Parineeti Chopra-Raghav Chadha Engagement Parineeti Chopra : ಪರಿಣಿತಿ ಚೋಪ್ರಾ-ರಾಘವ್​ ಚಡ್ಡಾ ನಿಶ್ಚಿತಾರ್ಥಕ್ಕೆ ದೆಹಲಿಗೆ ಬಂದಿಳಿದ ಪ್ರಿಯಾಂಕಾ ಚೋಪ್ರಾ? - Vistara News

South Cinema

Parineeti Chopra : ಪರಿಣಿತಿ ಚೋಪ್ರಾ-ರಾಘವ್​ ಚಡ್ಡಾ ನಿಶ್ಚಿತಾರ್ಥಕ್ಕೆ ದೆಹಲಿಗೆ ಬಂದಿಳಿದ ಪ್ರಿಯಾಂಕಾ ಚೋಪ್ರಾ?

ಸಮಾರಂಭದಲ್ಲಿ ಪರಿಣಿತಿ (Parineeti Chopra) ಮತ್ತು ರಾಘವ್ ಅವರ ಕುಟುಂಬಗಳು ಮತ್ತು ಅವರ ಆಪ್ತರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಪರಿಣಿತಿ ಚೋಪ್ರಾ- ರಾಘವ್​ ಚಡ್ಡಾ ಪದೇಪದೆ ಒಟ್ಟಿಗೆ ಕಾಣಿಸಿಕೊಂಡಿದ್ದೇ ಹೀಗೊಂದು ಸುದ್ದಿ ಹುಟ್ಟಲು ಕಾರಣ.

VISTARANEWS.COM


on

Parineeti Chopra-Raghav Chadha Engagement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್​ ನಟಿ ಪರಿಣಿತಿ ಚೋಪ್ರಾ (Parineeti Chopra) ಮತ್ತು ಆಮ್​ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್​ ಚಡ್ಡಾ (Raghav Chadha) ಜತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ವದಂತಿಗಳು ಸಾಕಷ್ಟು ದಿನದಿಂದ ಹರಿದಾಡುತ್ತಿದೆ. ಇವರಿಬ್ಬರ ನಿಶ್ಚಿತಾರ್ಥ ಮೇ 13ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ನಿಶ್ಚಿತಾರ್ಥ ಸಮಾರಂಭ ಸಕಲ ತಯಾರಿ ಈಗಾಗಲೇ ನಡೆಯುತ್ತಿದೆ. ಪ್ರಿಯಾಂಕಾ ಚೋಪ್ರಾ ಈಗಾಗಲೇ ದೆಹಲಿಗೆ ಬಂದಿಳಿದಿದ್ದಾರೆ. ಸಿನಿಮಾ, ರಾಜಕೀಯ, ಕ್ರೀಡಾ ಕ್ಷೇತ್ರದ ಗಣ್ಯರು ಕೂಡ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಸಮಾರಂಭದಲ್ಲಿ ಪರಿಣಿತಿ ಮತ್ತು ರಾಘವ್ ಅವರ ಕುಟುಂಬಗಳು ಮತ್ತು ಅವರ ಆಪ್ತರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಪರಿಣಿತಿ ಚೋಪ್ರಾ- ರಾಘವ್​ ಚಡ್ಡಾ ಪದೇಪದೆ ಒಟ್ಟಿಗೆ ಕಾಣಿಸಿಕೊಂಡಿದ್ದೇ ಹೀಗೊಂದು ಸುದ್ದಿ ಹುಟ್ಟಲು ಕಾರಣ. ಕಳೆದ ಚೋಪ್ರಾ ಮತ್ತು ಚಡ್ಡಾ ಕಳೆದ ತಿಂಗಳು ಎರಡ್ಮೂರು ಬಾರಿ ಒಟ್ಟೊಟ್ಟಿಗೆ ರೆಸ್ಟೋರೆಂಟ್​ಗೆ ಹೋಗಿದ್ದರು. ಅವರು ಒಂದೇ ಕಾರಿನಲ್ಲಿ ಹೋಗಿ ಹೋಟೆಲ್​ ಮುಂದೆ ಇಳಿಯುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ನಿಶ್ಚಿತಾರ್ಥ ಬಗ್ಗೆ ಮಾಧ್ಯಮವೊಂದು ʻʻದೆಹಲಿಯಲ್ಲಿ ನಿಶ್ಚಿತಾರ್ಥ ನಡೆದ ದಿನ ಅತಿಥಿಗಳಿಗೆ ಊಟವನ್ನು ಏರ್ಪಡಿಸಲಾಗುತ್ತಿದೆ. ಪರಿಣಿತಿ ಮತ್ತು ರಾಘವ್ ಅವರ ರೋಕಾ ಮುಗಿದಿದೆ. ಈ ವರ್ಷದ ಅಕ್ಟೋಬರ್ ಅಂತ್ಯದ ವೇಳೆಗೆ ಇವರಿಬ್ಬರು ಮದುವೆಯಾಗುವ ಸಾಧ್ಯತೆಯಿದೆʼʼ ಎಂದು ಮೂಲಗಳು ತಿಳಿಸಿದೆ.

ಇದನ್ನೂ ಓದಿ: Parineeti Chopra: ಪರಿಣಿತಿ ಚೋಪ್ರಾ-ರಾಘವ್​ ಚಡ್ಡಾ ನಿಶ್ಚಿತಾರ್ಥದ ಡೇಟ್‌ ಫಿಕ್ಸ್‌?

ಕುತೂಹಲಕಾರಿ ಸಂಗತಿಯೆಂದರೆ, ಪರಿಣಿತಿ ಅವರ ಸೋದರ ಸಂಬಂಧಿ ಪ್ರಿಯಾಂಕಾ ಚೋಪ್ರಾ ಅದೇ ಸಮಯದಲ್ಲಿ ʻಜಿಯೋ ಮಾಮಿʼ ಚಲನಚಿತ್ರೋತ್ಸವಕ್ಕಾಗಿ ಭಾರತದಲ್ಲಿರುತ್ತಾರೆ. ಪರಿಣಿತಿ ಮತ್ತು ರಾಘವ್​ ಚಡ್ಡಾ ಇವರಿಬ್ಬರಿಗೂ 34 ವರ್ಷ. ಪರಿಣಿತಿ ಬಾಲಿವುಡ್​​ ನಟಿ, ರಾಘವ್​ ಚಡ್ಡಾ ರಾಜಕೀಯದಲ್ಲಿ ಚಾಪು ಮೂಡಿಸಿದವರು. ಇತ್ತೀಚೆಗೆ ಪರಿಣಿತಿ ಚೋಪ್ರಾ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರ ಎಡಗೈ ಉಂಗುರದ ಬೆರಳಿಗೆ ಬೆಳ್ಳಿಯ ಬ್ಯಾಂಡ್​ ಇತ್ತು. ಇದೇ ಕಾರಣಕ್ಕೆ ರೋಕಾ ಆಚರಣೆ ನಡೆದಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಿಣಿತಿ ಮೂಲತಃ ಹರ್ಯಾಣದವರು ಆಗಿದ್ದರಿಂದ ಅಲ್ಲಿನ ಸಂಪ್ರದಾಯದ ಪ್ರಕಾರ ಮದುವೆ ಗೊತ್ತಾದ ಬಳಿಕ ನಿಶ್ಚಿತಾರ್ಥಕ್ಕೂ ಪೂರ್ವ ವಧು ಮತ್ತು ವರನ ಕುಟುಂಬದವರು ಸೇರಿಕೊಂಡು ಈ ರೋಕಾ ಆಚರಣೆ ಮಾಡುತ್ತಾರೆ. ಹುಡುಗಿ-ಹುಡುಗ ಇಬ್ಬರಿಗೂ ತಿಲಕ ಇಡಲಾಗುತ್ತದೆ. ಅಲಂಕಾರ ಮಾಡಲಾಗುತ್ತದೆ. ಎರಡೂ ಕುಟುಂಬದವರೂ ಪರಸ್ಪರರಿಗೆ ಉಡುಗೊರೆ ಕೊಡುತ್ತಾರೆ. ಇದು ಮದುವೆಯಾಗಲು ಒಪ್ಪಿದ್ದಕ್ಕೆ ಮೊದಲ ಸಮಾರಂಭವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

