Site icon Vistara News

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Pavithra Jayaram died in the accident may alive if the ambulance arrived

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೇ.12ರಂದು ಮೃತಪಟ್ಟಿದ್ದರು. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ (ಮೇ.12) ಮುಂಜಾನೆ ಅಪಘಾತವಾಗಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ಬಸ್‌ ಡಿಕ್ಕಿ ಹೊಡದಿತ್ತು. ಅಪಘಾತವಾದ ಕೂಡಲೇ ಆಂಬ್ಯುಲೆನ್ಸ್‌ ಸರಿಯಾದ ಸಮಯಕ್ಕೆ ಬಾರದೆ ಇದ್ದಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ಸಹನಟ ಚಂದ್ರಕಾಂತ್ ಆರೋಪ ಮಾಡಿದ್ದಾರೆ.

ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಇನ್ನು ತೆಲುಗಿನ ‘ನಿನ್ನೆ ಪೆಲ್ಲಡತಾ’ ಅನ್ನೋ ಜನಪ್ರಿಯ ಧಾರಾವಾಹಿಯಲ್ಲೂ ನಟಿಸಿದ್ದರು. ಇದೀಗ ನಟಿಯ ಅಂತ್ಯಕ್ರಿಯೆ ಕೂಡ ನೆರವೇರಿದೆ. ಸಹನಟ ಚಂದ್ರಕಾಂತ್ ಮಾಧ್ಯಮದ ಜತೆ ಮಾತನಾಡಿ ʻʻಪವಿತ್ರಗೆ ಏನು ಗಾಯ ಆಗಿರಲಿಲ್ಲ ಭಯದಲ್ಲೇ ಉಸಿರು ಹೋಯ್ತು. ಅವರಿಗೆ ಏನೂ ಪೆಟ್ಟಾಗಿಲ್ಲ. ಆಂಬ್ಯುಲೆನ್ಸ್ 20 ನಿಮಿಷ ಮುಂಚೆ ಬಂದಿದ್ದರೆ, ಬಹುಶ: ಅವರು ಬದುಕುತ್ತಿದ್ದರು. ಅಪಘಾತವಾದಾಗ ಅವರು ಉಸಿರಾಡುತ್ತಿದ್ದರು” ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

ಅಪಘಾತವಾದ ಕಾರಿನಲ್ಲಿ ನಟಿ ಪವಿತ್ರಾ ಜೊತೆ ಅವರ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್, ಸಹನಟ ಚಂದ್ರಕಾಂತ್ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲರಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಹನಟ ಚಂದ್ರಕಾಂತ್ ಚಿಕಿತ್ಸೆ ಪಡೆದು ಪವಿತ್ರ ಜಯರಾಂ ಅಂತ್ಯಕ್ರಿಯೆ ಪಾಲ್ಗೊಂಡಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼ ಎಂದಿದ್ದರು.

Exit mobile version