ್ಲ.

ಒಟಿಟಿ ಅಥವಾ ವಿದೇಶಿ ಮಾರುಕಟ್ಟೆಗಳಲ್ಲಿ ದೊಡ್ಡ ಹೆಸರು ಗಳಿಸಿರುವಂತಹ ಕೆಲವೊಂದು ಚಲನಚಿತ್ರಗಳು ಭಾರತದಲ್ಲಿ ಬಿಡುಗಡೆಯಾಗಲಿಲ್ಲ. ಸೆನ್ಸಾರ್ ಮಂಡಳಿ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ಪ್ರಸಿದ್ಧ ಚಲನಚಿತ್ರಗಳನ್ನು ಭಾರತೀಯ ಸೆನ್ಸಾರ್ ಮಂಡಳಿಯು ಸ್ಪಷ್ಟ ವಿಷಯಗಳ ಕಾರಣದಿಂದ ಭಾರತದಲ್ಲಿ ನಿಷೇಧಿಸಿದೆ. ಅಂತಹ ಹಾಲಿವುಡ್ ಚಿತ್ರಗಳ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Banned Film

1. ಫಿಫ್ಟಿ ಶೇಡ್ಸ್ ಆಫ್ ಗ್ರೇ(Fifty Shade Of Gray)

ಈ ಚಿತ್ರದ ಕಥೆ ಅನಾ ಎಂಬ ಕಾಲೇಜು ವಿದ್ಯಾರ್ಥಿನಿಯ ಸುತ್ತ ಸುತ್ತುತ್ತದೆ. ಆಕೆ ಒಬ್ಬ ವ್ಯಾಪಾರಿ ಉದ್ಯಮಿ ಕ್ರಿಶ್ಚಿಯನ್ನೊಂದಿಗೆ ಸಂಬಂಧ ಹೊಂದುತ್ತಾಳೆ. ಈ ಚಿತ್ರದಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಚಿತ್ರೀಕರಿಸಲಾಗಿದೆ. ಹಾಗಾಗಿ ಈ ಚಿತ್ರವನ್ನು ಭಾರತೀಯ ಸೆನ್ಸರ್ ಮಂಡಳಿ ನಿಷೇಧಿಸಿದೆ.

Banned Film

2. ದ ಡಾ ವಿನ್ಸಿ ಕೋಡ್ (The Da Vinci Code)

ಈ ಚಿತ್ರ ಡಿ ವಿನ್ಸಿ ಕೋಡ್ ರಾಬರ್ಟ್ ಲ್ಯಾಂಗ್ಡನ್ ಎಂಬ ಸಂಕೇತಶಾಸ್ತ್ರಜ್ಞನ ಬಗ್ಗೆ ಚಿತ್ರಿಸುತ್ತದೆ. ಅವರು ಪ್ಯಾರಿಸ್ ನಿಂದ ಲಂಡನ್ ಗೆ ಒಂದು ಕೊಲೆಯ ಬಗ್ಗೆ ತಿಳಿಯಲು ಹೋಗುತ್ತಾರೆ. ಈ ಚಿತ್ರದಲ್ಲಿ ಕ್ರಿಶ್ಚಿಯನ್ ವಿರೋಧಿ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸುವಂತೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬಾರತೀಯ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ಬ್ಯಾನ್ ಮಾಡಿದೆ.

3. ದ ಗರ್ಲ್ ವಿತ್ ಡ್ರ್ಯಾಗನ್ ಟ್ಯಾಟೂ (The Girl With Dragon Tattoo)

ಈ ಚಿತ್ರ ನಲವತ್ತು ವರ್ಷಗಳ ಹಿಂದೆ ನಾಪತ್ತೆಯಾದ ಮಹಿಳೆಯೊಬ್ಬಳ ಪ್ರಕರಣವನ್ನು ಭೇದಿಸಲು ಕಂಪ್ಯೂಟರ್ ಹ್ಯಾಕರ್ ಅನ್ನು ನೇಮಿಸಿಕೊಳ್ಳುವ ಪತ್ರಕರ್ತನ ಸುತ್ತ ಸುತ್ತುತ್ತದೆ. 2011ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಕೆಲವು ದೃಶ್ಯಗಳನ್ನು ಸೆನ್ಸರ್ ಮಂಡಳಿ ತೆಗೆದುಹಾಕುವಂತೆ ಹೇಳಿತು. ಆದರೆ ನಿರ್ದೇಶಕ ಡೇವಿಡ್ ಫಿಂಚರ್ ಇದನ್ನು ನಿರಾಕರಿಸಿದ್ದರಿಂದ ಭಾರತದಲ್ಲಿ ಈ ಚಿತ್ರ ಬಿಡುಗಡೆಯಾಗಲಿಲ್ಲ.

