ಬೆಂಗಳೂರು: ಪರಿಣಿತಿ ಚೋಪ್ರಾ (Parineeti Chopra) ಮತ್ತು ರಾಘವ್ ಚಡ್ಡಾ ಅವರ ವಿವಾಹ ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಉದಯಪುರದಲ್ಲಿ ನೆರವೇರಿತ್ತು. ಇತ್ತೀಚೆಗೆ, ಪರಿಣಿತಿ ಮಾಲ್ಡೀವ್ಸ್‌ನಲ್ಲಿ ವಕೇಶನ್‌ಗೆಂದು ಹೋಗಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಹನಿಮೂನ್ ಅಲ್ಲ ಎಂತಲೂ ಸ್ಪಷ್ಟನೆ ನೀಡಿದ್ದಾರೆ. ಇದು ನಮ್ಮ ಗರ್ಲ್ಸ್ ಟ್ರಿಪ್ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ.
ಕಳೆದ ತಿಂಗಳು ರಾಘವ್ ಚಡ್ಡಾ ಅವರನ್ನು ವಿವಾಹವಾದ ಪರಿಣಿತಿ ಚೋಪ್ರಾ ಇತ್ತೀಚೆಗೆ ತಮ್ಮ ರ‍್ಯಾಂಪ್ ವಾಕ್ ಮೂಲಕ ಫ್ಯಾನ್ಸ್ ಮನಸ್ಸನ್ನು ಗೆದ್ದಿದ್ದರು. ಇದಾದ ಬಳಿಕ ಇದ್ದಕ್ಕಿದ್ದಂತೆ ಪರಿಣಿತಿ ಮಾಲ್ಡೀವ್ಸ್‌ನಲ್ಲಿರುವ ಫೋಟೊ ಹಂಚಿಕೊಂಡು ಇದು ಹನಿಮೂನ್‌ಗೆ ಎಂದು ಬಂದಿಲ್ಲ. ಇದು ʻಗರ್ಲ್ಸ್ ಟ್ರಿಪ್ʼ ಎಂದು ಬರೆದುಕೊಂಡಿದ್ದಾರೆ. ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಇಲ್ಲಿಯವರೆಗೆ ಹನಿಮೂನ್‌ಗೆ ಹೋಗಿಲ್ಲ ಎಂತಲೂ ವರದಿಯಾಗಿದೆ.
ಸೆಪ್ಟೆಂಬರ್ 24ರಂದು ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಮತ್ತು ರಾಘವ್ ಅವರ ವಿವಾಹ ಅದ್ಧೂರಿಯಾಗಿ ನೆರವೇರಿತ್ತು. ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಪರಿಣಿತಿ ಮತ್ತು ರಾಘವ್ ಕುಟುಂಬಸ್ಥರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪರಿಣಿತಿ ಅವರ ಸೋದರಸಂಬಂಧಿ, ನಟ ಪ್ರಿಯಾಂಕಾ ಚೋಪ್ರಾ ಅವರು ಮದುವೆಗೆ ಭಾಗಿಯಾಗಿರಲಿಲ್ಲ. ಉದಯಪುರದಲ್ಲಿ ಪರಿಣಿತಿ ಮತ್ತು ರಾಘವ್ ಸ್ನೇಹಿತರು ಮತ್ತು ಕುಟುಂಬದವರಿಗೆ ಆರತಕ್ಷತೆಯನ್ನೂ ಏರ್ಪಡಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸೇರಿದಂತೆ ಅನೇಕ ಗಣ್ಯರು ಸಮರಾಂಭದಲ್ಲಿ ಸಾಕ್ಷಿಯಾಗಿದ್ದರು.
ಇದನ್ನೂ ಓದಿ: Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್ ಮಾಡಿದ ಪರಿಣಿತಿ ಚೋಪ್ರಾ!
ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ʼಚಮ್ಕೀಲಾʼ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.