Parineeti Chopra: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ; ಕ್ಯೂಟ್ ಫೋಟೋಸ್ ಔಟ್! Yashaswi Devadiga 1 ವರ್ಷ ago ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ (Raghav Chadh) ಹಾಗೂ ನಟಿ ಪರಿಣಿತಿ ಚೋಪ್ರಾ (Parineeti Chopra) ಉದಯ್ ಪುರದ ಲೀಲಾ ಪ್ಯಾಲೇಸ್ ಹೊಟೇಲ್‌ನಲ್ಲಿ ಸೆ. 25ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕುಟುಂಬ ಸದಸ್ಯರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ. ಮನೀಷ್ ಮಲ್ಹೋತ್ರಾ ಅವರು ವಿನ್ಯಾಸಗೊಳಿಸಿದ ಲೆಹಂಗಾ ಧರಿಸಿದ್ದರು ಪರಿಣಿತಿ ಚೋಪ್ರಾ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಟೆನಿಸ್ ತಾರೆ ಸಾನಿಯಾ ಮಿರ್ಜಾ, ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಮತ್ತು ಮನೀಶ್ ಮಲ್ಹೋತ್ರಾ ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ: Parineeti Chopra: ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಅದ್ಧೂರಿ ವಿವಾಹ; ವಧುವಿನ ಮೆಹಂದಿಯೇ ಹೈಲೈಟ್! ಪ್ರಿಯಾಂಕಾ ಚೋಪ್ರಾ ಅವರು ಪರಿಣಿತಿ ವಿವಾಹಕ್ಕೆ ಗೈರಾಗಿದ್ದು, ಪ್ರಿಯಾಂಕಾ ತಾಯಿ ಮಧು ಚೋಪ್ರಾ ಮದುವೆಯಲ್ಲಿ ಪಾಲ್ಗೊಂಡಿದ್ದರು. ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷ ಮೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ. ಪರಿಣಿತಿ ಅವರು ʼಚಮ್ಕೀಲಾʼ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ವರದಿಯಾಗಿದೆ.