Site icon Vistara News

The Kerala Story:‌ ಒಟಿಟಿಗೆ ಬರ್ತಾ ಇದೆ ‘ದಿ ಕೇರಳ ಸ್ಟೋರಿ’ ಸಿನಿಮಾ; ಸ್ಟ್ರೀಮಿಂಗ್ ಯಾವಾಗ?

The Kerala Story to stream on OTT from this date

ಬೆಂಗಳೂರು: ಕೇರಳದ ಹಿಂದು/ಕ್ರಿಶ್ಚಿಯನ್ ಯುವತಿಯರನ್ನು ಸಿರಿಯಾ ಅಥವಾ ಅಫಘಾನಿಸ್ತಾನಕ್ಕೆ ಕಳಿಸಿ ಇಸ್ಲಾಂ​ಗೆ ಮತಾಂತರ ಮಾಡುವ (ಲವ್ ಜಿಹಾದ್​ಗೆ ಗುರಿಪಡಿಸುವ) ಕಥೆಯನ್ನು ಒಳಗೊಂಡ ʻದಿ ಕೇರಳ ಸ್ಟೋರಿʼ ಸಿನಿಮಾ ಭಾರಿ ವಿವಾದದ ನಡುವೆಯೂ ಒಳ್ಳೆಯ ಕಲೆಕ್ಷನ್‌ ಮಾಡಿತ್ತು. ಇದೀಗ ಸಿನಿಮಾ ಒಟಿಟಿಗೆ ಎಂಟ್ರಿ ಕೊಡುತ್ತಿದೆ. ‘ಜೀ5’ ಒಟಿಟಿ (Zee5 OTT) ಮೂಲಕ ಫೆಬ್ರವರಿ 16ರಿಂದ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಈ ಮುಂಚೆ ಜೀ5 ಸಂಸ್ಥೆ ‘ದಿ ಕೇರಳ ಸ್ಟೋರಿ’ ಡಿಜಿಟಲ್ ರೈಟ್ಸ್ ಕೊಂಡುಕೊಂಡಿದೆ ಎಂದು ಈ ಮುಂಚೆಯೇ ವರದಿಯಾಗಿತ್ತು.

ಬರೋಬ್ಬರಿ 9 ತಿಂಗಳು ಕಳೆದ ಬಳಿಕ ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರಕ್ಕೆ ಸಜ್ಜಾಗಿದೆ. ʻದಿ ಕೇರಳ ಸ್ಟೋರಿʼ (The Kerala Story) ಸಿನಿಮಾವನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಷೇಧಿಸಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಪ್ರದರ್ಶನ ರದ್ದುಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಘೋಷಣೆ ಮಾಡಿದ್ದರು. ಮಾತ್ರವಲ್ಲದೆ, ಚೆನ್ನೈ ಸೇರಿದಂತೆ ಕೆಲವು ನಗರಗಳಲ್ಲಿ, ತಮಿಳುನಾಡಿನ ಕೆಲವು ಮಲ್ಟಿಪ್ಲೆಕ್ಸ್‌ಗಳು ಕೇರಳ ಸ್ಟೋರಿಯನ್ನು ಪ್ರದರ್ಶಿಸುವುದನ್ನು ನಿಲ್ಲಿಸಿದ್ದರು. ಇಷ್ಟಾದರೂ ಭರ್ಜರಿ ಗಳಿಕೆ ಕಂಡಿತ್ತು.ಇದೇ ಕಾರಣದಿಂದ ಇದರ ಒಟಿಟಿ ರಿಲೀಸ್​ ಕೂಡ ತಡವಾಗಿತ್ತು. ವಿಶ್ವಾದ್ಯಂತ ಬಾಕ್ಸ್​ ಆಫೀಸ್​ನಲ್ಲಿ ‘ದಿ ಕೇರಳ ಸ್ಟೋರಿ’ ಗಳಿಸಿದ್ದು ಬರೋಬ್ಬರಿ 303 ಕೋಟಿ ರೂಪಾಯಿ.

ಇದನ್ನೂ ಓದಿ: Sudipto Sen: ಮತ್ತೆ ಒಂದಾದ ‘ದಿ ಕೇರಳ ಸ್ಟೋರಿ’ ಚಿತ್ರ ತಂಡ; ಈ ಬಾರಿ ನಕ್ಸಲ್‌ ಸಮಸ್ಯೆಯ ಸಿನಿಮಾ

ಈ ಚಿತ್ರದ ಬಿಡುಗಡೆಗೆ ಕಾಂಗ್ರೆಸ್​, ಇತರ ಕಮ್ಯುನಿಸ್ಟ್ ಪಕ್ಷಗಳು ವಿರೋಧಿಸಿದ್ದವು. ಇದರಲ್ಲಿ ಇಸ್ಲಾಂಅನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿದ್ದರು. ಬಿಡುಗಡೆಗೂ ಮುನ್ನವೇ ಮದ್ರಾಸ್, ಕೇರಳ ಹೈಕೋರ್ಟ್​ಗಳಿಗೆ, ಸುಪ್ರೀಂಕೋರ್ಟ್​ಗೆ ಹಲವರು ಅರ್ಜಿ ಸಲ್ಲಿಸಿದ್ದರು. ಆದರೆ ಯಾವುದೇ ಕೋರ್ಟ್​ಗಳೂ ಪ್ರದರ್ಶನಕ್ಕೆ ತಡೆ ನೀಡಿರಲಿಲ್ಲ. ಮೇ 5ರಂದು ಸಿನಿಮಾ ಬಿಡುಗಡೆಯಾಗಿತ್ತು. ಸುದೀಪ್ತೋ ಸೇನ್ ನಿರ್ದೇಶಿಸಿದ ಮತ್ತು ವಿಪುಲ್ ಶಾ ನಿರ್ಮಿಸಿದ್ದಾರೆ. ಅದಾ ಶರ್ಮಾ ಚಿತ್ರದ ನಾಯಕಿಯಾಗಿ ನಟಿಸಿದ್ದರು.

Exit mobile version