Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ? - Vistara News

ಸಿನಿಮಾ

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram: ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ.

VISTARANEWS.COM


on

Pavithra Jayaram died in the accident may alive if the ambulance arrived
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

Indian 2 Trailer: ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

VISTARANEWS.COM


on

Indian 2 trailer Kamal Haasan as master of disguise
Koo

ಬೆಂಗಳೂರು: ಕಮಲ್‌ ಹಾಸನ್‌ ಅಭಿನಯದ ಇಂಡಿಯನ್‌-2 ಸಿನಿಮಾದ ಟ್ರೈಲರ್‌ (Indian 2 Trailer) ಬಿಡುಗಡೆಗೊಂಡಿದೆ. ಕಮಲ್ ಹಾಸನ್ ಅವರು ಹಲವು ಗೆಟಪ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಇಂಡಿಯನ್ 2’ ಚಿತ್ರ ಜುಲೈ 12ರಂದು ಬಿಡುಗಡೆ ಆಗಲಿದೆ. 1996ರಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್’ ಸಿನಿಮಾ ರಿಲೀಸ್ ಆಯಿತು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗಿದೆ.

ಟ್ರೈಲರ್‌ನಲ್ಲಿ ದೇಶದಾದ್ಯಂತ ನಡೆಯುತ್ತಿರುವ ಅನೇಕ ಅಪರಾಧಗಳು ಮತ್ತು ವಂಚನೆಗಳ ಚಿತ್ರಣ ಇದೆ. ಪ್ರಸ್ತುತ ಭಾರತೀಯರು ಹೋರಾಡುತ್ತಿರುವ ಉದ್ಯೋಗಗಳ ಕೊರತೆ, ಭಾರೀ ತೆರಿಗೆ ಹೊರೆಗಳು ಮತ್ತು ಇತರ ಮೂಲಭೂತ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳ ವಿವರಣೆ ಇವೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಸಿನಿಮಾ ಹೊಂದಿದೆ. ಮಲ್ ಹಾಸನ್ ಅವರು ಬೇರೆ ಬೇರೆ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರು ಯಾವುದೇ ರೀತಿಯ ಪಾತ್ರ ಕೊಟ್ಟರೂ ಮಾಡಿ ತೋರಿಸುತ್ತಾರೆ. ಇದಕ್ಕೆ ‘ಇಂಡಿಯನ್ 2’ ಮತ್ತೊಂದು ಉದಾಹರಣೆ.

ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ಎಸ್.ಜೆ.ಸೂರ್ಯ, ಪ್ರಿಯಾ ಭವಾನಿ ಶಂಕರ್, ನೆಡುಮುಡಿ ವೇಣು, ವಿವೇಕ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ಸಮುದ್ರಕನಿ, ಬಾಬಿ ಸಿಂಹ, ಬ್ರಹ್ಮಾನಂದಂ, ವೆನ್ನೆಲ ಕಿಶೋರ್, ಜಾಕಿರ್ ಹುಸೇನ್, ಗುರು ಸೋಮಸುಂದರಾಮ್, ದೆಹಲಿ, ಗುರು ಸೋಮಸುಂದರಾಮ್ ಮಿಶ್ರಾ, , ಜಯಪ್ರಕಾಶ್, ಮನೋಬಾಲಾ, ಮತ್ತು ಅಶ್ವಿನಿ ತಂಗರಾಜ್ ಇದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ನಿರ್ಮಿಸಿರುವ ಇಂಡಿಯನ್2 ಜುಲೈ 12 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?ಇದನ್ನೂ ಓದಿ:

ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ.

ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು. ಕಮಲ್‌ ಅವರ ಬದ್ಧತೆ ಮತ್ತು ನಟನಾ ಮಯದಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ʻʻಕಮಲ್ ಅವರು ಸೆಟ್‌ಗಳಲ್ಲಿ ಬಹುತೇಕ ಹಸಿವಿನಿಂದಲೇ ಇರುತ್ತಾರೆ. ನಟಿಸುವ ಸಮಯದಲ್ಲಿ ಏನನ್ನೂ ತಿನ್ನುವುದಿಲ್ಲ. ಇದಕ್ಕೆ ಕಾರಣವೂ ಇದ್ದು, ನಟನೆ ಸಂದರ್ಭದಲ್ಲಿ ಏನನ್ನಾದರೂ ತಿನ್ನುತ್ತಿದ್ದರೆ, ಅಂದರೆ ಬಾಯಲ್ಲಿ ಅಗಿಯುತ್ತಿದ್ದರೆ, ಅದು ಪ್ರಾಸ್ಥೆಟಿಕ್ ಮೇಕ್ಅಪ್ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಅವರು ನಟಿಸುವಾಗ ಕೇವಲ ಜ್ಯೂಸ್ ಡಯಟ್ ಮಾಡುತ್ತಿದ್ದರುʼʼ ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading

