ಬೆಂಗಳೂರು: ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬಹುಭಾಷಾ ನಟಿ ಪವಿತ್ರಾ ಲೋಕೇಶ್ (Pavithra Lokesh) ಸೇರಿ 295 ಅಭ್ಯರ್ಥಿಗಳು ಉತ್ತೀರ್ಣರಾಗಿರುವುದು ಗೊತ್ತೇ ಇದೆ. ಪವಿತ್ರಾ ಲೋಕೇಶ್ ಅವರು ಸಿನಿಮಾಗಳಲ್ಲಿ ನಟಿಸುವ ಜತೆ ಜತೆಗೆ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದರು. ಪಿಹೆಚ್‌ಡಿ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪಡೆಯುವ ಆಸೆಯಲ್ಲಿದ್ದರು. ಆದರೆ ಸದ್ಯಕ್ಕೆ ಅದು ಈಡೇರುವುದು ಅನುಮಾನ ಎನ್ನಲಾಗುತ್ತಿದೆ. ಪವಿತ್ರಾ ಲೋಕೇಶ್ ಪಿಹೆಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ ಮೆರಿಟ್ ಪಟ್ಟಿಯಲ್ಲಿ ಅವರ ಹೆಸರಿಲ್ಲ. ಇನ್ನು ಜೇಷ್ಠತಾ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯಲ್ಲೂ ಪವಿತ್ರಾ ಹೆಸರಿಲ್ಲ ಎಂದು ಕನ್ನಡ ವಿವಿ ಕುಲಸಚಿವ ಡಾ.ಸುಬ್ಬಣ್ಣ ರೈ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
ಸಂಶೋಧನೆಗೆ ಆಸಕ್ತಿ ತೋರಿ 981 ಸಾಮಾನ್ಯರು ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 295 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕನ್ನಡ ವಿವಿ ಕುಲಸಚಿವ ಡಾ.ಸುಬ್ಬಣ್ಣ ರೈ ಮಾಹಿತಿ ನೀಡಿದ್ದರು. ಇದೀಗ ಪವಿತ್ರಾ ಲೋಕೇಶ್ ಪಿಹೆಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ ಮೆರಿಟ್ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಜೇಷ್ಠತಾ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯಲ್ಲೂ ಪವಿತ್ರಾ ಹೆಸರಿಲ್ಲ. ಈ ವರ್ಷ ಆಕೆ ಪಿಹೆಚ್‌ಡಿ ಪಡೆಯುವುದು ಬಹುತೇಕ ಅನುಮಾನ ಎಂದು ಹೇಳಿದ್ದಾರೆ. ಉತ್ತೀರ್ಣರಾದ ಎಲ್ಲರಿಗೂ ಪಿಹೆಚ್‌ಡಿ ಸಂಶೋಧನೆ ಕೈಗೊಳ್ಳಲು ಅವಕಾಶ ಸಿಗುವುದಿಲ್ಲ, ಎಂದು ಹೇಳಿದ್ದಾರೆ.\
ಇದನ್ನೂ ಓದಿ: Pavithra Lokesh: ಪಿಎಚ್‌ಡಿ ಸಿಇಟಿಯಲ್ಲಿ ನಟಿ ಪವಿತ್ರಾ ಲೋಕೇಶ್ ಪಾಸ್!
ಒಟಿಟಿಯಲ್ಲಿ ಮತ್ತೆ ಮದುವೆ
ಪವಿತ್ರಾ ಲೋಕೇಶ್ ಹಾಗೂ ನರೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್‌ನಡಿ ಮೇ 26ರಂದು ಬಿಡುಗಡೆಯಾಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. ಅದು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ. ಇದೀಗ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಥೆಯನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಅಮೆಜಾನ್‌ನಲ್ಲಿ ನೋಡಬಹುದು.
ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು.