Site icon Vistara News

Pavithra Naresh: ಪವಿತ್ರಾ-ನರೇಶ್‌ಗೆ ಗೆಲುವು; ನಟನ ʼಪತ್ನಿʼಗೆ ಹಿನ್ನಡೆ!

Naresh Pavithra

ಬೆಂಗಳೂರು: ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ (Pavithra Naresh) ಅಭಿನಯದ `ಮತ್ತೆ ಮದುವೆ’ ಸಿನಿಮಾ ಒಟಿಟಿ ಎಂಟ್ರಿ ಕೊಟ್ಟ ಕೆಲವೇ ದಿನಗಳಲ್ಲಿ ದಿಢೀರ್ ನಾಪತ್ತೆಯಾಗಿತ್ತು. ಈ ಸಿನಿಮಾ ಪ್ರೈಮ್‌ ಮತ್ತು ಆಹಾ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. ಅದು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಅರ್ಜಿಯಲ್ಲಿ ಯಾವುದೇ ಸಕರಾರಣವಿಲ್ಲದ ಕಾರಣದಿಂದಾಗಿ ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಚಿತ್ರಮಂದಿರಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್‌ನಡಿ ಮೇ 26ರಂದು ಬಿಡುಗಡೆಯಾಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. ಅದು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಅದನ್ನು ತಡೆಯಬೇಕು ಎಂದು ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್ ಮೆಟ್ಟಿಲು ಏರಿದ್ದರು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಈ ಕುರಿತಂತೆ ವಿಚಾರಣೆ ನಡೆಸಿ, ಅಂತಿಮ ತೀರ್ಪು ನೀಡಿದೆ.

ಟಾಲಿವುಡ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ʼಮತ್ತೆ ಮದುವೆʼ ಎಂಬ ಶೀರ್ಷಿಕೆಯಡಿ ಜೂನ್ 9ರಂದು ಈ ಚಿತ್ರ ತೆರೆಕಂಡಿತ್ತು. ಬಳಿಕ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿತ್ತು. ತನ್ನನ್ನೇ ಗುರಿಯಾಗಿರಿಸಿಕೊಂಡು ʼಮತ್ತೆ ಮದುವೆʼ ಸಿನಿಮಾ ಮಾಡಿದ್ದಾರೆ ಎಂದು ನರೇಶ್ ಪತ್ನಿ ರಮ್ಯಾ ರಘುಪತಿ (Ramya Raghupathi) ಕೋರ್ಟ್ ಮೆಟ್ಟಿಲು ಏರಿದ್ದರು. ತಮ್ಮ ಸಂಸಾರದ ಬಗ್ಗೆ ಅವಹೇಳನ ಮಾಡುವಂತಹ ದೃಶ್ಯಗಳನ್ನು ಅದರಲ್ಲಿ ಹಾಕಿದ್ದಾರೆ ಎಂದು ರಮ್ಯಾ ಮಾತನಾಡಿದ್ದರು. ಈ ಸಿನಿಮಾ ಬಿಡುಗಡೆ ಆಗದಂತೆ ತಡೆಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಮಾನ್ಯವಾಗಿರಲಿಲ್ಲ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದ್ದಂತೆಯೇ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದ ರಮ್ಯಾ, ಒಟಿಟಿಯಿಂದ ಸಿನಿಮಾವನ್ನು ತೆಗೆದುಹಾಕುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಥೆಯನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಅಮೆಜಾನ್‌ನಲ್ಲಿ ನೋಡಬಹುದು.

ಇದನ್ನೂ ಓದಿ: Naresh Pavitra Marriage: ಮದುವೆಯಾದ ನಟ ನರೇಶ್- ನಟಿ ಪವಿತ್ರ, ವಿಡಿಯೊ ಇಲ್ಲಿದೆ

ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು.

Exit mobile version