Pawan Kalyan: ಪವನ್ ಕಲ್ಯಾಣ್ ಕತ್ತಿ ಹಿಡಿದು ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ನಟ ಕೆಂಪು ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಟೀಸರ್‌ ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಿದೆ.ಮೋಘಲ್‌ ಚಕ್ರವರ್ತಿ ಆಗಿ ಬಾಬಿ ಡಿಯೋಲ್‌ ಕಂಡಿದ್ದಾರೆ. ಮೆಗಾ ಸೂರ್ಯ ಫಿಲ್ಮ್ ಅಡಿಯಲ್ಲಿ ಎ ದಯಾಕರ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದರೆ, ಎಎಮ್ ರತ್ನಂ ಅವರು ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ.

VISTARANEWS.COM


on

Pawan Kalyan Hari Hara Veera Mallu Part 1 teaser Out
Koo

ಬೆಂಗಳೂರು: ಜನ ಸೇನಾ ಪಕ್ಷದ (Jana Sena Party) ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Andhra Pradesh assembly election) ಪೀಠಂಪುರಂ ಕ್ಷೇತ್ರದಿಂದ (Anushka Shetty) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರ ಜತೆಗೆ ಪವನ್ ಕಲ್ಯಾಣ್ ನಟನೆಯ ಹರಿ ʻಹರ ವೀರ ಮಲ್ಲು ಭಾಗ 1ʼ (Hari Hara Veera Mallu)ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ಟೀಸರ್‌ನಲ್ಲಿ ಪವನ್ ಕಲ್ಯಾಣ್ ಅಬ್ಬರಿಸಿದ್ದಾರೆ. ಟೀಸರ್‌ನಲ್ಲಿ ಮಗಳು ತಂದೆಯ ಮೇಲೆ ಆಗುತ್ತಿರುವ ದಬ್ಬಾಳಿಕೆ ಬಗ್ಗೆ ಪ್ರಶ್ನೆ ಇಡುತ್ತಾಳೆ. ಆಗ ತಂದೆ ʻʻಪ್ರತಿಯೊಬ್ಬನನ್ನು ಅವನ ಮೇಲಿರೋನು ದೋಚಿಕೊಳ್ಳುತ್ತಾನೆ. ನಮ್ಮನ್ನು ದೊರೆ ದೋಚಿಕೊಳ್ಳುತ್ತಾನೆ. ದೊರೆಯನ್ನು ಗೋಲ್ಕುಂಡ ನವಾಬ್‌ ದೋಚಿಕೊಳ್ಳುತ್ತಾನೆ. ಅವನಲ್ಲಿ ಇರುವುದನ್ನು ಮೋಘಲ್‌ ಚಕ್ರವರ್ತಿ ದೋಚಿಕೊಳ್ಳುತ್ತಾನೆ. ನಮ್ಮ ಮೇಲೆ ಇರುವ ಈ ಕಳ್ಳರನ್ನು ದೋಚಿಕೊಳ್ಳೋದಕ್ಕೆ ಭಗವಂತ ಖಂಡಿತ ಒಬ್ಬನನ್ನು ಕಳಿಸಿಕೊಡುತ್ತಾನೆʼʼ ಎಂದಾಗ ಪವನ್‌ ಎಂಟ್ರಿ ಆಗುತ್ತಾರೆ. ಹಾಗೇ ಮೋಘಲ್‌ ಚಕ್ರವರ್ತಿ ಆಗಿ ಬಾಬಿ ಡಿಯೋಲ್‌ ಕಂಡಿದ್ದಾರೆ.

ಪವನ್ ಕಲ್ಯಾಣ್ ಕತ್ತಿ ಹಿಡಿದು ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ನಟ ಕೆಂಪು ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಟೀಸರ್‌ ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಿದೆ.

ಇದನ್ನೂ ಓದಿ: Pawan Kalyan: ಎನ್‌ಡಿಎ ತೊರೆಯಲ್ಲ! ಉಲ್ಟಾ ಹೊಡೆದ ನಟ, ಜನಸೇನಾ ನಾಯಕ ಪವನ್ ಕಲ್ಯಾಣ್

ಮೆಗಾ ಸೂರ್ಯ ಫಿಲ್ಮ್ ಅಡಿಯಲ್ಲಿ ಎ ದಯಾಕರ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದರೆ, ಎಎಮ್ ರತ್ನಂ ಅವರು ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರ ಹಾಡುಗಳು ಮತ್ತು ಸಂಗೀತ ಸಂಯೋಜನೆ ಚಿತ್ರಕ್ಕಿದೆ. ನಿಧಿ ಅಗರ್ವಾಲ್, ಎಂ. ನಾಸರ್, ಸುನಿಲ್, ರಘುಬಾಬು, ಸುಬ್ಬರಾಜು, ಮತ್ತು ನೋರಾ ಫತೇಹಿ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಹಿಂದೆ ಪವನ್ ಕಲ್ಯಾಣ್ ರಾಜಕೀಯದತ್ತ ಗಮನಹರಿಸುತ್ತಿರುವುದರಿಂದ ಸಿನಿಮಾ ಇನ್ನು ಮುಂದೆ ಮಾಡುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಕ್ರಿಶ್‌ ಜಾಗರ್ಲಮುಡಿ ಅವರ ನಿರ್ದೇಶನ ಈ ಸಿನಿಮಾಕ್ಕಿದೆ.

ದಬ್ಬಾಳಿಕೆ ಮಾಡುವವರ ವಿರುದ್ಧ ಹೋರಾಡುವ ʻಹರಿ ಹರ ವೀರ ಮಲ್ಲುʼ ಆಗಿ ಪವನ್ ಕಲ್ಯಾಣ್ ಕಾಣಿಸಿಕೊಂಡಿದ್ದಾರೆ. ‘ಧರ್ಮಕ್ಕಾಗಿ ಯುದ್ಧ’ ಎನ್ನುವ ಕ್ಯಾಪ್ಶನ್ ಗಮನ ಸೆಳೆದಿದೆ.

ಸದ್ಯ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಚಂದ್ರಬಾಬು ನಾಯ್ಡು ಅವರ ʻತೆಲುಗು ದೇಶಂʼ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರ ಮತ್ತು ಒಟ್ಟು 175 ವಿಧಾನಸಭಾ ಕ್ಷೇತ್ರಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ಪವನ್‌ ಕಲ್ಯಾಣ್ ಅವರ ಜನಸೇನಾ ಪಕ್ಷವು ಒಟ್ಟು 175 ಸ್ಥಾನಗಳ ಪೈಕಿ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಟಿಡಿಪಿ 144 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಕಡೆ ಸ್ಪರ್ಧಿಸಲಿದೆ. ಟಿಡಿಪಿ 17 ಕ್ಷೇತ್ರ ಮತ್ತು ಜನಸೇನಾ ಪಕ್ಷವು 2 ಕಡೆ ಕಣಕ್ಕಿಳಿಯಲಿದೆ.