Banned Film

4. ಡರ್ಟಿ ಗ್ರ್ಯಾಂಡ್ ಪಾ( durty Grand pa)

ಇದು  ಯುಎಸ್ ನ ಮಿಲಿಟರಿ ಪರಿಣತರನ್ನು ಆಧರಿಸಿದ ಚಿತ್ರವಾಗಿದೆ. ಒಬ್ಬ ಅಜ್ಜ ಮೊಮ್ಮಗ ಜೇಸನ್ ಎನ್ನುವವನನ್ನು ತನ್ನ ಜೊತೆ ಪ್ಲೋರಿಡಾಕ್ಕೆ ಕರೆದೊಯ್ದರು. ಪ್ರವಾಸದ ವೇಳೆ ಅಜ್ಜನ ಸರಣಿ ದುಷ್ಕೃತ್ಯಗಳ ಬಗ್ಗೆ ಆತನಿಗೆ ತಿಳಿದಿರುವುದಿಲ್ಲ. ಈ ಚಿತ್ರದಲ್ಲಿ ಲೈಂಗಿಕತೆಯ ಬಗ್ಗೆ ಬಿಂಬಿಸಿದ ಕಾರಣ ಇದು ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Banned Film

5. ಬ್ಲೂ ಜಾಸ್ಮಿನ್ ( Blue Jasmine)

ಈ ಚಿತ್ರದಲ್ಲಿ ಕೆಲವು ಪಾತ್ರಗಳು ಹೆಚ್ಚು ಧೂಮಪಾನ ಮಾಡುತ್ತಿರುವುದು ಕಂಡುಬಂದ ಕಾರಣ ಅದನ್ನು ತೆಗೆಯುವಂತೆ ಸೆನ್ಸಾರ್ ಮಂಡಳಿ ತಿಳಿಸಿದ್ದು, ಇದಕ್ಕೆ ನಿರ್ದೇಶಕರು ಒಪ್ಪದ ಕಾರಣ ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ.

6. ಐ ಸ್ಪಿಟ್ ಆನ್ ಯುವರ್ ಗ್ರೇವ್ ( I Spit On Your Grave)

ಈ ಚಿತ್ರ ವಿವಾದಾತ್ಮಕವಾಗಿದ್ದು, ಹಲವಾರು ಭಯಾನಕ ಲೈಂಗಿಕ ಕಿರುಕುಳದ ದೃಶ್ಯಗಳನ್ನು ಹೊಂದಿದೆ. ಮೀರ್ ಜಾರ್ಚಿ ನಿರ್ದೇಶನದ ಈ ಚಿತ್ರವನ್ನು ಭಾರತ ಮಾತ್ರವಲ್ಲದೇ ಯುಕೆ, ಕೆನಡಾ, ಚೀನಾ, ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಲ್ಲಿ ನಿಷೇಧಿಸಲಾಗಿದೆ.

7. ಇಂಡಿಯಾನ ಜೋನ್ಸ್ ಆ್ಯಂಡ್ ದ ಟೆಂಪಲ್ ಆಫ್ ಡೂಮ್( Indiana Jones And The Temple Of Doom)

ಆರಾಧನೆಯ ಹೆಸರಿನಲ್ಲಿ ಬಲಿಪಶುಗಳನ್ನು ಬೆಂಕಿಗೆ ಎಸೆಯುವಂತಹ ಕ್ರೂರ ದೃಶ್ಯವನ್ನು ಒಳಗೊಂಡ ಈ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲಿಲ್ಲ. ಭಾರತೀಯ ಸೆನ್ಸಾರ್ ಮಂಡಳಿ ಇದನ್ನು ಕೆಟ್ಟ ಆಚರಣೆಯ ಮನಸ್ಥಿತಿ ಎಂದು ನಿಷೇಧಿಸಿದೆ.