ಕರ್ನಾಟಕ

Kannada New Movie: ನಾಲ್ಕು ‌ತಲೆಮಾರಿನ ಕಥೆ ಹೇಳುವ ʼಮಾನ್‌ಸ್ಟರ್ʼ ಚಿತ್ರದ ಟೀಸರ್, ಹಾಡು ರಿಲೀಸ್‌

Kannada New Movie: ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ‌ಸಂಯೋಜಿಸುವುದರೊಂದಿಗೆ ನಿರ್ದೇಶನ ಮಾಡಿರುವ “ಮಾನ್‌ಸ್ಟರ್” ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನಡೆದಿದೆ. ಚಿತ್ರದಲ್ಲಿ ಮೂರು ನಾಯಕರಿದ್ದಾರೆ. ಥ್ರಿಲ್ಲರ್ ಮಂಜು, ಧರ್ಮ ಕೀರ್ತಿರಾಜ್ ಹಾಗೂ ಪವನ್ ಎಸ್. ನಾರಾಯಣ್ ನಾಯಕರಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪುತ್ರ ಸಂತೋಷ್ ರೆಡ್ಡಿ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Monster movie teaser and song released
Koo

ಬೆಂಗಳೂರು: ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ‌ಸಂಯೋಜಿಸುವುದರೊಂದಿಗೆ ನಿರ್ದೇಶನವನ್ನು ಮಾಡಿರುವ “ಮಾನ್ ಸ್ಟರ್” ಚಿತ್ರದ (Kannada New Movie) ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭವು ಈಚೆಗೆ ಅದ್ಧೂರಿಯಾಗಿ ನೆರವೇರಿತು.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್, ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನಾನು ಸಂಗೀತ ಸಂಯೋಜಿಸುತ್ತಿರುವ 57ನೇ ಚಿತ್ರ ಹಾಗೂ ನಿರ್ದೇಶಿಸಿರುವ ಆರನೇ ಚಿತ್ರ ಎಂದು ತಿಳಿಸಿದ ಆರನ್ ಕಾರ್ತಿಕ್ ವೆಂಕಟೇಶ್, ಈ ಚಿತ್ರದಲ್ಲಿ ನಾಲ್ಕು ತಲೆಮಾರುಗಳ ಕಥೆ ತೋರಿಸಲಾಗಿದೆ.‌ ಆಕ್ಷನ್ ಥ್ರಿಲ್ಲರ್ ಜಾನರ್‌ನ ಈ ಚಿತ್ರದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಡುವ ಸಾಮಾಜಿಕ ಕಳಕಳಿಯುಳ್ಳ ಅಂಶ ಸಹ ಇದೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಚಿತ್ರದಲ್ಲಿ ಮೂರು ನಾಯಕರಿದ್ದಾರೆ. ಥ್ರಿಲ್ಲರ್ ಮಂಜು, ಧರ್ಮ ಕೀರ್ತಿರಾಜ್ ಹಾಗೂ ಪವನ್ ಎಸ್. ನಾರಾಯಣ್ ನಾಯಕರಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪುತ್ರ ಸಂತೋಷ್ ರೆಡ್ಡಿ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್, ಯತಿರಾಜ್, ಕುರಿ ಬಾಂಡ್ ರಂಗ, ಯಶ್ವಿಕ , ವಿಕ್ಟರಿ ವಾಸು, ಗಣೇಶ್ ರಾವ್, ಸಂಗೀತ, ದುಬೈ ರಫಿಕ್, ರಾಬರ್ಟ್, ನವಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರೀಕರಣ ಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಚಿತ್ರದಲ್ಲಿ ಖ್ಯಾತ ಗಾಯಕರು ಹಾಡಿರುವ ಏಳು ಹಾಡುಗಳಿವೆ. ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು.

ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಾನು ಅಷ್ಟು ಓದಿದವನಲ್ಲ. ಆದರೆ ಇಂದು ಕಷ್ಟಪಟ್ಟು ಸಿನಿಮಾ ನಿರ್ಮಾಣ ಮಾಡುವ ಹಂತಕ್ಕೆ ತಲುಪಿದ್ದೇನೆ. ಈ ಚಿತ್ರದ ಮೂಲಕ ನನ್ನ ಮಗ ಸಂತೋಷ್ ರೆಡ್ಡಿ ಚಿತ್ರರಂಗ ಪ್ರವೇಶಿಸುತ್ತಿದ್ದಾನೆ.‌ ಅವನಿಗೆ ಹಾಗೂ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಪುಟ್ಟರಾಜ ರೆಡ್ಡಿ ತಿಳಿಸಿದ್ದಾರೆ.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಟ ಧರ್ಮ ಕೀರ್ತಿರಾಜ್ ತಿಳಿಸಿದರು.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಥ್ರಿಲ್ಲರ್ ಮಂಜು, ಸಂತೋಷ್ ರೆಡ್ಡಿ, ರಾಜ್ ಬಹದ್ದೂರ್, ಗಣೇಶ್ ರಾವ್, ಸಂಗೀತ, ನವಾಜ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು “ಮಾನ್ ಸ್ಟರ್” ಬಗ್ಗೆ ಮಾಹಿತಿ ನೀಡಿದರು.

Continue Reading

ಕರ್ನಾಟಕ

Kannada New Movie: ʼನಾ ನಿನ್ನ ಬಿಡಲಾರೆʼ ಎನ್ನುತ್ತಿದ್ದಾರೆ ನಿರ್ದೇಶಕ, ನಟ ಹೇಮಂತ್ ಹೆಗಡೆ

Kannada New Movie: ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹೇಮಂತ್ ಹೆಗಡೆ ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ನಟಿಸುತ್ತಿರುವ “ನಾ ನಿನ್ನ ಬಿಡಲಾರೆ” ಚಿತ್ರದ ಮುಹೂರ್ತ ಸಮಾರಂಭ ಪದ್ಮನಾಭ ನಗರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು, ಕ್ಯಾಮೆರಾ ಚಾಲನೆ ಮಾಡಿದರು.

VISTARANEWS.COM


on

naa ninna bidalaare kannada film muhurtha programme
Koo

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹೇಮಂತ್ ಹೆಗಡೆ ನಿರ್ದೇಶಿಸಿ ಪ್ರಮುಖ ಪಾತ್ರದಲ್ಲೂ ನಟಿಸುತ್ತಿರುವ “ನಾ ನಿನ್ನ ಬಿಡಲಾರೆ” ಚಿತ್ರದ (Kannada New Movie) ಮುಹೂರ್ತ ಸಮಾರಂಭ ಪದ್ಮನಾಭ ನಗರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು, ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಹಾರಾರ್ ಚಿತ್ರ

ಇದೊಂದು ಹಾರಾರ್‌ ಜಾನರ್‌ನ ಚಿತ್ರ ಎಂದು ಮಾತನಾಡಿದ ‌ಹೇಮಂತ್ ಹೆಗಡೆ, ಈ ಸೂಪರ್ ಹಿಟ್ ಚಲನಚಿತ್ರದ ಶೀರ್ಷಿಕೆ ನಮ್ಮ ಚಿತ್ರದ ಕಥೆಗೆ ಸೂಕ್ತವಾಗಿದೆ. ಹಾಗಾಗಿ “ನಾ ನಿನ್ನ ಬಿಡಲಾರೆ” ಶೀರ್ಷಿಕೆ ಇಟ್ಟಿದ್ದೇವೆ. ಆದರೆ ಹಳೆಯ “ನಾ ನಿನ್ನ ಬಿಡಲಾರೆ” ಚಿತ್ರದ ಕಥೆಯೇ ಬೇರೆ. ಈ ಚಿತ್ರದ ಕಥೆಯೇ ಬೇರೆ. ಕನ್ನಡದಲ್ಲಿ ಒಂದೊಳ್ಳೆ ಹಾರಾರ್ ಚಿತ್ರ ಬಂದು ಬಹಳ ಸಮಯವಾಗಿದೆ. ಹಾಗಾಗಿ ಹಾರಾರ್ ಜಾನರ್ ಅನ್ನು ಆಯ್ಕೆ ಮಾಡಿಕೊಂಡಿದ್ದೇವೆ.