Continue Reading

ಕಾಲಿವುಡ್

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Ilaiyaraaja Issues Legal Notice: ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇಳಯರಾಜಾ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

VISTARANEWS.COM


on

Ilaiyaraaja Issues Legal Notice to Rajinikanth Coolie
Koo

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ (Coolie Movie) ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ (Ilaiyaraaja Issues Legal Notice) ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ (‘Wa Wa Pabha Wa’)ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

ʻತಲೈವರ್ 171ʼ ಸಿನಿಮಾ ಇದೀಗ ಕೂಲಿ ಎಂದು ಟೈಟಲ್‌ ಇಡಲಾಗಿದೆ. ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.
ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading

ಕಾಲಿವುಡ್

Uma Ramanan: ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ ಇನ್ನಿಲ್ಲ

Uma Ramanan: ಉಮಾ ರಮಣನ್ ತರಬೇತಿ ಪಡೆದ ಶಾಸ್ತ್ರೀಯ ಗಾಯಕಿಯಾಗಿದ್ದು. 35 ವರ್ಷಗಳಲ್ಲಿ 6,000 ಕ್ಕೂ ಹೆಚ್ಚು ಸಂಗೀತ ಕಛೇರಿಗಳಲ್ಲಿ ಕಾಣಿಸಿಕೊಂಡರು. ಉಮಾ ಅವರು ತಮ್ಮ ಪತಿಗಾಗಿ ಹಲವಾರು ಹಾಡುಗಳನ್ನು ಹಾಡಿದ್ದರೂ, ಇಳಯರಾಜ ಅವರೊಂದಿಗಿನ ಅವರ ಒಡನಾಟವೇ ಅವರನ್ನು ಖ್ಯಾತಿಗೆ ತಂದಿತ್ತು.

VISTARANEWS.COM


on

Uma Ramanan dies in Chennai
Koo

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ (Uma Ramanan) ಅವರು ಬುಧವಾರ (ಮೇ.1) ನಿಧನರಾದರು. ಉಮಾ ರಮಣನ್ ಅವರಿಗೆ 72 ವರ್ಷ ವಯಸ್ಸಾಗಿತ್ತು. ತಮಿಳು ಚಿತ್ರರಂಗದಲ್ಲಿ ಅನೇಕ ಹಿಟ್‌ ಹಾಡುಗಳನ್ನು ಹಾಡಿದ್ದರು. ಸಾವಿನ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಂತ್ಯಕ್ರಿಯೆಯ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ಉಮಾ ರಮಣನ್ ತರಬೇತಿ ಪಡೆದ ಶಾಸ್ತ್ರೀಯ ಗಾಯಕಿಯಾಗಿದ್ದು. 35 ವರ್ಷಗಳಲ್ಲಿ 6,000 ಕ್ಕೂ ಹೆಚ್ಚು ಸಂಗೀತ ಕಛೇರಿಗಳಲ್ಲಿ ಕಾಣಿಸಿಕೊಂಡರು. ಉಮಾ ಅವರು ತಮ್ಮ ಪತಿಗಾಗಿ ಹಲವಾರು ಹಾಡುಗಳನ್ನು ಹಾಡಿದ್ದರೂ, ಇಳಯರಾಜ ಅವರೊಂದಿಗಿನ ಅವರ ಒಡನಾಟವೇ ಅವರನ್ನು ಖ್ಯಾತಿಗೆ ತಂದಿತ್ತು.

ತಮಿಳು ಚಲನಚಿತ್ರ ‘ಪೂಂಗಾತವೆ ತಾಳ್ ತಿರವೈ’, ‘ನಿಜಲ್ಗಲ್’ನಲ್ಲಿ ಅವರ ಹಾಡಿಗೆ ಹೆಚ್ಚು ಜನಮನ್ನಣೆ ಸಿಕ್ಕಿತು. ಇಳಯರಾಜರೊಂದಿಗೆ 100ಕ್ಕೂ ಹೆಚ್ಚು ಹಾಡುಗಳಲ್ಲಿ ಕೆಲಸ ಮಾಡಿದರು. ಇಳಯರಾಜರಲ್ಲದೆ, ಅವರು ಸಂಗೀತ ಸಂಯೋಜಕರು, ವಿದ್ಯಾಸಾಗರ್, ಮಣಿ ಶರ್ಮಾ ಮತ್ತು ದೇವಾ ಜತೆಗೂ ಹಾಡುಗಳನ್ನು ಹಾಡಿದ್ದಾರೆ.