8. ಗೆಟ್ ಹಾರ್ಡ್(Get Hard)

ಕಾಮಿಡಿ ಥ್ರಿಲ್ಲರ್ ಜೇಮ್ಸ್ ಕಿಂಗ್ ಎಂಬ ವ್ಯಕ್ತಿಯನ್ನು ಬಗ್ಗೆ ತಿಳಿಸುತ್ತದೆ ಮತ್ತು ಅವರು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ. ಇದರಿಂದ ಜನರು ಆಕ್ರೋಶಗೊಳ್ಳಬಹುದು ಎಂದು ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Banned Film

9. ಮ್ಯಾಜಿಕ್ ಮೈಕ್ XXL( magic mike XXL)

ಈ ಚಿತ್ರ ಸ್ಟ್ರಿಪ್ಪರ್ ಎಂಬ ಪುರುಷನ ಜೀವನವನ್ನು ಬಿಂಬಿಸುತ್ತದೆ. ಈ ವ್ಯಕ್ತಿ ಸಮಾವೇಶಕ್ಕಾಗಿ ಮಿರ್ಟಲ್ ಬೀಚ್ ಗೆ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಾನೆ. ಆ ವೇಳೆ ಅವರು ತಮ್ಮ ಹಿಂದಿನ ಹಳೆಯ ನೆನಪುಗಳನ್ನು ಪುನರುಜ್ಜೀವನ ಗೊಳಿಸುತ್ತಾರೆ. ಇದರಲ್ಲಿ ಹೆಚ್ಚು ಲೈಂಗಿಕತೆಯ ಬಗ್ಗೆ ಬಿಂಬಿಸಲಾದ್ದರಿಂದ ಭಾರತದಲ್ಲಿ ಮೊದಲ ಬಾರಿಗೆ ನಿಷೇಧಗೊಂಡಿತ್ತು. ನಂತರ ಅದರಲ್ಲಿರುವ ದೃಶ್ಯವನ್ನು ಕತ್ತರಿಸಲು ಸೆನ್ಸಾರ್ ಮಂಡಳಿ ತಿಳಿಸಿದರೂ ಅದನ್ನು ನಿರಾಕರಿಸಿದ ಕಾರಣ ಅದು ಎರಡನೇ ಬಾರಿ ನಿಷೇಧಗೊಂಡಿತ್ತು. ಹಾಗಾಗಿ ಈ ಚಿತ್ರ ಭಾರತದಲ್ಲಿ ಬಿಡುಗಡೆಯಾಗಲಿಲ್ಲ.

Continue Reading

ಸಿನಿಮಾ

12th fail Film: ಚೀನಾದಲ್ಲಿ 20000ಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಲಿದೆ `12th fail’ ಚಿತ್ರ

12th fail Film ವಿಧು ವಿನೋದ್ ಚೋಪ್ರಾ ಅವರು ನಿರ್ದೇಶನದ 12th fail ಚಿತ್ರ ಚೀನಾದಲ್ಲಿ 20000ಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ಶರ್ಮಾ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ವಿಕ್ರಾಂತ್ ಮಾಸ್ಸೆ ಅವರು ಮನೋಜ್ ಕುಮಾರ್ ಶರ್ಮಾ ಅವರ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

12th fail Film
Koo

ಬೆಂಗಳೂರು: ಭಾರತೀಯ ಸಿನಿಮಾಗಳು ಹೆಚ್ಚಾಗಿ ಭಾರತದಾದ್ಯಂತ ಬಿಡುಗಡೆಯಾಗುತ್ತದೆ. ಆ ವೇಳೆ ಕೆಲವು ಚಿತ್ರಗಳನ್ನು ಯಶಸ್ಸಿನತ್ತ ಮುನುಗ್ಗಿದ್ದರೆ ಕೆಲವು ನೆಲಕಚ್ಚುತ್ತವೆ. ಆದರೆ ಇದೀಗ ಭಾರತೀಯ ಸಿನಿಮಾವೊಂದು (12th fail Film) ವಿದೇಶದಲ್ಲಿ 20000ಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಲು ರೆಡಿಯಾಗಿದೆಯಂತೆ.

