Site icon Vistara News

Pavithra Naresh: ಒಟಿಟಿಗೆ ಬರುತ್ತಿದೆ ನರೇಶ್-ಪವಿತ್ರಾ ಲೋಕೇಶ್ ‘ಮತ್ತೆ ಮದುವೆ’ ಸಿನಿಮಾ

Pavithra Naresh Matte Maduve Movie OTT Date

ಬೆಂಗಳೂರು: ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ (Pavithra Naresh) ಅಭಿನಯದ `ಮತ್ತೆ ಮದುವೆ’ ಸಿನಿಮಾ ಒಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 23ಕ್ಕೆ ಒಟಿಟಿ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಚಿತ್ರಮಂದಿರಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು. ಟಾಲಿವುಡ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು.

ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: Naresh Pavithra: ದುಬೈಗೆ ಹಾರಿದ ಪವಿತ್ರಾ ಲೋಕೇಶ್‌-ನರೇಶ್‌

ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಮತ್ತೆ ಮದುವೆಯ ಭಾಗವಾಗಿದ್ದರು. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಅಮೆಜಾನ್ ನಲ್ಲಿ ನೋಡಬಹುದು.

Exit mobile version