ಇದನ್ನೂ ಓದಿ: Lok Sabha Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

ಇಳಯರಾಜ ಅವರ ಕೆಲವು ಪ್ರಸಿದ್ಧ ಹಾಡುಗಳಲ್ಲಿ ‘ತೂರಲ್ ನಿನ್ನ ಪೊಚ್ಚು’ ಚಿತ್ರದ ‘ಭೂಪಾಲಂ ಇಸೈಕ್ಕುಮ್’, ‘ಆನಂದ ರಾಗಂ’ ‘ಪನ್ನರ್ ಪುಷ್ಪಂಗಳ’ ‘ಕಣ್ಮಣಿ ನೀ ವರ’ ‘ತೆಂಡ್ರಾಲೆ ಎನ್ನೈ ತೋಡು’, ‘ಒರು ಕೈದಿಯಿನ್ ದೈರ್ ಕೈದಿ’ಯ ‘ಪೊನ್ ಮಾನೇ’. , ‘ಅರಂಗೇತ್ರ ವೇಲೈ’ ಚಿತ್ರದ ‘ಆಗಾಯ ವೆನ್ನಿಲವೆ’ ಮತ್ತು ‘ಮಹಾನದಿ’ಯಿಂದ ‘ಶ್ರೀ ರಂಗ ರಂಗನಾಥನಿನ್’ ಸೇರಿವೆ. 1977 ರಲ್ಲಿ ‘ಶ್ರೀ ಕೃಷ್ಣ ಲೀಲಾ’ ಚಿತ್ರದ ಹಾಡಿನ ಮೂಲಕ ಗಾಯಕಿಯಾಗಿ ಪದಾರ್ಪಣೆ ಮಾಡಿದರು. ಈ ಹಾಡನ್ನು ಪತಿ ಎವಿ ರಮಣನ್ ಅವರೊಂದಿಗೆ ಹಾಡಿದರು.

ಉಮಾ ರಮಣನ್ ಅವರ ಕೊನೆಯ ಹಾಡು ವಿಜಯ್ ಅವರ ‘ತಿರುಪಾಚಿ’ ಗಾಗಿ ‘ಕಣ್ಣುಂ ಕಣ್ಣುಮ್ತನ್ ಕಳಂದಾಚು’ ಹಾಡು. ಮಣಿ ಶರ್ಮಾ ಸಂಯೋಜಿಸಿದ ಈ ಹಾಡನ್ನು ಹರೀಶ್ ರಾಘವೇಂದ್ರ ಮತ್ತು ಪ್ರೇಮ್‌ಜಿ ಅಮರೇನ್ ಅವರೊಂದಿಗೆ ಹಾಡಿದ್ದಾರೆ.

Continue Reading

ಟಾಲಿವುಡ್

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Pushpa 2: ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ.

VISTARANEWS.COM


on

Pushpa 2 The Rule Title track out
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

ಭೂಷಣ್ ಕುಮಾರ್ ಸಂಸ್ಥೆಯು ಎಲ್ಲಾ ಭಾಷೆಗಳ ಸಂಗೀತ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈಗ ಚಿತ್ರದ ಆಡಿಯೊ ಹಕ್ಕುಗಳು ಬರೋಬ್ಬರಿ 60 ಕೋಟಿ ರೂ . ಮಾರಟವಾಗಿದೆ ಎಂದು ವರದಿಯಾಗಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading
Advertisement
K. Annamalai
ಪ್ರಮುಖ ಸುದ್ದಿ30 seconds ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ6 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ1 hour ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ1 hour ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 hours ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ2 hours ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