ಹೌದು. ವಿಧು ವಿನೋದ್ ಚೋಪ್ರಾ ಅವರು ನಿರ್ದೇಶನದ 12th fail ಚಿತ್ರ ಚೀನಾದಲ್ಲಿ 20000ಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ಶರ್ಮಾ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ವಿಕ್ರಾಂತ್ ಮಾಸ್ಸೆ ಅವರು ಮನೋಜ್ ಕುಮಾರ್ ಶರ್ಮಾ ಅವರ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರ ಅಕ್ಟೋಬರ್ 27ರಂದು 2023ರಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು, ನಂತರ ಒಟಿಟಿಯಲ್ಲಿಯೂ ಬಿಡುಗಡೆಯಾಗಿದ್ದು, ಬಾಲಿವುಡ್ ನ ತಾರೆಯರಾದ ಆಲಿಯಾ ಭಟ್, ದೀಪಿಕಾ ಪಡುಕೋಣೆ, ಕಂಗನಾ ರಾಣವತ್, ಕತ್ರಿನಾ ಕೈಪ್ ಮುಂತಾದವರು ಈ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಇದೀಗ ಚಿತ್ರ ಚೀನಾದಲ್ಲಿಯೂ ಬಿಡುಗಡೆಯಾಗಲಿದೆ ಎಂದು ಚಿತ್ರದ ನಟ ವಿಕ್ರಾಂತ್ ಅವರು ಸುದ್ದಿ ವಾಹಿನಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಚಿತ್ರ ಯುಪಿಎಸ್ ಸಿ ಆಕಾಂಕ್ಷಿಗಳ ಸುತ್ತ ಸುತ್ತುತ್ತದೆ. ಇದು ನಿಜ ಜೀವನದ ಅನುಭವಗಳನ್ನು ಆಧರಿಸಿದೆ. ಯುಪಿಎಸ್ ಸಿ ಪ್ರವೇಶ ಪರೀಕ್ಷೆಗೆ ಪ್ರಯತ್ನಿಸುವ ಲಕ್ಷಾಂತರ ವಿದ್ಯಾರ್ಥಿಗಳ ಹೋರಾಟವನ್ನು ಈ ಚಿತ್ರ ಪ್ರತಿಬಿಂಬಿಸುತ್ತದೆ. ಬಡತನವನ್ನು ಮೆಟ್ಟಿ ನಿಂತು ಐಪಿಎಸ್ ಅಧಿಕಾರಿಯಾದ ಮನೋಜ್ ಕುಮಾರ್ ಶರ್ಮಾ ಅವರ ಜೀವನವನ್ನು ಈ ಚಿತ್ರ ವಿವರಿಸುತ್ತದೆ. ಈ ಚಿತ್ರದಲ್ಲಿ ಮನೋಜ್ ಕುಮಾರ್ ಶರ್ಮಾ ಅವರ ಪತ್ನಿ ಶ್ರದ್ಧಾ ಜೋಶಿ ಅವರ ಪಾತ್ರದಲ್ಲಿ ಮೇಧಾ ಶಂಕರ್ ನಟಿಸಿದ್ದಾರೆ.

ಇದನ್ನೂ ಓದಿ: Ram Navami: ಅಯೋಧ್ಯೆ ರಾಮ ಮಂದಿರಲ್ಲಿ ಮೊದಲ ರಾಮ ನವಮಿ; ದೇಶದ ಜನತೆಗೆ ಮೋದಿ ನೀಡಿದ ಸಂದೇಶ ಇದು

ಚೀನಾದಲ್ಲಿ ಭಾರತೀಯ ಸಿನಿಮಾಕ್ಕೆ ಹೆಚ್ಚಿನ ಬೇಡಿಕೆ ಇದೆ. ಈ ಹಿಂದೆ ಅಮೀರ್ ಖಾನ್ ಅವರ ದಂಗಲ್ ಮತ್ತು 3 ಈಡಿಯಟ್ಸ್ ಚಿತ್ರಕ್ಕೆ ಚೀನಾದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿತ್ತು. ಅದೇ ರೀತಿ 12th fail ಚಿತ್ರ ಚೀನಾದಲ್ಲಿ 20000ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಬಿಡುಗಡೆಯಾಗುವುದರ ಮೂಲಕ ಚೀನಾದ ಜನತೆಗೆ ಮನರಂಜನೆಯನ್ನು ನೀಡುತ್ತದೆ ಎಂಬ ನಂಬಿಕೆ ಹುಸಿಯಾಗಲಾರದು ಎನ್ನಲಾಗುತ್ತಿದೆ.

Continue Reading

ಸಿನಿಮಾ

Ott Release This Week: ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಸಿನಿಮಾಗಳು, ವೆಬ್‌ ಸಿರೀಸ್‌!

Ott Release This Week: ವೀಕ್ಷಕರಿಗೆ ಅನುಕೂಲವಾಗುವಂತೆ ಒಟಿಟಿ (Ott Release This Week) ಪ್ಲಾಟ್ ಫಾರ್ಮ್‌ಗಳು ವೆಬ್ ಸರಣಿ ಮತ್ತು ಚಲನಚಿತ್ರಗಳನ್ನು ಎಲ್ಲಾ ಸಮಯದಲ್ಲೂ ಎಲ್ಲಿಯಾದರೂ ನಿಂತು ನೋಡಲು ಅನುಕೂಲವಾಗುವಂತೆ ಆನ್ ಲೈನ್ ವ್ಯವಸ್ಥೆಯನ್ನು ಕಲ್ಪಿಸಿದೆ. ಈ ವಾರ ಪ್ರೇಕ್ಷಕರಿಗೆ ರಸದೌತಣ ಉಣಬಡಿಸಲು ಓಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿ ಬಿಡುಗಡೆಯಾಗಲಿರುವ ಚಲನಚಿತ್ರ ಮತ್ತು ವೆಬ್ ಸರಣಿಗಳ ಪಟ್ಟಿ ಇಲ್ಲಿದೆ.

VISTARANEWS.COM


on

OTT
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವೀಕ್ಷಕರಿಗೆ ಧಾರಾವಾಹಿ, ಸಿನಿಮಾ ಕ್ರೇಜ್ ಹೆಚ್ಚಾಗಿದೆ. ಇಡೀ ದಿನ ಟಿವಿ ಮುಂದೆ ಕುಳಿತುಕೊಂಡಿರುತ್ತಾರೆ. ಆದರೆ ಹೊರಗಡೆ ಹೋಗುವಾಗ ಟಿವಿ ನೋಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ವೀಕ್ಷಕರಿಗೆ ಅನುಕೂಲವಾಗುವಂತೆ ಒಟಿಟಿ (Ott Release This Week) ಪ್ಲಾಟ್ ಫಾರ್ಮ್‌ಗಳು ವೆಬ್ ಸರಣಿ ಮತ್ತು ಚಲನಚಿತ್ರಗಳನ್ನು ಎಲ್ಲಾ ಸಮಯದಲ್ಲೂ ಎಲ್ಲಿಯಾದರೂ ನಿಂತು ನೋಡಲು ಅನುಕೂಲವಾಗುವಂತೆ ಆನ್ ಲೈನ್ ವ್ಯವಸ್ಥೆಯನ್ನು ಕಲ್ಪಿಸಿದೆ. ಅದರಂತೆ ಈ ವಾರ ಒಟಿಟಿ ಪ್ಲಾಟ್ ಫಾರ್ಮ್ ಗಳಲ್ಲಿ ಬಿಡುಗಡೆಯಾಗಲಿರುವ ಚಲನಚಿತ್ರ ಮತ್ತು ವೆಬ್ ಸಿರೀಸ್‌ ಪಟ್ಟಿ ಹೀಗಿವೆ.

OTT

Anyone But You

ಇದು ಅಮೆರಿಕನ್ ರೊಮ್ಯಾಂಟಿಕ್ ಹಾಸ್ಯ ಚಿತ್ರವಾಗಿದೆ. ಈ ಚಿತ್ರದ ಕಥೆ ಬೀ ಮತ್ತು ಬೆನ್ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಸಿಡ್ನಿ ಸ್ವೀನಿ ಮತ್ತು ಗ್ಲೆನ್ ಪೊವೆಲ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಅಲೆಕ್ಸಾಂಡ್ರಾ ಶಿಪ್, ಗಾಟಾ, ಹ್ಯಾಡ್ಲಿ ರಾಬಿನ್ಸನ್, ಮಿಚೆಲ್ ಹರ್ಡ್ , ಡರ್ಮಟ್ ಮುಲ್ರೋನಿ, ಡ್ಯಾರೆನ್ ಬಾರ್ನೆಟ್, ಬ್ರಿಯಾನ್ ಬ್ರೌನ್ ಮತ್ತು ರಾಚೆಲ್ ಗ್ರಿಫಿತ್ಸ್ ಈ ಚಿತ್ರದಲ್ಲಿ ನಟಿಸಿದ್ದಾರೆ.

