Site icon Vistara News

Pathaan Film | ʻʻಬುದ್ಧ ಮತ್ತು ಬಸವನವರ ಕೇಸರಿ ಬಣ್ಣವನ್ನು ಹಿಂದುತ್ವವು ತನ್ನದಾಗಿಸಿಕೊಂಡಿದೆʼʼ: ನಟ ಚೇತನ್‌

Pathaan Film

ಬೆಂಗಳೂರು: ಪಠಾಣ್‌ ಸಿನಿಮಾದಲ್ಲಿ (Pathaan Film) ದೀಪಿಕಾ ಪಡುಕೋಣೆ ಅವರು ಧರಿಸಿರುವ ಕೇಸರಿ ಬಿಕಿನಿ ಕುರಿತಾಗಿ ನಾಲ್ಕೈದು ದಿನಗಳಿಂದ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬಗ್ಗೆ ಹಲವು ಹಿಂದು ಪರ ಸಂಘಟನೆಗಳು, ರಾಜಕಾರಣಿಗಳು ಮತ್ತು ಸೆಲೆಬ್ರೆಟಿಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ನಟ ಚೇತನ್‌ ʻʻವಿರೋಧವು ಬಹಳ ಕ್ಷುಲ್ಲಕವಾಗಿದೆʼʼ ಎಂದು ಬರೆದುಕೊಂಡಿದ್ದಾರೆ.

ನಟ ಚೇತನ್ ಟ್ವೀಟ್‌ನಲ್ಲಿ ʻʻಪಠಾಣ್ ಚಿತ್ರದ ಹಾಡು ಈಗ ಅದರ ಕೇಸರಿ ಬಿಕಿನಿ ಮತ್ತು ಹಸಿರು ಶರ್ಟ್ ಕಾರಣದಿಂದ ರಾಜಕೀಯಗೊಳ್ಳುತ್ತಿದೆ. ಬಟ್ಟೆಯ ಬಣ್ಣದ ಕಾರಣಕ್ಕೆ ವ್ಯಕ್ತಿಸುತ್ತಿರುವ ವಿರೋಧವು ಬಹಳ ಕ್ಷುಲ್ಲಕವಾಗಿದೆ. ಬುದ್ಧ ಮತ್ತು ಬಸವನವರ ಬಣ್ಣವಾದ ಕೇಸರಿಯನ್ನು ಹಿಂದುತ್ವವು ತನ್ನದಾಗಿಸಿಕೊಳ್ಳುತ್ತಿದೆ. ಪ್ರಕೃತಿ ಮತ್ತು ರೈತರ ಸಂಕೇತವಾದ ಹಸಿರು ಬಣ್ಣವು ಇಸ್ಲಾಮೀಕರಣಗೊಳ್ಳುತ್ತಿದೆ. ಮಾಡಬೇಕೆಂದೇ ಮಾಡುತ್ತಿರುವ ವಿವಾದವಿದು’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಒದಿ | Kantara Movie | ನಟ ಚೇತನ್‌ ಅಹಿಂಸಾ ವಿರುದ್ಧದ ಕೇಸ್‌ ವಜಾಗೊಳಿಸಲು ಹೈಕೋರ್ಟ್‌ ನಕಾರ

ಏನಿದು ‘ಬೇಷರಮ್‌ ರಂಗ್‌’?
‘ಬೇಷರಮ್‌ ರಂಗ್‌’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.

ಇದನ್ನೂ ಓದಿ | Deepika Padukone | ಪಠಾಣ್‌ ಕೇಸರಿ ವಿವಾದ : ಅಕ್ಷಯ್‌ ಕುಮಾರ್‌ಗೆ ಬೇರೆ ರೂಲ್ಸ್‌? ಏನಿದು ವಾದ?

Exit mobile version