ಇದನ್ನೂ ಓದಿ: Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಹೊಸನಗರದ ಬಳಿ ನೂರೈವತ್ತು ವರ್ಷಗಳ ಹಳೆಯ ಮನೆಯಲ್ಲೇ ಮೂವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ನನ್ನ ಹೆಂಡತಿ ಪಾತ್ರದಲ್ಲಿ ಅಪೂರ್ವ ನಟಿಸುತ್ತಿದ್ದಾರೆ. ಭಾವನಾ ರಾಮಣ್ಣ ಅವರು ದೆವ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಶೋರ್, ಮಕರಂದ್ ದೇಶಪಾಂಡೆ, ಶಂಕರ್ ಅಶ್ವಥ್, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ರೇವಣ್ಣ ಸಿದ್ದಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟ ನಾಜರ್ ಅವರ ಜತೆ ಕೂಡ ಮಾತುಕತೆ ನಡೆಯುತ್ತಿದೆ‌. ಮೂರು ಹಾಡುಗಳಿದ್ದು ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ಕೃಷ್ಣ ಬಂಜನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ “ಘೋಸ್ಟ್ 2.0” ಎಂಬ ಅಡಿಬರಹವಿದೆ ಎಂದು ತಿಳಿಸಿದ್ದಾರೆ.

ನಟಿ ಭಾವನ ರಾಮಣ್ಣ ಮಾತನಾಡಿ, ನನ್ನದು ಈ ಚಿತ್ರದಲ್ಲಿ ಮಧ್ಯಮ ವಯಸ್ಸಿನ ಮಲೆನಾಡ ಬ್ರಾಹ್ಮಣ ಹೆಂಗಸಿನ ಪಾತ್ರ. ನಾನು ಹುಟ್ಟಿಬೆಳೆದಿದ್ದು ಶಿವಮೊಗ್ಗದ ಬ್ರಾಹ್ಮಣರ ವಠಾರದಲ್ಲಿ. ಹಾಗಾಗಿ ನನಗೆ ಈ ಪಾತ್ರ ತುಂಬಾ ಹತ್ತಿರವಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: David Warner Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಈ ವೇಳೆ ಶಂಕರ್ ಅಶ್ವಥ್, ಸುಚೇಂದ್ರ ಪ್ರಸಾದ್, ರೇವಣ್ಣ ಸಿದ್ದಯ್ಯ ಮುಂತಾದವರು “ನಾ ನಿನ್ನ ಬಿಡಲಾರೆ” ಚಿತ್ರದ ಕುರಿತು ಮಾತನಾಡಿದರು. ಅನ್ವಿತಾ ಆರ್ಟ್ಸ್ ಲಾಂಛನದಲ್ಲಿ ಶಶಿಕಿರಣ್ ರಂಗನಾಥ್, ಕಿರಣ್ ನಾಗರಾಜ್ ಹಾಗೂ ಬಾಲಕೃಷ್ಣ ಪೆರುಂಬಲ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಕರ್ನಾಟಕ

Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30 ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಿಳಿಸಿದ್ದಾರೆ.

VISTARANEWS.COM


on

Inauguration of new building of Kannada Film Producers Association on June 30
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ (Bengaluru News) ತಿಳಿಸಿದರು.

ನಗರದ ನಿರ್ಮಾಪಕರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್‌ ಆಫ್‌ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಹೊಂಬಾಳೆ ಫಿಲಂಸ್‍, ಆರ್‌.ಎಸ್‌. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಎಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ತಿಳಿಸಿದರು.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್‍ ಯಾದವ್‍, ಆರ್.ಎಸ್. ಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading
Advertisement
IND vs ENG
ಕ್ರೀಡೆ13 seconds ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Foxconn's Hiring
ಉದ್ಯೋಗ9 mins ago

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

Indian 2 trailer Kamal Haasan as master of disguise
South Cinema12 mins ago

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

sural falls assault case
ಕ್ರೈಂ22 mins ago

Assault Case: ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ; ಹಣ ಸುಲಿಗೆ

Members of Parliament
Latest39 mins ago

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

Actor Darshan Judicial Custody Jailer Gave UTP Number
ಕ್ರೈಂ2 hours ago

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Health Tips Kannada
ಆರೋಗ್ಯ2 hours ago

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

NEET Paper Leak
ಶಿಕ್ಷಣ2 hours ago

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

Karnataka Weather
ಕರ್ನಾಟಕ2 hours ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ3 hours ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