OTT

ಡ್ಯೂನ್ ಪಾರ್ಟ್ 2

ಇದು ಫ್ರಾಂಕ್ ಹರ್ಬರ್ಟ್ ಅವರ 1965ರ ಕಾದಂಬರಿಯಾಗಿದ್ದು, ಹಾಗೂ ಇದು 2021ರಲ್ಲಿ ಬಿಡುಗಡೆಯಾದ ಡ್ಯೂನ್ ನ ಮುಂದುವರಿದ ಭಾಗವಾಗಿದೆ. ಹೌಸ್ ಹರ್ಕೋನೆನ್ ನ ದಬ್ಬಾಳಿಕೆಯನ್ನು ಕೊನೆಗೊಳಿಸಲು ಅವರ ವಿರುದ್ಧ ಯುದ್ಧ ಮಾಡಲು ಅರ್ರಾಕಿಸ್ ಗ್ರಹದ ಫ್ರೆಮೆನ್ ಜನರೊಂದಿಗೆ ಸೇರುವ ಪಾಲ್ ಅಟ್ರೀಡ್ಸ್ ಅವರ ಬಗ್ಗೆ ಇಲ್ಲಿ ಅನುಸರಿಲಾಗಿದೆ. ಈ ಚಿತ್ರದಲ್ಲಿ ಟಿಮೊಥಿ ಚಲಾಮೆಟ್, ಝೆಂಡಾಯಾ, ರೆಬೆಕಾ ಫರ್ಗುಸನ್, ಜೋಶ್ ಬ್ರೋಲಿನ್, ಡೇವ್ ಬಟಿಸ್ಟಾ, ಆಸ್ಟಿನ್ ಬಟ್ಲರ್ ಮತ್ತು ಫ್ಲಾರೆನ್ಸ್ ಪಗ್ ನಟಿಸಿದ್ದಾರೆ. ಏಪ್ರಿಲ್ 16ರಂದು ಬುಕ್ ಮೈ ಶೋನಲ್ಲಿ ಚಿತ್ರ ಬಿಡುಗಡೆಯಾಗಿದೆ.

OTT

ಆರ್ಟಿಕಲ್ 370

ಈ ಚಿತ್ರದಲ್ಲಿ ಯಾಮಿ ಗೌತಮಿ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅರುಣ್ ಗೋವಿಲ್, ವೈಭವ್ ತತ್ವವಾದಿ, ಸ್ಕಂದ ಠಾಕೂರ್ ಮತ್ತು ಅಶ್ವಿನಿ ಕೌಲ್ ಮುಖ್ಯ ಪಾತ್ರದಲ್ಲಿದ್ದಾರೆ. 2019ರಲ್ಲಿ ಕೈಗೊಳ್ಳಲಾದ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆಯುವಿಕೆಯ ಹಿನ್ನಲೆಯಲ್ಲಿ ಈ ಚಿತ್ರವನ್ನು ಮಾಡಲಾಗಿದೆ. ವರದಿಗಳ ಪ್ರಕಾರ ಆರ್ಟಿಕಲ್ 370 ಏಪ್ರಿಲ್ 19ರಂದು ಜಿಯೋ ಸಿನಿಮಾದಲ್ಲಿ ಬಿಡುಗಡೆಯಾಗಲಿದೆ.

OTT

ಸೈರನ್

ಇದು ಆಂಬ್ಯುಲೆನ್ಸ್ ಚಾಲಕನ ಸುತ್ತ ಸುತ್ತುತ್ತದೆ. ಅವನಿ ಅಪರಾಧಿ ಸ್ಥಾನದಲ್ಲಿದ್ದು, ಜೈಲಿನಿಂದ ಬಿಡುಗಡೆಯಾಗಲು ಕಾಯುತ್ತಿರುತ್ತಾನೆ. ಆದರೆ ಅವನ ಬಿಡುಗಡೆಗೆ 14 ವರ್ಷಗಳೇ ತೆಗೆದುಕೊಳ್ಳುತ್ತದೆ. ಈ ಚಿತ್ರದಲ್ಲಿ ಜಯಂ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವರದಿಗಳ ಪ್ರಕಾರ ಸೈರನ್ ಏಪ್ರಿಲ್ 19ರಂದು ಡಿಸ್ನಿ+ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ.

OTT

ಮೈ ಡಿಯರ್ ಡೊಂಗಾ

ಈ ಚಿತ್ರದಲ್ಲಿ ಅಭಿನವ್ ಗೌತಮ್ , ಶಾಲಿನಿ ಕೊಂಡೆಪುಡಿ, ದಿವ್ಯಾ ಶ್ರೀಪಾದ, ನಿಖಿಲ್ ಗಾಜುಲಾ ಮತ್ತು ಶಶಾಂಕ್ ಮಂಡೂರಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಏಪ್ರಿಲ್ 19ರಂದು ಆಹಾದಲ್ಲಿ ಬಿಡುಗಡೆಯಾಗಲಿದೆ.

OTT

ಡ್ರೀಮ್ ಸ್ಕ್ಯಾನೆರಿಯಾ

ಲಕ್ಷಾಂತರ ಅಪರಿಚಿತರು ಇದ್ದಕ್ಕಿದ್ದಂತೆ ತನ್ನ ಕನಸಿನಲ್ಲಿ ಬಂದು ಅವನನ್ನು ನೋಡಲು ಪ್ರಾರಂಭಿಸುವಾಗ ಅವನ ಜೀವನವನ್ನೇ ತಲೆಕೆಳಗಾಗಿ ನೋಡುವ ಒಬ್ಬ ಅಸಹಾಯಕ ಕುಟುಂಬದ ಮನುಷ್ಯನ ಮೇಲೆ ಡ್ರೀಮ್ ಸ್ಕ್ಯಾನೆರಿಯಾ ಚಿತ್ರ ಕೇಂದ್ರೀಕರಿಸುತ್ತದೆ. ಈ ಚಿತ್ರದಲ್ಲಿ ನಿಕೋಲಸ್ ಕೇಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಏಪ್ರಿಲ್ 19ರಂದು ಈ ಚಿತ್ರ ಲಯನ್ಸ್ ಗೇಟ್ ಪ್ಲೇನಲ್ಲಿ ಬಿಡುಗಡೆಯಾಗಲಿದೆ.

OTT

ದಿ ಟೂರಿಸ್ಟ್ ಸೀಸನ್ 2

ಈ ಚಿತ್ರ ಐರಿಶ್ ಎಂಬ ವ್ಯಕ್ತಿಯ ಸುತ್ತ ಸುತ್ತುತ್ತದೆ. ಅವನು ಆಸ್ಟ್ರೇಲಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾನು ಯಾರು ಎಂಬುದನ್ನು ನೆನಪಿಟ್ಟುಕೊಳ್ಳಲು ತನ್ನ ಭೂತಕಾಲದ ನೆನೆಪನ್ನು ಮರಳಿ ಪಡೆಯಲು ಸೆಣಸಾಡುತ್ತಾನೆ. ಈ ಸರಣಿಯಲ್ಲಿ ಜೇಮೀ ಡೋರ್ನಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಏಪ್ರಿಲ್ 19ರಂದು ಲಯನ್ಸ್ ಗೇಟ್ ಪ್ಲೇನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Mosquito: ಸೆಕೆಯ ಜತೆಗೆ ಸೊಳ್ಳೆಗಳ ಕಾಟ ಎದುರಿಸುತ್ತಿದ್ದೀರಾ? ಹಾಗಿದ್ದರೆ ಈ ಕ್ರಮ ಅನುಸರಿಸಿ

ಅವರ್ ಲಿವಿಂಗ್ ವರ್ಲ್ಡ್

ಈ ಚಿತ್ರ ಭೂಮಿಯ ಮೇಲಿನ ಜೀವವನ್ನು ಉಳಿಸಿಕೊಳ್ಳಲು ಅಗತ್ಯವಾದ ಸಂಪರ್ಕಗಳ ಜಾಲವನ್ನು ಪ್ರದರ್ಶಿಸುವ ಜಾಗತಿಕ ಪ್ರಯಾಣವನ್ನು ತೋರಿಸುತ್ತದೆ. ಇದನ್ನು ಆಸ್ಕರ್ ವಿಜೇತ ಕೇಟ್ ಬ್ಲಾಂಚೆಟ್ ನಿರೂಪಿಸಿದ್ದಾರೆ. ಇದು ಏಪ್ರಿಲ್ 17ರಂದು ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್ ಪ್ರಾರಂಭವಾಗಲಿದೆ.

Continue Reading
Advertisement
Pralhad Joshi
ಕರ್ನಾಟಕ2 hours ago

Pralhad Joshi: ಯುಪಿಎ ಕಾಲದಲ್ಲಿ ಸತ್ತ ಉಗ್ರನಿಗಾಗಿ ಸೋನಿಯಾ ಗಾಂಧಿ ಕಣ್ಣೀರಿಟ್ಟಿದ್ದರು: ಪ್ರಲ್ಹಾದ್‌ ಜೋಶಿ

Lok Sabha Election 2024
ಕರ್ನಾಟಕ3 hours ago

Lok Sabha Election: ಮೋದಿಯಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು, ನಾವು ಗ್ಯಾರಂಟಿ ಮೂಲಕ ಸ್ಪಂದಿಸಿದ್ದೇವೆ: ಸಿಎಂ

The Great Khal
ಪ್ರಮುಖ ಸುದ್ದಿ3 hours ago

The Great Khali : ರಾಹುಲ್ ಗಾಂಧಿ ಸುಳ್ಳ ಎಂದು ಕರೆದ ಬಿಜೆಪಿ ನಾಯಕ ದಿ ಗ್ರೇಟ್ ಖಲಿ, ಇಲ್ಲಿದೆ ವಿಡಿಯೊ

IPL 2024
ಪ್ರಮುಖ ಸುದ್ದಿ3 hours ago

IPL 2024 : ಗುಜರಾತ್​ ತಂಡಕ್ಕೆ3 ವಿಕೆಟ್​ ವಿಜಯ, ಪಂಜಾಬ್​ಗೆ ಬಿಡದ ಸೋಲಿನ ನಂಟು

belagavi Airport
ಕರ್ನಾಟಕ3 hours ago

Indigo Airlines: ಪ್ರಯಾಣಿಕರ ಲಗೇಜ್‌ ಬೆಂಗಳೂರಲ್ಲೇ ಬಿಟ್ಟು ಬೆಳಗಾವಿಗೆ ಬಂದ ವಿಮಾನ; ಮಾಜಿ ಸಿಎಂ ಬ್ಯಾಗ್‌ ಕೂಡ ಮಿಸ್ಸಿಂಗ್!‌

Viral News
ವೈರಲ್ ನ್ಯೂಸ್3 hours ago

Viral News: ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನೇತಾಡುವ ಯುವಕ; ಶಾಕಿಂಗ್‌ ವಿಡಿಯೊ ನೋಡಿ

Sportsmanship
ಕ್ರೀಡೆ4 hours ago

Sportsmanship : ಭಾರತದವರನ್ನೇ ಸೋಲಿಸಿ ತ್ರಿವರ್ಣ ಧ್ವಜವನ್ನೂ ಎತ್ತಿ ಹಿಡಿದ ಪಾಕ್ ಕರಾಟೆ ಪಟು!

DK Suresh
ಬೆಂಗಳೂರು4 hours ago

DK Suresh: ಬೆಲೆ ಏರಿಕೆ, ಜಿಎಸ್‌ಟಿ ಹೊರೆಯೇ ಮೋದಿ ಗ್ಯಾರಂಟಿ: ಡಿ.ಕೆ. ಸುರೇಶ್

soil
ಕೃಷಿ4 hours ago

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

Narendra modi
ದೇಶ5 hours ago

Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ22 hours ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ1 day ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 day ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ2 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ2 days ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ2 days ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ3 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ5 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

ಟ್ರೆಂಡಿಂಗ್‌